Homeಮುಖಪುಟರಾಷ್ಟ್ರೀಯ ಪಕ್ಷವಾದ ಆಪ್: ಮಾನದಂಡಗಳು ಮತ್ತು ಇತರೆ ರಾಷ್ಟ್ರೀಯ ಪಕ್ಷಗಳಿವು

ರಾಷ್ಟ್ರೀಯ ಪಕ್ಷವಾದ ಆಪ್: ಮಾನದಂಡಗಳು ಮತ್ತು ಇತರೆ ರಾಷ್ಟ್ರೀಯ ಪಕ್ಷಗಳಿವು

- Advertisement -
- Advertisement -

ಗುಜರಾತ್ ಚುನಾವಣಾ ಫಲಿತಾಂಶ ಪ್ರಕಟಗೊಂಡಿದೆ. ಬಿಜೆಪಿ 156 ಸ್ಥಾನಗಳಲ್ಲಿ ಗೆದ್ದು ದಾಖಲೆ ನಿರ್ಮಿಸಿದೆ. ಕಾಂಗ್ರೆಸ್ 17 ಸ್ಥಾನಗಳಿಗೆ ಕುಸಿದು ಮುಖಭಂಗ ಅನುಭವಿಸಿದೆ. ಭರ್ಜರಿ ಪ್ರಚಾರ ನಡೆಸಿದ್ದ ಮತ್ತು ಮಾಧ್ಯಮಗಳಲ್ಲಿ ಮಿಂಚಿದ್ದ ಆಪ್ 5 ಸ್ಥಾನಗಳಲ್ಲಿ ಗೆದ್ದು ಗುಜರಾತ್‌ನಲ್ಲಿ ಖಾತೆ ತೆರೆದಿದೆ. ಈ ಚುನಾವಣೆಯ ಫಲಿತಾಂಶವನ್ನು ಆಮ್ ಆದ್ಮಿ ಪಕ್ಷ ಸಹ ಸಂಭ್ರಮಿಸುತ್ತಿದೆ. ಏಕೆಂದರೆ ಅದು ಶೇ.13 ರಷ್ಟು ಮತಗಳನ್ನು ಗಳಿಸುವ ಮೂಲಕ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದುಕೊಂಡಿದೆ.

ರಾಷ್ಟ್ರೀಯ ಪಕ್ಷವೆಂದರೇನು?

ಯಾವುದೇ ಒಂದು ಪಕ್ಷವು ಒಂದು ನಿರ್ದಿಷ್ಟ ರಾಜ್ಯ ಅಥವಾ ಪ್ರದೇಶಕ್ಕೆ ಮಾತ್ರ ಸೀಮಿತವಾಗದೆ ದೇಶವ್ಯಾಪಿ ಅಸ್ತಿತ್ವ ಹೊಂದಿದೆ ಎಂಬುದನ್ನು ಸೂಚಿಸಲು ರಾಷ್ಟ್ರೀಯ ಪಕ್ಷ ಎಂದು ಕರೆಯಲಾಗುತ್ತದೆ. ನಿರ್ದಿಷ್ಟ ರಾಜ್ಯ/ಪ್ರದೇಶಕ್ಕೆ ಸೀಮಿತವಾಗಿರುವ ಪ್ರಾದೇಶಿಕ ಪಕ್ಷಕ್ಕೆ ವಿರುದ್ಧವಾಗಿ ‘ರಾಷ್ಟ್ರೀಯವಾಗಿ’ ಅಸ್ತಿತ್ವ ಹೊಂದಿರುವುದು ರಾಷ್ಟ್ರೀಯ ಪಕ್ಷವಾಗುತ್ತದೆ. ಉದಾಹರಗೆ ಬಿಜೆಪಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಪಕ್ಷಗಳಾಗಿವೆ. ಕೆಲವು ಸಂದರ್ಭಗಳಲ್ಲಿ ಕಮ್ಯುನಿಷ್ಟ್ ಪಕ್ಷಗಳು, ಬಿಎಸ್‌ಪಿ ಸಹ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದಿದ್ದವು.

ತಮಿಳುನಾಡಿನ ಡಿಎಂಕೆ, ಒಡಿಶಾದಲ್ಲಿ ಬಿಜೆಡಿ, ಆಂಧ್ರಪ್ರದೇಶದಲ್ಲಿ ವೈಎಸ್‌ಆರ್‌ಸಿಪಿ, ಬಿಹಾರದಲ್ಲಿ ಆರ್‌ಜೆಡಿ ಅಥವಾ ತೆಲಂಗಾಣದಲ್ಲಿ ಟಿಆರ್‌ಎಸ್‌ನಂತಹ ಕೆಲವು ಪಕ್ಷಗಳು ತಮ್ಮ ತಮ್ಮ ರಾಜ್ಯದಲ್ಲಿ ಪ್ರಬಲವಾಗಿದ್ದರೂ ಸಹ ಅವು ರಾಷ್ಟ್ರೀಯ ಪಕ್ಷಗಳೆನಿಸಿಕೊಳ್ಳದೆ ಪ್ರಾದೇಶಿಕ ಪಕ್ಷ ಎಂದು ಕರೆಸಿಕೊಳ್ಳುತ್ತವೆ.

ರಾಷ್ಟ್ರೀಯ ಪಕ್ಷ ಎಂದು ಗುರುತಿಸಿಕೊಳ್ಳಲು ಇರುವ ಮಾನದಂಡಗಳು

ಚುನಾವಣಾ ಆಯೋಗವು ಒಂದು ಪಕ್ಷವನ್ನು ರಾಷ್ಟ್ರೀಯ ಪಕ್ಷವೆಂದು ಗುರುತಿಸಲು ತಾಂತ್ರಿಕ ಮಾನದಂಡವನ್ನು ವಿಧಿಸಿದೆ. ಒಂದು ಪಕ್ಷವು ಕಾಲಕಾಲಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಪಡೆಯಬಹುದು ಅಥವಾ ಕಳೆದುಕೊಳ್ಳಬಹುದು. ಇದು ಈ ನಿಗದಿಪಡಿಸಿದ ಷರತ್ತುಗಳನ್ನು ಪೂರೈಸುವುದರ ಮೇಲೆ ಅವಲಂಬಿಸಿರುತ್ತದೆ

ನಮ್ಮ ದೇಶದ ಯಾವುದೇ ಪಕ್ಷವು ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯಲು ಈ ಕೆಳಗಿನ ಮೂರು ಮಾನದಂಡಗಳನ್ನು ಹೊಂದಿರಬೇಕಾಗುತ್ತದೆ.

ಕನಿಷ್ಟ ನಾಲ್ಕು ರಾಜ್ಯಗಳ ಇತ್ತೀಚಿನ ವಿಧಾನಸಭಾ ಚುನಾವಣೆಗಳಲ್ಲಿ ತಲಾ 6% ಗಿಂತ ಹೆಚ್ಚಿನ ಮತಪ್ರಮಾಣ ಪಡೆಯದಿರಬೇಕು. ಜೊತೆಗೆ ಇತ್ತೀಚಿನ ನಾಲ್ಕು ಲೋಕಸಭಾ ಸ್ಥಾನಗಳಲ್ಲಿ ಗೆಲುವು ಸಾಧಿಸಿರಬೇಕು.

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಗಳಲ್ಲಿ ಕನಿಷ್ಟ 2% ರಷ್ಟು ಸೀಟುಗಳನ್ನು ಗೆದ್ದಿರಬೇಕು. ಕನಿಷ್ಟ ಮೂರು ರಾಜ್ಯಗಳಲ್ಲಿ ಲೋಕಸಭಾ ಸ್ಥಾನಗಳಿರಬೇಕು

ರಾಜ್ಯ ಪಕ್ಷ ಎಂದು ಕನಿಷ್ಟ ನಾಲ್ಕು ರಾಜ್ಯಗಳಲ್ಲಿ ಮಾನ್ಯತೆ ಪಡೆದಿರಬೇಕು

ಈ ಮಾನದಂಡಗಳ ಅನ್ವಯ ಆಪ್ ಸದ್ಯಕ್ಕೆ ದೆಹಲಿ, ಪಂಜಾಬ್ ಮತ್ತು ಗೋವಾ ರಾಜ್ಯಗಳಲ್ಲಿ ರಾಜ್ಯಪಕ್ಷದ ಮಾನ್ಯತೆ ಪಡೆದಿದೆ. ಗುಜರಾತ್‌ನಲ್ಲಿ ಶೇ.13 ರಷ್ಟು ಮತಗಳು ಮತ್ತು 5 ಸೀಟುಗಳು ಗೆದ್ದ ಕಾರಣ ಅದು ಅಲ್ಲಿಯೂ ರಾಜ್ಯ ಪಕ್ಷ ಎಂಬ ಮಾನ್ಯತೆ ಪಡೆಯುವುದರಿಂದ ಅದು ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯುತ್ತದೆ.

ಇದುವರೆಗೂ ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆದ ಪಕ್ಷಗಳು

ಕಾಂಗ್ರೆಸ್, ಬಿಜೆಪಿ, ಟಿಎಂಸಿ, ಸಿಪಿಐ(ಎಂ), ಸಿಪಿಐ, ಎನ್‌ಸಿಪಿ, ಬಿಎಸ್‌ಪಿ, ಕನ್ರಾಡ್ ಸಂಗ್ಮ ನೇತೃತ್ವದ ಎನ್‌ಪಿಪಿ ಪಕ್ಷಗಳು 2019ರಲ್ಲಿ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದಿದ್ದವು. 9ನೇ ಪಕ್ಷವಾಗಿ ಆಪ್ ಗುರುತಿಸಿಕೊಳ್ಳಲಿದೆ.

2012ರ ಭ್ರಷ್ಟಾಚಾರ ವಿರೋಧಿ ಚಳವಳಿ (ಜನ ಲೋಕಪಾಲ್ ಮಸೂದೆ ಜಾರಿಗಾಗಿ ನಡೆದ ಹೋರಾಟ) ಯ ಸಂದರ್ಭದಲ್ಲಿ ಹುಟ್ಟಿದ ಆಪ್ 2013ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾಗವಹಿಸಿ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತು. ಆ ಮೂಲಕ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಕಾಂಗ್ರೆಸ್ ಜೊತೆಗೂಡಿ ಅಧಿಕಾರ ಹಿಡಿದ ಅದು ಕೇವಲ 49 ದಿನಗಳಲ್ಲಿ ಸರ್ಕಾರ ವಿಸರ್ಜಿಸಿತು.

ಆನಂತರ 2015ರಲ್ಲಿ ದೆಹಲಿಯಲ್ಲಿ ಪ್ರಚಂಡ ಬಹುಮತದೊಂದಿಗೆ ಅಧಿಕಾರ ಹಿಡಿಯಿತು. ನಂತರ 2020ರಲ್ಲಿಯೂ ಮರಳಿ ಅಧಿಕಾರದಲ್ಲಿದೆ. ಆನಂತರ 2022 ಪಂಜಾಬ್‌ನಲ್ಲಿಯೂ ಭಾರೀ ಬಹುಮತದೊಂದಿಗೆ ಸರ್ಕಾರ ರಚಿಸಿದೆ. ಗೋವಾದಲ್ಲಿ ಎರಡು ವಿಧಾನ ಸಭಾ ಕ್ಷೇತ್ರಗಳಲ್ಲಿ ಗೆಲುವು ಕಂಡಿದ್ದ ಅದು ಇತ್ತೀಚಿಗೆ ದೆಹಲಿಯ ಎಂಸಿಡಿ( ಮುನಿಸಿಪಲ್ ಕಾರ್ಪೋರೇಷನ್‌)ನಲ್ಲಿಯೂ ಜಯಭೇರಿ ಬಾರಿಸಿತ್ತು. ಸದ್ಯ ಗುಜರಾತ್‌ನಲ್ಲಿ 5 ಸೀಟುಗಳನ್ನು ಗೆದ್ದಿದೆ.

ಇದನ್ನೂ ಓದಿ; ಭರ್ಜರಿ ಜಯ ಸಾಧಿಸಿದ ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...