Homeಕರ್ನಾಟಕಪ್ರಧಾನಿ ಹುದ್ದೆಯನ್ನು ತಹಸೀಲ್ದಾರ್‌ ಮಟ್ಟಕ್ಕೆ ಇಳಿಸಿದ ಬೊಮ್ಮಾಯಿ: ಭಾಸ್ಕರ್‌ ರಾವ್‌

ಪ್ರಧಾನಿ ಹುದ್ದೆಯನ್ನು ತಹಸೀಲ್ದಾರ್‌ ಮಟ್ಟಕ್ಕೆ ಇಳಿಸಿದ ಬೊಮ್ಮಾಯಿ: ಭಾಸ್ಕರ್‌ ರಾವ್‌

- Advertisement -
- Advertisement -

ತಹಸೀಲ್ದಾರ್‌ಗಳಿಂದ ವಿತರಣೆಯಾಗಬೇಕಿದ್ದ ಹಕ್ಕುಪತ್ರಗಳನ್ನು ಚುನಾವಣಾ ಪ್ರಚಾರದ ದೃಷ್ಟಿಯಿಂದ ಪ್ರಧಾನಿ ಮೂಲಕ ಕೊಡಿಸುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿಯವರು ಪ್ರಧಾನಿ ಹುದ್ದೆಯನ್ನು ತಹಸೀಲ್ದಾರ್‌ ಮಟ್ಟಕ್ಕೆ ಇಳಿಸಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ಮುಖಂಡ ಹಾಗೂ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಟೀಕಿಸಿದ್ದಾರೆ.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಭಾಸ್ಕರ್‌ ರಾವ್‌, “ತಾಂಡ ಹಾಗೂ ಹಟ್ಟಿಗಳಲ್ಲಿ ವಾಸವಿರುವ ಬುಡಕಟ್ಟು ಕುಟುಂಬಗಳಿಗೆ ಹಕ್ಕುಪತ್ರ ನೀಡುವ ಕೆಲಸ ಬಹಳ ಹಿಂದೆಯೇ ಆಗಬೇಕಿತ್ತು. ಇದು ತಹಸೀಲ್ದಾರ್‌ ಮಟ್ಟದ ಕೆಲಸವಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುವವರೆಗೂ ಕಾಯುವ ಅಗತ್ಯವಿರಲಿಲ್ಲ. ಜನಪರ ಆಡಳಿತ ನೀಡಲು ವಿಫಲವಾಗಿರುವ ಬಿಜೆಪಿ ಸರ್ಕಾರವು ಪ್ರಚಾರ ಗಿಟ್ಟಿಸಿಕೊಳ್ಳಲು ಹಕ್ಕುಪತ್ರ ವಿತರಣೆಗೂ ಚುನಾವಣೆವರೆಗೆ ಕಾದಿರುವುದು ದುರಂತ. ದೊಡ್ಡ ಪ್ರಮಾಣದಲ್ಲಿ ಹಕ್ಕು ಪತ್ರ ವಿತರಣೆಯನ್ನು ಇಷ್ಟು ದಿನ ಬಾಕಿ ಉಳಿಸಿಕೊಂಡು ಪ್ರಧಾನಿಯವರಿಂದ ಕೊಡಿಸಿರುವುದು ಕೇವಲ ಪ್ರಚಾರ ಪಡೆಯುವ ಗಿಮಿಕ್” ಎಂದು ಹೇಳಿದರು.

ಇದನ್ನೂ ಓದಿ: ಆಳವಾದ ಸಂಶೋಧನೆ ನಡೆಸಿದ್ದೇವೆ: ಮೋದಿ ಕುರಿತು ಸಾಕ್ಷ್ಯಚಿತ್ರ ಸಮರ್ಥಿಸಿಕೊಂಡ ಬಿಬಿಸಿ

“ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರು ಪ್ರಧಾನಿ ಮೋದಿಯವರಿಗೆ ಪತ್ರ ಬರೆದು ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ರಾಜ್ಯ ಭೇಟಿ ವೇಳೆ ಗಮನ ಹರಿಸುವಂತೆ ಹೇಳಿದ್ದರು. ಬೆಂಗಳೂರಿನ ಕಳಪೆ ಮೂಲಸೌಕರ್ಯಗಳು, ಉತ್ತರ ಕರ್ನಾಟಕದ ಅಭಿವೃದ್ಧಿ, ಕನ್ನಡಕ್ಕಾಗುತ್ತಿರುವ ಅನ್ಯಾಯಗಳು, ಗಡಿ ವಿವಾದಗಳು, ನದಿ ನೀರು ಹಂಚಿಕೆ ವಿವಾದಗಳು, ಗುತ್ತಿಗೆ ಕಾಮಗಾರಿಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ 40% ಕಮಿಷನ್‌ ದಂಧೆ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದ ಮೇಲೆ ಸರ್ಕಾರದ ದಿವ್ಯ ನಿರ್ಲಕ್ಷ್ಯ, ಕೇಂದ್ರ ಸರ್ಕಾರದಿಂದ ಜಿಎಸ್‌ಟಿ ಬಾಕಿ – ಮುಂತಾದ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಭೇಟಿಯನ್ನು ಬಳಸಿಕೊಳ್ಳುವಂತೆ ಆಮ್‌ ಆದ್ಮಿ ಪಾರ್ಟಿ ಒತ್ತಾಯಿಸಿತ್ತು. ಆದರೆ ಪ್ರಧಾನಿಯವರ ಭೇಟಿಯು ಚುನಾವಣಾ ಗಿಮಿಕ್‌ಗಳಿಗೆ ಸೀಮಿತವಾಗಿದೆ” ಎಂದು ಭಾಸ್ಕರ್‌ ರಾವ್‌ ಬೇಸರ ವ್ಯಕ್ತಪಡಿಸಿದರು.

ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಬಿ.ಟಿ.ನಾಗಣ್ಣ ಮಾತನಾಡಿ, “ಸರ್ಕಾರದ ಅನೇಕ ವೈಫಲ್ಯಗಳಿಂದ ಜನಸಾಮಾನ್ಯರು ತತ್ತರಿಸುತ್ತಿದ್ದಾರೆ. ಪರಿಣಾಮವಾಗಿ ಬಿಜೆಪಿ ಬೆಂಬಲಿಗರನ್ನು ಜನಸಾಮಾನ್ಯರು ಗೇಲಿ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿಯವರು ಪ್ರಧಾನಿ ನರೇಂದ್ರ ಮೋದಿಯವರನ್ನು ಓಲೈಸಿಕೊಂಡು ಕುರ್ಚಿ ಭದ್ರ ಮಾಡಿಕೊಳ್ಳುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ಡಬಲ್‌ ಎಂಜಿನ್‌ ಸರ್ಕಾರದ ಲಾಭ ಪಡೆದು, ಕೇಂದ್ರ ಸರ್ಕಾರದ ಸಹಕಾರದೊಂದಿಗೆ ರಾಜ್ಯದ ಸಮಸ್ಯೆಗಳನ್ನು ಬಗೆಹರಿಸುವುದರಲ್ಲಿ ಬೊಮ್ಮಾಯಿ ಸಂಪೂರ್ಣ ವಿಫಲರಾಗಿದ್ದಾರೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...