Homeಕರ್ನಾಟಕಬೆಂಗಳೂರು: ಕಾರ್ಮಿಕ ಸಂಘಟನೆ ಸಿಐಟಿಯು 17ನೇ ಅಖಿಲ ಭಾರತ ಸಮ್ಮೇಳನ ಉದ್ಘಾಟನೆ

ಬೆಂಗಳೂರು: ಕಾರ್ಮಿಕ ಸಂಘಟನೆ ಸಿಐಟಿಯು 17ನೇ ಅಖಿಲ ಭಾರತ ಸಮ್ಮೇಳನ ಉದ್ಘಾಟನೆ

ಜನವರಿ 18ರ ಬುಧವಾರದಿಂದ 22ರ ಭಾನುವಾರದ ವರೆಗೆ ಒಟ್ಟು ಐದು ದಿನಗಳ ಕಾಲ ಬೆಂಗಳೂರಿನಲ್ಲಿ ಸಮ್ಮೇಳನ ನಡೆಯಲಿದೆ

- Advertisement -
- Advertisement -

ದೇಶದ ಪ್ರಮುಖ ಕಾರ್ಮಿಕ ಸಂಘಟನೆಯಾದ ‘ಸೆಂಟರ್‌ ಆಫ್‌‌ ಇಂಡಿಯನ್ ಟ್ರೇಡ್ ಯುನಿಯನ್ಸ್‌‌’(ಸಿಐಟಿಯು)ನ 17ನೇ ಅಖಿಲ ಭಾರತ ಸಮ್ಮೇಳನದ ಉದ್ಘಾಟನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬುಧವಾರ ನಡೆಯಿತು. ಸಮ್ಮೇಳನವು ಜನವರಿ 18ರ ಬುಧವಾರದಿಂದ 22ರ ಭಾನುವಾರದ ವರೆಗೆ ಒಟ್ಟು ಐದು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ.

ಸಮ್ಮೇಳನದ ಧ್ವಜಾರೋಹಣ ನೆರವೇರಿಸಿದ ಸಿಐಟಿಯು ಅಖಿಲ ಭಾರತ ಅಧ್ಯಕ್ಷೆ ಕೆ.ಹೇಮಲತಾ, ಕೋಮುವಾದಿ ಶಕ್ತಿಗಳ ವಿರುದ್ಧ ವರ್ಗ ಹೋರಾಟವನ್ನು ಒಗ್ಗಟ್ಟಿನಿಂದ ನಡೆಸುವಂತೆ ಕರೆ ನೀಡಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅರಮನೆ ಮೈದಾನದಲ್ಲಿ ಬುಧವಾರ ಬೆಳಗ್ಗೆ 9 ಗಂಟೆಗೆ ಆರಂಭವಾದ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕೆಜಿಎಫ್ ಹುತಾತ್ಮರ ಸ್ಮಾರಕದಿಂದ ತಂದ ಜ್ಯೋತಿಯನ್ನು ಸಮ್ಮೇಳನದ ಮೈದಾನದಲ್ಲಿ ಬೆಳಗಿಸಲಾಯಿತು. ನಂತರ ರೆಡ್ ಆರ್ಮಿ ಸದಸ್ಯರಿಂದ ಗೌರವ ವಂದನೆ ಮತ್ತು ನಂತರ ಪುಷ್ಪ ನಮನ ಕಾರ್ಯಕ್ರಮ ನಡೆಯಿತು.

‘ರಂಜನಾ ನೀರುಲಾ – ರಘುನಾಥ್ ಸಿಂಗ್’ ವೇದಿಕೆಯನ್ನು ಪ್ರತಿನಿಧಿಗಳ ಸಭೆಯ ಉದ್ಘಾಟನೆ ಮಾಡಿದ ಸಿಐಟಿಯು ಪ್ರಧಾನ ಕಾರ್ಯದರ್ಶಿ ತಪನ್ ಸೇನ್‌ ಮುಖ್ಯ ಭಾಷಣ ಮಾಡಿದರು. ವಿಶ್ವ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪಂಬಿಸ್ ಕಿರಿಟ್ರಿಸ್ ಮತ್ತು ಸಿಐಟಿಯು ಮುಖಂಡರು ಅಭಿನಂದನಾ ಭಾಷಣ ಮಾಡಿದರು.

ಹೈಟೆಕ್ ನಗರವಾದ ಬೆಂಗಳೂರಿನಲ್ಲಿ ನಡೆಯುತ್ತಿರುವ ಸಮ್ಮೇಳನವು ಆಧುನಿಕ ಕಾಲದ ಸವಾಲುಗಳನ್ನು ಮುಂದಕ್ಕೆ ಹೇಗೆ ಎದುರಿಸುತ್ತದೆ ಎಂಬುದರ ಕುರಿತು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ. ಜೊತೆಗೆ ಕಾರ್ಮಿಕ-ರೈತ ಐಕ್ಯ ಪ್ರತಿಭಟನೆಗಳ ಯಶಸ್ಸಿನಿಂದ ಪಡೆದ ಪಾಠಗಳನ್ನು ಅಳವಡಿಸಿಕೊಂಡು, ಐಕ್ಯ ಹೋರಾಟವನ್ನು ಬಲಪಡಿಸುವ ಮಾರ್ಗಗಳ ಬಗ್ಗೆ ಸಮ್ಮೇಳನವು ಚರ್ಚಿಸಲಿದೆ.

ಮೋದಿ ಸರಕಾರದ ನವ ಉದಾರವಾದಿ ನೀತಿಗಳ ವಿರುದ್ಧ ಐಕ್ಯ ಹೋರಾಟದ ಕ್ರಮದ ಬಗ್ಗೆ ಕೂಡಾ ಸಮ್ಮೇಳನವೂ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ.

ಸಮ್ಮೇಳನದಲ್ಲಿ ದೇಶಾದ್ಯಂತ 2000 ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ. ಐದು ದಿನಗಳ ಸಮ್ಮೇಳನವು ಜನವರಿ 22ರ ಭಾನುವಾರ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಸಭೆಯೊಂದಿಗೆ ಮುಕ್ತಾಯಗೊಳ್ಳಲಿದೆ.

ಇದನ್ನೂ ಓದಿ: ಕಾರ್ಮಿಕರಿಗೆ ಕೂಲಿ | ಕೇರಳ, ಜಮ್ಮುಕಾಶ್ಮೀರ ಟಾಪ್‌‌; ಗುಜರಾತ್‌, ಮಧ್ಯಪ್ರದೇಶ ಅತ್ಯಂತ ಕಡಿಮೆ – RBI ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...