Homeರಾಜಕೀಯಲಂಚ ಪ್ರಕರಣ: ಕೇರಳ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

ಲಂಚ ಪ್ರಕರಣ: ಕೇರಳ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

- Advertisement -
- Advertisement -

ಕೇರಳ ವಿಧಾನಸಭಾ ಚುನಾವಣೆ ವೇಳೆ ನಡೆದ ‘ಮಂಜೇಶ್ವರ ಚುನಾವಣಾ ಲಂಚ ಪ್ರಕರಣ’ದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್‌ ವಿರುದ್ಧ ಕೇರಳ ಪೊಲೀಸರ ಕ್ರೈಂ ಬ್ರಾಂಚ್ ವಿಭಾಗವು ಆರೋಪಪಟ್ಟಿ ಸಲ್ಲಿಸಿದೆ. ಅಪರಾಧ ವಿಭಾಗದ ಪೊಲೀಸರು ಮಂಗಳವಾರ ಕಾಸರಗೋಡು ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಪ್ರಕರಣದಲ್ಲಿ ಆರು ಮಂದಿ ಆರೋಪಿಗಳಿದ್ದಾರೆ.

ಅಧಿಕೃತ ಮೂಲಗಳ ಪ್ರಕಾರ, ಸುರೇಂದ್ರನ್ ಅವರು 2021 ರ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರ ಕ್ಷೇತ್ರದ ಸ್ಪರ್ಧೆಯಿಂದ ಹಿಂದೆ ಸರಿಯಲು ತಮ್ಮ ಪ್ರತಿಸ್ಪರ್ಧಿ ಅಭ್ಯರ್ಥಿಯನ್ನು ಬೆದರಿಸಿದ್ದಾರೆ ಎಂಬ ಆರೋಪವನ್ನು ಎದುರಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸುರೇಂದ್ರನ್ ವಿರುದ್ಧ ಜಾಮೀನು ರಹಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕ್ರೈಂ ಬ್ರಾಂಚ್ ತನ್ನ ಚಾರ್ಜ್‌ಶೀಟ್‌ನಲ್ಲಿ ಸಿಪಿಐ(ಎಂ) ನೇತೃತ್ವದ ಸರ್ಕಾರದ ವಿರುದ್ಧ ಬಿಜೆಪಿಯ ಸುರೇಂದ್ರನ್‌ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿದೆ. ಆದರೆ ಬಿಜೆಪಿ ನಾಯಕರು ಪ್ರಕರಣವನ್ನು ಸುಳ್ಳು ಎಂದು ಹೇಳಿದ್ದು ಸುರೇಂದ್ರನ್ ಅವರನ್ನು ಬೆಂಬಲಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿಯ ಹಿರಿಯ ನಾಯಕ, ಒಕ್ಕೂಟ ಸರ್ಕಾರದ ಸಚಿವ ವಿ. ಮುರಳೀಧರನ್, ಸಿಪಿಐ(ಎಂ) ಮುಖಂಡರೊಬ್ಬರು ಡ್ರಗ್ ಪ್ರಕರಣದಲ್ಲಿ ಸಿಕ್ಕಿಬಿದ್ದ ದಿನವೇ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಆರೋಪಿಸಿದ್ದಾರೆ. ಕ್ರೈಂ ಬ್ರಾಂಚ್‌ ಅನ್ನು ಬಳಸಿಕೊಂಡು ಬಿಜೆಪಿ ರಾಜ್ಯಾಧ್ಯಕ್ಷರ ಬೇಟೆಯಾಡುವ ರಾಜ್ಯ ಸರ್ಕಾರದ ಕ್ರಮವನ್ನು ಕಾನೂನು ಮತ್ತು ರಾಜಕೀಯವಾಗಿ ಎದುರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಮಂಜೇಶ್ವರಂ ವಿಧಾನಸಭಾ ಕ್ಷೇತ್ರಕ್ಕೆ ತನ್ನ ನಾಮಪತ್ರವನ್ನು ಹಿಂಪಡೆಯಲು ಇನ್ನೊಬ್ಬ ಅಭ್ಯರ್ಥಿಗೆ ಬೆದರಿಕೆ ಹಾಕಿದ್ದು ಮತ್ತು ಲಂಚ ನೀಡಿದ ಆರೋಪದ ಮೇಲೆ ಕೇರಳದ ಪೊಲೀಸರು 2021ರ ಜೂನ್ ತಿಂಗಳಲ್ಲಿ ಸುರೇಂದ್ರನ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಮಂಜೇಶ್ವರಂನಲ್ಲಿ ಸುರೇಂದ್ರನ್ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸಿಪಿಐ(ಎಂ) ಅಭ್ಯರ್ಥಿ ವಿ.ವಿ. ರಮೇಶನ್ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನಿರ್ದೇಶನದಂತೆ ಪ್ರಕರಣ ದಾಖಲಿಸಲಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 171 (ಬಿ) ಮತ್ತು (ಇ) (ಲಂಚ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ನಂತರ ಪ್ರಕರಣವನ್ನು ಕ್ರೈಂ ಬ್ರಾಂಚ್‌ಗೆ ಹಸ್ತಾಂತರಿಸಲಾಗಿತ್ತು.

ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿಯಲು ಬಿಜೆಪಿಯವರು ಆರಂಭದಲ್ಲಿ ತಮಗೆ ಬೆದರಿಕೆ ಹಾಕಿದ್ದರು ಮತ್ತು ನಂತರ 2.5 ಲಕ್ಷ ಲಂಚ ನೀಡಿದ್ದರು ಎಂದು ಬಿಎಸ್‌ಪಿ ಅಭ್ಯರ್ಥಿ ಸುಂದರ ಆರೋಪಿಸಿದ್ದರು. ಯುವಮೋರ್ಚಾ ಮುಖಂಡ ಮತ್ತು ಸುರೇಂದ್ರನ್ ಅವರ ಆಪ್ತ ಸಹಾಯಕ ಸುನೀಲ್ ನಾಯ್ಕ್ ಅವರು ಹಣ ಮತ್ತು ಸ್ಮಾರ್ಟ್‌ಫೋನ್ ಅನ್ನು ತನಗೆ ಹಸ್ತಾಂತರಿಸಿದ್ದಾರೆ ಎಂದು ಸುಂದರ ಹೇಳಿಕೊಂಡಿದ್ದಾರೆ. ಆದರೆ ಈ ಆರೋಪವನ್ನು ಬಿಜೆಪಿ ನಿರಾಕರಿಸಿತ್ತು.

ಯಕ್ಷಗಾನ ಕಲಾವಿದರಾದ ಸುಂದರ ಅವರು 2016 ರಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು. ಇದರ ನಂತರ ಅವರು 2021 ರಲ್ಲಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಿ, ಅದನ್ನು ಹಿಂಪಡೆದಿದ್ದರು.

ಅದಾಗ್ಯೂ ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರನ್ ಅವರು ಮಂಜೇಶ್ವರಂನಿಂದ ಚುನಾವಣೆಯಲ್ಲಿ ಸೋತಿದ್ದು, ಮುಸ್ಲಿಂ ಲೀಗ್‌ ಅಭ್ಯರ್ಥಿ ಎಕೆಎಂ ಅಶ್ರಫ್ 65,758 ಮತಗಳನ್ನು ಪಡೆದು ಜಯಗಳಿಸಿದ್ದರು. ಈ ಚುನಾವಣೆಯಲ್ಲಿ ಸುರೇಂದ್ರನ್ 65,013 ಮತಗಳನ್ನು ಪಡೆದಿದ್ದರು ಹಾಗೂ ಸಿಪಿಐ(ಎಂ)ನ ರಮೇಶ ಅವರು 40,639 ಮತಗಳನ್ನು ಪಡೆದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...