Homeಮುಖಪುಟಖಾಸಗಿ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಶೇ.75 ಮೀಸಲಾತಿ: ಕೊಟ್ಟ ಮಾತು ಉಳಿಸಿಕೊಂಡ ಜಗನ್

ಖಾಸಗಿ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಶೇ.75 ಮೀಸಲಾತಿ: ಕೊಟ್ಟ ಮಾತು ಉಳಿಸಿಕೊಂಡ ಜಗನ್

- Advertisement -
- Advertisement -

ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ಖಾಸಗಿ ಕೈಗಾರಿಕಾ ಘಟಕಗಳು ಮತ್ತು ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ 75 % ಉದ್ಯೋಗ ಮೀಸಲಾತಿ ಕಾಯ್ದಿರಿಸುವ ಮಸೂದೆಯನ್ನು ಮಂಡಿಸುವ ಮೂಲಕ ಎಲ್ಲರ ಗಮನಸೆಳೆದಿದ್ದಾರೆ. ತಮ್ಮ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ನಿರುದ್ಯೋಗದ ಬಗ್ಗೆ ಹೆಚ್ಚು ಮಾತನಾಡಿದ್ದ ಜಗನ್‌‌ ಖಾಸಗೀ ಕ್ಷೇತ್ರದಲ್ಲಿ ಸ್ಥಳೀಯರಿಗೆ 75% ಮೀಸಲಾತಿ ನೀಡುವುದಾಗಿ ಆಶ್ವಾಸನೆ ನೀಡಿದ್ದರು. ಇದೀಗ ಅದನ್ನು ಜಾರಿ ಮಾಡಲು ಮುಂದಾಗಿದ್ದು ಹೊಸ ಮಸೂದೆಯನ್ನು ಮಂಡಿಸಿದ್ದಾರೆ.

The Andhra Pradesh Employment of Local Candidates in Industries/Factories Act, 2019 ಅನ್ನು ಆಂಧ್ರಪ್ರದೇಶದಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಜಗನ್ ಮಂಡಿಸಿದ್ದಾರೆ. ಇನ್ನು ಮುಂದೆ ಖಾಸಗಿ ಕೈಗಾರಿಕಾ ಘಟಕಗಳು ಮತ್ತು ಕಾರ್ಖಾನೆಗಳು ಸರ್ಕಾರಿ ಖಾಸಗಿ ಸಹಭಾಗತ್ವದ ಅಡಿಯಲ್ಲಿ ಸ್ಥಳೀಯರಿಗೆ 75 % ಉದ್ಯೋಗ ಮೀಸಲಾತಿ ಕಾಯ್ದಿರಿಸಿರಬೇಕಾಗಿದೆ.

ಸ್ಥಳೀಯರು ಅಗತ್ಯ ಕೌಶಲ್ಯ ಹೊಂದಿರದಿದ್ದರೆ, ರಾಜ್ಯಸರ್ಕಾರದ ಸಹಯೋಗದಲ್ಲಿ ಕಂಪನಿಗಳು ಅವರಿಗೆ ತರಬೇತಿ ನೀಡಿ ನಂತರ ಅವರನ್ನು ನೇಮಿಸಿಕೊಳ್ಳಬೇಕು ಎಂದು ಹೊಸ ಮಸೂದೆಯಲ್ಲಿ ಹೇಳಲಾಗಿದೆ. ಕಾಯಿದೆ ಪ್ರಾರಂಭವಾದ ಮೂರು ವರ್ಷಗಳಲ್ಲಿ ಕಂಪನಿಗಳು ಈ ನಿಬಂಧನೆಗಳನ್ನು ಪಾಲಿಸಬೇಕಾಗುತ್ತದೆ ಮತ್ತು ಸ್ಥಳೀಯ ನೇಮಕಾತಿಗಳ ಬಗ್ಗೆ ತ್ರೈಮಾಸಿಕ ವರದಿಗಳನ್ನು ನೋಡಲ್ ಏಜೆನ್ಸಿಗೆ ಒದಗಿಸಬೇಕು ಎಂದೂ ಮಸೂದೆಯನ್ನು ನಮೂದಿಸಲಾಗಿದೆ.

“ಇದು ಕೈಗಾರಿಕೆಗಳ ಸ್ಥಾಪನೆಗಾಗಿ ತಮ್ಮ ಭೂಮಿಯನ್ನು ಮತ್ತು ಉದ್ಯೋಗವನ್ನು ಕಳೆದುಕೊಂಡಿರುವ ವ್ಯಕ್ತಿಗಳಿಗೆ ಮತ್ತು ಇತರ ನಿರುದ್ಯೋಗಿ ಯುವಜನರಿಗೆ ಸಹಾಯ ಮಾಡುತ್ತದೆ ಮತ್ತು ಅವರ ಸುಸ್ಥಿರ ಜೀವನೋಪಾಯವನ್ನು ಖಾತರಿಪಡಿಸುತ್ತದೆ” ಎಂದು ಸರ್ಕಾರದ ಹೇಳಿಕೆ ತಿಳಿಸಿದೆ.

ಖಾಸಗಿ ಉದ್ಯೋಗಗಳ ದೊಡ್ಡ ಭಾಗವನ್ನು ಸ್ಥಳೀಯರಿಗಾಗಿ ಕಾಯ್ದಿರಿಸುವ ಬಗ್ಗೆ ಅನೇಕ ರಾಜ್ಯಗಳಲ್ಲಿ ಚರ್ಚೆ ನಡೆಯುತ್ತಿವೆ. ಆದರೆ ಆ ಚರ್ಚೆಯನ್ನು ಮಧ್ಯಪ್ರದೇಶ ಮತ್ತು ಆಂಧ್ರ ಪ್ರದೇಶವನ್ನು ಹೊರತು ಪಡಿಸಿ ಯಾವ ರಾಜ್ಯವೂ ಇನ್ನೂ ಜಾರಿಗೆ ತಂದಿಲ್ಲ. 2018ರ ಡಿಸೆಂಬರ್‌ನಲ್ಲಿ ಅಧಿಕಾರಕ್ಕೆ ಬಂದ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್‌ನಾಥ್ ಅವರು ಕೈಗಾರಿಕಾ ನೀತಿಯನ್ನು ಘೋಷಿಸಿ ಕಂಪೆನಿಗಳಲ್ಲಿ ಸ್ಥಳೀಯರಿಗೆ 70% ಉದ್ಯೋಗ ನೀಡುವುದನ್ನು ಜೂಲೈ 09ರಿಂದ ಕಡ್ಡಾಯಗೊಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...