Homeಮುಖಪುಟರಾಹುಲ್ ಗಾಂಧಿ ಕುರಿತು ಅಮಿತ್ ಮಾಳವೀಯ ಮಾಡಿದ ಟ್ವೀಟ್ ಸುಳ್ಳು: ಟ್ಯಾಗ್ ಮಾಡಿದ ಟ್ವಿಟರ್

ರಾಹುಲ್ ಗಾಂಧಿ ಕುರಿತು ಅಮಿತ್ ಮಾಳವೀಯ ಮಾಡಿದ ಟ್ವೀಟ್ ಸುಳ್ಳು: ಟ್ಯಾಗ್ ಮಾಡಿದ ಟ್ವಿಟರ್

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಇದೀಗ ರಾಜಸ್ಥಾನವನ್ನು ದಾಟಿ ಹರಿಯಾಣವನ್ನು ಪ್ರವೇಶಿಸಿದೆ. ಸಾಕಷ್ಟು ಜನಬೆಂಬಲ ಗಳಿಸಿರುವ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಕೇಂದ್ರ ಸಚಿವರೊಬ್ಬರ ಕೈಯಿಂದ ತಮ್ಮ ಶೂ ದಾರವನ್ನು ಕಟ್ಟಿಸಿಕೊಂಡಿದ್ದಾರೆ ಹಲವಾರು ಬಿಜೆಪಿ ನಾಯಕರು ಟ್ವೀಟ್ ಮಾಡಿ ಟೀಕಿಸಿದ್ದಾರೆ. ಈ ಕುರಿತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಮಾಡಿದ ಟ್ವೀಟ್ ಸುಳ್ಳು ಎಂದು ಟ್ವಿಟರ್ ಟ್ಯಾಗ್ ಮಾಡಿದೆ.

“ಮಾಜಿ ಕೇಂದ್ರ ಸಚಿವ ಭನ್ವರ್ ಜಿತೇಂದ್ರ ಸಿಂಗ್ ಅವರು ತಮಗಿಂತ ಕಿರಿಯರಾದ ರಾಹುಲ್ ಗಾಂಧಿ ಅವರ ಶೂ ಲೇಸ್ ಕಟ್ಟಿದ್ದಾರೆ. ಈ ರಾಹುಲ್ ಗಾಂಧಿ ತನ್ನ ಕೆಲಸ ತಾನು ಮಾಡಿಕೊಳ್ಳದ ದುರಂಕಾರಿ ಸಿಂಗ್ ಅವರ ತನ್ನ ಬೆನ್ನು ತಟ್ಟುತ್ತಾರೆ. ಕಾಂಗ್ರೆಸ್‌ನಲ್ಲಿ ಇಂತವರ ಕೊರತೆಯಿಲ್ಲ” ಎಂದು ಬರೆದು ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದಾರೆ.

 

ರಾಹುಲ್ ಗಾಂಧಿ ಅವರು ಈ ಕೂಡಲೇ ಜಿತೇಂದ್ರ ಸಿಂಗ್ ಅವರಿಗೆ ಕ್ಷಮೆ ಕೋರಬೇಕು. ಇಲ್ಲದೇ ಹೋದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಒತ್ತಾಯಿಸಿದ್ದಾರೆ.

ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿತೇಂದ್ರ ಸಿಂಗ್‌ರವರು ತಾವು ತಮ್ಮ ಸ್ವಂತ ಶೂ ಲೇಸ್ ಅನ್ನು ಕಟ್ಟುತ್ತಿದ್ದುದಾಗಿ ಸ್ಪಷ್ಟಪಡಿಸಿದ್ದಾರೆ. ಮಾಳವಿಯಾ ವಿರುದ್ಧ ಕಿಡಿಕಾರಿದ ಅವರು, ನಿಮ್ಮ ಟ್ವೀಟ್ ಸಂಪೂರ್ಣ ಸುಳ್ಳಾಗಿದೆ ಹಾಗೂ ಮಾನಹಾನಿಕರವಾಗಿದೆ. ವಾಸ್ತವವಾಗಿ ನನ್ನ ಕೋರಿಕೆಯ ಮೇರೆಗೆ ರಾಹುಲ್ ಗಾಂಧಿಯವರು ಯಾತ್ರೆಯಲ್ಲಿ ನಡೆಯುತ್ತಿದ್ದುದನ್ನು ನಿಲ್ಲಿಸಿ, ನನ್ನ ಶೂ ಲೇಸ್‌ಗಳನ್ನು ಕಟ್ಟಲು ಅನುಮತಿ ನೀಡಿದ್ದರು ಎಂದು ಹೇಳಿದ್ದಾರೆ.

 

ಸುಳ್ಳು ಮಾಹಿತಿಯನ್ನು ಹರಡಿರುವ ನಿಮ್ಮ ಟ್ವೀಟ್ ಅನ್ನು ಅಳಿಸಿ ಹಾಗೂ ಕ್ಷಮೆಯಾಚಿಸಿ. ಇಲ್ಲದೇ ಹೋದಲ್ಲಿ ನೀವು ಕಾನೂನು ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಜಿತೇಂದ್ರ ಸಿಂಗ್ ಅವರು ಮಾಳವಿಯಾಗೆ ಎಚ್ಚರಿಕೆ ನೀಡಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆಯಲ್ಲಿ ಮಾಜಿ ಕೇಂದ್ರ ಸಚಿವ ಭನ್ವರ್ ಜಿತೇಂದ್ರ ಸಿಂಗ್ ಅವರಿಂದ ತಮ್ಮ ಶೂ ಲೇಸ್‌ ಅನ್ನು ಕಟ್ಟಿಸಿಕೊಂಡಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಆದರೆ ಜಿತೇಂದ್ರ ಸಿಂಗ್ ಅವರು ರಾಹುಲ್ ಗಾಂಧಿಯವರ ಶೂ ಲೇಸ್‌ ಕಟ್ಟಿಲ್ಲ ತನ್ನದೇ ಶೂ ಲೇಸ್‌ ಕಟ್ಟಿಕೊಂಡ ಜಿತೇಂದ್ರ ಸಿಂಗ್ ವಿಡಿಯೋವನ್ನು BJP ಐಟಿ ಸೆಲ್ ತಪ್ಪಾಗಿ ಹಂಚಿಕೊಂಡಿದೆ. ಹಾಗಾಗಿ ಪೋಸ್ಟ್‌ನಲ್ಲಿ ಟ್ವಿಟರ್ ಈ ಮೀಡಿಯಾ ಸಂದರ್ಭಕ್ಕೆ ಹೊರತಾಗಿದೆ ಎಂದು ಎಚ್ಚರಿಕೆ ನೀಡಿದೆ.

ಈ ಕುರಿತು ವ್ಯಂಗ್ಯವಾಡಿರುವ ಖ್ಯಾತ ಫ್ಯಾಕ್ಟ್‌ಚೆಕ್ ಪತ್ರಕರ್ತ ಮೊಹಮ್ಮದ್ ಝುಬೇರ್, “ಟ್ವಿಟರ್ ನಿಮ್ಮ ವಿಡಿಯೋವನ್ನು ಸುಳ್ಳು ಸುದ್ದಿ ಎಂದು ಫ್ಲಾಗ್ ಮಾಡಿದೆ. ಟ್ವಿಟರ್‌ನಿಂದ ಈ ಗೌರವದ ಬ್ಯಾಡ್ಜ್ ಪಡೆದುದ್ದಕ್ಕಾಗಿ ಅಭಿನಂದನೆಗಳು” ಎಂದು ಛೇಡಿಸಿದ್ದಾರೆ.

ಇದನ್ನೂ ಓದಿ:  Fact check: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಹರಡಿದ 16 ಸುಳ್ಳು ಸುದ್ದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...