Homeಮುಖಪುಟಶ್ರೀಸಾಮಾನ್ಯರು ಕಂಡಂತೆ ಸಾಹಿತ್ಯ ಸಮ್ಮೇಳನ: ಭುವನೇಶ್ವರಿದೇವಿ ನಮ್ ಊರಿನೊಳಗೆ ಬಂದೌಳ ಅನ್ನೋ ಅಭಿಮಾನ

ಶ್ರೀಸಾಮಾನ್ಯರು ಕಂಡಂತೆ ಸಾಹಿತ್ಯ ಸಮ್ಮೇಳನ: ಭುವನೇಶ್ವರಿದೇವಿ ನಮ್ ಊರಿನೊಳಗೆ ಬಂದೌಳ ಅನ್ನೋ ಅಭಿಮಾನ

- Advertisement -
- Advertisement -

ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಅಕ್ಷರ ಹಾಗೂ ಜನ ಸಂಗಮದ ಬೃಹತ್ ಜಾತ್ರೆ. ಮಕ್ಕಳಿಂದ ಹಿಡಿದು ಇಳಿಗಾಲದ ಹಿರಿಯರವರೆಗೂ ಸಮ್ಮೇಳನದ ಕುರಿತು ಅತೀವ ಕುತೂಹಲ. ಅದರಲ್ಲೂ ಹಾವೇರಿ ಜಿಲ್ಲೆಗೆ ಇದೇ ಮೊದಲ ಬಾರಿಗೆ ಸಮ್ಮೇಳನದ ಆತಿಥ್ಯ ದೊರೆತಿರುವುದರಿಂದ ಜಿಲ್ಲೆಯ ಶ್ರೀಸಾಮಾನ್ಯರು ಸಾಗರೋಪಾದಿಯಲ್ಲಿ ಕನ್ನಡ ಜಾತ್ರೆಗೆ ಆಗಮಿಸುತ್ತಿದ್ದಾರೆ.

ರಾಜ್ಯದ ಮೂಲೆಮೂಲೆಯಿಂದ ಬಂದ ಜನರ ಜೊತೆಗೆ ಹಾವೇರಿ ಜಿಲ್ಲೆಯ ಜನತೆ ತೀವ್ರ ಕುತೂಹಲಗೊಂಡು ಸಮ್ಮೇಳನಕ್ಕೆ ಬರುತ್ತಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಇಂಥದೊಂದು ಕಾರ್ಯಕ್ರಮ ನಡೆಯುತ್ತಿರುವ ಖುಷಿ ಅನೇಕರಿಗೆ.

“ರಾಯಚೂರು, ಚಿತ್ರದುರ್ಗ ಎಲ್ಲ ಕಡೆ ಸಾಹಿತ್ಯ ಸಮ್ಮೇಳನ ಆಗೇವ. ಹಾವೇರಿ ಜಿಲ್ಲೆಯೊಳಗೆ ಕನ್ನಡ ಸಾಹಿತ್ಯ ಸಮ್ಮೇಳನ ಅಂದ್ರ  ಏನಂತಾನೇ ಗೊತ್ತಿರಲಿಲ್ಲ. ಇದೇ ಮೊದಲ ಸಲ ಸಮ್ಮೇಳನ ನೋಡಿ ಖುಷಿಯಾಗೈತೆ’’ ಎನ್ನುತ್ತಾರೆ ಹಾವೇರಿ ಜಿಲ್ಲೆಯ ಬಂಕಾಪುರದ ನೇಕಾರರಾದ ಶಿಲ್ಪಾ.

ಮುಂದುವರಿದು, “ಮಕ್ಕಳಿಗೆ ಕನ್ನಡ ಅಂದ್ರೆ ಏನಂತ ಗೊತ್ತಿಲ್ಲ. ಅರಣ್ಯ ಅಂದ್ರೆ ಏನಂತ ಗೊತ್ತಿಲ್ಲ. ಅದನ್ನೆಲ್ಲ ತಿಳಿಸುವ ಕೆಲಸ ಮಾಡಿದ್ದಾರೆ. ತಾಯಿ ಭುವನೇಶ್ವರಿ ನಮ್ ಊರಿನೊಳಗ ಬಂದೌಳ ಅನ್ನೋ ಅಭಿಮಾನ. ಕನ್ನಡದೊಳಗ ಹುಟ್ಟಿದಕ್ಕೂ ನಮ್ ಜೀವನ ಸಾರ್ಥಕವಾಯ್ತು’’ ಎಂಬುದು ಅವರ ಧನ್ಯತಾ ಭಾವ.

ಬಂಕಾಪುರದ ಲೀಲಾವತಿಯವರು ಮಾತನಾಡಿ,  “ತುಂಬಾ ಚೆನ್ನಾಗೈತೆ. ಮಕ್ಕಳನ್ನು ಕರೆದುಕೊಂಡು ಬಂದಿದ್ದೇವೆ. ಇದೇ ಫಸ್ಟ್ ಟೈಮ್ ಸಮ್ಮೇಳನ ನೋಡ್ತಾ ಇದ್ದೇವೆ. ಮಕ್ಕಳು ತಿಳಿದುಕೊಳ್ತಾವೊ. ಸಾಹಿತ್ಯ ಸಮ್ಮೇಳನ ಅಂದ್ರೆ ಎನಂಥ ಗೊತ್ತಿರಲಿಲ್ಲ. ನೋಡಲೇಬೇಕು ಅಂತ ಬಂದಿದ್ದೇವೆ’’  ಎಂದು ಸಂತಸ ವ್ಯಕ್ತಪಡಿಸಿದರು.

ಲೀಲಾವತಿ

ಸಿದ್ದಾಪುರದಿಂದ ಆಗಮಿಸಿದ್ದ ಕಲಾವಿದ ಬಸವರಾಜು ಮಾತನಾಡಿ, ಸುಗಮ ಸಂಗೀತ ಕಾರ್ಯಕ್ರಮದಲ್ಲಿ ನನಗೂ ಅವಕಾಶ ನೀಡಿದ್ದಾರೆ. ಪುಟ್ಟರಾಜ ಗವಾಯಿ, ಹಾನಗಲ್ ಕುಮಾರಸ್ವಾಮಿಯಂತಹ ರತ್ನಗಳಿದ್ದ ಯಾಲಕ್ಕಿ ನಾಡಿದು’’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗದಗ ಜಿಲ್ಲೆಯ ತಮ್ಮನಗೌಡ ಪಾಟೀಲ ಅವರು ಮಾತನಾಡಿ, “ಇತರೆ ಸಮ್ಮೇಳನಕ್ಕಿಂತ ಹಾವೇರಿ ಸಮ್ಮೇಳನ ಭಿನ್ನವಾಗಿದೆ. ಎಲ್ಲರ ಅಭಿರುಚಿಗೆ ತಕ್ಕಂತೆ ಪುಸ್ತಕಗಳಿವೆ. ಕಡಿಮೆ ದರದಲ್ಲಿ ಪುಸ್ತಕಗಳು ನಡೆಯುತ್ತಿವೆ. ನಾನು ನೋಡಿರುವ ಸಮ್ಮೇಳನದಲ್ಲಿ ವಿಶಿಷ್ಟ ಸಮ್ಮೇಳನ ಇದಾಗಿದೆ. ಧಾರವಾಡ ಸಮ್ಮೇಳಕ್ಕೆ ಹೋಗಿದ್ದೆ. ಅಲ್ಲಿ ಸ್ಥಳ ಬಹಳ ಇಕ್ಕಟ್ಟಿನಿಂದ ಕೂಡಿತ್ತು’’ ಎಂದು ಸ್ಮರಿಸಿದರು.

ತಮ್ಮನಗೌಡ ಪಾಟೀಲ

ಹಾವೇರಿಯ ಸ್ಥಳೀಯ ಯುವಕ ಅನಂತ ಪ್ರತಿಕ್ರಿಯಿಸಿ, “ಜನರು ಶಾಂತ ರೀತಿಯಿಂದ ವರ್ತಿಸಬೇಕು. ಸ್ಪಚ್ಛತೆ ಕಾಪಾಡಬೇಕು. ಹಳ್ಳಿಗಳ ನಾಡು, ಜನಪದ ಕಲೆಗಳ ಬೀಡು, ಸರ್ವಜ್ಞ ನಡೆದಾಡಿದ ನೆಲ ಹಾವೇರಿ. ಇಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಬಹಳ ಖುಷಿಯನ್ನು ತಂದಿದೆ’’ ಎಂದರು.

ಅನಂತ

ಜಗದೀಶ ಸೋಮನಾಥಪುರ ಎಂಬವರು ಸಂತಸ ವ್ಯಕ್ತಪಡಿಸುತ್ತಾ, “ಸಮುದ್ರ ಚೆನ್ನಾಗೈತೆ. ವ್ಯವಸ್ಥೆ ಚೆನ್ನಾಗೈತೆ, ಒಟ್ಟು ಒಂಬತ್ತು ಮಂದಿ ಬಂದಿದ್ದೇವೆ. ಊಟ ಮಾಡಿದ್ವಿ, ಕಾರ್ಯಕ್ರಮ ನೋಡಿದ್ವಿ’’ ಎಂದು ತಮ್ಮದೇ ಧಾಟಿಯಲ್ಲಿ ಹೇಳಿದರು.

ಜಗದೀಶ ಸೋಮನಾಥಪುರ

ಭುವನೇಶ್ವರಿ ವೇಷಭೂಷಣ ಧರಿಸಿ ಗಮನ ಸೆಳೆಯುತ್ತಿದ್ದ ಬೆಂಗಳೂರಿನ ಶೋಭಾ ಮಾತನಾಡಿ, “ಅನ್ಯಭಾಷೆಗಳಿಗಿಂತ ಕನ್ನಡವೇ ಮೇಲು. ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಪ್ರಧಾನ,  ಉಳಿದೆಲ್ಲ ಭಾಷೆಗಳು ನಿಧಾನ’’ ಎಂದರು.

“ಇದೇ ರೀತಿಯ ವೇಷಭೂಷಣದಲ್ಲಿ ಹಲವು ಸಾಹಿತ್ಯ ಸಮ್ಮೇಳನಗಳಿಗೆ ಹೋಗಿಬಂದಿದ್ದೇನೆ. ವಿಭಿನ್ನ ವೇಷ ಭೂಷಣ ಹಾಕಿದರೆ, ಜನ ಗಮನಿಸುತ್ತಾರೆ.  ಈ ಮೂಲಕ ಇಂದಿನ ಯುವ ಸಮುದಾಯದಲ್ಲಿ ಕನ್ನಡಾಭಿಮಾನ ಮೂಡಿಸಲು ಯತ್ನಿಸುತ್ತಿದ್ದೇನೆ’’ ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯವರಾದ ಎಂ.ಸುಬ್ರಮಣಿಯವರು `ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಕಳೆದ ಹದಿನೈದು ವರ್ಷಗಳಿಂದ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದೇನೆ. ಮಹೇಶ್ ಜೋಶಿಯವರು ಚೆನ್ನಾಗಿ ಆಯೋಜನೆ ಮಾಡಿದ್ದಾರೆ. ಆರೋಪಗಳು ಇದ್ದೇ ಇರುತ್ತವೆ. ಬಂದಿರುವ   ಆರೋಪಗಳನ್ನು ಗಣನೆಗೆ ತೆಗೆದುಕೊಂಡು ಮುಂದಿನ ಸಮ್ಮೇಳನದಲ್ಲಿ ಸರಿಪಡಿಸಿಕೊಳ್ಳಬೇಕು’’ ಎಂದು ಆಶಿಸಿದರು.

ಕಲಾವಿದ ಬಸವರಾಜು

ಎಲ್ಲಾ ಸಮ್ಮೇಳನದಲ್ಲಿ ಗಂಭೀರ ಸಂಗತಿಗಳು ಪ್ರಸ್ತಾಪವಾಗುತ್ತವೆ. ಎಲ್ಲ ನಿರ್ಣಯಗಳು ಮಂಡಿಸುತ್ತಾರೆ. ಅದರಲ್ಲಿ ಸ್ವಲ್ಪನಾದರೂ ಆಗಬೇಕು. ಗಡಿ ವಿವಾದ ಬಗೆಹರಿಯುತ್ತಿಲ್ಲ. ಇದು ಮುಂದಿನ ದಿನಗಳಲ್ಲಾದರೂ ಸರಿಯಾಗಬೇಕು’ ಎಂದು ಒತ್ತಾಯಿಸಿದರು.

ಮುಂಜಾನೆಯೇ `ನಾನುಗೌರಿ.ಕಾಂ’ಗೆ ಮಾತಿಗೆ ಸಿಕ್ಕ ಗೋಕಾಕಿನ ವೃದ್ಧ ಸಿ.ಎ.ಪಾಟೀಲ್, “ರಾಯಚೂರು ಒಂದನ್ನು ಬಿಟ್ಟು ಉಳಿದೆಲ್ಲ ಸಮ್ಮೇಳನಗಳು ಛಲೋ ಆಗಿದ್ದವಾ. ಟೈಮ್ಗೆ ಕಿಮ್ಮತ್ತು ಕೊಡೋರಂತೂ ಯಾರೂ ಇಲ್ಲ.  ಒಂಬತ್ತೂವರೆಗೆ ಟೈಮ್ ಕೊಟ್ಟಿದ್ದಾರ, ಒಬ್ಬರಾದ್ರೂ ವಿಐಪಿಗಳು ಬರೋರಿಲ್ಲ’’ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...