Homeಮುಖಪುಟಮುಂದಿನ ಸಲ ಗಂಭೀರವಾಗಿ ಸಂಶೋಧನೆ ಮಾಡಿ: ಅಗ್ನಿಹೋತ್ರಿಗೆ ಅನುರಾಗ್ ಕಶ್ಯಪ್‌ ಸಲಹೆ

ಮುಂದಿನ ಸಲ ಗಂಭೀರವಾಗಿ ಸಂಶೋಧನೆ ಮಾಡಿ: ಅಗ್ನಿಹೋತ್ರಿಗೆ ಅನುರಾಗ್ ಕಶ್ಯಪ್‌ ಸಲಹೆ

- Advertisement -
- Advertisement -

‘ಕಾಂತಾರ’ ಮತ್ತು ‘ಪುಷ್ಪ’ ಸಿನಿಮಾ ಕುರಿತು ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಆಕ್ಷೇಪ ವ್ಯಕ್ತಪಡಿಸಿರುವುದನ್ನು ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ ಟೀಕಿಸಿದ ಬಳಿಕ ಇಬ್ಬರ ನಡುವೆ ವಾಗ್ವಾದ ಶುರುವಾಗಿದೆ.

ಟ್ವಿಟರ್‌ನಲ್ಲಿ ವಿವೇಕ್ ಅಗ್ನಿಹೋತ್ರಿ ಮತ್ತು ಅನುರಾಗ್ ಕಶ್ಯಪ್ ನಡುವೆ ಮಾತಿನ ಸಮರ ನಡೆದಿದೆ.

ಅನುರಾಗ್ ಕಶ್ಯಪ್ ಅವರ ಸಂದರ್ಶನದ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿರುವ ವಿವೇಕ್‌ ಅಗ್ನಿಹೋತ್ರಿ, “ಬಾಲಿವುಡ್‌ನ ಏಕೈಕ ಮಾನ್ಯರ (ಮಿಲಾರ್ಡ್) ಅಭಿಪ್ರಾಯಗಳನ್ನು ನಾನು ಸಂಪೂರ್ಣವಾಗಿ ಒಪ್ಪುವುದಿಲ್ಲ. ನೀವು ಒಪ್ಪುತ್ತೀರಾ?” ಎಂದು ಬರೆದುಕೊಂಡಿದ್ದಾರೆ.

ಅಗ್ನಿಹೋತ್ರಿ ಹಂಚಿಕೊಂಡಿರುವ ಸ್ಕ್ರೀನ್‌ಶಾಟ್‌ನಲ್ಲಿ, “ಕಾಂತಾರ ಮತ್ತು ಪುಷ್ಪದಂತಹ ಚಲನಚಿತ್ರಗಳು ಉದ್ಯಮವನ್ನು ನಾಶಪಡಿಸುತ್ತಿವೆ: ಅನುರಾಗ್ ಕಶ್ಯಪ್” ಎಂದಿದೆ.

ಅಗ್ನಿಹೋತ್ರಿ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ‘ಗ್ಯಾಂಗ್ಸ್ ಆಫ್ ವಾಸೇಪುರ್’ ಖ್ಯಾತಿಯ ನಿರ್ದೇಶಕ ಅನುರಾಗ್‌, “ಸರ್, ಇದು ನಿಮ್ಮ ತಪ್ಪಲ್ಲ. ನಿಮ್ಮ ಸಿನಿಮಾಗಳ ಸಂಶೋಧನೆಯು ನನ್ನ ಸಂಭಾಷಣೆಗಳ ಮೇಲಿನ ನಿಮ್ಮ ಟ್ವೀಟ್‌ಗಳಂತೆಯೇ ಇದೆ. ನಿಮ್ಮ ಸ್ಥಿತಿಯಂತೆಯೇ ನಿಮ್ಮ ಮಾಧ್ಯಮದ ಸ್ಥಿತಿಯೂ ಇರುತ್ತದೆ. ಮುಂದಿನ ಬಾರಿ ಸ್ವಲ್ಪ ಗಂಭೀರವಾದ ಸಂಶೋಧನೆ ಮಾಡಿರಿ” ಎಂದು ಕಿವಿಹಿಂಡಿದ್ದಾರೆ.

‘ದಿ ಕಾಶ್ಮೀರ್ ಫೈಲ್ಸ್’ ಕುರಿತ ನಾಲ್ಕು ವರ್ಷಗಳ ಸಂಶೋಧನಾ ಕಾರ್ಯವು ಸುಳ್ಳು ಎಂದು ಸಾಬೀತುಪಡಿಸಲು ಅಗ್ನಿಹೋತ್ರಿ ಇತ್ತೀಚೆಗೆ ಹೇಳಿದ್ದರು. ‘ಕಾಶ್ಮೀರ್‌ಫೈಲ್ಸ್‌ ಒಂದು ಪ್ರೊಪಗಾಂಡ ಸಿನಿಮಾ’ ಎಂದು ಗೋವಾ ಅಂತರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಖ್ಯಾತ ನಿರ್ದೇಶಕ, ಫಿಲ್ಮ್‌ ಫೆಸ್ಟಿವಲ್‌ನ ಜ್ಯೂರಿ ನಡಾವ್ ಲಾಪಿಡ್‌ ಟೀಕಿಸಿದ್ದ ಬಳಿಕ ವಿವಾದ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ವಾಕ್ಸಮರ ಏರ್ಪಟ್ಟಿದ್ದು, ಇತ್ತೀಚೆಗೆ ಬಿಡುಗಡೆಯಾದ ಅನುರಾಗ್ ಕಶ್ಯಪ್ ಅವರ ‘ದೋಬಾರಾ’ ಚಲನಚಿತ್ರದ ಮೇಲೆ ಪರೋಕ್ಷವಾಗಿ ಟೀಕೆಯನ್ನು ವಿವೇಕ್ ಮಾಡಿದ್ದಾರೆ.

“ಮುಂದಿನ ಬಾರಿ, ಗಂಭೀರ ಸಂಶೋಧನೆ ಮಾಡಿ” ಎಂದು ಅನುರಾಗ್ ಕಶ್ಯಪ್ ಅವರು ವಿವೇಕ್ ಅಗ್ನಿಹೋತ್ರಿಗೆ ಬುದ್ಧಿಮಾತು ಹೇಳಿದ್ದಾರೆ.

ಇದನ್ನೂ ಓದಿರಿ: ಪಡುಕೋಣೆಯವರ ‘ಪಠಾಣ್’ ಸಿನಿಮಾ ಬ್ಯಾನ್‌ ಮಾಡುವುದಾಗಿ ಮಧ್ಯಪ್ರದೇಶದ ಗೃಹ ಸಚಿವ ಬೆದರಿಕೆ

ಟ್ವಿಟ್ಟರ್ ವಾರ್‌ನಲ್ಲಿ ಒಂದಿಷ್ಟು ಮಂದಿ ಅಗ್ನಿಹೋತ್ರಿಯವರನ್ನು ಬೆಂಬಲಿಸಿದರೆ, ಮತ್ತಷ್ಟು ಮಂದಿ ಅನುರಾಗ್ ಅವರನ್ನು ಬೆಂಬಲಿಸಿದ್ದಾರೆ.

ಅಗ್ನಿಹೋತ್ರಿ ಅವರು ತಮ್ಮ ಮುಂದಿನ ಚಿತ್ರ ‘ದಿ ವ್ಯಾಕ್ಸಿನ್ ವಾರ್’ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ, ಇದು ಮುಂದಿನ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಥಿಯೇಟರ್‌ಗಳಿಗೆ ಬರಲಿದೆ.

ಕಶ್ಯಪ್ ಇತ್ತೀಚೆಗೆ ಸಸ್ಪೆನ್ಸ್ ಥ್ರಿಲ್ಲರ್ ‘ದೋಬಾರಾ’ವನ್ನು ನಿರ್ದೇಶಿಸಿದ್ದಾರೆ. ಇದು ತಾಪ್ಸಿ ಪನ್ನು ಮತ್ತು ಪಾವೈಲ್ ಗುಲಾಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಆದರೆ ಗಲ್ಲಾಪೆಟ್ಟಿಗೆಯಲ್ಲಿ ಪ್ರೇಕ್ಷಕರನ್ನು ಮೆಚ್ಚಿಸಲು ವಿಫಲವಾಯಿತು.

‘ಕಾಶ್ಮೀರ್‌ ಫೈಲ್ಸ್‌’ಗೆ ಅಂತರಾಷ್ಟ್ರೀಯ ಮಟ್ಟದ ನಿರ್ದೇಶಕರ ಟೀಕೆ

‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವು ಪ್ರೊಪಗಂಡಾ ಪ್ರೇರಿತ, ಅಶ್ಲೀಲ ಸಿನಿಮಾವಾಗಿದೆ ಎಂದು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (IFFI) ತೀರ್ಪುಗಾರರ ಮುಖ್ಯಸ್ಥ, ಇಸ್ರೇಲ್ ಚಿತ್ರ ನಿರ್ದೇಶಕ ನಾದವ್ ಲ್ಯಾಪಿಡ್ ಹೇಳಿದ್ದರು. ಇದನ್ನು ಚಲನಚಿತ್ರೋತ್ಸವದ ಸಹ ತೀರ್ಪುಗಾರರು ಬೆಂಬಲಿಸಿದ್ದರು.

ಸುದಿಪ್ತೊ ಸೆನ್ ಹೊರತುಪಡಿಸಿ ಉಳಿದ ಮೂವರು ಜೂರಿಗಳಾದ ಪಾಸ್ಕೇಲ್ ಚವಾನ್ಸ್, ಜೇವಿಯರ್ ಅಂಗುಲೋ ಬಾರ್ಟುರೆನ್ ಸಹ ನಾದವ್ ಮತ್ತು ಜಿಂಕೊ ಗೊಟೆಹ್ ಲ್ಯಾಪಿಡ್ ಪರ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದರು.

IFFIಯ ಐವರು ತೀರ್ಪುಗಾರರಲ್ಲಿ ಒಬ್ಬರಾದ BAFTA ವಿಜೇತೆ ಜಿಂಕೊ ಗೊಟೆಹ್ ಟ್ವೀಟ್ ಮಾಡಿ, “53ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ- ಈ ಚಿತ್ರೋತ್ಸವದ ಪ್ರಶಸ್ತಿ ಪಟ್ಟಿಗೆ 15ನೇ ಚಿತ್ರವಾಗಿ ಕಾಶ್ಮೀರ್ ಫೈಲ್ಸ್ ಬಂದಿದ್ದನ್ನು ನೋಡಿ ನಮಗೆ ಆಘಾತವಾಗಿದೆ. ಇದರಿಂದ ನಾವು ವಿಚಲಿತಗೊಂಡಿದ್ದೇವೆ. ಆ ಚಿತ್ರವು ಪ್ರೊಪಗಂಡ ಪ್ರೇರಿತ, ಅಶ್ಲೀಲ ಚಿತ್ರವಾಗಿದೆ. ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದ ಕಲಾತ್ಮಕ ಸ್ಪರ್ಧಾ ವಿಭಾಗಕ್ಕೆ ಅದು ಸೂಕ್ತವಲ್ಲ ಎಂದು ಅನಿಸಿತು ಎಂದು ಬಹಿರಂಗವಾಗಿ ನಿಮ್ಮೊಡನೆ ಹಂಚಿಕೊಳ್ಳಲು ಬಯಸುತ್ತೇನೆ- ಎಂದು ತೀರ್ಪುಗಾರರ ಅಧ್ಯಕ್ಷ ನಾದವ್ ಲ್ಯಾಪಿಡ್ ಹೇಳಿದ್ದರು. ನಾವು ಅವರ ಹೇಳಿಕೆಗೆ ಬದ್ಧರಾಗಿದ್ದೇವೆ” ಎಂದು ಹೇಳಿಕೆಯಲ್ಲಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...