ಧಾರವಾಡಕ್ಕೆ ಪ್ರಧಾನಿ ಮೋದಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿ ವಿರೋಧಿ ನಿಲುವನ್ನು ಧಾರವಾಡ ಕರ್ನಾಟಕ ವಿಶ್ವವಿದ್ಯಾನಿಲಯ ತಾಳಿರುವುದು ಟೀಕೆಗೆ ಗುರಿಯಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿರುವ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಒಂಬತ್ತು ದಿನಗಳ ಕಾಲ ಹಾಸ್ಟೆಲ್ ಖಾಲಿ ಮಾಡುವಂತೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ (ಕೆಯುಡಿ) ವಿದ್ಯಾರ್ಥಿಗಳಿಗೆ ಸೂಚಿಸಿದೆ.
2023ರ ಜನವರಿಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕಾಗಿ ಆಗಮಿಸುವ ಅತಿಥಿಗಳ ವಾಸ್ತವ್ಯಕ್ಕಾಗಿ ಒಂಬತ್ತು ದಿನಗಳ ಕಾಲ ಹಾಸ್ಟೆಲ್ ಖಾಲಿ ಮಾಡುವಂತೆ ಹೇಳಿರುವ ʼಕೆಯುಡಿಯʼ ವಿರುದ್ಧ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ‘ಈದಿನ.ಕಾಂ’ ವರದಿ ಮಾಡಿದೆ.
ಐದು ದಿನಗಳ ಉತ್ಸವವನ್ನು ಜನವರಿ 12ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಾಲೇಜು ಮೈದಾನದಲ್ಲಿ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ದೇಶದ ವಿವಿಧ ಭಾಗಗಳಿಂದ ಸಾವಿರಾರು ವಿದ್ಯಾರ್ಥಿಗಳು ಧಾರವಾಡಕ್ಕೆ ಬರಲಿದ್ದಾರೆ.
ವಿಶ್ವವಿದ್ಯಾನಿಲಯದ ನಿಲುವನ್ನು ನಿರ್ಧಾರವನ್ನು ವಿರೋಧಿಸುತ್ತಿರುವ ವಿದ್ಯಾರ್ಥಿಗಳು, “ಕಾರ್ಯಕ್ರಮದ ಅತಿಥಿಗಳಿಗೆ ಕಾಲೇಜು ಕೊಠಡಿಗಳನ್ನು ಬಳಸುವಂತೆ ಹೇಳಬಹುದಿತ್ತು. ಹೋಟೆಲ್‌ಗಳನ್ನು ಕಾಯ್ದಿರಿಸಬಹುದಿತ್ತು ಅಥವಾ ಟೆಂಟ್‌ಗಳನ್ನು ಹಾಕಬಹುದಿತ್ತು. ಇದೆಲ್ಲದರ ಬದಲಿಗೆ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಖಾಲಿ ಮಾಡಿಸುವುದು ಎಷ್ಟು ಸರಿ?” ಎಂದು ಪ್ರಶ್ನಿಸಿದ್ದಾರೆ.
“ಕಾರ್ಯಕ್ರಮಕ್ಕಾಗಿ ಸರ್ಕಾರ ₹20 ಕೋಟಿ ಖರ್ಚು ಮಾಡಲಾಗುತ್ತಿದೆ. ಆದರೆ, ಕಾರ್ಯಕ್ರಮಕ್ಕೆ ಬರುವವರು ತಂಗಲು ವ್ಯವಸ್ಥೆ ಮಾಡಲು ಹಾಸ್ಟೆಲ್ ಖಾಲಿ ಮಾಡಿಸುತ್ತಿರುವುದು ಮಾತ್ರ ವಿಚಿತ್ರವಾಗಿದೆ. ಈಗಾಗಲೇ ನಮ್ಮ ತರಗತಿಗಳು ನಿಗದಿತ ಸಮಯದಲ್ಲಿ ಮುಗಿಯದೆ ಹಿಂದೆ ಉಳಿದಿದೆ. ಇಂತಹ ಸಮಯದಲ್ಲಿ ಒಂಬತ್ತು ದಿನ ಹಾಸ್ಟೆಲ್ ಖಾಲಿ ಮಾಡಿಸುವುದು ಸರಿಯಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕೆಯುಡಿ ಕುಲಪತಿ ಬಿ.ಗುಡಸಿ ಪ್ರತಿಕ್ರಿಯಿಸಿದ್ದು, “ವಿದ್ಯಾರ್ಥಿಗಳನ್ನು ಬಲವಂತವಾಗಿ ಸ್ಥಳಾಂತರಿಸುವುದಿಲ್ಲ. ಕಾರ್ಯಕ್ರಮ ಮುಗಿಯುವವರೆಗೆ ಅವರ ವಸ್ತುಗಳನ್ನು ಬೇರೆ ಕಡೆ ಇಡುವುದಕ್ಕೆ ವ್ಯವಸ್ಥೆ ಮಾಡಿದ್ದೇವೆ. ಅವರಿಗೆ ರಜೆ ಘೋಷಿಸಲಾಗಿದೆ” ಎಂದು ತಿಳಿಸಿದ್ದಾರೆ.
ಅಧ್ಯಾಪಕರೊಬ್ಬರು ಪ್ರತಿಕ್ರಿಯಿಸಿದ್ದು, “ಕೋರ್ಸು ನಿಗದಿತ ಅವಧಿಗಿಂತ ಹಿಂದಿದ್ದರೂ ವಿಶ್ವವಿದ್ಯಾಲಯವು ಯಾವುದೇ ಅತಿಥಿ ಉಪನ್ಯಾಸಕರನ್ನು ನೇಮಿಸಿಲ್ಲ. ರಜಾದಿನಗಳನ್ನು ಘೋಷಿಸುವುದರಿಂದ ಪಠ್ಯಕ್ರಮವನ್ನು ಪೂರ್ಣಗೊಳಿಸಲು ಇನ್ನಷ್ಟು ವಿಳಂಬವಾಗುತ್ತದೆ. ನಾವೂ ಮನೆಗೆ ಹೋಗುವುದಕ್ಕಿಂತ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಯಸುತ್ತೇವೆ” ಎಂದು ಮಾಹಿತಿ ನೀಡಿದ್ದಾರೆ.



Huchha sulimaga gov. Hostels Kali badilla University hostels Kali badi anta.
ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಭದ್ರ ಬುನಾದಿ ಹಾಸ್ಟೆಲ್ ಗಳು ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ ನಡೆಯುತ್ತದೆ ಎಂದು ವಿದ್ಯಾರ್ಥಿಗಳಿಗೆ ತೊಂದರೆ ಕೊಡುವುದು ಸೂಕ್ತ ಎಲ್ಲಾ ……
ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಭದ್ರ ಬುನಾದಿ ಹಾಸ್ಟೆಲ್ ಗಳು ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ ನಡೆಯುತ್ತದೆ ಎಂದು ವಿದ್ಯಾರ್ಥಿಗಳಿಗೆ ತೊಂದರೆ ಕೊಡುವುದು ಸೂಕ್ತ ವಲ್ಲಾ ……