Homeಮುಖಪುಟಚಲನಚಿತ್ರ ನಿರ್ದೇಶಕ, ಮಾನವ ಹಕ್ಕುಗಳ ಹೋರಾಟಗಾರ ಕೆ.ಪಿ.ಸಸಿ ನಿಧನ

ಚಲನಚಿತ್ರ ನಿರ್ದೇಶಕ, ಮಾನವ ಹಕ್ಕುಗಳ ಹೋರಾಟಗಾರ ಕೆ.ಪಿ.ಸಸಿ ನಿಧನ

- Advertisement -
- Advertisement -

ಚಲನಚಿತ್ರ ಮತ್ತು ಸಾಕ್ಷ್ಯಚಿತ್ರ ನಿರ್ದೇಶಕ, ಮಾನವ ಹಕ್ಕುಗಳ ಹೋರಾಟಗಾರ ಕೆ.ಪಿ.ಸಸಿ ಅವರು ಕೇರಳದ ತ್ರಿಶೂರಿನಲ್ಲಿ ಭಾನುವಾರ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. ತ್ರಿಶೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೊನೆಯುಸಿರೆಳೆದಿದ್ದಾರೆ.

ಸಸಿಯವರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ 12 ಗಂಟೆಗೆ ಪರಮೆಕ್ಕಾವು ಚಿತಾಗಾರದಲ್ಲಿ ನಡೆಯಲಿದೆ. ಪ್ರಸಿದ್ಧ ಬರಹಗಾರ ಮತ್ತು ಕಮ್ಯುನಿಸ್ಟ್ ಚಿಂತಕ ಕೆ.ದಾಮೋದರನ್ ಅವರ ಪುತ್ರ ಕೆ.ಪಿ.ಸಸಿ.

1994ರಲ್ಲಿ ಬಿಡುಗಡೆಯಾದ ‘ಇಲಯುಮ್ ಮುಲ್ಲುಮ್’ ಚಿತ್ರಕ್ಕೆ ಅತ್ಯುತ್ತಮ ನಿರ್ದೇಶಕರಾಗಿ ರಾಷ್ಟ್ರೀಯ ಪ್ರಶಸ್ತಿಯನ್ನು ಸಸಿ ಪಡೆದಿದ್ದಾರೆ. ಕೇರಳದ ಸಾಕ್ಷ್ಯಚಿತ್ರ ಕ್ಷೇತ್ರಕ್ಕೆ ನೀಡಿದ ಗಮನಾರ್ಹ ಕೊಡುಗೆಗಳಿಂದಾಗಿ ಅವರು ಜನಪ್ರಿಯರಾಗಿದ್ದಾರೆ. ಅವರ ಸಾಕ್ಷ್ಯಚಿತ್ರಗಳು ಸಾಮಾಜಿಕ ಸಮಸ್ಯೆಗಳನ್ನು ಚರ್ಚಿಸಿವೆ.

‘ರೆಸಿಸ್ಟಿಂಗ್ ಕೋಸ್ಟಲ್ ಇನ್ವೇಷನ್’, ‘ಅಮೆರಿಕಾ ಅಮೇರಿಕಾ’, ‘ಲಿವಿಂಗ್ ಇನ್ ಫಿಯರ್’, ‘ಡೆವಲಪ್‌ಮೆಂಟ್ ಎಟ್ ಗನ್‌ಪಾಯಿಂಟ್’ ಮತ್ತು ‘ಫ್ಯಾಬ್ರಿಕೇಟೆಡ್’ ಅವರ ಪ್ರಮುಖ ಸಾಕ್ಷ್ಯಚಿತ್ರಗಳು.

ಲೇಖಕಿ ಮೀನಾ ಕಂದಸ್ವಾಮಿ ಸಂತಾಪ ಸೂಚಿಸಿದ್ದು, “ಕೆಲಸ ಮತ್ತು ಕ್ರಿಯಾಶೀಲತೆಯ ಕಾರಣಕ್ಕಾಗಿ ನಾನು ದೂರದಿಂದಲೇ ಇಬ್ಬರು ವ್ಯಕ್ತಿಗಳು ಇಂದು ನಿಧನರಾದರು. ಮೊದಲನೆಯವರು ನಿರ್ದೇಶಕ, ನಿರ್ಭೀತ ಹೋರಾಟಗಾರ ಕೆ.ಪಿ.ಸಸಿ. 2ನೆಯವರು ಎಡಪಂಥೀಯ ಬುದ್ಧಿಜೀವಿ ಟಿ.ಜಿ.ಜೇಕಬ್. ಪಶ್ಚಿಮ ಘಟ್ಟಗಳು ಮತ್ತು ಪ್ರವಾಸೋದ್ಯಮದ ಬಗೆಗಿನ ಅವರ ಬರಹಗಳು ನನ್ನ ಪ್ರಭಾವಿಸಿವೆ” ಎಂದು ಸ್ಮರಿಸಿದ್ದಾರೆ.

ಹೋರಾಟಗಾರ ಎಸ್‌.ಕ್ಯೂ.ಮಸೂದ್‌ ಟ್ವೀಟ್ ಮಾಡಿದ್ದು, “ಆತ್ಮೀಯ ಗೆಳೆಯ ಹಾಗೂ ಸಾಕ್ಷ್ಯಚಿತ್ರ ನಿರ್ಮಾಪಕ ಕೆ.ಪಿ.ಸಸಿ ನಮ್ಮನ್ನು ಅಗಲಿದ್ದು ಅತ್ಯಂತ ದುಃಖದ ಸುದ್ದಿ. ನಮಗೆಲ್ಲರಿಗೂ, ಸಸಿ ಅವರು ತಮ್ಮ ಕಾಳಜಿಯನ್ನು ತೋರಿದ ಎಲ್ಲಾ ಜನರಿಗೂ, ಚಳವಳಿಗಳಿಗೂ ದೊಡ್ಡ ನಷ್ಟವಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...