Homeಕರ್ನಾಟಕಸಿಎಂ ಭಾಗವಹಿಸುವ ಸಮಾರಂಭಕ್ಕೆ ಪಿಎಸ್‌ಐ ಹಗರಣ ಆರೋಪಿಯ ಚಿತ್ರವಿರುವ ಸ್ವಾಗತ ಕಮಾನು!

ಸಿಎಂ ಭಾಗವಹಿಸುವ ಸಮಾರಂಭಕ್ಕೆ ಪಿಎಸ್‌ಐ ಹಗರಣ ಆರೋಪಿಯ ಚಿತ್ರವಿರುವ ಸ್ವಾಗತ ಕಮಾನು!

ಬಿಜೆಪಿ ಟಿಕೆಟ್ ನೀಡುವುದು ಖಚಿತ ಎಂದು ವ್ಯಂಗ್ಯವಾಡಿದ ಕಾಂಗ್ರೆಸ್

- Advertisement -
- Advertisement -

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸುವ ಕಾರ್ಯಕ್ರಮಕ್ಕೆ ಸ್ವಾಗತಕೋರಿ ಹಾಕಲಾಗಿದ್ದ ಕಮಾನಿನಲ್ಲಿ ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ರುದ್ರಗೌಡ ಪಾಟಿಲ ಅಲಿಯಾಸ್ ಆರ್‌‌.ಡಿ. ಪಾಟಿಲ ಅವರ ಚಿತ್ರ ಕಾಣಿಸಿಕೊಂಡಿದೆ. ಸ್ವಾಗತ ಕಮಾನಿನ ಚಿತ್ರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಕಲಬುರಗಿ ಜಿಲ್ಲೆಯ ದೇವಲ ಗಾಣಗಾಪುರದಲ್ಲಿ ಕೋಲಿ ಸಮಾಜದ ನಾಯಕ ದಿವಂಗತ ವಿಠ್ಠಲ ಹೇರೂರ ಅವರ ಕಂಚಿನ ಮೂರ್ತಿ ಅನಾವರಣ ಕಾರ್ಯಕ್ರಮ ಮಂಗಳವಾರ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಭಾಗವಹಿಸಿದ್ದಾರೆ. ಕಾರ್ಯಕ್ರಮದ ಪ್ರಯುಕ್ತ ಸ್ವಾಗತಕೋರಿ ಆರ್‌.ಡಿ.ಪಾಟೀಲ ಚಿತ್ರವಿರುವ ಸ್ವಾಗತ ಕಮಾನು ಕಾಣಿಸಿಕೊಂಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ವಾಗತ ಕಮಾನಿನಲ್ಲಿ ಪಿಎಸ್‌ಐ ಆರೋಪಿ ಆರ್‌.ಡಿ. ಪಾಟಿಲ ಮತ್ತು ಅವರ ಸಹೋದರ ಮಹಾಂತೇಶ ಪಾಟೀಲ ಅವರ ಚಿತ್ರಗಳನ್ನು ಹಾಕಲಾಗಿದೆ. ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಜಿಸುತ್ತಿರುವುದಾಗಿ ತಮ್ಮ ಫೇಸ್‌ಬುಕ್‌ನಲ್ಲಿ ಶನಿವಾರ ಘೋಷಿಸಿಕೊಂಡಿದ್ದರು.

ಘಟನೆ ಬಗ್ಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, “PSI ಹಗರಣದ ಆರೋಪಿ ಆರ್.ಡಿ ಪಾಟೀಲ್ ಸಿಎಂ ಸ್ವಾಗತಿಸುವ ಫ್ಲೆಕ್ಸ್ ಹಾಕಿದ್ದಾನೆ. ಈ ಮೂಲಕ ಆತನಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರ ಶ್ರೀರಕ್ಷೆ ಇದೆ ಎನ್ನುವುದು ಸ್ಪಷ್ಟವಾಗಿದೆ. ಚುನಾವಣೆಗೂ ಸ್ಪರ್ದಿಸುತ್ತಾನಂತೆ, ಬಿಜೆಪಿ ಟಿಕೆಟ್ ನೀಡುವುದು ಖಚಿತವಿರಬಹುದು! ಆತ ಬಿಜೆಪಿಗರ ಹೆಸರು ಬಾಯಿ ಬಿಡದಿರುವುದಕ್ಕೆ ‘ಟಿಕೆಟ್’ ಉಡುಗೊರೆಯೇ” ಎಂದು ಪ್ರಶ್ನಿಸಿದೆ.

ಪತ್ರಿಕೆಗಳಲ್ಲಿ ಘಟನೆಯ ಬಗ್ಗೆ ಸುದ್ದಿಯಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸ್ವಾಗತ ಕಮಾನನ್ನು ಅಲ್ಲಿಂದ ತೆರವುಗೊಳಿಸಲಾಗಿದೆ ಎಂದು ನಾನುಗೌರಿ.ಕಾಂಗೆ ಮೂಲಗಳು ತಿಳಿಸಿವೆ.

ಪಿಎಸ್‌ಐ ಹಗರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದ ಆರ್‌‌.ಡಿ. ಪಾಟೀಲ ಅವರನ್ನು ಮತ್ತೆ ಬಂಧಿಸಲು ಗುರುವಾರ ಕಲಬುರಗಿಯಲ್ಲಿರುವ ಅವರ ನಿವಾಸಕ್ಕೆ ತೆರಳಿದ್ದ ಕರ್ನಾಟಕ ಅಪರಾಧ ತನಿಖಾ ಇಲಾಖೆ (ಸಿಐಡಿ) ಅಧಿಕಾರಿಗಳಿಂದ ಅವರು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎಂದು ಕಲಬುರಗಿ ಪೊಲೀಸರು ತಿಳಿಸಿದ್ದರು.

ಸ್ಥಳದಿಂದ ಪರಾರಿಯಾಗುವ ವೇಳೆ ಆರ್‌‌.ಡಿ.ಪಾಟೀಲ ಅವರನ್ನು ವಶಕ್ಕೆ ತೆಗೆದುಕೊಳ್ಳಲು ಯತ್ನಿಸಿದ ಸಿಐಡಿ ಅಧಿಕಾರಿಗಳನ್ನು ತಳ್ಳಿದ್ದರು ಎಂದು ವರದಿಯಾಗಿದೆ. ಈ ಘಟನೆ ನಡೆದ ನಂತರ ಆರ್‌‌.ಡಿ.ಪಾಟೀಲ ಫೇಸ್‌ಬುಕ್‌ನಲ್ಲಿ ವೀಡಿಯೊ ಬಿಡುಗಡೆ ಮಾಡಿದ್ದರು.

ಇದರ ನಂತರ ಆರೋಪಿ ಆರ್‌‌.ಡಿ.ಪಾಟೀಲ ಸೋಮವಾರ ಸಂಜೆ ನ್ಯಾಯಾಲಯದ ಎದುರು ಹಾಜರಾಗಿದ್ದರು. ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆರ್.ಡಿ ಪಾಟೀಲ್‌ಗೆ ಸಿಐಡಿ ಅಧಿಕಾರಿಗಳು ಹಲವು ಬಾರಿ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಆದರೂ, ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ, ಸೋಮವಾರ ಬೆಳಗ್ಗೆ ಮತ್ತೊಂದು ನೋಟಿಸ್‌ ನೀಡಿದ್ದ ಅಧಿಕಾರಿಗಳು ಸಂಜೆಯೊಳಗೆ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿದ್ದರು.

ಕೊನೆಗೂ ಸೋಮವಾರ ಸಂಜೆ ಕಲಬುರಗಿಯ 5ನೇ ಜೆಎಂಎಫ್‌ಸಿ ನ್ಯಾಯಲಯದ ಮುಂದೆ ಹಾಜರಾದ್ದರು. ನ್ಯಾಯಾಲಯವು ಅವರಿಗೆ ಫೆಬ್ರವರಿ 6 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಆರ್‌‌.ಡಿ.ಪಾಟೀಲ  ಅವರನ್ನು ಈ ಹಿಂದೆ 2022ರ ಏಪ್ರಿಲ್‌ನಲ್ಲಿ ಬಂಧಿಸಲಾಗಿತ್ತು. ನಂತರ ಅವರನ್ನು ಡಿಸೆಂಬರ್‌ನಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಆದರೆ ಜಾಮೀನು ಷರತ್ತುಗಳನ್ನು ಅನುಸರಿಸಲು ವಿಫಲವಾದ ಕಾರಣ, ಸಿಐಡಿ ಅಧಿಕಾರಿಗಳು ಗುರುವಾರ ಸಂಜೆ 5.30 ರ ಸುಮಾರಿಗೆ ಬಂಧನ ವಾರಂಟ್‌ನೊಂದಿಗೆ ಅವರ ಮನೆಗೆ ತಲುಪಿದ್ದರು. ಅದೇ ದಿನ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡವೂ ಪಾಟೀಲ್ ಅವರ ನಿವಾಸದಲ್ಲಿ ವಿಚಾರಣೆ ನಡೆಸಿತ್ತು.

ಕರ್ನಾಟಕ ಸಿಐಡಿ ಪೊಲೀಸರು ಆರ್‌‌.ಡಿ.ಪಾಟೀಲ  ವಿರುದ್ಧ ಕಲಬುರಗಿಯ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. “ಆರೋಪಿಯನ್ನು ವಶಕ್ಕೆ ಪಡೆಯಲು ನಿವಾಸಕ್ಕೆ ತೆರಳಿದಾಗ ನಮ್ಮನ್ನು ತಳ್ಳಿ ಪರಾರಿಯಾಗಿದ್ದಾರೆ” ಎಂದು ಸಿಐಡಿ ಅಧಿಕಾರಿಗಳು ಹೇಳಿದ್ದರು.

ಇದನ್ನೂ ಓದಿ: ಮುಂದಿನ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ ಪಿಎಸ್‌ಐ ಹಗರಣದ ಆರೋಪಿ ರುದ್ರಗೌಡ ಪಾಟಿಲ ಅಲಿಯಾಸ್ ಆರ್‌.ಡಿ. ಪಾಟೀಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...