Homeಕರ್ನಾಟಕದಕ್ಷಿಣ ಕನ್ನಡದಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ: ಯುವಕನನ್ನು ಅರೆಬೆತ್ತಲೆಗೊಳಿಸಿ ತೀವ್ರ ಹಲ್ಲೆ

ದಕ್ಷಿಣ ಕನ್ನಡದಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ: ಯುವಕನನ್ನು ಅರೆಬೆತ್ತಲೆಗೊಳಿಸಿ ತೀವ್ರ ಹಲ್ಲೆ

ಈ ಪ್ರಕರಣವು ಬಸವರಾಜ ಬೊಮ್ಮಾಯಿಯವರು ರಾಜ್ಯದ ಮುಖ್ಯಮಂತ್ರಿ ಆದ ನಂತರ ಎಗ್ಗಿಲ್ಲದೆ ನಡೆಯುತ್ತಿರುವ ಮತೀಯ ಗೂಂಡಾಗಿರಿ ಪ್ರಕರಣಗಳಿಗೆ ಹೊಸ ಸೇರ್ಪಡೆಯಾಗಿದೆ.

- Advertisement -
- Advertisement -

ಭಿನ್ನ ಕೋಮಿನ ಯುವಕ-ಯುವತಿ ಮಾತನಾಡುತ್ತಿದ್ದರೆಂಬ ಕ್ಷುಲ್ಲಕ ಕಾರಣಕ್ಕೆ ಹಿಂದುತ್ವವಾದಿ ಗುಂಪು ಯುವಕನನ್ನು ಅರೆಬೆತ್ತಲೆಗೊಳಿಸಿ ಅಮಾನುಷವಾಗಿ ಥಳಿಸಿರುವ ಮತೀಯ ಗೂಂಡಾಗಿರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜರುಗಿದೆ.

ಮುಸ್ಲಿಂ ಸಮುದಾಯದ ಹಫೀದ್ ಎಂಬ ಯುವಕ ಮತ್ತು ಹಿಂದೂ ಸಮುದಾಯದ ಯುವತಿಯು ಇನ್ಸ್ಟಗ್ರಾಂನಲ್ಲಿ ಪರಿಚಯವಾಗಿ ಎರಡು ಬಾರಿ ಭೇಟಿಯಾಗಿ ಮಾತನಾಡಿದ್ದರು. ಅದೇ ರೀತಿ ಗುರುವಾರ ಸುಬ್ರಮಣ್ಯದ ಬಸ್ ನಿಲ್ದಾಣದಲ್ಲಿ ಮಾತನಾಡುತ್ತಿದ್ದಾಗ ಅಲ್ಲಿಗೆ ನುಗ್ಗಿದ ಹಿಂದುತ್ವವಾದಿ ಪುಂಡರು ಹಫೀದ್‌ನನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ.

ಹಫೀದ್‌ನನ್ನು ಅರೆಬೆತ್ತಲೆಗೊಳಿಸಿ ಥಳಿಸಲಾಗಿದೆ. ನೆಲಕ್ಕೆ ಹಾಕಿ ತುಳಿಯಲಾಗಿದೆ. ಚಾಕು ತೋರಿಸಿ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಹಫೀದ್ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಸದ್ಯ ತೀವ್ರ ಹಲ್ಲೆಯಿಂದ ಗಾಯಗೊಂಡಿರುವ ಹಫೀದ್‌ನನ್ನು ಸುಳ್ಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ಹಲ್ಲೆಯಂದ ಆತನ ರಕ್ತ ಹೆಪ್ಪುಗಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹಫೀದ್ ನೀಡಿದ ದೂರಿನ ಅನ್ವಯ ಪೊಲೀಸರು 12ರ ಜನರ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ.

ಮತ್ತೊಂದೆಡೆ ಹುಡುಗಿಯ ತಂದೆ ಹಫೀದ್ ವಿರುದ್ಧ ಪ್ರತಿ ದೂರು ನೀಡಿದ್ದಾರೆ. ‘ನನ್ನ ಮಗಳು ಕಾಲೇಜು ಮುಗಿಸಿ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದಾಗ ಅಲ್ಲಿಗೆ ಬಂದ ಹಫೀದ್ ಪ್ರೀತಿಸುವಂತೆ ಒತ್ತಾಯಿಸಿದ್ದಾನೆ. ಒಪ್ಪದಿದ್ದಾಗ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಪ್ರಕರಣವು ಬಸವರಾಜ ಬೊಮ್ಮಾಯಿಯವರು ರಾಜ್ಯದ ಮುಖ್ಯಮಂತ್ರಿ ಆದ ನಂತರ ಎಗ್ಗಿಲ್ಲದೆ ನಡೆಯುತ್ತಿರುವ ಮತೀಯ ಗೂಂಡಾಗಿರಿ ಪ್ರಕರಣಗಳಿಗೆ ಹೊಸ ಸೇರ್ಪಡೆಯಾಗಿದೆ. ಕ್ರಿಯೆಗೆ ಪ್ರತಿಕ್ರಿಯೆ ಇದ್ದೆ ಇರುತ್ತದೆ ಎಂದು ಬೊಮ್ಮಾಯಿಯವರು ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿಕೊಂಡ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವರ್ಷದಲ್ಲಿ 20ಕ್ಕೂ ಹೆಚ್ಚು ಮತೀಯ ಗೂಂಡಾಗಿರಿ ಪ್ರಕರಣಗಳು ವರದಿಯಾಗಿವೆ.

ಇದನ್ನೂ ಓದಿ; ದೇವಾಲಯ ಪ್ರವೇಶಿಸಿದ ದಲಿತ ಮಹಿಳೆಗೆ ಥಳಿತ, ತಲೆಗೂದಲು ಹಿಡಿದು ಹೊರಗೆಳೆದುಹಾಕಿದ ಧರ್ಮದರ್ಶಿ – ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...