Homeಕರ್ನಾಟಕಒಳಮೀಸಲಾತಿ ಜಾರಿಗಾಗಿ ಹೋರಾಟ: ನಾಳೆ ಎಡಗೈ-ಬಲಗೈ ಸಮುದಾಯಗಳ ಒಗ್ಗಟ್ಟು ಪ್ರದರ್ಶನ; ಪೊಲೀಸರ ತಕರಾರು!

ಒಳಮೀಸಲಾತಿ ಜಾರಿಗಾಗಿ ಹೋರಾಟ: ನಾಳೆ ಎಡಗೈ-ಬಲಗೈ ಸಮುದಾಯಗಳ ಒಗ್ಗಟ್ಟು ಪ್ರದರ್ಶನ; ಪೊಲೀಸರ ತಕರಾರು!

ಪುನಾರಂಭವಾದ ಒಳಮೀಸಲಾತಿ ಹೋರಾಟಕ್ಕೆ 30 ದಿನಗಳಾಗಿದ್ದು, ಹಲವು ಸ್ವಾಮೀಜಿಗಳು ನಾಳೆ ಫ್ರೀಡಂ ಪಾರ್ಕ್‌ಗೆ ಆಗಮಿಸಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಲಿದ್ದಾರೆ

- Advertisement -
- Advertisement -

30 ವರ್ಷಗಳಿಂದ ನಡೆಯುತ್ತಿರುವ ಒಳಮೀಸಲಾತಿ ಹೋರಾಟ ಕಳೆದ ತಿಂಗಳು ಪುನಾರಂಭವಾಗಿ ಒಂದು ತಿಂಗಳು ಪೂರೈಸುತ್ತಿದೆ. ಆದರೆ ಜಸ್ಟಿಸ್ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಸರ್ಕಾರ ಕ್ರಮ ವಹಿಸದ ಹಿನ್ನೆಲೆಯಲ್ಲಿ ಎಡಗೈ (ಮಾದಿಗ), ಬಲಗೈ (ಹೊಲೆಯ) ಸಮುದಾಯಗಳು ಜನವರಿ 10ರಂದು ಒಗ್ಗಟ್ಟು ಪ್ರದರ್ಶಿಸಲು ಮುಂದಾಗಿವೆ. ಹಲವು ಮಠಾಧೀಶರು ಹೋರಾಟದಲ್ಲಿ ಭಾಗಿಯಾಗಲಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದೊಂದು ತಿಂಗಳಿನಿಂದ ಹೋರಾಟ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ತರಾತುರಿಯಲ್ಲಿ ಶಿಫಾರಸ್ಸು ಮಾಡಬಾರದೆಂದು ಆಗ್ರಹಿಸಿ, ಭೋವಿ, ಲಂಬಾಣಿ ಸಮುದಾಯದ ಮುಖಂಡರು ಮುಂಚೂಣಿಯಲ್ಲಿರುವ ‘ಕರ್ನಾಟಕ ಮೀಸಲಾತಿ ಸಂರಕ್ಷಣಾ’ ಇದೇ ದಿನ (ಜ.10) ಹೋರಾಟ ಹಮ್ಮಿಕೊಂಡಿದೆ. ಎರಡು ಹೋರಾಟಗಳು ಒಮ್ಮೆಲೆ ನಡೆದರೆ ಸಂಘರ್ಷಕ್ಕೀಡಾಗಬಹುದು ಎಂದು ಪೊಲೀಸರು ಒಳಮೀಸಲಾತಿ ಪರ ಹೋರಾಟಗಾರರಿಗೆ ಪತ್ರ ಬರೆದಿದ್ದಾರೆ.

ಒಳಮೀಸಲಾತಿ ಪರ ಹೋರಾಟವನ್ನು ‘ಸಂಭ್ರಮಾಚರಣೆ’ ಎಂದು ಪೊಲೀಸರು ತಮ್ಮ ಬಣ್ಣಿಸಿರುವುದನ್ನು ಹೋರಾಟಗಾರರು ಖಂಡಿಸಿದ್ದಾರೆ. ಒಳಮೀಸಲಾತಿ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಹಿರಿಯ ಹೋರಾಟಗಾರರಾದ ಅಂಬಣ್ಣ ಅರೋಲಿಕರ್‌ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “ನಮ್ಮ ಹೋರಾಟ ಮೂವತ್ತು ದಿನಗಳನ್ನು ಪೂರೈಸುತ್ತಿದೆ. ಹೀಗಾಗಿ ಜ.10ರಂದು ಸಾಂಕೇತಿಕವಾಗಿ ಐದು ನೂರು ಜನರು ಸೇರಬೇಕೆಂದು ಯೋಚಿಸಿದ್ದೇವೆ. ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ಯಾರ ಮೀಸಲಾತಿಯನ್ನೂ ನಾವು ಕಬಳಿಸುವುದಿಲ್ಲ. ಸಂವಿಧಾನಬದ್ಧ ಮೀಸಲಾತಿ ಹಂಚಿಕೆಗಾಗಿ ನಾವು ಆಗ್ರಹಿಸುತ್ತಿದ್ದೇವೆ. ಯಾರನ್ನೂ ಪರಿಶಿಷ್ಟ ಜಾತಿಯ ಪಟ್ಟಿಯಿಂದ ತೆಗೆದು ಹಾಕಬೇಕೆಂಬ ಪ್ರಶ್ನೆಯೇ ಇಲ್ಲ ಎಂಬುದನ್ನು ಮನವರಿಕೆ ಮಾಡುವುದಕ್ಕಾಗಿ ಒಂದು ಸೌಹಾರ್ದ ಸಭೆಯನ್ನು ಮಂಗಳವಾರ ಆಯೋಜಿಸಿದ್ದೇವೆ. ನಮ್ಮ ನೋವಿನ ಗಳಿಗೆಯು ಪೊಲೀಸರಿಗೆ ಸಂಭ್ರಮಾಚರಣೆಯಂತೆ ಕಂಡಿದ್ದು, ಕಾರ್ಯಕ್ರಮ ಮುಂದೂಡುವಂತೆ ಪತ್ರ ಬರೆದಿದ್ದಾರೆ. ನಾವು ನಮ್ಮ ಸಭೆಯನ್ನು ನಡೆಸುವುದು ಖಚಿತ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ಸದಾಶಿವ ಆಯೋಗದ ವರದಿಗೆ ಅಲೆಮಾರಿಗಳ ವಿರೋಧವೆಂದು ಅಪಪ್ರಚಾರ: ಅನಂತ್ ನಾಯ್ಕ್ ಹೇಳಿಕೆಗೆ ಸಮುದಾಯದ ಮುಖಂಡರ ಸ್ಪಷ್ಟನೆ

“ಜ್ಞಾನಪ್ರಕಾಶ ಸ್ವಾಮೀಜಿ, ಷಡಕ್ಷರಿ ಸ್ವಾಮೀಜಿ, ಹರಳಯ್ಯ ಸ್ವಾಮೀಜಿ ನಮ್ಮ ಸೌಹಾರ್ದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ದಲಿತ ಮುಖಂಡರಾದ ಮಾವಳ್ಳಿ ಶಂಕರ್‌, ಗೋಪಾಲ್‌ ಸೇರಿದಂತೆ ಹಲವು ಹೋರಾಟಗಾರು ಸೇರಲಿದ್ದಾರೆ. ಮಾದಿಗ ಹಾಗೂ ಹೊಲೆಯ ಸಮುದಾಯ ಒಟ್ಟಿಗೆ ಸೇರುತ್ತಿದೆ. ಒಳಮೀಸಲಾತಿಯ ಕುರಿತು ಅರಿವು ಮೂಡಿಸಲು ಸಮುದಾಯ ಮುಂದಾಗಿದೆ. ಇದರ ನಡುವೆ ಪೊಲೀಸರು ತಕರಾರು ತೆಗೆದಿದ್ದು ಸಭೆ ಮುಂದೂಡಲು ಸೂಚಿಸಿದ್ದಾರೆ. ಪತ್ರದಲ್ಲಿ ಸಂಭ್ರಮಾಚರಣೆ ಎಂದು ಉಲ್ಲೇಖಿಸಿದ್ದಾರೆ. ನಾವು ಸಂಕಟದಲ್ಲಿದ್ದೇವೆಯೇ ಹೊರತು ಸಂಭ್ರಮದಲ್ಲಿ ಅಲ್ಲ. ನಮ್ಮ ಸಂಕಟಗಳಿಗೆ ಸಂಬಂಧಿಸಿದಂತೆ ಸಂವಾದ ಹಮ್ಮಿಕೊಂಡಿದ್ದೇವೆ. ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ. ಗಾಬರಿಯಾಗುವ ಅಗತ್ಯವೂ ಇಲ್ಲ ಎಂದು ಮನವರಿಕೆ ಮಾಡುತ್ತಿದ್ದೇವೆ. ಇದು ಯಾವುದೇ ಸಮುದಾಯದ ವಿರುದ್ಧದ ಹೋರಾಟವಲ್ಲ” ಎಂದು ತಿಳಿಸಿದರು.

“ಸ್ಪೃಶ್ಯ ಸಮುದಾಯಗಳನ್ನು ನಮ್ಮ ವಿರುದ್ಧ ಎತ್ತಿಕಟ್ಟಲಾಗುತ್ತಿದೆ. ಮೀಸಲಾತಿ ಸೌಲಭ್ಯದಿಂದ ಸ್ಪೃಶ್ಯರನ್ನು ತೆಗೆದುಹಾಕಲಾಗುತ್ತದೆಂದು ಸುಳ್ಳು ಹಬ್ಬಿಸಲಾಗಿದೆ. ಈ ಸುಳ್ಳಿನ ವಿರುದ್ಧ ನಾವು ಸೌಹಾರ್ದ ಸಭೆ ನಡೆಸುತ್ತಿದ್ದೇವೆ. ನೂರೊಂದು ಜಾತಿಗಳ ಹಕ್ಕುಗಳಿಗಾಗಿ ನಡೆಯುತ್ತಿರುವ ಹೋರಾಟವನ್ನು ತಿರುಚಿ, ಇದು ಸ್ಪೃಶ್ಯರ ಹಕ್ಕುಗಳನ್ನು ಕಿತ್ತುಕೊಳ್ಳುವ ಹುನ್ನಾರವೆಂದು ಬಿಂಬಿಸುವುದು ಸರಿಯಲ್ಲ. ನಾವು ನಮ್ಮ ಸಂಕಷ್ಟಗಳನ್ನು ಸಭೆಯಲ್ಲಿ ಹೇಳಿಕೊಳ್ಳಲಿದ್ದೇವೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...