Homeಚಳವಳಿವಿಶ್ವವಿದ್ಯಾಲಯದ ಆಕ್ಷೇಪದ ನಡುವೆಯು ಪ್ರಧಾನಿ ಮೋದಿಯ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಿದ ಜೆಎನ್‌ಯು ವಿದ್ಯಾರ್ಥಿಗಳು!

ವಿಶ್ವವಿದ್ಯಾಲಯದ ಆಕ್ಷೇಪದ ನಡುವೆಯು ಪ್ರಧಾನಿ ಮೋದಿಯ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಿದ ಜೆಎನ್‌ಯು ವಿದ್ಯಾರ್ಥಿಗಳು!

ಪ್ರದರ್ಶನಕ್ಕೆ ತೊಂದರೆಯಾಗುವಂತೆ ವಿದ್ಯುತ್ ಕಟ್‌ ಮಾಡಿದ ವಿಶ್ವವಿದ್ಯಾಲಯದ ಆಡಳಿತ ಮಂಡಳಿ

- Advertisement -
- Advertisement -

ವಿಶ್ವವಿದ್ಯಾಲಯದ ಆಕ್ಷೇಪದ ನಡುವೆಯೂ ಜೆಎನ್‌ಯು ವಿದ್ಯಾರ್ಥಿಗಳು ಪ್ರಧಾನಿ ಮೋದಿ ಕುರಿತು ಬಿಬಿಸಿ ತಯಾರಿಸಿರುವ ‘ಇಂಡಿಯಾ – ದ ಮೋದಿ ಕ್ವಸ್ಚನ್’ ಸಾಕ್ಷ್ಯಚಿತ್ರವನ್ನು ಮಂಗಳವಾರ ರಾತ್ರಿ ಪ್ರದರ್ಶನ ಮಾಡಿದ್ದಾರೆ. ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನದಿಂದ ಕ್ಯಾಂಪಸ್‌ನ ಶಾಂತಿ ಮತ್ತು ಸಾಮರಸ್ಯಕ್ಕೆ ಧಕ್ಕೆ ಉಂಟಾಗಬಹುದು, ಆದ್ದರಿಂದ ಪ್ರದರ್ಶನವನ್ನು ರದ್ದುಗೊಳಿಸಬೇಕು ಎಂದು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಅವರು ಸೂಚನೆ ನೀಡಿದ್ದರು.

ವಿದ್ಯಾರ್ಥಿ ಸಂಘವು ರಾತ್ರಿ ಒಂಬತ್ತು ಗಂಟೆಗೆ ಸಾಕ್ಷ್ಯಚಿತ್ರದ ಪ್ರದರ್ಶನ ಎಂದು ಹೇಳಿಕೊಂಡಿತ್ತು.‌ ಅದಕ್ಕಾಗಿ ವಿದ್ಯಾರ್ಥಿಗಳು ತಯಾರಿ ಕೂಡಾ ನಡೆಸಿದ್ದರು. ಆದರೆ, ಸುಮಾರು 8:30 ಕ್ಕೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ವಿಶ್ವವಿದ್ಯಾಲಯದ ವಿದ್ಯುತ್ ಕಡಿತ ಮಾಡಿತ್ತು.‌ ಹೀಗಾಗಿ ನೆರೆದಿದ್ದ ವಿದ್ಯಾರ್ಥಿಗಳು ತಮ್ಮ ತಮ್ಮ ಲ್ಯಾಪ್‌ಟಾಪ್ ಮೂಲಕ ಸ್ಥಳದಲ್ಲೇ ತಮ್ಮ ಸ್ನೇಹಿತರ ಗುಂಪಿನೊಂದಿಗೆ ಬಿಬಿಸಿ ಸಾಕ್ಷ್ಯಚಿತ್ರವನ್ನು ನೋಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾಕ್ಷ್ಯಚಿತ್ರ ಪ್ರದರ್ಶನಕ್ಕೂ ಮೊದಲು ಮಾತನಾಡಿದ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶೆ ಘೋಷ್‌, “ಬಿಬಿಸಿ ತಯಾರಿಸಿರುವ ಸಾಕ್ಷ್ಯಚಿತ್ರ ಭಾರತದ ಯಾವ ಪ್ರದೇಶದಲ್ಲೂ ನಿಷೇಧವಾಗಿಲ್ಲ. ಸಾಮಾಜಿಕ ಮಾಧ್ಯಮಗಳಲ್ಲಿ ಅದನ್ನು ನೋಡಬಾರದು ಎಂದು ತಡೆಹಿಡಿದಿದ್ದು ಮಾತ್ರವಾಗಿದೆ. ಇದರರ್ಥ ಅದನ್ನು ನಿಷೇಧ ಎಂದಲ್ಲ. ಹೀಗಿರುವಾಗ ಸಾಕ್ಷ್ಯಚಿತ್ರವನ್ನು ಪ್ರದರ್ಶನ ಮಾಡಲು ಅನುಮತಿ ಯಾಕೆ ಪಡೆಯಬೇಕು?” ಎಂದು ಅವರು ಪ್ರಶ್ನಿಸಿದ್ದಾರೆ.

“ಪ್ರಜಾಪ್ರಭುತ್ವ ದೇಶದಲ್ಲಿ ಇರುವ ನಮಗೆ ಸಾಕ್ಷ್ಯಚಿತ್ರವೊಂದನ್ನು ನೋಡುವ ಹಕ್ಕಿಲ್ಲವೆ? ಪ್ರಜಾಪ್ರಭುತ್ವದ ಮೂಲವೇ ಜೆಎನ್‌ಯು ವಿಶ್ವವಿದ್ಯಾಲಯದಂತಹ ಸ್ಥಳವಾಗಿದೆ. ಇಲ್ಲೇ ಪ್ರಜಾಪ್ರಭುತ್ವವನ್ನು ಯಾಕೆ ತುಳಿಯುತ್ತಿದ್ದೀರಿ?” ಎಂದು ಪ್ರಶ್ನಿಸಿದ್ದಾರೆ.

ವಿದ್ಯಾರ್ಥಿಗಳು ಸಾಕ್ಷ್ಯಚಿತ್ರ ನೋಡುತ್ತಿದ್ದ ವೇಳೆ ಬಿಜೆಪಿಯ ವಿದ್ಯಾರ್ಥಿಯ ಸಂಘಟನೆಯಾದ ಎಬಿವಿಪಿ ಗೂಂಡಗಳು ಕಲ್ಲೆಸತ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ವೇಳೆ ವಿದ್ಯಾರ್ಥಿಗಳ ಮೇಲೆ ಹಿಂಸಾಚಾರ ನಡೆದಿದೆ ಎಂದು ವರದಿಯಾಗಿದೆ.

ವಿದ್ಯಾರ್ಥಿ ಸಂಘವು ಸಾಕ್ಷ್ಯಚಿತ್ರದ ಪ್ರದರ್ಶನ ನಡೆಸುತ್ತಿದೆ ಎಂದು ಘೋಷಿಸುತ್ತಿದ್ದಂತೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಜೆಎನ್‌ಯು ಆಡಳಿತ, “ವಿದ್ಯಾರ್ಥಿ ಸಂಘದ ಹೆಸರಿನಲ್ಲಿ ವಿದ್ಯಾರ್ಥಿಗಳ ಗುಂಪೊಂದು ಕರಪತ್ರವನ್ನು ಬಿಡುಗಡೆ ಮಾಡಿರುವುದು ಆಡಳಿತದ ಗಮನಕ್ಕೆ ಬಂದಿದೆ. ಈ ಕಾರ್ಯಕ್ರಮಕ್ಕೆ ಆಡಳಿತದಿಂದ ಯಾವುದೇ ಪೂರ್ವಾನುಮತಿ ಪಡೆದಿಲ್ಲ. ಇಂತಹ ಅನಧಿಕೃತ ಚಟುವಟಿಕೆಯು ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನ ಶಾಂತಿ ಮತ್ತು ಸಾಮರಸ್ಯವನ್ನು ಕದಡಬಹುದು. ಹೀಗಾಗಿ ಕಾರ್ಯಕ್ರಮವನ್ನು ತಕ್ಷಣವೇ ರದ್ದುಗೊಳಿಸಬೇಕು. ಅದು ವಿಫಲವಾದರೆ ವಿಶ್ವವಿದ್ಯಾನಿಲಯದ ನಿಯಮಗಳ ಪ್ರಕಾರ ಕಟ್ಟುನಿಟ್ಟಾದ ಶಿಸ್ತು ಕ್ರಮವನ್ನು ಪ್ರಾರಂಭಿಸಬಹುದು” ಎಂದು ಎಚ್ಚರಿಸಿತ್ತು.

ಆದರೆ ಜೆಎನ್‌ಯು ವಿದ್ಯಾರ್ಥಿ ಸಂಘಟನೆಯು ಅದನ್ನು ಪರಿಗಣಿಸದೆ ಅಧ್ಯಕ್ಷೆ ಐಷೆ ಘೋಷ್‌ ಅವರು,“ಅತಿದೊಡ್ಡ ‘ಪ್ರಜಾಪ್ರಭುತ್ವ’ದ ‘ಚುನಾಯಿತ ಸರ್ಕಾರ’ವು ‘ನಿಷೇಧಿಸಿದ’ ಸಾಕ್ಷ್ಯಚಿತ್ರ ಪ್ರದರ್ಶನಕ್ಕಾಗಿ ನಮ್ಮೊಂದಿಗೆ ಸೇರಿ.” ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರೆ.

2002 ರ ಗುಜರಾತ್ ಗಲಭೆಗಳು ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಅಡಿಯಲ್ಲಿ ಕೇಂದ್ರದ CAA ನಂತಹ ಕೆಲವು ನೀತಿಗಳನ್ನು ಒಳಗೊಂಡಿರುವ ಬಗ್ಗೆ “ಭಾರತ: ಮೋದಿ ಪ್ರಶ್ನೆ” ಎಂಬ ಶೀರ್ಷಿಕೆಯ ಸಾಕ್ಷ್ಯಚಿತ್ರವು ಚರ್ಚಿಸಿದೆ. ಸಾಕ್ಷ್ಯಚಿತ್ರದ ಬಗ್ಗೆ ಪ್ರತಿಕ್ರಿಯಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯವು, “ಸಾಕ್ಷ್ಯಚಿತ್ರವು ಪಕ್ಷಪಾತದಿಂದ ಕೂಡಿದ್ದು, ವಸ್ತುನಿಷ್ಠತೆಯ ಕೊರತೆ ಮತ್ತು ಇನ್ನೂ ಮುಂದುವರಿದ ವಸಾಹತುಶಾಹಿ ಮನಸ್ಥಿತಿಯನ್ನು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಹೇಳಿತ್ತು.

ಇದನ್ನೂ ಓದಿ: ಜೆಎನ್‌ಯು ವಿದ್ಯಾರ್ಥಿ ಸಂಘದಿಂದ ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ; ರದ್ದು ಮಾಡಿ ಎಂದ ವಿಶ್ವವಿದ್ಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...