Homeಕರ್ನಾಟಕಶೀಘ್ರದಲ್ಲೇ ಗಂಗಾಮತಸ್ತ ಸಮುದಾಯ ಎಸ್‌ಟಿಗೆ ಸೇರ್ಪಡೆ: ಸಿಎಂ ಹೇಳಿಕೆ

ಶೀಘ್ರದಲ್ಲೇ ಗಂಗಾಮತಸ್ತ ಸಮುದಾಯ ಎಸ್‌ಟಿಗೆ ಸೇರ್ಪಡೆ: ಸಿಎಂ ಹೇಳಿಕೆ

- Advertisement -
- Advertisement -

ಹಾವೇರಿ: ಶೀಘ್ರಲ್ಲಿಯೇ ಗಂಗಾಮತಸ್ತ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದ ವತಿಯಿಂದ ಸುಕ್ಷೇತ್ರ ನರಸೀಪುರದ ಗುರುಪೀಠದಲ್ಲಿ ಆಯೋಜಿಸಿರುವ ನಿಜಶರಣ ಅಂಬಿಗರಚೌಡಯ್ಯನವರ 5ನೇ ಶರಣ ಸಂಸ್ಕೃತಿ ಉತ್ಸವ, ಅಂಬಿಗರ ಚೌಡಯ್ಯನವರ 903ನೇ ಜಯಂತ್ಯುತ್ಸವ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ್ದಾರೆ.

ಈಗಾಗಲೇ ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಬಳಿ ಎಸ್.ಟಿ.ಗೆ ಸೇರಿಸುವ ಕಡತವಿದ್ದು, ಕೇಂದ್ರ ಬುಡಕಟ್ಟು ಸಚಿವ ಅರ್ಜುನ್ ಮುಂಡ ಅವರನ್ನು ಭೇಟಿಯಾಗಿ ಚರ್ಚಿಸಿದ್ದು, ಅಂತಿಮ ಘಟ್ಟದಲ್ಲಿದೆ. ಸಚಿವ ಸಂಪುಟದಲ್ಲಿ ಅನುಮೋದಿಸಲಾಗುವುದು. ಅವರು ಕೇಳಿದ್ದ ಕೆಲವು ವಿವರಣೆಗಳನ್ನು ಕಳುಹಿಸಿಕೊಡಲಾಗಿದೆ. ಮಾತು ಕೊಟ್ಟಿದ್ದಂತೆ ಕೆಲಸ ಪ್ರಗತಿಯಲ್ಲಿದೆ. ಆದಷ್ಟು ಬೇಗನೆ ಅನುಮೋದನೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಒಗ್ಗಟ್ಟಿನಲ್ಲಿ ಬಲವಿದೆ. ಈ ಮಠದ ಬೆಳವಣಿಗೆ ಈ ಕುಲದ ಬೆಳವಣಿಗೆಯೊಂದಿಗೆ ಸೇರಿದೆ. ಈ ಮಠದಿಂದ ಸ್ಫೂರ್ತಿ ಪಡೆಯಬೇಕಿದ್ದು, ಇದಕ್ಕೆ ಶಕ್ತಿ ತುಂಬುವ ಕೆಲಸವನ್ನು ಮಾಡುತ್ತೇವೆ. ಗುರುಕುಲ ನಿರ್ಮಾಣವಾಗುತ್ತಿದ್ದು, ಮಠಕ್ಕೆ 5 ಕೋಟಿ ರೂ.ಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ. 15 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಹಿಂದುಳಿದ ಮಠಗಳಿಗೆ ಅನುದಾನ ಬಿಡುಗಡೆ ಮಾಡಿದಾಗಲೂ 2 ಕೋಟಿ ರೂ.ಗಳ ಮಂಜೂರಾತಿ ಆಗಿದೆ. ಅದನ್ನೂ ಕೂಡ ಬೇಗ ಬಿಡುಗಡೆ ಮಾಡಲಾಗುವುದು.ಇಲ್ಲಿನ ಮಠ ಹಾಗೂ ವಿದ್ಯಾರ್ಥಿ ನಿಲಯವಾಗಬೇಕು, ಜ್ಞಾನಾರ್ಜನೆ ಅನ್ನದಾಸೋಹವಾಗಬೇಕು. ಇದು ನಮ್ಮ ಶರಣರ ಪರಂಪರೆ ನಿತ್ಯ ನಿರಂತರವಾಗಿ ಮಠದಿಂದ ಆಗಬೇಕು ಎಂದು ಆಶಿಸಿದ್ದಾರೆ.

ಈ ಸಮಾಜ ಬೇರೆ ವೃತ್ತಿಗಳನ್ನು ಮಾಡುತ್ತಿದೆ. ಒಳನಾಡು ಮೀನುಗಾರಿಕೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುತ್ತಿದೆ. ಕಾಲ ಬದಲಾಗಿದ್ದು, ನಾವೆಲ್ಲರೂ ಜ್ಞಾನಾರ್ಜನೆ ಮಾಡಿದಾಗ ಸಮಕಾಲೀನ ಸವಾಲುಗಳನ್ನು ಎದುರಿಸಬಹುದು. ಇತರೆ ವೃತ್ತಿಗಳನ್ನು ಮಾಡಿದಾಗ ಈ ಗಂಗಾಮತಸ್ತ ಕುಲ ಮುಂದುವರೆಯುತ್ತದೆ. ಮಕ್ಕಳಿಗೆ ವಿದ್ಯಾಭ್ಯಾಸ ಎಷ್ಟೇ ಕಷ್ಟವಿದ್ದರೂ ಓದಿಸಬೇಕು. ನಾವು ಗಂಗಾಮತಸ್ತ ಗುರುಗಳ ಭಕ್ತನಾಗಿ ಇಲ್ಲಿಗೆ ಬಂದಿದ್ದೇನೆ. ಸಮುದಾಯ ಭವನಕ್ಕೆ ಬರುವ ಬಜೆಟ್‌ನಲ್ಲಿ ಮೀಸಲಿಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಅಂಬಿಗರ ಚೌಡಯ್ಯ ಕಟುಸತ್ಯವನ್ನು ನುಡಿಯುವ ಶರಣರು. ಪ್ರಿಯವಾದ ಸತ್ಯ ಮತ್ತು ಸುಳ್ಳುಗಳಿರುವ ವ್ಯಾಖ್ಯಾನಗಳಿವೆ. ಸತ್ಯವೆಂದರೆ ಕಠೋರ. ಅಂಬಿಗರ ಚೌಡಯ್ಯ ಸತ್ಯವನ್ನು ಕಠಿಣ ಶಬ್ಧಗಳಲ್ಲಿ ಹೇಳುವಂತಹವರು. ಬಸವಣ್ಣನವರು ಇವರನ್ನು ನಿಜಶರಣೆರೆಂದು ಕರೆದರು. ಕಲ್ಯಾಣದಲ್ಲಿ ವೈಚಾರಿಕ ಕ್ರಾಂತಿಯಾಗುತ್ತದೆ ಎಂದು ನುಡಿದಿದ್ದರು. ಆಗ ವಚನಗಳ ರಕ್ಷಣೆ ಮುಖ್ಯವಾಗುತ್ತದೆ ಎಂದು ಹೇಳಿದ್ದು ನಿಜವಾಗಿದ್ದದಕ್ಕೆ ಅಂಬಿಗರ ಚೌಡಯ್ಯರನ್ನು ನಿಜಶರಣರೆಂದು ಕರೆದರು. ವಚನಗಳು ಇಂದಿಗೂ ನಮ್ಮ ನಡುವೆ ಜೀವಂತವಾಗಿರಲು ಏಕೈಕ ಕಾರಣ ಅಂಬಿಗರ ಚೌಡಯ್ಯ ಎಂದು ಬಣ್ಣಿಸಿದರು.

ಇದನ್ನೂ ಓದಿರಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ

ಒಂದು ಕುಲ ಅಥವಾ ಸಮಾಜದವರು ತಮ್ಮ ಸಂಸ್ಕಾರ, ಸಂಸ್ಕೃತಿ, ಇತಿಹಾಸ ಪರಂಪರೆಗಳನ್ನು ತಿಳಿದುಕೊಳ್ಳುವುದರಿಂದ ನಮ್ಮ ಭವಿಷ್ಯವನ್ನು ನಿರ್ಮಿಸಿಕೊಳ್ಳಬಹುದು. ಇಂತಹ ಶಿವಶರಣರ ಕುಲಕ್ಕೆ ತಾವುಗಳು ಸೇರಿದ್ದೀರಿ. ಅಂಬಿಗರು ಒಂದೇ ಹುಟ್ಟಿನಲ್ಲಿ ದಡ ಪಾರು ಮಾಡಿಸುವ ಶಕ್ತಿಯುಳ್ಳವರು. ಕೇವಲ ದೋಣಿಗಳನ್ನು ನಡೆಸುವುದು ಕಸುಬಲ್ಲ. ಇಡೀ ಮಾನವಕುಲವನ್ನು ದಡ ಸೇರಿಸುವವರೇ ಅಂಬಿಗ ಚೌಡಯ್ಯ ಎಂದು ಬಣ್ಣಿಸಿದರು.

ತಾಯಿಯ ಆಶೀರ್ವಾದದಲ್ಲಿ ಸಾತ್ವಿಕ ಚಿಂತನೆಯಿದೆ. ಇದೇ ನಮ್ಮನ್ನು ಒಳ್ಳೆಯ ಹಾದಿಯಲ್ಲಿ ನಡೆಸುತ್ತಿದೆ. ಈ ಸಮಾಜ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುಂದೆ ಬರಬೇಕು. 21 ನೇ ಶತಮಾನದಲ್ಲಿ ಎಲ್ಲ ಸಮುದಾಯಗಳ ಆಶೋತ್ತರಗಳು ಹೆಚ್ಚಾಗಿದೆ. ತುಳಿತಕ್ಕೊಳಗಾದ ಸಮಾಜದವರು ಶಿಕ್ಷಣ ಪಡೆದು, ವಿವಿಧ ವೃತ್ತಿಯಲ್ಲಿ ದುಡಿದು ಸ್ವಾಭಿಮಾನದ ಬದುಕನ್ನು ಬದುಕುವಂತಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...