Homeಮುಖಪುಟಮುಸ್ಲಿಮರನ್ನು ಭಯೋತ್ಪಾದಕರಂತೆ ಚಿತ್ರಿಸಿದ ಕಲಾ ತಂಡ ಬ್ಯಾನ್ : ಕೇರಳ ಸರ್ಕಾರ ನಿರ್ಧಾರ

ಮುಸ್ಲಿಮರನ್ನು ಭಯೋತ್ಪಾದಕರಂತೆ ಚಿತ್ರಿಸಿದ ಕಲಾ ತಂಡ ಬ್ಯಾನ್ : ಕೇರಳ ಸರ್ಕಾರ ನಿರ್ಧಾರ

- Advertisement -
- Advertisement -

ಇತ್ತೀಚೆಗೆ ನಡೆದ ಶಾಲಾ ಕಲಾ ಉತ್ಸವದಲ್ಲಿ ಇಸ್ಲಾಮಿಕ್ ಪೋಷಾಕಿನಲ್ಲಿದ್ದ ವ್ಯಕ್ತಿಯನ್ನು ಭಯೋತ್ಪಾದಕ ಎಂದು ಬಿಂಬಿಸಿದ ನಂತರ ಇದೀಗ ಮತ್ತೆ ಕೇರಳದ ಕೋಝಿಕ್ಕೋಡ್‌ ವಿವಾದದ ಕೇಂದ್ರಬಿಂದುವಾಗಿದೆ. ಸರ್ಕಾರ ಮುಂದಿನ ಆವೃತ್ತಿಗಳ ಕುರಿತು ಎಚ್ಚರಿಕೆ ವಹಿಸಿದ್ದು, ಈ ಕಲಾಸಂಘವನ್ನು ಸರ್ಕಾರ ನಿಷೇಧಿಸಿದೆ. ಈ ವಿಚಾರವಾಗಿ ಕಾಂಗ್ರೆಸ್ ಪಕ್ಷವು ಪ್ರತಿಕ್ರಿಯಿಸಿದ್ದು, “ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಕ್ಷಮೆಯಾಚಿಸಬೇಕು” ಎಂದು ಮಂಗಳವಾರ ಒತ್ತಾಯಿಸಿತ್ತು.

ಈ ಬಗ್ಗೆ ಶಿಕ್ಷಣ ಸಚಿವ ಮತ್ತು ಸಿಪಿಐ(ಎಂ) ಮುಖಂಡ ವಿ ಶಿವನ್‌ಕುಟ್ಟಿ ಮಾತನಾಡಿ, “ಮುಸ್ಲಿಂ ವ್ಯಕ್ತಿಯನ್ನು ಭಯೋತ್ಪಾದಕನಂತೆ ಚಿತ್ರಿಸಿರುವುದು ಎಲ್‌ಡಿಎಫ್ ನಿಲುವಿಗೆ ವಿರುದ್ಧವಾಗಿದೆ. ಉತ್ಸವದ ಉದ್ಘಾಟನೆಯ ಸಂದರ್ಭದಲ್ಲಿ ಸ್ವಾಗತ ಗೀತೆಯ ಭಾಗವಾಗಿ ಪ್ರದರ್ಶನವನ್ನು ಏರ್ಪಡಿಸಿದ MATHA ಅಥವಾ ಮಲಯಾಳಂ ಥಿಯೇಟ್ರಿಕಲ್ ಹೆರಿಟೇಜ್ ಮತ್ತು ಆರ್ಟ್ಸ್ ಸಂಸ್ಥೆಗೆ ಮುಂದಿನ ಬಾರಿ ಯಾವುದೇ ಅವಕಾಶವನ್ನು ನೀಡಲಾಗುವುದಿಲ್ಲ. ವಿವಾದದ ಕುರಿತು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಉದ್ಘಾಟನೆಯ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಆಯೋಜಿಸುವ ಮೊದಲು ಸ್ವಾಗತ ಸಮಿತಿಯು ಕಾರ್ಯಕ್ರಮವನ್ನು ವೀಕ್ಷಿಸಿತ್ತು. ಆದರೆ ಇದು ಕಾರ್ಯಕ್ರಮದ ಅಂತಿಮ ಡ್ರೆಸ್ ರಿಹರ್ಸಲ್ ಆಗಿರಲಿಲ್ಲ” ಎಂದು ತಿಳಿಸಿದ್ದಾರೆ.

ಮೊದಲ ದಿನದಂದು MATHA ತಂಡ ಪ್ರದರ್ಶಿಸಿದ ಪ್ರದರ್ಶನದಲ್ಲಿ, ಸಮವಸ್ತ್ರಧಾರಿ ರಕ್ಷಣಾ ಅಧಿಕಾರಿಯನ್ನು ಕೊಂದ ಭಯೋತ್ಪಾದಕನನ್ನು ಭಾರತೀಯ ಸೇನೆಯ ವ್ಯಕ್ತಿಯೊಬ್ಬರು ಬಂಧಿಸಿರುವುದನ್ನು ತೋರಿಸಲಾಯಿತು. ಪ್ರದರ್ಶನದ ವೇಳೆ ಭಯೋತ್ಪಾದಕ ಪಾತ್ರಧಾರಿಗಳು ಅರಬ್ ಪುರುಷರ ಸಾಂಪ್ರದಾಯಿಕ ಶಿರಸ್ತ್ರಾಣವಾದ ಕೆಫಿಯೆಹ್ ಅನ್ನು ಧರಿಸಿದ್ದರು. ಆದರೆ ಇದೀಗ ಮುಸ್ಲಿಮರನ್ನು ಭಯೋತ್ಪಾದಕ ಎಂದು ಬಿಂಬಿಸುವುದನ್ನು ವಿರೋಧಿಸಿ ವಿವಿಧ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದ ನಂತರ ಈ ಘಟನೆ ವಿವಾದಕ್ಕೆ ಕಾರಣವಾಗಿದೆ.

ಇನ್ನು ಈ ಉತ್ಸವ ಮುಗಿದ ಬಳಿಕ ಮಾತನಾಡಿದ ಸಿಪಿಐ(ಎಂ) ಮುಖಂಡ ಮತ್ತು ಲೋಕೋಪಯೋಗಿ ಸಚಿವ ಮಹಮ್ಮದ್ ರಿಯಾಸ್, “ಈ ಕಾರ್ಯಕ್ರಮದ ಹಿಂದೆ ಸಂಘಪರಿವಾರದ ಅಜೆಂಡಾ ಇದೆ” ಎಂದು ಆರೋಪಿಸಿದ್ದಾರೆ. ಮಂಗಳವಾರ ಕೋಝಿಕ್ಕೋಡ್‌ನಲ್ಲಿ ಸಿಪಿಐ(ಎಂ) ಜಿಲ್ಲಾ ಸಮಿತಿಯು ಪ್ರತಿಕ್ರಿಯಿಸಿದ್ದು, ವೇದಿಕೆ ಕಾರ್ಯಕ್ರಮದ ವಿರುದ್ಧದ ಟೀಕೆ ಅತ್ಯಂತ ಗಂಭೀರವಾಗಿದೆ. ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ” ಎಂದಿದೆ.

“ಮುಸ್ಲಿಂ ವೇಷಭೂಷಣದಲ್ಲಿ ಭಯೋತ್ಪಾದಕನನ್ನು ಪ್ರಸ್ತುತಪಡಿಸುವುದು ಎಲ್‌ಡಿಎಫ್ ಸರ್ಕಾರದ ನಿಲುವಿಗೆ ವಿರುದ್ಧವಾಗಿದೆ. ಭಯೋತ್ಪಾದನೆ ಮತ್ತು ಉಗ್ರವಾದವು ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಸಂಬಂಧಿಸಿಲ್ಲ. ಇಂತಹ ಕಾರ್ಯಕ್ರಮವನ್ನು ಹೇಗೆ ನಡೆಸಲಾಯಿತು ಎಂಬುದನ್ನು ಪರಿಶೀಲಿಸಬೇಕು’’ ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ.

ಜಿಲ್ಲಾ ಸಮಿತಿಯ ಮಧ್ಯಪ್ರವೇಶದ ನಂತರ, ರಾಜ್ಯ ಶಿಕ್ಷಣ ಇಲಾಖೆಯು ಈ ಕಲಾ ತಂಡವನ್ನು ಉತ್ಸವದ ಮುಂದಿನ ಆವೃತ್ತಿಗಳಲ್ಲಿ ಭಾಗವಹಿಸದಂತೆ ನಿಷೇಧಿಸಿದೆ. ಆದರೆ ಸಿಪಿಐ(ಎಂ) ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಸಿಎಂ ಮುಸ್ಲಿಮರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ.

ಶಿಕ್ಷಣ ಸಚಿವರು ಉತ್ಸವದಲ್ಲಿ ಉಪಸ್ಥಿತರಿದ್ದು, ಪ್ರವಾಸೋದ್ಯಮ ಸಚಿವರು ಎಲ್ಲದಕ್ಕೂ ಕಾರಣವಾಗಿದ್ದಾರೆ ನೀಡಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಸಂಸದ ಕೆ.ಮುರಳೀಧರನ್ ಆರೋಪಿಸಿದ್ದಾರೆ. “ಹಾಗಾದರೆ, ಸರ್ಕಾರ ನಡೆಸುವ ಉತ್ಸವದ ಸಮಯದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಇಂತಹ ಚಿತ್ರಣ ಹೇಗೆ ಸಂಭವಿಸಿತು? ಸರ್ಕಾರ ಮತ್ತು ಸಿಎಂಗೆ ನೈತಿಕ ಹೊಣೆಗಾರಿಕೆ ಇದೆ. ಮುಖ್ಯಮಂತ್ರಿಗಳು ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

ಮತ್ತೊಂದೆಡೆ ರಾಜ್ಯ ಬಿಜೆಪಿ ಅಧ್ಯಕ್ಷ ಕೆ ಸುರೇಂದ್ರನ್ ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಆಡಳಿತ ಪಕ್ಷವು ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ನಿಲ್ಲುವುದಾಗಿ ಹೇಳುತ್ತದೆ. ಆದರೆ ಧಾರ್ಮಿಕ ಉಗ್ರಗಾಮಿಗಳಿಗೆ ಮಣಿದಿದೆ. ಸರಕಾರ ಮೂಲಭೂತವಾದಿಗಳ ಜೊತೆಗಿದೆ ಎಂಬುದನ್ನು ಸಾಬೀತುಪಡಿಸಿದೆ” ಎಂದಿದ್ದಾರೆ.

ವೇದಿಕೆ ಕಾರ್ಯಕ್ರಮವು ಭಾರತೀಯ ರಕ್ಷಣಾ ಪಡೆಗಳ ನಿಸ್ವಾರ್ಥ ಸೇವೆಯನ್ನು ಬಿಂಬಿಸುತ್ತದೆ. ಈಗ, ವಿ ಶಿವನ್‌ಕುಟ್ಟಿ ಮತ್ತು ಮೊಹಮ್ಮದ್ ರಿಯಾಸ್ ಭಾರತೀಯ ಸೇನೆಯ ಸೇವೆಯನ್ನು ಬಿಂಬಿಸುವುದು ಅಪರಾಧ ಎಂದು ಹೇಳುತ್ತಾರೆ. ಇದು ಸಂಪೂರ್ಣ ದೇಶ ವಿರೋಧಿ ವಿಧಾನವಾಗಿದೆ ಎಂದು ಟೀಕಿಸಿದ್ದಾರೆ.

ಈ ವಿವಾದ ಬಗ್ಗೆ ಪ್ರತಿಕ್ರಿಯಿಸಿರುವ ಕಲಾ ನಿರ್ದೇಶಕ ಕನಕದಾಸ್ ಅವರು, “ಇದು ದುರದೃಷ್ಟಕರ” ಎಂದಿದ್ದು, “ಪ್ರದರ್ಶನದ ಹಿಂದೆ ಯಾವುದೇ ರಾಜಕೀಯವಿಲ್ಲ ಮತ್ತು ನಮ್ಮ ಕಲಾವಿದರು ಎಲ್ಲಾ ರಾಜಕೀಯ ಪಕ್ಷಗಳಿಗೆ ಸೇರಿದವರು. ನಾವು ಹಲವಾರು ಸರ್ಕಾರಿ ಕಾರ್ಯಕ್ರಮಗಳಿಗೆ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದ್ದೇವೆ. ಶಾಲಾ ಉತ್ಸವದಲ್ಲಿ ವೇದಿಕೆ ಕಾರ್ಯಕ್ರಮದ ನಂತರ ಸಚಿವ ರಿಯಾಸ್ ನಮ್ಮನ್ನು ಅಭಿನಂದಿಸಿದರು. ನಂತರ, ಯಾರೂ ಕಾರ್ಯಕ್ರಮದ ವಿರುದ್ಧ ಯಾವುದೇ ದೂರು ನೀಡಲಿಲ್ಲ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...