Homeಮುಖಪುಟಸುದ್ದಿ ಮೂಲಗಳನ್ನು ಬಹಿರಂಗಪಡಿಸುವುದರಲ್ಲಿ ಪತಕರ್ತರಿಗೆ ವಿನಾಯಿತಿ ಇಲ್ಲ: ಸಿಬಿಐ ಕೋರ್ಟ್‌

ಸುದ್ದಿ ಮೂಲಗಳನ್ನು ಬಹಿರಂಗಪಡಿಸುವುದರಲ್ಲಿ ಪತಕರ್ತರಿಗೆ ವಿನಾಯಿತಿ ಇಲ್ಲ: ಸಿಬಿಐ ಕೋರ್ಟ್‌

- Advertisement -
- Advertisement -

ದೆಹಲಿಯ ವಿಶೇಷ ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯವು, ಬುಧವಾರ ಸಂಸ್ಥೆಯ “ಮುಚ್ಚಳಿಕೆಯ ವರದಿಯನ್ನು” ತಿರಸ್ಕರಿಸಿದೆ ಮತ್ತು ತನಿಖಾ ಸಂಸ್ಥೆಗಳಿಗೆ ಪತ್ರಕರ್ತರು ತಮ್ಮ ಸುದ್ದಿ ಮೂಲಗಳನ್ನು ಬಹಿರಂಗಪಡಿಸುವುದರಲ್ಲಿ ಭಾರತದಲ್ಲಿ ಯಾವುದೇ ಶಾಸನಬದ್ಧ ವಿನಾಯಿತಿ ಇಲ್ಲ ಎಂದು ಹೇಳಿದೆ.

“ಮುಚ್ಚಳಿಕೆಯ ವರದಿ”ಯನ್ನು ತಿರಸ್ಕರಿಸಿದ ಸಿಬಿಐ ನ್ಯಾಯಾಲಯವು ಈ ವಿಷಯದ ಬಗ್ಗೆ ಹೆಚ್ಚಿನ ತನಿಖೆಗೆ ನಿರ್ದೇಶಿಸಿದೆ.

ಇದನ್ನೂ ಓದಿ: ‘ಮತ್ತೆ ದಾಳಿ ನಡೆಸಿದ ಸಿಬಿಐ’: ದೆಹಲಿ ಡಿಸಿಎಂ ಸಿಸೋಡಿಯಾ ಆರೋಪ

ಯಾವುದೇ ಪ್ರಕರಣದಲ್ಲಿ ತನಿಖಾ ಸಂಸ್ಥೆಯು ಸಂಬಂಧಿತ ಪತ್ರಕರ್ತರ ಗಮನಕ್ಕೆ ತರಬಹುದು. ಆ ಬಗ್ಗೆ ಪತ್ರಕರ್ತರು ತಮ್ಮ ಸುದ್ದಿ ಮೂಲಗಳನ್ನು ಬಹಿರಂಗಪಡಿಸುವುದು ತನಿಖಾ ಪ್ರಕ್ರಿಯೆಗಳಿಗೆ ಅತ್ಯಗತ್ಯ ಮತ್ತು ಮುಖ್ಯವಾಗಿರುತ್ತದೆ ಎಂದು ನ್ಯಾಯಾಲಯ ಹೇಳಿದೆ.

ತನಿಖಾ ಸಂಸ್ಥೆಯು ಭಾರತೀಯ ದಂಡ ಸಂಹಿತೆ (IPC) ಮತ್ತು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ (CrPC) ಯ ವಿಭಾಗಗಳ ಅಡಿಯಲ್ಲಿ ಬರುತ್ತದೆ. ಸಾರ್ವಜನಿಕ ವ್ಯಕ್ತಿಗಳು ತನಿಖೆಯಲ್ಲಿ ಕಡ್ಡಾಯವಾಗಿ ಸೇರಿಕೊಳ್ಳಬೇಕೆಂದು ತನಿಖಾ ಸಂಸ್ಥೆಯು ಅಭಿಪ್ರಾಯಪಟ್ಟರೆ ಅಂತಹ ಸಾರ್ವಜನಿಕ ವ್ಯಕ್ತಿಗಳು ಗೌಪ್ಯವಾಗಿರುತ್ತಾರೆ. ಸಾರ್ವಜನಿಕ ವ್ಯಕ್ತಿಗಳು ತನಿಖೆಗೆ ಸೇರಲು ಕಾನೂನುಬದ್ಧ ಕರ್ತವ್ಯದಲ್ಲಿರುತ್ತಾರೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

ರೌಸ್ ಅವೆನ್ಯೂ ಜಿಲ್ಲಾ ನ್ಯಾಯಾಲಯದ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (CMM) ಅಂಜನಿ ಮಹಾಜನ್ ಅವರು, ದಾಖಲೆಗಳ ನಕಲಿ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅವಲೋಕನ ಮಾಡಿ, ಸಿಬಿಐ ಸಲ್ಲಿಸಿದ “ಮುಚ್ಚುಳಿಕೆ ವರದಿ”ಯನ್ನು ತಿರಸ್ಕರಿಸಿದರು.

ಆಪಾದಿತ ನಕಲಿ ದಾಖಲೆಗಳನ್ನು ಪ್ರಕಟಿಸಿದ ಮತ್ತು ಪ್ರಸಾರ ಮಾಡಿದ ಪತ್ರಕರ್ತರು ತಮ್ಮ ಮೂಲವನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. ಆದ್ದರಿಂದ ಈ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಸಂಸ್ಥೆ ಹೇಳಿದೆ.

ಮುಲಾಯಂ ಸಿಂಗ್ ಯಾದವ್ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಆಪಾದಿತ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ಪತ್ರಿಕೆಯೊಂದು ಪ್ರಕಟಿಸಿತು. ಬಳಿಕ ಕೆಲವು ಚಾನೆಲ್‌ಗಳು ಫೆಬ್ರವರಿ 9, 2009 ರಂದು ನಡೆದ ಸುಪ್ರೀಂ ಕೋರ್ಟ್‌ ವಿಚಾರಣೆಗೆ ಒಂದು ದಿನ ಮೊದಲೇ ಪ್ರಸಾರ ಮಾಡಿದ್ದವು. ಇದು ಸಿಬಿಐ ಪ್ರಕರಣಕ್ಕೆ ಸಂಬಂಧಿಸಿದ ವಿಷಯವಾಗಿದೆ.

ಕೆಲವು ಅಪರಿಚಿತ ವ್ಯಕ್ತಿಗಳು ಏಜೆನ್ಸಿಯ ಪ್ರತಿಷ್ಠೆಗೆ ಕಳಂಕ ತರಲು ನಕಲಿ ಮತ್ತು ಕಪೋಲಕಲ್ಪಿತ ವರದಿಯನ್ನು ಸಿದ್ಧಪಡಿಸಿದ್ದಾರೆ ಎಂದು ಆರೋಪಿಸಿ ಸಿಬಿಐ ಎಫ್‌ಐಆರ್ ದಾಖಲಿಸಿದೆ. ತನಿಖೆಯ ನಂತರ, ಸಿಬಿಐ ಈ ಪ್ರಕರಣದ ಅಂತಿಮ ವರದಿಯನ್ನು ಸಲ್ಲಿಸಿತು. ಆದರೆ ಸಿಬಿಐನ ಅಂತಿಮ ವರದಿಯನ್ನು ತಿರಸ್ಕರಿಸಿದ ನ್ಯಾಯಾಲಯವು, ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡಯ್ಯಲಾಗಿಲ್ಲ ಹಾಗಾಗಿ ಪತ್ರಕರ್ತರನ್ನು ಪ್ರಶ್ನಿಸಲು ಏಜೆನ್ಸಿಗೆ ನಿರ್ದೇಶಿಸಿದೆ.

ತನಿಖೆಯ ಸಂದರ್ಭದಲ್ಲಿ ಸಂಬಂಧಪಟ್ಟ ಮಾಧ್ಯಮ ಸಂಸ್ಥೆಗಳಿಂದ ಸೂಕ್ತ ದಾಖಲೆಗಳನ್ನು ಕೇಳಲಾಗಿದೆ ಆದರೆ ಅವರು ಯಾವುದೇ ದಾಖಲೆಗಳನ್ನು ನೀಡಿಲ್ಲ ಎಂದು ಸಿಬಿಐ ವರದಿಯಲ್ಲಿ ತಿಳಿಸಿದೆ.

ವರದಿಯನ್ನು ತಿರಸ್ಕರಿಸಿದ ನ್ಯಾಯಾಲಯವು, “ಅಗತ್ಯವಾದ ಮಾಹಿತಿಯನ್ನು ಒದಗಿಸಲು ಮತ್ತು ಅವರ ಗಮನಕ್ಕೆ ತರಲು ಸಂಬಂಧಪಟ್ಟ ಪತ್ರಕರ್ತರು/ಸುದ್ದಿ ಸಂಸ್ಥೆಗಳಿಗೆ 91 Cr.P.C. ಇತ್ಯಾದಿಗಳ ಮೂಲಕ ನೋಟಿಸ್‌ಗಳನ್ನು ನೀಡಬೇಕು. ಈಸಂದರ್ಭದಲ್ಲಿ ಸಿಬಿಐ ತನ್ನ ಅಧಿಕಾರ ಚಲಾಯಿಸಬೇಕು” ಎಂದು ಹೇಳಿದೆ.

ಉದ್ದೇಶಪೂರ್ವಕ ನಕಲಿ ದಾಖಲೆಗಳ ಆಧಾರದಲ್ಲಿ ಪತ್ರಕರ್ತರು ಸುದ್ಧಿಯನ್ನು ಬಿತ್ತರಿಸಿದ್ದಾರೆ. ಇದೀಗ ಸಂಬಂಧಪಟ್ಟ ಪತ್ರಕರ್ತರಿಂದ ಮೂಲಗಳ ಅಂಶದ ಕುರಿತು ಹೆಚ್ಚಿನ ವಿಚಾರಣೆಯ ಅಗತ್ಯವಿದೆ ಎಂದು ನ್ಯಾಯಾಲಯವು ಆದೇಶದಲ್ಲಿ ತಿಳಿಸಿದೆ.

“ಅಂತಿಮ ವರದಿಯು ತನಿಖೆಯ ಅಂಶದ ಬಗ್ಗೆ ಸಂಪೂರ್ಣವಾಗಿ ಮೌನವಾಗಿದೆ, ಯಾವುದಾದರೂ ತನಿಖೆ ನಡೆಸಿದರೆ, ಅಧಿಕೃತ ದಾಖಲೆ ಅಂದರೆ ವರದಿಯು ಸೀಲ್ಡ್ ಕವರ್‌ನಲ್ಲಿ ಇರಿಸಲಾಗಿದ್ದರೂ ಒಂದು ದಿನದ ಮೊದಲು ಹೇಗೆ ಸೋರಿಕೆಯಾಯಿತು? ಇದನ್ನು ಸಿಬಿಐ ಕಚೇರಿಯಿಂದ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಬೇಕಾಗಿತ್ತು,  ಆದರೆ ಅಂತಿಮವಾಗಿ ಮಾಧ್ಯಮಗಳಿಗೆ ತಲುಪಿತು.

“ಆಪಾದಿತ ಕೃತ್ಯಗಳಲ್ಲಿ ಒಳಗಿನವರು ಭಾಗಿಯಾಗಿರುವ ಬಗ್ಗೆ ತನಿಖೆ ನಡೆಸುವುದು ಮತ್ತು 17 ಪುಟಗಳ ನಕಲಿ ಪರಿಶೀಲನೆ ಟಿಪ್ಪಣಿಯನ್ನು ಸಿದ್ಧಪಡಿಸಿರುವುದನ್ನು ಸೇರಿದಂತೆ, ಅಪರಾಧಿಗಳು ಅಧಿಕೃತ ದಾಖಲೆಗಳನ್ನು ಪಡೆಯಲು ಯಾವ ವಿಧಾನ ಅನುಸರಿಸಿದರು ಎನ್ನುವುದರ ಮೇಲೆ ಸಿಬಿಐ ತನಿಖೆ ನಡೆಸಬೇಕು” ಎಂದು ನ್ಯಾಯಾಲಯವು ಹೇಳಿದೆ.

“ಪೂರ್ಣಗೊಳ್ಳದ ಈ ವರದಿಯನ್ನು ತಿರಸ್ಕರಿಸಲಾಗಿದೆ ಮತ್ತು ಪ್ರಸ್ತುತ ಪ್ರಕರಣದಲ್ಲಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲು ಸಿಬಿಐಗೆ ನಿರ್ದೇಶಿಸಿದೆ. ಮಾರ್ಚ್ 24 ರೊಳಗೆ ವರದಿಯನ್ನು ಸಲ್ಲಿಸಬೇಕು” ಎಂದು ಸಂಸ್ಥೆಗೆ ನ್ಯಾಯಾಲಯವು ಸೂಚಿಸಿತು.

ಮುಲಾಯಂ ಸಿಂಗ್ ಯಾದವ್ ಮತ್ತು ಅವರ ಕುಟುಂಬ ಸದಸ್ಯರು ಸಂಪಾದಿಸಿರುವ ಆಸ್ತಿಗಳ ಬಗ್ಗೆ ಪ್ರಾಥಮಿಕ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಮಾರ್ಚ್ 2007 ರಲ್ಲಿ ಸಿಬಿಐಗೆ ಸೂಚಿಸಿತ್ತು. ಅದರ ಅನುಸರಣೆಯಲ್ಲಿ, ಮಾರ್ಚ್ 5, 2007 ರಂದು ಪ್ರಾಥಮಿಕ ವಿಚಾರಣೆಯನ್ನು ನೋಂದಾಯಿಸಲಾಯಿತು ಮತ್ತು ಅಕ್ಟೋಬರ್ 26, 2007 ರಂದು ಮುಕ್ತಾಯಗೊಳಿಸಲಾಯಿತು.

ಸಂಗ್ರಹಿಸಿದ ಪುರಾವೆಗಳ ಆಧಾರದ ಮೇಲೆ ವರದಿಯನ್ನು ಸಿದ್ಧಪಡಿಸಲಾಯಿತು ಮತ್ತು ಸುಪ್ರೀಂ ಕೋರ್ಟ್ ಮುಂದೆ ಎರಡು ಮುಚ್ಚಿದ ಕವರ್ ಲಕೋಟೆಗಳಲ್ಲಿ ಇರಿಸಲಾಗಿದೆ.

ಫೆಬ್ರವರಿ 9, 2009 ರಂದು, ಅಂದರೆ ನಿಗದಿತ ವಿಚಾರಣೆಯ ದಿನಾಂಕಕ್ಕಿಂತ ಒಂದು ದಿನ ಮುಂಚಿತವಾಗಿ, ಮಾಧ್ಯಮ ಸಂಸ್ಥೆಗಳು ನಕಲಿ ದಾಖಲೆಗಳ ಆಧಾರದ ಮೇಲೆ ಸುದ್ದಿಯನ್ನು ಪ್ರಕಟಿಸಿ ಮತ್ತು ಪ್ರಸಾರ ಮಾಡಿವೆ. ಹಾಗಾಗಿ ಅಪೆಕ್ಸ್ ಕೋರ್ಟ್‌ನಲ್ಲಿ ಅಂತಿಮ ತೀರ್ಪಿಗಾಗಿ ಪ್ರಕ್ರಿಯೆಗಳು ಬಾಕಿ ಉಳಿದಿವೆ ಎಂದು ವಾದಿಸಲಾಗಿದೆ.

ಅಪರಿಚಿತ ವ್ಯಕ್ತಿಗಳು 2008-2009ರ ಅವಧಿಯಲ್ಲಿ ಸಿಬಿಐ ಮತ್ತು ಸಿಬಿಐ ಅಧಿಕಾರಿಗಳ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ನಕಲಿ ದಾಖಲೆ ಸೃಷ್ಟಿಸಿ ಅಸಲಿ, ನಕಲಿ ದಾಖಲೆ ಮುದ್ರಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಆ ದಾಖಲೆಗಳ ಆಧಾರದ ಮೇಲೆ ಪತ್ರಿಕೆಗಳಲ್ಲಿ ಮತ್ತು ಟಿವಿಗಳಲ್ಲಿ ಸುಳ್ಳು ಮತ್ತು ಕಟ್ಟುಕಥೆ ಸುದ್ದಿಗಳನ್ನು ಪ್ರಸಾರ ಮಾಡಿತು.

ನ್ಯೂಸ್ ಚಾನೆಲ್ ಬಳಸಿದ ದಾಖಲೆಗಳು ನಕಲಿ ಎಂದು ಅಂತಿಮ ವರದಿಯಲ್ಲಿ ವಾದಿಸಲಾಗಿದೆ. ಆದರೆ ನಕಲಿ ದಾಖಲೆಗಳ ಮೂಲವನ್ನು ಪತ್ರಕರ್ತರು ಬಹಿರಂಗಪಡಿಸದ ಕಾರಣ ಯಾರು ನಕಲಿ ದಾಖಲೆಗಳನ್ನು ರಚಿಸಿದ್ದಾರೆ ಎಂಬುದು ತಿಳಿಯಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...