Homeಕ್ರೀಡೆಕ್ರಿಕೆಟ್ಸಚಿನ್ ತೆಂಡೂಲ್ಕರ್‌ ವಿಶ್ವ ದಾಖಲೆಗಳನ್ನು ಸರಿಗಟ್ಟಿದ ವಿರಾಟ್ ಕೊಹ್ಲಿ

ಸಚಿನ್ ತೆಂಡೂಲ್ಕರ್‌ ವಿಶ್ವ ದಾಖಲೆಗಳನ್ನು ಸರಿಗಟ್ಟಿದ ವಿರಾಟ್ ಕೊಹ್ಲಿ

ಶ್ರೀಲಂಕಾ ತಂಡದ ವಿರುದ್ಧ ಸಚಿನ್ ತೆಂಡೂಲ್ಕರ್ 8 ಶತಕಗಳನ್ನು ಬಾರಿಸಿದರೆ ವಿರಾಟ್ ಕೊಹ್ಲಿ 9 ಶತಕಗಳನ್ನು ಭಾರಿಸುವ ಮೂಲಕ ಸಚಿನ್ ದಾಖಲೆ ಮುರಿದಿದ್ದಾರೆ.

- Advertisement -
- Advertisement -

ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧ ಅಸ್ಸಾಂ ಗೌಹಾತಿಯಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಆಕರ್ಷಕ ಶತಕ ಗಳಿಸುವ ಮೂಲಕ ತಮ್ಮ 73ನೇ ಶತಕ ಗಳಿಸಿದ್ದಲ್ಲದೆ, ಸಚಿನ್ ತೆಂಡೂಲ್ಕರ್‌ರವರ ಎರಡು ವಿಶ್ವ ದಾಖಲೆಗಳನ್ನು ಸರಿಗಟ್ಟಿದ್ದಾರೆ.

ವಿರಾಟ್ ಕೊಹ್ಲಿಯವರ ಇಂದಿನ ಅಬ್ಬರದ ಶತಕ ಮೂಲಕ (87 ಎಸೆತಗಳಲ್ಲಿ 113 ರನ್) ಸ್ವದೇಶದಲ್ಲಿ ಅತಿ ಹೆಚ್ಚು ಏಕದಿನ ಶತಕ ಬಾರಿಸಿದ ಸಚಿನ್‌ರವರ ದಾಖಲೆಗೆ ಕಿಂಗ್ ಕೊಹ್ಲಿ ಸಹ ಸಮವಾಗಿ ನಿಂತಿದ್ದಾರೆ. ಸಚಿನ್ ತೆಂಡೂಲ್ಕರ್ ಭಾರತದಲ್ಲಿ ಆಡಿದ 164 ಪಂದ್ಯಗಳಲ್ಲಿ 20 ಶತಕಗಳನ್ನು ಬಾರಿಸಿದರೆ, ವಿರಾಟ್ ಕೊಹ್ಲಿ 102 ಪಂದ್ಯಗಳಲ್ಲಿ 20 ಶತಕ ಬಾರಿಸಿದ್ದಾರೆ.

ಅಲ್ಲದೆ ಶ್ರೀಲಂಕಾ ತಂಡದ ವಿರುದ್ಧ ಸಚಿನ್ ತೆಂಡೂಲ್ಕರ್ 8 ಶತಕಗಳನ್ನು ಬಾರಿಸಿದರೆ ವಿರಾಟ್ ಕೊಹ್ಲಿ 9 ಶತಕಗಳನ್ನು ಭಾರಿಸುವ ಮೂಲಕ ಸಚಿನ್ ದಾಖಲೆ ಮುರಿದಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಮತ್ತು ಸಚಿನ್ ತೆಂಡೂಲ್ಕರ್ ವೆಸ್ಟ್ ಇಂಡೀಸ್ ತಂಡದ ವಿರುದ್ಧ ತಲಾ 9 ಶತಕಗಳನ್ನು ಬಾರಿಸಿದ್ದಾರೆ.

ಇಂದಿನ ಪಂದ್ಯದಲ್ಲಿ ಭಾರತ ಬ್ಯಾಟ್ಸ್‌ಮನ್‌ಗಳು ಅದ್ಭುತ ಪ್ರದರ್ಶನ ನೀಡುವ ಮೂಲಕ ಶ್ರೀಲಂಕಾ ವಿರುದ್ಧ ಬೃಹತ್ ಮೊತ್ತ ಪೇರಿಸಿತು. 50 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 373 ರನ್ ಗಳಿಸಿದೆ. ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ 67 ಎಸೆತಗಳಲ್ಲಿ 83 ರನ್ ಗಳಿಸಿದರೆ, ಶುಭ್ಮನ್ ಗಿಲ್ 60 ಎಸೆತಗಳಲ್ಲಿ 70 ರನ್ ಗಳಿಸಿ ಉತ್ತಮ ಅಡಿಪಾಯ ಹಾಕಿಕೊಟ್ಟರು. ಅದರ ಮೇಲೆ ವಿರಾಟ್ ಕೊಹ್ಲಿ ಶತಕದ ಮಹಲ್ ಕಟ್ಟಿದರು.

87 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 12 ಬೌಂಡರಿ ಮತ್ತು ಒಂದು ಸಿಕ್ಸರ್ ನೆರವಿನಿಂದ 113 ರನ್ ಸಿಡಿಸಿದರು. 48ನೇ ಓವರ್‌ನಲ್ಲಿ ರಜಿತ ಬೌಲಿಂಗ್‌ನಲ್ಲಿ ವಿಕೆಟ್ ಕೀಪರ್ ಕುಶಾಲ್ ಮೆಂಡಿಸ್ ಅವರಿಗೆ ಕ್ಯಾಚಿತ್ತು ಔಟಾದರು.

ಇದನ್ನೂ ಓದಿ: 34ನೇ ಜನ್ಮದಿನ: ಮಾಗಿದ, ಸೌಹಾರ್ದತೆ ಪರ ವಾಲಿದ ವಿರಾಟ್ ಕೊಹ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...