Homeಮುಖಪುಟಶಾರೂಕ್ ಖಾನ್ ಯಾರೆಂದು ಗೊತ್ತಿಲ್ಲವೆಂದ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ: ನಂತರ ನಡೆದಿದ್ದು ಇದು...

ಶಾರೂಕ್ ಖಾನ್ ಯಾರೆಂದು ಗೊತ್ತಿಲ್ಲವೆಂದ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ: ನಂತರ ನಡೆದಿದ್ದು ಇದು…

- Advertisement -
- Advertisement -

ಅಸ್ಸಾಂನ ಗುವಾಹಟಿಯಲ್ಲಿ ಪಠಾಣ್ ಚಿತ್ರದ ಪ್ರೀಮಿಯರ್ ಶೋ ಪ್ರದರ್ಶನದ ವೇಳೆ ಬಲಪಂಥೀಯ ಕಾರ್ಯಕರ್ತರು ದಾಂಧಲೆ ನಡೆಸಿರುವ ವಿಷಯದ ಶನಿವಾರ ಕುರಿತು ಪ್ರತಿಕ್ರಿಯಿಸಿದ್ದ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, “ಶಾರೂಕ್ ಖಾನ್ ಯಾರು? ಅವರ ಬಗ್ಗೆಯಾಗಲಿ ಅಥವಾ ಪಠಾಣ್ ಚಿತ್ರದ ಬಗ್ಗೆ ನನಗೆ ಏನೂ ತಿಳಿದಿಲ್ಲ” ಎಂದಿದ್ದರು.

ಶಾರೂಕ್ ಖಾನ್ ಬಾಲಿವುಡ್ ಸೂಪರ್‌ಸ್ಟಾರ್ ಎಂದು ಪತ್ರಕರ್ತರು ಹೇಳಿದಾಗ, “ರಾಜ್ಯದ ಜನರು ಅಸ್ಸಾಮಿ ಚಲನಚಿತ್ರಗಳ ಬಗ್ಗೆ ಕಾಳಜಿ ವಹಿಸಬೇಕೆ ಹೊರತು ಬಾಲಿವುಡ್‌ ಸಿನಿಮಾಗಳ ಕುರಿತಲ್ಲ. ಅವರ ಚಿತ್ರತಂಡಕ್ಕೆ ಯಾವುದೇ ತೊಂದರೆಯಾದ ಬಗ್ಗೆ ನನಗೆ ದೂರು ಬಂದಿಲ್ಲ. ಶಾರೂಕ್ ಖಾನ್ ನನಗೆ ಫೋನ್ ಮಾಡಿಲ್ಲ. ಒಂದು ವೇಳೆ ಅವರು ಫೋನ್ ಮಾಡಿದರೆ ಆ ವಿಷಯದ ಕುರಿತು ಪರಿಶೀಲಿಸುತ್ತೇನೆ” ಬಿಸ್ವಾ ಶರ್ಮಾ ಹೇಳಿದ್ದರು.

ಶನಿವಾರ ಗುವಾಹಟಿಯ ಗೋಲ್ಡ್ ಸಿನಿಮಾ ಹಾಲ್‌ಗೆ ನುಗ್ಗಿದ ಬಲಪಂಥೀಯ ಕಾರ್ಯಕರ್ತರು ಚಿತ್ರದ ಪೋಸ್ಟರ್ ಮತ್ತು ಸಿನಿಮಾ ಸ್ಕ್ರೀನ್‌ ಅನ್ನು ಹರಿದು ಹಾಕಿ ದಾಂಧಲೆ ನಡೆಸಿದ್ದರು. ಹಾಗಾಗಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಅಸ್ಸಾಂ ಸಿಎಂ ಮೇಲೆ ಒತ್ತಡ ಹೇರಲಾಗಿತ್ತು.

ಈ ಘಟನೆಯ ನಂತರ ಶಾರೂಕ್ ಖಾನ್ ನೇರವಾಗಿ ಹಿಮಂತ ಬಿಸ್ವಾ ಶರ್ಮಾರವರಿಗೆ ಫೋನ್ ಮಾಡಿ ಮಾತನಾಡಿದ್ದಾರೆ. ಪಠಾಣ್ ಚಿತ್ರ ಪ್ರದರ್ಶನಕ್ಕೆ ತಡೆಯೊಡ್ಡುತ್ತಿರುವುದರು ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. ಆಗ ಹಿಮಂತಾ ಬಿಸ್ವಾ ಶರ್ಮಾರವರು ಪಠಾಣ್ ಚಿತ್ರತಂಡಕ್ಕೆ ಬೆಂಬಲ ನೀಡುವುದಾಗಿ ಮತ್ತು ಚಿತ್ರಬಿಡುಗಡೆಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದಾಗಿ ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ಈ ಕುರಿತು ಟ್ವೀಟ್ ಮಾಡಿರುವ ಅವರು “ಬಾಲಿವುಡ್ ನಟ ಶಾರೂಕ್ ಖಾನ್‌ರವರು ಇಂದು ಬೆಳಿಗ್ಗೆ 2 ಗಂಟೆ ಸಮಯಕ್ಕೆ ಕರೆ ಮಾಡಿ ಮಾತನಾಡಿದರು. ತಮ್ಮ ಚಿತ್ರದ ಪ್ರದರ್ಶನದ ವೇಳೆ ಗುವಾಹಟಿಯಲ್ಲಿ ನಡೆದ ಘಟನೆಯ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರದ ಕರ್ತವ್ಯ, ನಾವು ವಿಚಾರಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುತ್ತೇವೆ ಎಂದು ನಾನು ಅವರಿಗೆ ಭರವಸೆ ನೀಡಿದ್ದೇನೆ” ಎಂದಿದ್ದಾರೆ.

ಶಾರೂಕ್ ಖಾನ್‌ರವರು ಚಿತ್ರಮಂದಿರ ಮಾಲೀಕರಿಗೂ ಸಹ ಫೋನ್ ಮಾಡಿ ಮಾತನಾಡಿದ್ದಾರೆ. ನಡೆದುದ್ದರ ಬಗ್ಗೆ ಕಳವಳ ವ್ಯಕ್ತಪಡಿಸಿ ಘಟನೆಯ ಸಂಪೂರ್ಣ ವಿವರ ಕೊಡಿ ಎಂದರು ಎನ್ನಲಾಗಿದೆ.

ಶಾರೂಕ್ ಖಾನ್, ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಚಿತ್ರವು ಇದೇ 25 ರಂದು ವಿಶ್ವದಾದ್ಯಂತ ತೆರೆಕಾಣುತ್ತಿದೆ. ಕೆಲ ಬಲಪಂಥೀಯ ಕಾರ್ಯಕರ್ತರು ಸಿನಿಮಾ ಬ್ಯಾನ್ ಮಾಡಬೇಕೆದು ಹಠ ಹಿಡಿದಿದ್ದಾರೆ.

ಇದನ್ನೂ ಓದಿ: ಪಡುಕೋಣೆಯವರ ‘ಪಠಾಣ್’ ಸಿನಿಮಾ ಬ್ಯಾನ್‌ ಮಾಡುವುದಾಗಿ ಮಧ್ಯಪ್ರದೇಶದ ಗೃಹ ಸಚಿವ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ತಕ್ಷಣವೇ ಹಾರ್ಮುಝ್...

ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ : ಇರಾನ್ ಭರವಸೆ

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಹಿನ್ನೆಲೆ, ಹಾರ್ಮುಝ್ ಜಲಸಂಧಿ  ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವುದಾಗಿ ಇರಾನ್ ಭರವಸೆ ನೀಡಿದೆ. ವಿಶ್ವದ ಒಟ್ಟು ಪೆಟ್ರೋಲಿಯಂ ರಫ್ತಿನ...

ಇರಾನ್ ಮೇಲಿನ ದಾಳಿ ಸ್ಥಗಿತ : ಎರಡು ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್

ಇರಾನ್ ಮೇಲೆ ನಡೆಸುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಭಾರತೀಯ ಕಾಲಮಾನ ಏ.8) ಹೇಳಿದ್ದಾರೆ. ಪಾಕಿಸ್ತಾನ...

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...