Homeಮುಖಪುಟಚೂಪಾದ ಆಯುಧಗಳನ್ನಿಟ್ಟುಕೊಳ್ಳಿ, ವಿರೋಧಿಗಳ ತಲೆ ಕಡಿಯಿರಿ: ಕೋಮು ಪ್ರಚೋದನಾ ಭಾಷಣ ಮಾಡಿದ ಬಿಜೆಪಿ ಸಂಸದೆ ಪ್ರಗ್ಯಾ...

ಚೂಪಾದ ಆಯುಧಗಳನ್ನಿಟ್ಟುಕೊಳ್ಳಿ, ವಿರೋಧಿಗಳ ತಲೆ ಕಡಿಯಿರಿ: ಕೋಮು ಪ್ರಚೋದನಾ ಭಾಷಣ ಮಾಡಿದ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್

- Advertisement -
- Advertisement -

ಮನೆಗಳಲ್ಲಿ ಚೂಪಾದ ಆಯುಧಗಳನ್ನಿಟ್ಟುಕೊಳ್ಳಿ, ವಿರೋಧಿಗಳ ತಲೆ ಕಡಿಯಿರಿ ಎಂದು ಭಯೋತ್ಪಾದನಾ ಆರೋಪಿ ಮತ್ತು ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಶಿವಮೊಗ್ಗದಲ್ಲಿ ಕೋಮು ಪ್ರಚೋದನಾ ಭಾಷಣ ಮಾಡಿರುವ ವಿಡಿಯೋ ವೈರಲ್ ಆಗಿದೆ.

ಭಾನುವಾರ ಶಿವಮೊಗ್ಗದಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ಪ್ರಾದೇಶಿಕ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಪ್ರಗ್ಯಾಸಿಂಗ್ “ಅವರು ಬಜರಂಗದಳ ಕಾರ್ಯಕರ್ತ ಹರ್ಷ ಮತ್ತು ಇತರ ಹಿಂದೂ ವೀರರು, ಬಿಜೆಪಿ ಕಾರ್ಯಕರ್ತರನ್ನು ಚಾಕುವಿನಿಂದ ಇರಿದಿದ್ದಾರೆ. ಹಾಗಾಗಿ ನಾವು (ಹಿಂದೂಗಳು) ನಮ್ಮ ಮನೆಯಲ್ಲಿ ಆಯುಧಗಳನ್ನು ಇಟ್ಟುಕೊಳ್ಳಬೇಕು ಎಂದು ನಾನು ಸ್ಪಷ್ಟವಾಗಿ ಹೇಳುತ್ತಿದ್ದೇನೆ. ತರಕಾರಿಗಳನ್ನು ಕತ್ತರಿಸಲು ಬಳಸುವ ಚಾಕುಗಳನ್ನು ಕನಿಷ್ಠ ಚೂಪು ಮಾಡಿಕೊಂಡು ಇಟ್ಟುಕೊಳ್ಳಿ. ಯಾವಾಗ ಉಪಯೋಗಕ್ಕೆ ಬರುತ್ತವೆ ಹೇಳಲಾಗುವುದಿಲ್ಲ. ಸಮಯ ಬಂದಾಗ ವೈರಿಗಳ ತಲೆ ತೆಗೆಯಿರಿ” ಎಂದು ಪ್ರಚೋದಿಸಿದ್ದಾರೆ.

ಲವ್ ಜಿಹಾದ್ ಮಾಡುವವರಿಗೆ ಲವ್ ಜಿಹಾದ್ ರೀತಿಯಲ್ಲಿಯೇ ಉತ್ತರ ಕೊಡಿ. ನಿಮ್ಮ ಹೆಣ್ಣು ಮಕ್ಕಳನ್ನು ಸುರಕ್ಷಿತವಾಗಿರಿಸಿಕೊಳ್ಳಿ. ಅವರಿಗೆ ಸಂಸ್ಕಾರ ಕಲಿಸಿ ಎಂದು ಪ್ರಗ್ಯಾ ಸಿಂಗ್ ಹೇಳಿದ್ದಾರೆ.

ಸೌತ್ ಫಸ್ಟ್ ಮಾಧ್ಯಮವು ಪ್ರಕರಣ ದಾಖಲಾಗಿದಯೇ ಎಂದು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರನ್ನು ಪ್ರಶ್ನಿಸಿದಾಗ “ನಮಗೆ ಯಾವುದೇ ದೂರು ಬಂದಿಲ್ಲದ ಕಾರಣ ನಾವು ಯಾವುದೇ ಪ್ರಕರಣವನ್ನು ದಾಖಲಿಸಿಲ್ಲ” ಎಂದು ಹೇಳಿದ್ದಾರೆ ಎಂದು ವರದಿ ಮಾಡಿದೆ.

ಡಿಸೆಂಬರ್ 25 ರಂದು ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್ ಅವರು ಮಾಡಿದ ಕೋಮು ದ್ವೇಷದ ಭಾಷಣದ ಕುರಿತು ಕರ್ನಾಟಕ ಪೊಲೀಸ್ ಮತ್ತು ಶಿವಮೊಗ್ಗ ಎಸ್ಪಿ ಅವರಿಗೆ ಇಂದು ಬೆಳಿಗ್ಗೆ ದೂರು ದಾಖಲಿಸಲಾಗಿದೆ. ಕೂಡಲೇ ಎಫ್‌ಐಆರ್ ಮಾಡಬೇಕು ಎಂದು ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಗುಜರಾತ್: ತನ್ನ ಮಗಳ ಅಶ್ಲೀಲ ವೀಡಿಯೊ ಪೋಸ್ಟ್ ಮಾಡಿದ್ದನ್ನು ಪ್ರಶ್ನಿಸಿದ BSF ಯೋಧನ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ಕಾರ ಈ ಕೂಡಲೇ ಪ್ರಜ್ಞಾ ಸಿಂಗ್ ವಿರುದ್ದ ಕಾನೂನು ಕ್ರಮ ಜರುಗಿಸಬೇಕು.

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...