Homeಮುಖಪುಟನಮ್ಮದೇ ಭಾಷೆಗಳಂತೆ ನಮ್ಮ ಬಾವುಟಗಳನ್ನೂ ಹೊಂದಿದ್ದೇವೆ: ಆಂಧ್ರ ಸಿಎಂ ಪರ ನಿಂತ ನಟಿ ರಮ್ಯಾ ದಿವ್ಯಸ್ಪಂದನ

ನಮ್ಮದೇ ಭಾಷೆಗಳಂತೆ ನಮ್ಮ ಬಾವುಟಗಳನ್ನೂ ಹೊಂದಿದ್ದೇವೆ: ಆಂಧ್ರ ಸಿಎಂ ಪರ ನಿಂತ ನಟಿ ರಮ್ಯಾ ದಿವ್ಯಸ್ಪಂದನ

ಆರ್‌ಆರ್‌ಆರ್‌ ಸಿನಿಮಾಗೆ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಸಿಕ್ಕ ಸಂದರ್ಭದಲ್ಲಿ ಆಂಧ್ರ ಸಿಎಂ "ತೆಲುಗು ಬಾವುಟ ಎತ್ತರದಲ್ಲಿ ಹಾರಾಡುತ್ತಿದೆ" ಎಂದು ಟ್ವೀಟ್ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿತ್ತು.

- Advertisement -
- Advertisement -

ಆರ್‌ಆರ್‌ಆರ್‌ ಸಿನಿಮಾದ ನಾಟು ನಾಟು ಹಾಡಿಗೆ ಪ್ರತಿಷ್ಟಿತ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಸಿಕ್ಕ ಸಂದರ್ಭದಲ್ಲಿ ರಾಷ್ಟ್ರೀಯತೆ ಮತ್ತು ಪ್ರಾದೇಶಿಕತೆಯ ಚರ್ಚೆ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. ತೆಲುಗು ಬಾವುಟ ಎತ್ತರದಲ್ಲಿ ಹಾರಾಡುತ್ತಿದೆ ಎಂದ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿಯವರನ್ನು ಗಾಯಕ ಅದ್ನಾನ್ ಸಾಮಿ ಟೀಕಿಸಿದ್ದರು. ಈಗ ನಟಿ ರಮ್ಯಾ ದಿವ್ಯಸ್ಪಂದನರವರು ಆಂಧ್ರ ಸಿಎಂ ಪರ ನಿಂತು ಟ್ವೀಟ್ ಮಾಡಿದ್ದಾರೆ.

ತೆಲಗು ಹಾಡಿಗೆ ಪ್ರಶಸ್ತಿ ಸಿಕ್ಕ ಸಂದರ್ಭದಲ್ಲಿ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿಯವರು ಚಿತ್ರತಂಡವನ್ನು ಅಭಿನಂದಿಸಿ ಟ್ವೀಟ್ ಮಾಡಿದ್ದರು. “ತೆಲುಗು ಬಾವುಟ ಎತ್ತರದಲ್ಲಿ ಹಾರಾಡುತ್ತಿದೆ. ಆಂಧ್ರ ಪ್ರದೇಶ ಪರವಾಗಿ ಚಿತ್ರತಂಡದ ಎಂ.ಎಂ ಕೀರವಾಣಿ, ರಾಜಮೌಳಿ, ತಾರಕ್, ಚರಣ್ ಹಾಗೂ ಇಡೀ ‘RRR’ ತಂಡಕ್ಕೆ ಅಭಿನಂದನೆ. ನಿಮ್ಮ ಬಗ್ಗೆ ಹೆಮ್ಮೆ ಇದೆ” ಎಂದಿದ್ದರು.

ಇದಕ್ಕೆ ತಕರಾರು ತೆಗೆದಿದ್ದ ಗಾಯಕ, ಸಂಗೀತ ನಿರ್ದೇಶಕ ಅದ್ನಾನ್ ಸಾಮಿ, “ತೆಲುಗು ಬಾವುಟನಾ? ನೀವು ಹೇಳುತ್ತಿರುವುದು ಭಾರತದ ಬಾವುಟ ಅಲ್ಲವೇ? ಪ್ರಪಂಚದ ವಿಷಯಕ್ಕೆ ಬಂದರೆ ನಾವೆಲ್ಲಾ ಒಂದೇ ದೇಶ. ಮೊದಲು ನಾವು ಭಾರತೀಯರು. ದಯವಿಟ್ಟು ನೀವು ಭಾರತ ಬಿಟ್ಟು ಬೇರೆ ಇರಲು ಪ್ರಯತ್ನಿಸಬೇಡಿ. ಈ ವಿಭಜನೆಯ ಸಿದ್ದಾಂತವೂ ಅತಿ ಅಪಾಯಕಾರಿ ಎಂದು 1947ರಲ್ಲಿ ನಾವು ನೋಡಿದ್ದೇವೆ. ಜೈ ಹಿಂದ್” ಎಂದು ಟ್ವೀಟ್ ಮಾಡಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ನಟಿ ರಮ್ಯಾ, “ಹೌದು ನಾವು ಭಾರತೀಯರು, ಜೊತೆಗೆ ಕನ್ನಡಿಗರು, ತೆಲುಗರು, ತಮಿಳರು ಬಂಗಾಳಿಗಳು ಇತ್ಯಾದಿಗಳು ಸಹ. ನಾವು ನಮ್ಮದೇಯಾದ ಭಾಷೆಗಳನ್ನು ಹೊಂದಿರುವಂತೆ ನಮ್ಮದೇ ಬಾವುಟಗಳನ್ನೂ ಸಹ ಹೊಂದಿದ್ದೇವೆ. ನಾವು ಭಾರತೀಯರೆನಿಸಿಕೊಳ್ಳುವುದಕ್ಕೆ ಮತ್ತು ಹಲವು ಸಂಸ್ಕೃತಿ, ಭಾಷೆ, ಧ್ವಜಗಳಗಳೊಂದಿಗೆ ಬೇರೂರಿರುವ ಜನರು ಎನಿಸಿಕೊಳ್ಳುವುದಕ್ಕೆ ಹೆಮ್ಮೆ ಇದೆ. ವಿವಿಧತೆಯಲ್ಲಿ ಏಕತೆ ಸಾಧಿಸುವುದು ಮುಖ್ಯವಲ್ಲವೇ” ಎಂದು ಪ್ರಶ್ನಿಸಿದ್ದಾರೆ.

ಪ್ರೀತಿಯ ಅದ್ನಾನ್ ಸಾಮಿಯವರೆ ತೆಲುಗು ಧ್ವಜ ಎಂದರೆ ಏನೆಂದು ಅರ್ಥಮಾಡಿಕೊಳ್ಳದ ನಿಮ್ಮ ಬುದ್ದಿಯನ್ನು ಇದು ತೋರಿಸುತ್ತಿದೆ. ತೆಲುಗು ಧ್ವಜ ಎಂದರೆ ನಮ್ಮ ಹೆಮ್ಮೆಯನ್ನು ಸೂಚಿಸುತ್ತದೆ. ನಿಮ್ಮಂತಹವರಿಂದ ನಾವು ದೇಶಪ್ರೇಮದ ಕುರಿತು ಉಪನ್ಯಾಸಗಳನ್ನು ಕೇಳಬೇಕಾಗಿಲ್ಲ. ಎರವಲು ಪಡೆದ ರಾಷ್ಟ್ರೀಯತೆಯನ್ನು ನೀವೇ ಇಟ್ಟುಕೊಳ್ಳುವುದು ಉತ್ತಮ ಎಂದು ಹೈದರಾಬಾದ್ ಚಿಂತಕರ ಒಕ್ಕೂಟ ಟೀಕಿಸಿದೆ.

ಈ ಹಿಂದೆಯೂ ಹಿಂದಿ ರಾಷ್ಟ್ರೀಯ ಭಾಷೆ ಎಂಬ ವಿವಾದಕ್ಕೆ ಸಂಬಂಧಿಸಿದಂತೆ ಕಿಚ್ಚ ಸುದೀಪ್ ಮತ್ತು ಅಜಯ್ ದೇವಗನ್ ನಡುವೆ ವಾದ ವಿವಾದ ನಡೆದಿತ್ತು. ಹಿಂದಿ ರಾಷ್ಟ್ರೀಯ ಭಾಷೆ ಎಂಬುದನ್ನು ನಾವು ಒಪ್ಪುವುದಿಲ್ಲ ಎಂದು ಸುದೀಪ್ ಪ್ರತಿಪಾದಿಸಿದ್ದರು.

ಇದನ್ನೂ ಓದಿ; ಹಿಂದಿ ರಾಷ್ಟ್ರೀಯ ಭಾಷೆಯಲ್ಲ: ಸುದೀಪ್‌ ಹೇಳಿಕೆಗೆ ಅಜಯ್‌ ದೇವಗನ್‌ ಆಕ್ಷೇಪ- ಜನರ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...