Homeಮುಖಪುಟಬಿಜೆಪಿ ನಾಯಕಿ ವಸುಂಧರಾ ರಾಜೇ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ?: ಗೆಹ್ಲೋಟ್‌ಗೆ ಪೈಲಟ್ ಪ್ರಶ್ನೆ

ಬಿಜೆಪಿ ನಾಯಕಿ ವಸುಂಧರಾ ರಾಜೇ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ?: ಗೆಹ್ಲೋಟ್‌ಗೆ ಪೈಲಟ್ ಪ್ರಶ್ನೆ

- Advertisement -
- Advertisement -

“ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ನಾಯಕಿ ವಸುಂಧರಾ ರಾಜೇ ವಿರುದ್ಧ ಕಾಂಗ್ರೆಸ್ ಮಾಡಿದ ಆರೋಪಗಳ ಮೇಲೆ ಕಳೆದ ನಾಲ್ಕು ವರ್ಷಗಳಲ್ಲಿ ಕ್ರಮ ಕೈಗೊಂಡಿಲ್ಲ ಏಕೆ?” ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ಗೆ ಅವರ ಮಾಜಿ ಉಪನಾಯಕ ಸಚೀನ್ ಪೈಲಟ್ ಪ್ರಶ್ನೆ ಮಾಡಿದ್ದಾರೆ.

“ಕೇಂದ್ರದ ಬಿಜೆಪಿ ನಾಯಕರು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ, ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಿಸುತ್ತಾರೆ. ಜಾರಿ ನಿರ್ದೇಶನಾಲಯದಿಂದ ವಿಚಾರಣೆ ನಡೆಸುತ್ತಾರೆ. ಈ ರೀತಿ ಅವರನ್ನು ನಿರಂತರವಾಗಿ ಅವಮಾನಿಸಲಾಗುತ್ತಿದೆ. ಆದರೆ ರಾಜಸ್ಥಾನದಲ್ಲಿ ಬಿಜೆಪಿ ನಾಯಕರು ಭ್ರಷ್ಟಾಚಾರ ಮಾಡಿದ್ದರೂ ಕೂಡ ಕಾಂಗ್ರೆಸ್ ಸರ್ಕಾರ ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಆಶ್ಚರ್ಯವಾಗುತ್ತದೆ” ಎಂದರು.

2018 ರ ಡಿಸೆಂಬರ್‌ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ತಮ್ಮದೇ ಪಕ್ಷದ ಮುಖ್ಯಮಂತ್ರಿ ಗೆಹ್ಲೋಟ್ ವಿರುದ್ಧ ಅಧಿಕಾರಕ್ಕಾಗಿ ಕಿತ್ತಾಡುತ್ತಿದ್ದಾರೆ. ಗೆಹ್ಲೋಟ್ ವಿರುದ್ಧ ಸತತ ಇದು ನಾಲ್ಕನೇ ಭಾರೀ ಪೈಲಟ್ ದಾಳಿ ನಡೆಸಿದ್ದಾರೆ.

2013 ಮತ್ತು 2018 ವರೆಗೆ ಪೈಲಟ್ ಅವರು ರಾಜ್ಯ ಪಕ್ಷದ ಮುಖ್ಯಸ್ಥರಾಗಿದ್ದಾಗ ಕಾಂಗ್ರೆಸ್ ಪ್ರತಿಪಕ್ಷದಲ್ಲಿತ್ತು. ಈ ಸಂದರ್ಭದಲ್ಲಿ ವಸುಂಧರಾ ರಾಜೇ ನೇತೃತ್ವದ ಸರ್ಕಾರ ರಾಜ್ಯದಲ್ಲಿತ್ತು. ಆಗ ಸರ್ಕಾರ ಮಾಡಿದ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದೆ ಮತ್ತು ಕಾಂಗ್ರೆಸ್ ಪಕ್ಷವು ಅವರ ವಿರುದ್ಧ ಸಾಮೂಹಿಕವಾಗಿ ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಿತ್ತು. ಆದರೆ ಈಗಿರುವ ಕಾಂಗ್ರೆಸ್ ಸರ್ಕಾರ ಅವುಗಳ ಮೇಲೆ ತನಿಖೆ ನಡೆಸಿಲ್ಲ ಮತ್ತು ಯಾವುದೇ ಕ್ರಮ ಕೈಗೊಂಡಿಲ್ಲ.

ಪಾಲಿ ಜಿಲ್ಲೆಯಲ್ಲಿ ನಡೆದ ಕಿಸಾನ್ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಪೈಲಟ್, “ಉಳಿದ 11 ತಿಂಗಳ ಆಡಳಿತದಲ್ಲಿ ಸರ್ಕಾರವು ಕ್ರಮ ತೆಗೆದುಕೊಳ್ಳುತ್ತದೆ” ಎಂದು ಅವರು ಆಶಿಸಿದರು.

“ನನಗೆ ಸೇಡು ತೀರಿಸಿಕೊಳ್ಳಲು ಇಷ್ಟವಿಲ್ಲ ಆದರೆ ನಾವೇ  ಅವರ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದೇವೆ. ಈಗ ನಾವೇ ಅಧಿಕಾರದಲ್ಲಿದ್ದಾಗ ಕ್ರಮ ತೆಗೆದುಕೊಳ್ಳದಿದ್ದರೆ ಹೇಗೆ? ನಾವು ಆಗಿನ ವಸುಂಧರಾ ರಾಜೇ ಸರ್ಕಾರಕ್ಕೆ ನಿರಂತರವಾಗಿ ಸವಾಲು ಹಾಕಿದ್ದೇವೆ, ಪ್ರತಿ ಹಗರಣದಲ್ಲಿ ಅವರ ವಿರುದ್ಧ ಆರೋಪ ಕೇಳಿಬಂದಿದೆ” ಎಂದು ಪೈಲಟ್ ಹೇಳಿದರು.

ಇದನ್ನೂ ಓದಿ: ರಾಜಸ್ಥಾನದ ಮುಖ್ಯಮಂತ್ರಿಯಾಗಲು ಸಚಿನ್ ಪೈಲಟ್‌ಗೆ ಕಾಂಗ್ರೆಸ್‌ ನಾಯಕತ್ವದ ಬೆಂಬಲ!

“ನಾವು ಅಧಿಕಾರಕ್ಕೆ ಬಂದ ನಂತರ, ಹಗರಣಗಳ ಬಗ್ಗೆ ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥರನ್ನು ವಿರುದ್ಧ ಕ್ರಮ ತಗೆದುಕೊಳ್ಳಬೇಕು ಆಗ ಮಾತ್ರ ನಾವು ಜನರ ನಂಬಿಕೆಯನ್ನು ಉಳಿಸಿಕೊಳ್ಳಲು ಸಾಧ್ಯ” ಎಂದರು.

“2008 ರಿಂದ 2013ರವರೆಗೆ ಇದ್ದ ಬಿಜೆಪಿ ಸರ್ಕಾರದ ಮೇಲೆ ಮಾಡಲಾದ ಭ್ರಷ್ಟಾಚಾರ ಆರೋಪಗಳ ಬಗ್ಗೆ ತನಿಖೆ ಮಾಡಲು ಮಾಥೂರ್ ಆಯೋಗವನ್ನು ರಚಿಸಲಾಗಿತ್ತು. ಆದರೆ ಅದರಿಂದ ಏನೂ ಪ್ರಯೋಜನವಾಗಲಿಲ್ಲ” ಎಂದು ಹೇಳಿದರು.

ಸರ್ಕಾರಕ್ಕೆ ಈಗ ನಾಲ್ಕು ವರ್ಷಗಳು ಕಳೆದಿವೆ, ಇನ್ನು ಕೇವಲ 11 ತಿಂಗಳು ಮಾತ್ರ ಬಾಕಿ ಇದ್ದು, ಕ್ರಮ ಕೈಗೊಳ್ಳುವ ಭರವಸೆ ಇದೆ ಎಂದು ಪೈಲಟ್ ಹೇಳಿದರು.

ಸೋಮವಾರ ಜಾಟ್ ಪ್ರಾಬಲ್ಯದ ನಾಗೌರ್‌ನಿಂದ ಆರಂಭಿಸಿದ ತಮ್ಮ ರ್ಯಾಲಿಯಲ್ಲಿ ಪೈಲಟ್ ಅವರು, ರಾಜ್ಯ ಸರ್ಕಾರವನ್ನು ಗುರಿಯಾಗಿಸಿಕೊಂಡು, ಪದೇ ಪದೇ ಪೇಪರ್ ಸೋರಿಕೆ, ಕಾಂಗ್ರೆಸ್ ಕಾರ್ಯಕರ್ತರನ್ನು ಕಡೆಗಣಿಸುವುದು ಮತ್ತು ನಿವೃತ್ತ ಅಧಿಕಾರಿಗಳಿಗೂ ರಾಜಕೀಯ ನೇಮಕಾತಿಗಳನ್ನು ನೀಡುತ್ತಿರುವ ಘಟನೆಗಳ ಬಗ್ಗೆ ವಾಗ್ದಾಳಿ ನಡೆಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...