Homeಮುಖಪುಟಪ್ರಧಾನಿ ಮೋದಿಯವರ ತಾಯಿ ಹೀರಾಬೆನ್‌ ನಿಧನ; ಗಣ್ಯರ ಸಂತಾಪ

ಪ್ರಧಾನಿ ಮೋದಿಯವರ ತಾಯಿ ಹೀರಾಬೆನ್‌ ನಿಧನ; ಗಣ್ಯರ ಸಂತಾಪ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಇಂದು (ಡಿಸೆಂಬರ್ 30) ಅಹಮದಾಬಾದ್‌ನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

“ಈ ಅವಿಸ್ಮರಣೀಯ ಶತಮಾನವು ದೇವರ ಪಾದದ ಮೇಲೆ ನಿಂತಿದೆ” ಎಂದು ಪ್ರಧಾನಿ ಮೋದಿ ಸ್ಮರಿಸಿದ್ದಾರೆ.

ತಮ್ಮ ಹೃದಯಸ್ಪರ್ಶಿ ಟಿಪ್ಪಣಿಯಲ್ಲಿ ಮೋದಿ, “ಅಮ್ಮನಲ್ಲಿ ನಾನು ಯಾವಾಗಲೂ ಆ ತ್ರಿಮೂರ್ತಿಗಳನ್ನು ಕಂಡಿದ್ದೇನೆ. ಅವರ ಜೀವನ ತಪಸ್ವಿಯ ಪ್ರಯಾಣವಾಗಿತ್ತು. ಅವರು ನಿಸ್ವಾರ್ಥ ಕರ್ಮಯೋಗಿ ಮತ್ತು ಮೌಲ್ಯಗಳಿಗೆ ಬದ್ಧವಾಗಿ ಜೀವನ ನಡೆಸಿದವರು” ಎಂದು ಬಣ್ಣಿಸಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, “ಅವರ 100ನೇ ಹುಟ್ಟುಹಬ್ಬದಂದು ನಾನು ಅವರನ್ನು ಭೇಟಿಯಾದಾಗ, ಅವರು ಒಂದು ವಿಷಯವನ್ನು ಹೇಳಿದರು, ಅದನ್ನು ಯಾವಾಗಲೂ ನೆನಪಿಸಿಕೊಳ್ಳುತ್ತೇನೆ. ಬುದ್ಧಿವಂತಿಕೆಯಿಂದ ಕೆಲಸ ಮಾಡು, ಪರಿಶುದ್ಧವಾಗಿ ಬದುಕು ಎಂದು ತಿಳಿಸಿದ್ದರು” ಎಂದು ಬರೆದುಕೊಂಡಿದ್ದಾರೆ.

ಹೀರಾಬಾ ಎಂದೂ ಕರೆಯಲ್ಪಡುವ ಹೀರಾಬೆನ್ ಅವರು ಪ್ರಧಾನಿ ಮೋದಿಯವರ ಕಿರಿಯ ಸಹೋದರ ಪಂಕಜ್ ಮೋದಿ ಅವರೊಂದಿಗೆ ಗಾಂಧಿನಗರ ಬಳಿಯ ರೈಸನ್ ಗ್ರಾಮದಲ್ಲಿ ವಾಸಿಸುತ್ತಿದ್ದರು. ಪ್ರಧಾನಮಂತ್ರಿಯವರು ತಮ್ಮ ಗುಜರಾತ್ ಭೇಟಿಗಳ ಸಮಯದಲ್ಲಿ ಅವರೊಂದಿಗೆ ಸಮಯ ಕಳೆಯಲು ನಿಯಮಿತವಾಗಿ ರೈಸನ್‌ಗೆ ಭೇಟಿ ನೀಡುತ್ತಿದ್ದರು.

ಬುಧವಾರ ಬೆಳಗ್ಗೆ ಕೆಲವು ಆರೋಗ್ಯ ಸಮಸ್ಯೆಗಳಿಂದಾಗಿ, ಹೀರಾಬೆನ್ ಅವರನ್ನು ಸೂಪರ್ ಸ್ಪೆಷಾಲಿಟಿ ಯುಎನ್ ಮೆಹ್ತಾ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ರಿಸರ್ಚ್ ಸೆಂಟರ್‌ಗೆ ದಾಖಲಿಸಲಾಗಿತ್ತು. ಅವರ ಸ್ಥಿತಿ ಸುಧಾರಿಸುತ್ತಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ಗುರುವಾರ ತಿಳಿಸಿದ್ದರು. ಗುಜರಾತ್ ಮುಖ್ಯಮಂತ್ರಿ ಕಚೇರಿ (ಸಿಎಂಒ) ಕೂಡ ಹೇಳಿಕೆಯಲ್ಲಿ ಹೀರಾಬೆನ್ ಅವರನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದಿತ್ತು.

ಗುರುವಾರ ಮುಂಜಾನೆ ಗುಜರಾತ್‌ನ ವಡೋದರಾದ ‘ಧರ್ಮಯಾತ್ರೆ ಮಹಾಸಂಘ’ದ ಜನರು ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ಇದರ ನಡುವೆ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬಹುದು ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮೂಲಗಳ ಪ್ರಕಾರ ಪ್ರಧಾನಿ ಮೋದಿಯವರು ಅಹಮದಾಬಾದ್‌ಗೆ ತೆರಳಿದ್ದಾರೆ.

“ಪ್ರಧಾನಿ ಮೋದಿ ಅವರು ಅಹಮದಾಬಾದ್‌ಗೆ ತೆರಳಿದ್ದಾರೆ. ನಿಗದಿತವಾಗಿದ್ದ ಅಭಿವೃದ್ಧಿ ಕಾಮಗಾರಿಗಳು ನಮಾಮಿ ಗಂಗೆ ಮತ್ತು ರಾಷ್ಟ್ರೀಯ ಗಂಗಾ ಕೌನ್ಸಿಲ್‌ನ ಸಭೆಯ ಅಡಿಯಲ್ಲಿ ಯೋಜನೆಯ ಪ್ರಕಾರ ನಡೆಯಲಿದೆ. ಪ್ರಧಾನಿ ಮೋದಿ ವೀಡಿಯೊ ಕಾನ್ಫರೆನ್ಸ್ ಮೂಲಕ ಸೇರಿಕೊಳ್ಳುವ ಸಾಧ್ಯತೆ ಇದೆ” ಎಂದಿದ್ದಾರೆ.

ಹೀರಾಬೆನ್ ಮೋದಿ ಅವರ ನಿಧನಕ್ಕೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸಂತಾಪ ವ್ಯಕ್ತಪಡಿಸಿದ್ದಾರೆ. ಟ್ವೀಟ್‌ನಲ್ಲಿ ಅವರು, “ಗೌರವಾನ್ವಿತ ಪ್ರಧಾನಮಂತ್ರಿಯವರ ತಾಯಿ ಪೂಜ್ಯಾ ಹೀರಾಬಾ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಪೂಜ್ಯ ಹೀರಾಬಾ ಅವರು ಉದಾರತೆ, ಸರಳತೆ, ಕಠಿಣ ಪರಿಶ್ರಮ ಮತ್ತು ಉನ್ನತ ಜೀವನ ಮೌಲ್ಯಗಳ ಪ್ರತಿರೂಪವಾಗಿದ್ದರು. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.

ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಸಂತಾಪ ಸೂಚಿಸಿದ್ದು, “ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬಾ ಅವರ ನಿಧನದಿಂದ ನನಗೆ ತೀವ್ರ ನೋವಾಗಿದೆ. ತಾಯಿಯ ಸಾವಿನಿಂದಾಗಿ ಒಬ್ಬರ ಜೀವನದಲ್ಲಿ ತುಂಬಲು ಅಸಾಧ್ಯವಾದ ಶೂನ್ಯ ಆವರಿಸುತ್ತದೆ. ಈ ದುಃಖದ ಸಮಯದಲ್ಲಿ ಪ್ರಧಾನಿ ಮತ್ತು ಅವರ ಇಡೀ ಕುಟುಂಬಕ್ಕೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ” ಎಂದಿದ್ದಾರೆ.

ಹೀರಾಬೆನ್ ಮೋದಿ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಗೃಹ ಸಚಿವ ಅಮಿತ್ ಶಾ, “ತಾಯಿಯನ್ನು ಕಳೆದುಕೊಂಡ ನೋವು ನಿಸ್ಸಂದೇಹವಾಗಿ ಜಗತ್ತಿನ ಅತೀ ದೊಡ್ಡ ನೋವು” ಎಂದು ಹೇಳಿದ್ದಾರೆ. “ಪ್ರಧಾನಿಯವರ ಗೌರವಾನ್ವಿತ ಮಾತಾಜಿ ಹೀರಾ ಬಾ ಅವರ ನಿಧನದ ಬಗ್ಗೆ ತಿಳಿದು ತುಂಬಾ ದುಃಖವಾಗಿದೆ. ತಾಯಿಯು ಒಬ್ಬ ವ್ಯಕ್ತಿಯ ಮೊದಲ ಸ್ನೇಹಿತ ಮತ್ತು ಶಿಕ್ಷಕಿ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...