Homeಮುಖಪುಟಬಿಜೆಪಿ ಸಂಸದನಿಂದ ಕ್ರೀಡಾಪಟು & ತರಬೇತುದಾರರಿಗೆ ಲೈಂಗಿಕ ಕಿರುಕುಳ: ಪದಕ ವಿಜೇತ ಕುಸ್ತಿಪಟುಗಳಿಂದ ಪ್ರತಿಭಟನೆ

ಬಿಜೆಪಿ ಸಂಸದನಿಂದ ಕ್ರೀಡಾಪಟು & ತರಬೇತುದಾರರಿಗೆ ಲೈಂಗಿಕ ಕಿರುಕುಳ: ಪದಕ ವಿಜೇತ ಕುಸ್ತಿಪಟುಗಳಿಂದ ಪ್ರತಿಭಟನೆ

- Advertisement -
- Advertisement -

ಭಾರತದ ಪದಕ ವಿಜೇತ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್, ಅಂಶು ಮಲಿಕ್ ಮತ್ತು ಬಜರಂಗ್ ಪುನಿಯಾ ಕೈಸರ್‌ಗಂಜ್‌ನ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ದೈಹಿಕ ಕಿರುಕುಳದ ಆರೋಪ ಮಾಡಿದ್ದಾರೆ. ಕ್ರೀಡಾಪಟುಗಳು ತಮ್ಮ ವಿರುದ್ಧ ನಡೆದ ದೌರ್ಜನ್ಯ ವಿರೋಧಿಸಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಸಂಸದ ಬ್ರಿಜ್ ಭೂಷಣ್ ಅವರು ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷ ಕೂಡಾ ಆಗಿದ್ದು, ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಒಂದು ವೇಳೆ ನಿಜವಾಗಿಯೂ ಅಂತಹ ಘಟನೆ ನಡೆದಿದ್ದರೆ, ತಾನು ನೇಣು ಹಾಕಿಕೊಳ್ಳುವುದಾಗಿ ಹೇಳಿದ್ದಾರೆ. 2021 ರಲ್ಲಿ, ರಾಂಚಿಯಲ್ಲಿ ನಡೆದ 15 ವರ್ಷದೊಳಗಿನವರ ರಾಷ್ಟ್ರೀಯ ಪಂದ್ಯಾವಳಿಯಲ್ಲಿ ಬ್ರಿಜ್ ಭೂಷಣ್ ಅವರು ಕುಸ್ತಿಪಟುವಿಗೆ ಕಪಾಳಮೋಕ್ಷ ಮಾಡುವ ವಿಡಿಯೊ ಹೊರಹೊಮ್ಮಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಭಟನೆ ನಡೆಸಿದ ಕುಸ್ತಿಪಟುಗಳು, ಒಕ್ಕೂಟದ ಅಧ್ಯಕ್ಷರು ‘ಸರ್ವಾಧಿಕಾರ’ ನಡೆಸುತ್ತಿದ್ದು, ಕುಸ್ತಿಪಟುಗಳ ಮೇಲಿನ ದೌರ್ಜನ್ಯವು ವರ್ಷಗಳಿಂದ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಸುಮಾರು 30 ಮಂದಿ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ್ದು, ಅದರಲ್ಲಿ ಪ್ರಮುಖವಾಗಿ ಸರಿತಾ ಮೋರ್, ಸಂಗೀತಾ ಫೋಗಟ್, ಸತ್ಯವರ್ತ್ ಮಲಿಕ್, ಜಿತೇಂದರ್ ಕಿನ್ಹಾ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತ ಸುಮಿತ್ ಮಲಿಕ್ ಕೂಡ ಇದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

“ಮಹಿಳಾ ಕುಸ್ತಿಪಟುಗಳು ರಾಷ್ಟ್ರೀಯ ಶಿಬಿರಗಳಲ್ಲಿ ತರಬೇತುದಾರರಿಂದ ಮತ್ತು ಡಬ್ಲ್ಯುಎಫ್‌ಐ ಅಧ್ಯಕ್ಷರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಾರೆ” ಎಂದು ವಿನೇಶ್ ಫೋಗಟ್ ಹೇಳಿದ್ದಾರೆ. ಹಲವು ಹುಡುಗಿಯರ ಲೈಂಗಿಕ ಕಿರುಕುಳದಲ್ಲಿ ಡಬ್ಲ್ಯುಎಫ್‌ಐ ಅಧ್ಯಕ್ಷರೂ ಭಾಗಿಯಾಗಿದ್ದಾರೆ ಎಂದು ಅವರು ಒತ್ತಿ ಹೇಳಿದ್ದಾರೆ.

ಫೆಡರೇಶನ್‌ನ ‘ಮೆಚ್ಚಿನವರು’ ಎಂದು ಪರಿಗಣಿಸುವ ಕೆಲವು ತರಬೇತುದಾರರು ಮಹಿಳಾ ತರಬೇತುದಾರರೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ ಎಂದು ವಿನೇಶ್ ಆರೋಪಿಸಿದ್ದಾರೆ.

“ಇಂದು ನಾನು ಇದನ್ನು ಹೇಳಿದ್ದೇನೆ, ನಾಳೆ ನಾನು ಜೀವಂತವಾಗಿರುತ್ತೇನೆ ಎಂದು ನನಗೆ ತಿಳಿದಿಲ್ಲ. ಡಬ್ಲ್ಯುಎಫ್‌ಐನಲ್ಲಿರುವ ಜನರು ತುಂಬಾ ಶಕ್ತಿಶಾಲಿಗಳು” ಎಂದು ವಿನೇಶ್ ಹೇಳಿರುವುದನ್ನು ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಹರಿಯಾಣದವರಾದ ವಿನೇಶ್‌ ಫೋಗಟ್ ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್ ಎರಡರಲ್ಲೂ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟುವಾಗಿದ್ದಾರೆ. ಅವರು ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಅನೇಕ ಚಿನ್ನಗಳನ್ನು ಗೆದ್ದಿದ್ದಾರೆ. ವಿನೇಶ್ ಅವರ ಸೋದರಸಂಬಂಧಿ, ಕುಸ್ತಿಪಟು ಬಬಿತಾ ಫೋಗಟ್ ಮತ್ತು ಅವರ ಚಿಕ್ಕಪ್ಪ ಮಹಾವೀರ್ ಫೋಗಟ್ ಅವರು 2020 ರಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದರು.

ಒಂದು ದಶಕದಿಂದ ನನ್ನ ಸಮಸ್ಯೆಗಳನ್ನು ಆಲಿಸಲು ಫೆಡರೇಶನ್‌ ಜೊತೆಗೆ ಪ್ರಯತ್ನಿಸುತ್ತಿದ್ದೇನೆ ಎಂದು ವಿನೇಶ್ ಹೇಳಿದ್ದಾರೆ. ತಾನು ಮತ್ತು ಇತರ ಕುಸ್ತಿಪಟುಗಳು ಪ್ರಧಾನ ಮಂತ್ರಿ ಮತ್ತು ಅದನ್ನು ಕೇಳಬಹುದಾದ ಯಾವುದೇ ಹೈಕೋರ್ಟ್‌ಗೆ “ಸಾಕ್ಷ್ಯವನ್ನು ಸಲ್ಲಿಸಲು” ಸಿದ್ಧ ಎಂದು ಅವರು ANI ಗೆ ತಿಳಿಸಿದ್ದಾರೆ.

“ಇದು ನ್ಯಾಯೋಚಿತವಲ್ಲ ಮತ್ತು ನಾವು ಇದನ್ನು ಮೌನವಾಗಿ ಸಹಿಸಿಕೊಳ್ಳುತ್ತಿದ್ದೇವೆ. ಆದರೆ ಇನ್ನು ಮುಂದೆ ಅದು ಸಾಧ್ಯವಿಲ್ಲ. ಭಾರತೀಯ ಕುಸ್ತಿ ಒಕ್ಕೂಟದಿಂದ ಕುಸ್ತಿಪಟುಗಳಿಗೆ ಕಿರುಕುಳ ನೀಡಲಾಗುತ್ತಿದೆ. ಡಬ್ಲ್ಯುಎಫ್‌ಐನ ಭಾಗವಾಗಿರುವವರಿಗೆ ಕ್ರೀಡೆಯ ಬಗ್ಗೆ ಏನೂ ತಿಳಿದಿಲ್ಲ” ಎಂದು ಒಲಿಂಪಿಕ್‌ನಲ್ಲಿ ಕಂಚು ಗೆದ್ದಿರುವ ಬಜರಂಗ್ ಪುನಿಯಾ ತಿಳಿಸಿದ್ದಾರೆ.

ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಕೂಡಾ, “ವಿವರಗಳನ್ನು ಬಹಿರಂಗಪಡಿಸಲು ಹಾಗೂ ಪ್ರಧಾನ ಮಂತ್ರಿ ಮತ್ತು ಗೃಹ ಸಚಿವರೊಂದಿಗೆ ಮಾತನಾಡಲು ಸಿದ್ಧರಾಗಿದ್ದೇವೆ. ಹೊಸ ಕುಸ್ತಿಪಟುಗಳ ಭವಿಷ್ಯವು ಸುರಕ್ಷಿತವಾಗಿರಲು ಇಡೀ ಒಕ್ಕೂಟವನ್ನು ರದ್ದು ಮಾಡಬೇಕು. ಹೊಸ ಒಕ್ಕೂಟ ಅಸ್ತಿತ್ವಕ್ಕೆ ಬರಬೇಕು” ಎಂದು ಹೇಳಿದ್ದಾರೆ.

ಕುಸ್ತಿ ಪಟುಗಳ ಆರೋಪ ನಿರಾಕರಿಸಿದ ಬಿಜೆಪಿ ಸಂಸದ

ಕುಸ್ತಿ ಪಟುಗಳ ಆರೋಪ ನಿರಾಕರಿಸಿದ ಬಿಜೆಪಿ ಸಂಸದ ಬ್ರಿಜ್‌‌ಭೂಷಣ್‌, “ವಿನೇಶ್ ಫೋಗಟ್ ಅವರು ಒಲಿಂಪಿಕ್ಸ್‌ನಲ್ಲಿ ಕಂಪನಿಯ ಲೋಗೋ ಇರುವ ಬಟ್ಟೆಯನ್ನು ಏಕೆ ಧರಿಸಿದ್ದರು. ಫೆಡರೇಶನ್ ಯಾವುದಾರೂ ಕ್ರೀಡಾಪಟುವಿಗೆ ಕಿರುಕುಳ ನೀಡಿದೆ ಎಂದು ಹೇಳುವ ಯಾರಾದರೂ ಇದ್ದಾರೆಯೇ?. ಲೈಂಗಿಕ ಕಿರುಕುಳದ ಯಾವುದೇ ಘಟನೆ ನಡೆದಿಲ್ಲ. ಒಂದು ವೇಳೆ ಅಂತಹ ಘಟನೆ ಸಂಭವಿಸಿದಲ್ಲಿ ತಾನು ನೇಣು ಹಾಕಿಕೊಳ್ಳುತ್ತೇನೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...