Homeಮುಖಪುಟ''ರಾಮಚರಿತಮಾನಸ್’ ಮಹಾಕಾವ್ಯ ದ್ವೇಷ ಹರಡುತ್ತದೆ' ಹೇಳಿಕೆಗೆ ಕ್ಷಮೆ ಕೇಳಲ್ಲ: ಸಚಿವ ಚಂದ್ರಶೇಖರ್

”ರಾಮಚರಿತಮಾನಸ್’ ಮಹಾಕಾವ್ಯ ದ್ವೇಷ ಹರಡುತ್ತದೆ’ ಹೇಳಿಕೆಗೆ ಕ್ಷಮೆ ಕೇಳಲ್ಲ: ಸಚಿವ ಚಂದ್ರಶೇಖರ್

- Advertisement -
- Advertisement -

‘ರಾಮಚರಿತಮಾನಸ್’ ಎನ್ನುವ ಹಿಂದೂ ಮಹಾಕಾವ್ಯವು  ದ್ವೇಷವನ್ನು ಹರಡತ್ತದೆ ಎಂದು ಬಿಹಾರ ಶಿಕ್ಷಣ ಸಚಿವ ಚಂದ್ರಶೇಖರ್ ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆಯು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಗುರುವಾರ ಮಾಧ್ಯಮಗಳ ಎದುರು ಮಾತನಾಡಿದ ಅವರು, ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ, ಯಾವುದೇ ಕಾರನಕ್ಕೂ ನಾನು ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿದ್ದಾರೆ.

“ಹಿಂದೂ ವಿರೋಧಿ ಹೇಳಿಕೆ ನೀಡಿರುವ ಸಚಿವ ಚಂದ್ರಶೇಖರ್ ಅವರು ಕ್ಷಮೆಯಾಚಿಸಬೇಕು ಮತ್ತು ಈ ಕೂಡಲೇ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು” ಎಂದು ಪ್ರತಿಪಕ್ಷ ಭಾರತೀಯ ಜನತಾ ಪಕ್ಷ, ಹಿಂದೂ ಸಂಘಟನೆಗಳು ಮತ್ತು ಹಿಂದೂ ಸಂತರು ಒತ್ತಾಯಿಸಿದ್ದಾರೆ. ಆದರೆ ಚಂದ್ರಶೇಖರ್ ಅವರು, “ನಾನು ನನ್ನ ಹೇಳಿಕೆಗೆ ಬದ್ಧನಾಗಿರುತ್ತೇನೆ, ನಾನು ಯಾವುದೇ ತಪ್ಪು ಮಾಡಿಲ್ಲ ಮತ್ತು ಅದಕ್ಕೆ ಕ್ಷಮೆಯಾಚಿಸುವ ಅಗತ್ಯವಿಲ್ಲ” ಎಂದು ಚಂದ್ರಶೇಖರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಹಿರಿಯ ನಾಯಕ ಚಂದ್ರಶೇಖರ್ ಅವರು ಬುಧವಾರ ಪಾಟ್ನಾ ಮೂಲದ ನಳಂದ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ತಮ್ಮ ಭಾಷಣದ ವೇಳೆ ಇಂತಹದ್ದೊಂದು ಹೇಳಿಕೆ ನೀಡುವ ಮೂಲಕ ಕೇಕೆಗಳಿಗೆ ಗುರಿಯಾಗಿದ್ದಾರೆ. ‘ಮನುಸ್ಮೃತಿ’ ಮತ್ತು ಆರ್‌ಎಸ್‌ಎಸ್ ಸಿದ್ಧಾಂತಿ ಎಂಎಸ್ ಗೋಳ್ವಾಲ್ಕರ್ ಅವರ ‘ಬಂಚ್ ಆಫ್ ಥಾಟ್ಸ್’ ಸಾಮಾಜಿಕ ವಿಭಜನೆಯನ್ನು ಸೃಷ್ಟಿಸಿದಂತೆಯೇ ‘ರಾಮಚರಿತ್ಮಾನಸ್’ ನಂತಹ ಧಾರ್ಮಿಕ ಗ್ರಂಥಗಳು ಕೂಡ ದ್ವೇಷವನ್ನು ಹರಡುತ್ತವೆ ಎಂದು ಅವರು ಪ್ರತಿಪಾದಿಸಿದರು.

ಕಾಲೇಜು ಅಧ್ಯಾಪಕರಾಗಿದ್ದ ಚಂದ್ರಶೇಖರ್ ಇದೀಗ ರಾಜಕಾರಣಿಯಾಗಿದ್ದಾರೆ. ತುಳಸಿದಾಸರು ಬರೆದ ‘ರಾಮಚರಿತಮಾನಗಳು’ ಕೃತಿಯಲ್ಲಿ ಕೆಳಜಾತಿಯ ಜನರು ಶಿಕ್ಷಣ ಪಡೆಯುವುದರಿಂದ ವಿಷಕಾರಿಯಾಗುತ್ತಾರೆ ಎಂದು ಹೇಳಿದ್ದಾರೆ. ಮಹಾಕಾವ್ಯದಿಂದ ಒಂದು ದ್ವಿಪದಿಯನ್ನು ಉಲ್ಲೇಖಿಸಿದ್ದು, “ಅದಮ್ ಜಾತಿ ಮೇ ವಿದ್ಯಾ ಪಾಯೇ, ಭಯತು ಯಥಾ ದೂಧ್ ಪಿಲಾಯೇ”. ಇದನ್ನು ಅನುವಾದಿಸಿದರೆ, “ಕೆಳಜಾತಿಯ ಜನರು ಶಿಕ್ಷಣವನ್ನು ಪಡೆದ ನಂತರ ವಿಷಕಾರಿಯಾಗುತ್ತಾರೆ, ಹಾಲನ್ನು ಸೇವಿಸಿದ ಹಾವಿನಂತಾಗುತ್ತಾರೆ” ಎಂದು ಅರ್ಥ ಬರುತ್ತದೆ. ಹಾಗಾಗಿಯೇ ಜನರು ಮನುಸ್ಮೃತಿಯನ್ನು ಸುಟ್ಟುಹಾಕಿದರು ಮತ್ತು ಅಂತಹ ಆಲೋಚನೆಗಳಿರುವ ಗುಂಪನ್ನು ವಿರೋಧಿಸಿದರು ಇದರಲ್ಲಿ ಹೊಸದೇನೂ ಇಲ್ಲ ಎಂದು ಅವರು ಹೇಳಿದರು.

ಸಚಿವ ಚಂದ್ರಶೇಖರ್ ಅವರ ಈ ಹೇಳಿಕೆಗೆ ಹಲವು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಅಷ್ಟೇ ಅಲ್ಲದೇ ಮತ್ತು ಸಾರ್ವಜನಿಕವಾಗಿ ಅವರು ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಸಂಜಯ್ ಜೈಸ್ವಾಲ್ ಅವರು, ಚಂದ್ರಶೇಖರ್ ಅವರು ಆರ್‌ಜೆಡಿಯ ಹಿಂದೂ ವಿರೋಧಿ ಸಂಪ್ರದಾಯವನ್ನು ಪ್ರತಿನಿಧಿಸುತ್ತಾರೆ. ಅವರು ಈ ರೀತಿಯ ಹೇಳಿಕೆ ಮೂಲಕ ತಮ್ಮ ಜ್ಞಾನದ ಕೊರತೆಯನ್ನು ಬಹಿರಂಗಪಡಿಸಿದ್ದಾರೆ. ಅವರು ದ್ವಿಪದಿಯನ್ನು ತಪ್ಪಾಗಿ ಉಲ್ಲೇಖಿಸಿದ್ದಾರೆ. ಅವರ ಹೇಳಿಕೆಯು ಕೋಟ್ಯಂತರ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸಿರುವುದರಿಂದ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ನಾವು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಒತ್ತಾಯಿಸುತ್ತೇವೆ” ಎಂದು ಜೈಸ್ವಾಲ್ ಹೇಳಿದರು.

ಬಿಜೆಪಿಯ ಹಿರಿಯ ನಾಯಕರಾದ ಸಾಮ್ರಾಟ್ ಚೌಧರಿ ಮತ್ತು ನೀರಜ್ ಕುಮಾರ್ ಬಬ್ಲು ಮಾತನಾಡಿ, ಚಂದ್ರಶೇಖರ್ ಮಾನಸಿಕ ಸಮತೋಲನ ಕಳೆದುಕೊಂಡಿರುವ ಕಾರಣ ಅವರಿಗೆ ಮಾನಸಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕಾಗಿದೆ ಎಂದು ಹೇಳಿದ್ದಾರೆ.

ಅಯೋಧ್ಯೆಯ ಹಿಂದೂ ಅರ್ಚಕ ಜಗದ್ಗುರು ಪರಮಹಂಸರು ಮಾತನಾಡಿ, ಸಚಿವರು ಸನಾತನೀಯರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಚಂದ್ರಶೇಖರ್ ಕ್ಷಮೆ ಯಾಚಿಸಬೇಕು ಮತ್ತು ಸಿಎಂ ನಿತೀಶ್ ಕುಮಾರ್ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಪರಮಹಂಸರು ಹೇಳಿದ್ದಾರೆ. ಆದರೆ ಈ ವರೆಗೂ ಆರ್‌ಜೆಡಿ, ಜೆಡಿಯು, ಕಾಂಗ್ರೆಸ್, ಎಡಪಕ್ಷಗಳು ಮತ್ತು ಎಚ್‌ಎಎಂ ಸೇರಿದಂತೆ ಆಡಳಿತಾರೂಢ ಮಹಾಘಟಬಂಧನ್ ನಾಯಕರು ಈ ವಿಷಯದ ಬಗ್ಗೆ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...