Homeಮುಖಪುಟಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ, ಆದರೆ ನಮ್ಮ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ: ರಾಹುಲ್ ಗಾಂಧಿ

ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ, ಆದರೆ ನಮ್ಮ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ: ರಾಹುಲ್ ಗಾಂಧಿ

- Advertisement -
- Advertisement -

ಅರುಣಾಚಲ ಪ್ರದೇಶದಲ್ಲಿ ಚೀನಿ ಸೈನಿಕರ ಒಳನುಗ್ಗಿವಿಕೆ ವಿಚಾರವು ಆತಂಕಕಾರಿಯಾಗಿದೆ. ಆದರೆ ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ, ಆದರೆ ಮೋದಿ ಸರ್ಕಾರ ಅದನ್ನು ಒಪ್ಪಿಕೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಜೈಪುರದಲ್ಲಿ ಸಾಗುತ್ತಿರುವ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಮಾತನಾಡಿದ ಅವರು, “ಚೀನಾ ನಮ್ಮ ಭೂಮಿಯನ್ನು ವಶಪಡಿಸಿಕೊಂಡಿದೆ. ಅವರು ನಮ್ಮ ಸೈನಿಕರ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ಆ ಮೂಲಕ ಚೀನಾದ ಬೆದರಿಕೆ ಸ್ಪಷ್ಟವಾಗಿದೆ. ಆದರೆ ನಮ್ಮ ಸರ್ಕಾರ ಅದನ್ನು ಮರೆಮಾಡುತ್ತಿದೆ, ಅದನ್ನು ನಿರ್ಲಕ್ಷಿಸುತ್ತಿದೆ. ಚೀನಾ ಲಡಾಖ್ ಮತ್ತು ಅರುಣಾಚಲದಲ್ಲಿ ಆಕ್ರಮಣಕ್ಕೆ ತಯಾರಿ ನಡೆಸುತ್ತಿದೆ ಮತ್ತು ಭಾರತ ಸರ್ಕಾರ ನಿದ್ರಿಸುತ್ತಿದೆ” ಎಂದು ಹೇಳಿದ್ದಾರೆ.

ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆಯೇ ಹೊರತು ಕೇವಲ ಅತಿಕ್ರಮಣ ಮಾತ್ರವಲ್ಲ. ಇದನ್ನು ಎರಡು-ಮೂರು ವರ್ಷಗಳಿಂದಲೂ ನಾನು ಹೇಳುತ್ತಾ ಬಂದಿದ್ದೇನೆ. ಅವರ ಆಯುಧಗಳ ಮಾದರಿಯನ್ನು ನೋಡಿ. ಅವರು ಯುದ್ಧಕ್ಕೆ ತಯಾರಿ ನಡೆಸುತ್ತಿದ್ದಾರೆ. ಅದನ್ನು ನಮ್ಮ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ. ಭಾರತ ಸರ್ಕಾರವು ಈವೆಂಟ್‌ಗಳ ಮೇಲೆ ಕೆಲಸ ಮಾಡುತ್ತಿದೆಯೆ ಹೊರತು ಚೀನಾದ ತಂತ್ರಕ್ಕೆ ಪ್ರತಿತಂತ್ರ ಹೆಣೆಯುತ್ತಿಲ್ಲ ಎಂದಿದ್ದಾರೆ.

“ಭಾರತ ಸರ್ಕಾರವು ಈವೆಂಟ್ ಆಧಾರಿತ ಕೆಲಸವನ್ನು ನಿರ್ವಹಿಸುತ್ತದೆಯೆ ಹೊರತು ಕಾರ್ಯತಂತ್ರ ಹೆಣೆಯುತ್ತಿಲ್ಲ. ಆಗೊಂದು, ಹೀಗೊಂದು ಸಭೆ ಮಾಡುತ್ತಾರೆ. ಆದರೆ ಭೌಗೋಳಿಕ ಕಾರ್ಯತಂತ್ರದಲ್ಲಿ ಈವೆಂಟ್-ಆಧಾರಿತ ವಿಧಾನವು ಕಾರ್ಯನಿರ್ವಹಿಸುವುದಿಲ್ಲ. ಅದಕ್ಕೆ ಶಕ್ತಿ ಬೇಕು, ಏನಾಗುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ” ಎಂದು ರಾಹುಲ್ ಹೇಳಿದ್ದಾರೆ.

“ಮೋದಿಯವರ ಭಾಷಣಗಳು ಬರುತ್ತವೆ. ವಿದೇಶಾಂಗ ವ್ಯವಹಾರಗಳ ಸಚಿವರು ಆಗಾಗ್ಗೆ ಹೇಳಿಕೆಗಳನ್ನು ನೀಡುತ್ತಾರೆ. ನಾನು ಇದನ್ನು ಹೇಳಬಾರದು ಆದರೆ ಬಹುಶಃ ಅವರು ತಮ್ಮ ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ಡಿಸೆಂಬರ್ 9 ರ ಶುಕ್ರವಾರದಂದು, ಅರುಣಾಚಲ ಪ್ರದೇಶದ ತವಾಂಗ್‌ನ ಯಾಂಗ್ಟ್ಸೆಯಲ್ಲಿನ ಲೈನ್ ಆಫ್ ಕಂಟ್ರೋಲ್ (ಎಲ್‌ಎಸಿ) ಬಳಿ ಚೀನೀ ಸೈನಿಕರು ಭಾರತದ ಭೂಪ್ರದೇಶ ಆಕ್ರಮಿಸಲು ಯತ್ನಿಸಿದ್ದಾರೆ. ಅವರು ಒಳನುಗ್ಗಿದ್ದಾಗ ಭಾರತೀಯ ಸೈನಿಕರು ಹಿಮ್ಮೆಟ್ಟಿಸಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಸಂಸತ್ತಿನಲ್ಲಿ ಮಾತನಾಡಿ, ಚೀನಿಯರು “ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸಲು ಪ್ರಯತ್ನಿಸಿದರು. ಆದರೆ ಭಾರತೀಯ ಸೇನಾ ಕಮಾಂಡರ್‌ಗಳ ಸಮಯೋಚಿತ ಹಸ್ತಕ್ಷೇಪದಿಂದಾಗಿ, ಚೀನಾದ ಸೈನಿಕರು ತಮ್ಮ ಸ್ಥಳಗಳಿಗೆ ಮರಳಿದರು. ಕಮಾಂಡರ್‌ಗಳ ಸಭೆಯಲ್ಲಿ ಇಂತಹ ಕ್ರಮಗಳಿಂದ ದೂರವಿರಿ ಮತ್ತು ಗಡಿಯಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡುವಂತೆ ಚೀನೀಯರನ್ನು ಕೇಳಲಾಯಿತು. ಘಟನೆಯನ್ನು ರಾಜತಾಂತ್ರಿಕ ಮಾರ್ಗಗಳ ಮೂಲಕವೂ ಪರಿಹರಿಸಲು ಯತ್ನಿಸಲಾಗುತ್ತಿದೆ” ಎಂದು ಹೇಳಿದ್ದರು.

ಈ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ, ಗಡಿಯಲ್ಲಿನ ಚೀನಾದ ಆಕ್ರಮಣದ ಬಗ್ಗೆ ಚರ್ಚೆ ನಡೆಸುವಂತೆ ವಿಪಕ್ಷಗಳು ಒತ್ತಾಯಿಸಿದವು. ಆದರೆ ಉಪಸಭಾಪತಿ ಹರಿವಂಶ್ ಅದಕ್ಕೆ ಆಸ್ಪದ ಕೊಡಲಿಲ್ಲ.

ಇದನ್ನೂ ಓದಿ; ಅರುಣಾಚಲ ಪ್ರದೇಶ ಗಡಿಯಲ್ಲಿ ಭಾರತ-ಚೀನಾ ಸೈನಿಕರ ಘರ್ಷಣೆ: ಇದುವರೆಗೂ ನಡೆದಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...

ಲೈಂಗಿಕ ಕಿರುಕುಳದ ಆರೋಪ ಮಾಡಿದ ಪತ್ರಕರ್ತೆಯ ವಿರುದ್ಧ ಜಾತಿ ನಿಂದನೆ ಪ್ರಕರಣ: ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುವಾಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳಾ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ...

ಸಿಇಸಿ ವಿರೋಧಿ ಪ್ರತಿಭಟನೆ: ಮೆಟ್ರೋ ನಿರ್ಬಂಧ, ಇಂಟರ್ನೆಟ್ ಸ್ಥಗಿತ ಪ್ರಕರಣ: ಸುಪ್ರೀಂ ಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ ಕೇಂದ್ರ ಕಾರ್ಯದರ್ಶಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೆಟ್ರೋ ಮತ್ತು ರೈಲು ಸೇವೆಗಳ ಮೇಲೆ ನಿರ್ಬಂಧ ವಿಧಿಸಿದ ಹಾಗೂ ಇಂಟರ್ನೆಟ್...

‘ಯಾರೂ ನಮ್ಮನ್ನು ಬೆದರಿಸಿ ಮಣಿಸಲು ಸಾಧ್ಯವಿಲ್ಲ’: ವಿಪಕ್ಷಗಳ ಸುಪ್ರೀಂ ಕೋರ್ಟ್ ಮಾರ್ಚ್ ಕುರಿತು ಸಿಜೆಐ ಹೇಳಿಕೆ

ನ್ಯಾಯಾಲಯ ಸಂಕೀರ್ಣಗಳ ಸಮೀಪ ಪ್ರತಿಭಟನೆಗಳು ಮತ್ತು ಮೆರವಣಿಗೆಗಳಿಗೆ ನಿಯಂತ್ರಕ ಚೌಕಟ್ಟೊಂದನ್ನು ರೂಪಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಸಂಬಂಧ ಸುಪ್ರೀಂ ಕೋರ್ಟ್ ಇಂದು (ಅ.15) ನೋಟಿಸ್ ಜಾರಿ ಮಾಡಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ದೆಹಲಿ ಪ್ರತಿಭಟನೆ ಹಾಗೂ ಜಂತರ್ ಮಂತರ್ ರದ್ದತಿ ವಿವಾದ: ಕೇಂದ್ರ ಸರ್ಕಾರ ಹಾಗೂ ಪೊಲೀಸರಿಗೆ ಸುಪ್ರೀಂ ನೋಟಿಸ್; ವಿಡಿಯೋ ಸಾಕ್ಷ್ಯ ಭದ್ರಪಡಿಸಲು ನಿರ್ದೇಶನ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ನಡೆಸಿದ್ದರೆನ್ನಲಾದ ಅತಿಯಾದ ಬಲಪ್ರಯೋಗ, ಸಾರ್ವಜನಿಕರ ಸಂಚಾರ ನಿರ್ಬಂಧ ಹಾಗೂ ಪ್ರಮುಖ ಪ್ರತಿಭಟನಾ ಸ್ಥಳವಾಗಿದ್ದ 'ಜಂತರ್ ಮಂತರ್' ಅನ್ನು ರದ್ದುಗೊಳಿಸಿದ (De-notification) ಕೇಂದ್ರ...

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡವರಿಗೆ ‘ಹಿಂದುಳಿದ ವರ್ಗದ’ ಮೀಸಲಾತಿ ಇಲ್ಲ : ಮದ್ರಾಸ್ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವ ವ್ಯಕ್ತಿಯು ತನ್ನ ಮತಾಂತರ ಪೂರ್ವದ ಜಾತಿ ಸ್ಥಿತಿಯ ಆಧಾರದ ಮೇಲೆ ಹಿಂದುಳಿದ ವರ್ಗದ (ಬಿಸಿ) ಮೀಸಲಾತಿಗೆ ಅರ್ಹನಲ್ಲ ಎಂದು ತೀರ್ಪು ನೀಡಿದ್ದ ಮದ್ರಾಸ್ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್...

‘ಎಸ್‌ಐಆರ್’ ವಿರುದ್ಧ ಇಂಡಿಯಾ ನಾಯಕರ ಅರ್ಜಿ: ಸುಪ್ರೀಂ ಕೋರ್ಟ್‌ನಿಂದ ಚುನಾವಣಾ ಆಯೋಗಕ್ಕೆ ನೋಟಿಸ್

ಭಾರತೀಯ ಚುನಾವಣಾ ಆಯೋಗ ದೇಶಾದ್ಯಂತ ಜಾರಿಗೆ ತಂದಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯ ಕಾನೂನಾತ್ಮಕತೆಯನ್ನು ಪ್ರಶ್ನಿಸಿ ವಿಪಕ್ಷ 'ಇಂಡಿಯಾ' ಒಕ್ಕೂಟ ಸಲ್ಲಿಸಿರುವ ಪ್ರಮುಖ...

ಸಿಇಸಿ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್‌ಗೆ ಭಾರತ ತೊರೆಯುವಂತೆ ನೋಟಿಸ್: ಅಕ್ಟೋಬರ್ 28ರ ಗಡುವು

ಮುಂಬೈ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್ ಅವರಿಗೆ ಅಕ್ಟೋಬರ್ 28ರೊಳಗೆ ಭಾರತ ತೊರೆಯುವಂತೆ...

2018ರ ‘ಬಿಜೆಪಿ ಐಟಿ ಸೆಲ್’ ವೀಡಿಯೊ ವಿವಾದ: ಯೂಟ್ಯೂಬರ್ ಧ್ರುವ್ ರಾಠಿಗೆ ಹೊಸ ಸಮನ್ಸ್ ಜಾರಿ ಮಾಡಿದ ದೆಹಲಿ ಕೋರ್ಟ್!

ಡಿಜಿಟಲ್ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದ 2018ರ ಕ್ರಿಮಿನಲ್ ಮಾನಹಾನಿ ದೂರಿಗೆ (Criminal Defamation Case) ಸಂಬಂಧಿಸಿದಂತೆ, ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠಿ ಅವರಿಗೆ ದೆಹಲಿಯ ಸಾಕೇತ್ ನ್ಯಾಯಾಲಯವು ಹೊಸದಾಗಿ...

ಅ.23ರಂದು ದೇಶವ್ಯಾಪಿ ಪ್ರತಿಭಟನೆಗೆ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’ ಕರೆ : ದೆಹಲಿಯಲ್ಲಿ ಜಂಟಿ ವೇದಿಕೆ ರಚನೆ

ಚುನಾವಣಾ ಪ್ರಜಾಪ್ರಭುತ್ವದ ಸಮಗ್ರತೆಯನ್ನು ಮರುಸ್ಥಾಪಿಸಲು ಮತ್ತು ನಾಗರಿಕರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ರಕ್ಷಿಸಲು ರೈತರು, ಕಾರ್ಮಿಕರು, ಮಹಿಳೆಯರು, ಯುವಜನರು, ವಿದ್ಯಾರ್ಥಿಗಳು, ಆದಿವಾಸಿಗಳು, ದಲಿತರು ಮತ್ತು ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ಜನಪರ ಸಂಘಟನೆಗಳ ಒಕ್ಕೂಟವಾದ ‘ಪೀಪಲ್...