Homeಮುಖಪುಟಗುಜರಾತ್‌ 2ನೇ ಹಂತದ ಚುನಾವಣೆ: ಘಟನಾನುಘಟಿಗಳ ಭವಿಷ್ಯ ನಿರ್ಧಾರ ಇಂದು

ಗುಜರಾತ್‌ 2ನೇ ಹಂತದ ಚುನಾವಣೆ: ಘಟನಾನುಘಟಿಗಳ ಭವಿಷ್ಯ ನಿರ್ಧಾರ ಇಂದು

- Advertisement -
- Advertisement -

ಬಿಜೆಪಿ ಭದ್ರಕೋಟೆಯಾದ ಗುಜರಾತ್‌ನಲ್ಲಿ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಇಂದು ನಡೆಯುತ್ತಿದೆ. ಮಧ್ಯ ಮತ್ತು ಉತ್ತರ ಗುಜರಾತ್‌ನ 93 ಸ್ಥಾನಗಳಿಗೆ ಮತದಾನ ಆರಂಭವಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ನಡುವೆ ತ್ರಿಕೋನ ಸ್ಪರ್ಧೆ ಉಂಟಾಗಿದೆ.

ಇಂದು ಬೆಳಗ್ಗೆಯೇ ಮತದಾನ ಮಾಡಿದವರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸೇರಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಧಾನಿ, ಚುನಾವಣೆ ನಡೆಸಿದ ಚುನಾವಣಾ ಆಯೋಗಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಜನರು ಹೊರಬಂದು ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ಒತ್ತಾಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯಮಂತ್ರಿ ಪಟೇಲ್ ಕೂಡ ಮತ ಚಲಾಯಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರೂ ಇಂದು ಅಹಮದಾಬಾದ್‌ನಲ್ಲಿ ಮತ ಚಲಾವಣೆ ಮಾಡಲಿದ್ದಾರೆ.

ಡಿಸೆಂಬರ್ 1ರಂದು ನಡೆದ ಗುಜರಾತ್ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಕಡಿಮೆ ಪ್ರಮಾಣದ ಮತದಾನ ದಾಖಲಾಗಿತ್ತು. ನಗರದಲ್ಲಿನ ನಿರಾಸಕ್ತಿ ಇದೆಂದು ಚುನಾವಣಾ ಆಯೋಗ ಬೇಸರ ವ್ಯಕ್ತಪಡಿಸಿತ್ತು.

ಇಂದು ನಡೆಯಲಿರುವ 93 ಕ್ಷೇತ್ರಗಳ ಚುನಾವಣೆಯಲ್ಲಿ ಸುಮಾರು 833 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಅವುಗಳಲ್ಲಿ ಅಹಮದಾಬಾದ್‌ನ 16 ನಗರ ಕ್ಷೇತ್ರಗಳಿವೆ. ಈ ಸ್ಥಾನಗಳು ಬಿಜೆಪಿಗೆ ನಿರ್ಣಾಯಕವಾಗಿದ್ದು, ಮೂರು ದಶಕಗಳಿಂದ ಇಲ್ಲಿ ಪ್ರಾಬಲ್ಯ ಸಾಧಿಸಿದೆ.

ಅಹಮದಾಬಾದ್‌ನಲ್ಲಿ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಸಂಖ್ಯೆಯನ್ನು ನಾಲ್ಕು ಸ್ಥಾನಗಳಿಗೆ ಹೆಚ್ಚಿಸಿಕೊಂಡಿತ್ತು. ಈ ಬಾರಿ ಆಮ್ ಆದ್ಮಿ ಪಕ್ಷ (ಎಎಪಿ) ಎಲ್ಲಾ 16 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಕುತೂಹಲ ಕೆರಳಿಸಿದೆ.

ಅಹಮದಾಬಾದ್‌ನ ಮುಸ್ಲಿಂ ಪ್ರಾಬಲ್ಯದ ಜಮಾಲ್‌ಪುರ ಖಾಡಿಯಾ ಕ್ಷೇತ್ರದಲ್ಲಿ, ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಸ್ಪರ್ಧಿಸಿದೆ. ಹೀಗಾಗಿ ಕಾಂಗ್ರೆಸ್‌ ಮತಗಳು ಚದುರಿಹೋಗುವ ಸಾಧ್ಯತೆ ಇದೆ. ಎಐಎಂಐಎಂ ಅಭ್ಯರ್ಥಿ ಸಬೀರ್ ಕಬ್ಲಿವಾಲಾ ಅವರು ಮಾಜಿ ಕಾಂಗ್ರೆಸ್ ಶಾಸಕರಾಗಿದ್ದು, ಅವರು 2012 ರಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದರು. ಇದರ ಪರಿಣಾಮವಾಗಿ ಮತಗಳು ವಿಭಜನೆಯಾದ್ದರಿಂದ ಬಿಜೆಪಿ ಗೆಲುವು ಸಾಧಿಸಿತ್ತು.

ಬಿಜೆಪಿ ಮತ್ತು ಎಎಪಿ ಎಲ್ಲಾ 93 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ. ಕಾಂಗ್ರೆಸ್ 90 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಅದರ ಪಾಲುದಾರ ಎನ್‌ಸಿಪಿ ಎರಡು ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಇದನ್ನೂ ಓದಿರಿ: ಗುಜರಾತ್‌: 2036ರ ಒಲಂಪಿಕ್ಸ್‌ ಆಯೋಜನೆ ಕನಸು ಕಂಡ ಬಿಜೆಪಿ ಪ್ರಣಾಳಿಕೆ

ಎರಡನೇ ಹಂತದಲ್ಲಿ ಕೆಲವು ಪ್ರಮುಖ ಕ್ಷೇತ್ರಗಳಿವೆ. ಅಹಮದಾಬಾದ್‌ನ ಘಟ್ಲೋಡಿಯಾದಲ್ಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸ್ಪರ್ಧಿಸಿದ್ದಾರೆ; ಅಹಮದಾಬಾದ್‌ನ ವಿರಾಮಗಮ್‌ನಲ್ಲಿ ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದಾರೆ. ಗಾಂಧಿನಗರ ದಕ್ಷಿಣದಿಂದ ಅಲ್ಪೇಶ್ ಠಾಕೂರ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ದಲಿತ ನಾಯಕ ಜಿಗ್ನೇಶ್ ಮೇವಾನಿ ಬನಸ್ಕಾಂತ ಜಿಲ್ಲೆಯ ವಡ್ಗಾಮ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಗುಜರಾತ್ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುಖರಾಮ್ ರಥ್ವಾ ಅವರು ಛೋಟಾ ಉದೇಪುರ್ ಜಿಲ್ಲೆಯ ಜೆಟ್‌ಪುರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.

ಎರಡನೇ ಹಂತದಲ್ಲಿ ಸುಮಾರು 2.51 ಕೋಟಿ ಜನರು ಮತದಾನ ಮಾಡಬಹುದು. ಇವರಲ್ಲಿ 5.96 ಲಕ್ಷ ಮತದಾರರು 18-19 ವರ್ಷ ವಯಸ್ಸಿನವರಾಗಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಡಿಸೆಂಬರ್ 8ರಂದು ಮತ ಎಣಿಕೆ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...