Homeಮುಖಪುಟತೆಲಂಗಾಣ ಬಿಜೆಪಿ ಅಧ್ಯಕ್ಷನ ಮಗನಿಂದ ವಿದ್ಯಾರ್ಥಿ ಮೇಲೆ ಹಲ್ಲೆ; ‘ಮಕ್ಕಳ ಗಲಾಟೆ’ ಎಂದ ತಂದೆ!

ತೆಲಂಗಾಣ ಬಿಜೆಪಿ ಅಧ್ಯಕ್ಷನ ಮಗನಿಂದ ವಿದ್ಯಾರ್ಥಿ ಮೇಲೆ ಹಲ್ಲೆ; ‘ಮಕ್ಕಳ ಗಲಾಟೆ’ ಎಂದ ತಂದೆ!

ಒಂದು ದಿನದ ಹಿಂದೆ ಕೂಡಾ ಬೇರೊಬ್ಬ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದ ವಿಡಿಯೊ ವೈರಲ್ ಆಗಿತ್ತು

- Advertisement -
- Advertisement -

ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಅವರ ಪುತ್ರ ಬಂಡಿ ಭಗೀರಥ, ವಿದ್ಯಾರ್ಥಿಯೊಬ್ಬರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆಗಿತ್ತು. ಇದಾಗಿ ಒಂದೇ ದಿನದಲ್ಲಿ ಭಗೀರಥ ಮತ್ತು ಆತನ ಗೆಳೆಯರ ಗುಂಪು ಮತ್ತೊಬ್ಬ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ಮತ್ತೊಂದು ವಿಡಿಯೋ ಕೂಡಾ ವೈರಲ್ ಆಗಿದೆ.

“ಸಂತ್ರಸ್ತ ಬೇರೆಯೆ ಮತ್ತೊಬ್ಬ ವಿದ್ಯಾರ್ಥಿ ಎಂದು ತೋರುತ್ತಿದೆ. ತನಿಖೆ ನಡೆಯುತ್ತಿದೆ. ನಾವು ಎಲ್ಲಾ ವಿವರಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ಬಾಲನಗರ ವಲಯದ ಉಪ ಪೊಲೀಸ್ ಆಯುಕ್ತ ಜಿ. ಸಂದೀಪ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೊಲೀಸರಿಂದ ಘಟನೆಯ ವೀಡಿಯೊವನ್ನು ಪಡೆದಿದ್ದೇವೆ. ಆದರೆ ಸಂತ್ರಸ್ತ ವಿದ್ಯಾರ್ಥಿಯನ್ನು ಗುರುತಿಸಲು ಸಾಧ್ಯವಾಗಲಿಲ್ಲ ಎಂದು ಮಹೀಂದ್ರಾ ವಿಶ್ವವಿದ್ಯಾಲಯದ ಪ್ರೊಫೆಸರ್ ಸುರೇಶ್ ರಕ್ಷಿತ್ ಅವರು ಹೇಳಿದ್ದಾರೆ.

“ಪ್ರಸ್ತುತ ರಜೆ ಇರುವುದರಿಂದ ಕಾಲೇಜು ನಡೆಯುತ್ತಿಲ್ಲ. ಹಾಗಾಗಿ ವಿದ್ಯಾರ್ಥಿಯ ವಿವರಗಳನ್ನು ಗುರುತಿಸಲು ಮತ್ತು ಪರಿಶೀಲಿಸಲು ನಮಗೆ ಸಾಧ್ಯವಾಗುತ್ತಿಲ್ಲ. ಆದಾಗ್ಯೂ ನಾವು ಹೊಸ ವೀಡಿಯೊದ ಬಗ್ಗೆ ಗಮನ ಹರಿಸಿದ್ದು, ಭಗೀರಥ ವಿರುದ್ಧ ಅಗತ್ಯ ಕ್ರಮಕ್ಕಾಗಿ ಶಿಸ್ತು ಸಮಿತಿಯೊಂದಿಗೆ ಮಾತನಾಡಿದ್ದೇವೆ” ಎಂದು ಪ್ರೊಫೆಸರ್ ಸುರೇಶ್ ಹೇಳಿದ್ದಾರೆ.

ಹೊಸದಾಗಿ ವೈರಲ್ ಆಗುತ್ತಿರುವ ವೀಡಿಯೋಗೆ ಪ್ರತಿಕ್ರಿಯಿಸಿರುವ ಬಿಎಸ್‌ಪಿ ತೆಲಂಗಾಣ ಮುಖ್ಯಸ್ಥ ಆರ್‌.ಎಸ್‌. ಪ್ರವೀಣ್‌ಕುಮಾರ್‌, ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಅವರು ಬಿಜೆಪಿ ಜೊತೆ ‘ನೆರಳಿನ ಯುದ್ದ’ ಮಾಡುವ ಬದಲು ಭಗೀರಥನನ್ನು ಬಂಧಿಸುವಂತೆ ಸವಾಲು ಹಾಕಿದ್ದಾರೆ.

ಶ್ರೀರಾಮ್ ಎಂಬ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆದ ನಂತರ, ಮಂಗಳವಾರ ಕಾಲೇಜು ಆಡಳಿತ ಮಂಡಳಿಯ ದೂರಿನ ಮೇರೆಗೆ ದುಂಡಿಗಲ್ ಪೊಲೀಸರು ಬಂಡಿ ಸಂಜಯ್ ಅವರ ಮಗ ಬಂಡಿ ಭಗೀರಥ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು.

ಪೊಲೀಸರು ಭಾರತೀಯ ದಂಡ ಸಂಹಿತೆಯ 341, 323, 504 ಮತ್ತು ತೆಲಂಗಾಣ ರಾಜ್ಯ ರ್‍ಯಾಗಿಂಗ್‌ ನಿಷೇಧ ಕಾಯಿದೆಯ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಹಲ್ಲೆಯ ವಿಡಿಯೋ ವೈರಲ್ ಆದ ನಂತರ, ಸಂತ್ರಸ್ತ ಶ್ರೀರಾಮ್, ತನಗೆ ಥಳಿಸಿದ ಹುಡುಗಿಯೊಂದಿಗೆ ಅನುಚಿತವಾಗಿ ವರ್ತಿಸಿದೆ ಎಂದು ತಪ್ಪೊಪ್ಪಿಕೊಂಡಿದ್ದು, ಅದಕ್ಕಾಗಿ ಹಲ್ಲೆ ನಡೆಸಲಾಗಿದೆ ಎಂದು ಹೇಳಿ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ.

“ನಾನು ಭಗೀರಥನ ಸ್ನೇಹಿತನ ಸಹೋದರಿಯೊಂದಿಗೆ ಅನುಚಿತವಾಗಿ ವರ್ತಿಸಿದೆ. ನಾನು ಅವಳಿಗೆ ಕರೆ ಮಾಡಿ, ಪ್ರೇಮ ನಿವೇದನೆಯ ಸಂದೇಶ ಕಳುಹಿಸಿದೆ. ವಿಷಯ ತಿಳಿದ ಭಗೀರಥ ನನ್ನನ್ನು ನೋಡಲು ಬಂದಿದ್ದು ನಮ್ಮಿಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ವಾದದ ನಂತರ, ಅವರು ನನಗೆ ಕಪಾಳಮೋಕ್ಷ ಮಾಡಿದರು” ಎಂದು ಹೇಳಿದ್ದಾರೆ.

“ಇದು ಹಿಂದಿನ ಘಟನೆಯಾಗಿದ್ದು, ನಮ್ಮ ನಡುವೆ ಈಗ ಯಾವುದೇ ಸಮಸ್ಯೆಗಳಿಲ್ಲ. ನಾವೀಗ ಸ್ನೇಹಿತರಾಗಿದ್ದು, ಬ್ಯಾಚ್‌ಮೇಟ್‌ಗಳಾಗಿದ್ದೇವೆ. ಆ ಘಟನೆಯನ್ನು ನಾವೀಗ ಮರೆತಿದ್ದು, ವೀಡಿಯೊ ನಿಷ್ಪ್ರಯೋಜಕವಾಗಿದೆ. ಈಗ ವೀಡಿಯೊವನ್ನು ಏಕೆ ಮುಂದೆ ತರಲಾಗುತ್ತಿದೆ? ಇದು ಕೇವಲ ನಮ್ಮ ನಡುವೆ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸಲು ಮತ್ತು ನಮ್ಮನ್ನು ಬ್ಲ್ಯಾಕ್‌ಮೇಲ್ ಮಾಡಲು ಬಿಟ್ಟ ವಿಡಿಯೊ” ಎಂದು ವಿಡಿಯೋದಲ್ಲಿ ಶ್ರೀರಾಮ್ ಹೇಳಿದ್ದಾರೆ.

ಕರೀಂನಗರ ಸಂಸದ ಮತ್ತು ಬಿಜೆಪಿ ತೆಲಂಗಾಣ ಮುಖ್ಯಸ್ಥ ಬಂಡಿ ಸಂಜಯ್ ಅವರು ತಮ್ಮ ಪುತ್ರನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು, ‘ಮಕ್ಕಳ ಗಲಾಟೆ’ ಎಂದು ಮಂಗಳವಾರ ಹೇಳಿದ್ದು, ಘಟನೆಯನ್ನು ತಳ್ಳಿಹಾಕಿದ್ದಾರೆ.

“ನಿಮಗೆ (ಕೆಸಿಆರ್) ಧೈರ್ಯವಿದ್ದರೆ ನನ್ನೊಂದಿಗೆ ರಾಜಕೀಯ ಮಾಡಿ. ನನ್ನನ್ನು ನಿಭಾಯಿಸಲು ಸಾಧ್ಯವಾಗದ ಕಾರಣ ನನ್ನ ಮಗನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅವರು ರಾಜಕಾರಣಿಗಳಾಗದ ಹೊರತು ರಾಜಕೀಯಕ್ಕಾಗಿ ಕುಟುಂಬವನ್ನು ಗುರಿಯಾಗಿಸಿಕೊಳ್ಳಬೇಡಿ” ಎಂದು ಬಂಡಿ ಸಂಜಯ್ ಹೇಳಿದ್ದಾರೆ. ಘಟನೆಯು ಹಳೆಯದಾಗಿದ್ದು, ಕೆಲವು ದಿನಗಳ ಹಿಂದೆ ನಡೆದಿದೆ ಎಂದು ತರ್ಕಿಸಲು ಪ್ರಯತ್ನಿಸಿದ್ದಾರೆ.

ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಉದ್ದೇಶಪೂರ್ವಕವಾಗಿ ತಮ್ಮ ಪುತ್ರನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿರುವ ಸಂಜಯ್, “ಮಕ್ಕಳು ಜಗಳವಾಡಿಕೊಂಡು ತಿದ್ದಿಕೊಳ್ಳುತ್ತಾರೆ. ನಿಮ್ಮ ಸಮಸ್ಯೆ ಏನು? ಅವರ ವಿರುದ್ಧ ಯಾಕೆ ಕೇಸ್ ಹಾಕಿದ್ದೀರಿ? ಅದರ ಅವಶ್ಯಕತೆ ಏನು?” ಎಂದು ಪ್ರಶ್ನಿಸಿದ್ದಾರೆ.

ಘಟನೆಯಲ್ಲಿ ವಿಶ್ವವಿದ್ಯಾನಿಲಯ ಕೂಡಾ ತಪ್ಪು ಮಾಡಿದೆ ಎಂದು ಹೇಳಿಕೊಂಡಿರುವ ಬಂಡಿ ಸಂಜಯ್, ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಿ, ಅದರ ಬಗ್ಗೆ ಪೋಷಕರಿಗೆ ತಿಳಿಸುವ ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸಿದ್ದೀರಾ ಎಂದು ಕೇಳಿದ್ದಾರೆ.

ತನ್ನ ಮಗನ ವಿರುದ್ಧ ದಾಖಲಾದ ಪ್ರಕರಣವು ಇತರ ಸಮಸ್ಯೆಗಳನ್ನು ದಿಕ್ಕು ತಪ್ಪಿಸುವ ಉದ್ದೇಶದಿಂದ ಕೂಡಿದೆ ಎಂದು ಸಂಜಯ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಫೆಬ್ರವರಿ 17 ರಂದು ಅಂಬೇಡ್ಕರ್‌‌ ಹೆಸರಿನ ನೂತನ ಸೆಕ್ರೆಟರಿಯೇಟ್ ಉದ್ಘಾಟಿಸಲಿರುವ ತೆಲಂಗಾಣ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...