Homeಕರ್ನಾಟಕಎಸ್‌.ಎಲ್. ಬೈರಪ್ಪ, ಎಸ್‌.ಎಂ. ಕೃಷ್ಣ, ಸುಧಾ ಮೂರ್ತಿ ಸೇರಿ ರಾಜ್ಯದ 8 ಜನರಿಗೆ ಪದ್ಮ ಪ್ರಶಸ್ತಿ

ಎಸ್‌.ಎಲ್. ಬೈರಪ್ಪ, ಎಸ್‌.ಎಂ. ಕೃಷ್ಣ, ಸುಧಾ ಮೂರ್ತಿ ಸೇರಿ ರಾಜ್ಯದ 8 ಜನರಿಗೆ ಪದ್ಮ ಪ್ರಶಸ್ತಿ

6 ಪದ್ಮ ವಿಭೂಷಣ, 9 ಪದ್ಮಭೂಷಣ ಮತ್ತು 91 ಪದ್ಮಶ್ರೀ ಪ್ರಶಸ್ತಿಗಳು ಸೇರಿದಂತೆ 106 ಪದ್ಮ ಪ್ರಶಸ್ತಿಗಳನ್ನು ಈ ವರ್ಷ ಘೋಷಿಸಲಾಗಿದೆ

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ, ಸಾಹಿತಿ ಎಸ್‌.ಎಲ್. ಬೈರಪ್ಪ ಹಾಗೂ ಸುಧಾಮೂರ್ತಿ ಸೇರಿದಂತೆ ರಾಜ್ಯದ ಎಂಟು ಜನರು ಸೇರಿ ದೇಶದ ಒಟ್ಟು 106 ಜನರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಪ್ರಮುಖವಾಗಿ ತಬಲಾ ಮಾಂತ್ರಿಕ ಜಾಕೀರ್ ಹುಸೇನ್, ‘RRR’ ಸಂಗೀತ ಸಂಯೋಜಕ ಎಂ.ಎಂ. ಕೀರವಾಣಿ, ನಟಿ ರವೀನಾ ಟಂಡನ್, ಗಾಯಕರಾದ ಸುಮನ್ ಕಲ್ಯಾಣಪುರ ಮತ್ತು ವಾಣಿ ಜೈರಾಮ್ ಈ ಪಟ್ಟಿಯಲ್ಲಿ ಇದ್ದಾರೆ.

2023ರ ಗಣರಾಜ್ಯೋತ್ಸವದ ಮುನ್ನಾದಿನದಂದು ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಪ್ರಸಿದ್ಧ ವಾಸ್ತುಶಿಲ್ಪಿ ಬಾಲಕೃಷ್ಣ ದೋಷಿ, ವೈದ್ಯಕೀಯ ವೃತ್ತಿಪರ ದಿಲೀಪ್ ಮಹಲನಾಬಿಸ್, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಮತ್ತು ಇತರ ನಾಲ್ವರಿಗೆ ಮರಣೋತ್ತರವಾಗಿ ಪ್ರಶಸ್ತಿ ನೀಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕದಿಂದ ಒಟ್ಟು ಎಂಟು ಜನರಿಗೆ ಪದ್ಮ ಪ್ರಶಸ್ತಿಗಳನ್ನು ನೀಡಲಾಗಿದ್ದು, ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರಿಗೆ ಪದ್ಮವಿಭೂಷಣ ಘೋಷಣೆಯಾಗಿದ್ದು, ಸಾಹಿತಿ ಎಸ್‌ಎಲ್ ಬೈರಪ್ಪ ಹಾಗೂ ಸುಧಾ ಮೂರ್ತಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ಒಲಿದಿದೆ. ಇನ್ನು ಉಳಿದಂತೆ ಖಾದರ್‌ ವಲ್ಲಿ ಡುಡೆಕಳ, ರಾಣಿ ಮಾಚಯ್ಯ, ನಾಡೋಜ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ, ಶಾ ರಶೀದ್ ಅಹ್ಮದ್‌ ಖಾದ್ರಿ, ಎಸ್‌. ಸುಬ್ಬರಾಮನ್ ಅವರಿಗೆ ಪದಶ್ರೀ ಪ್ರಶಸ್ತಿ ದೊರೆತಿದೆ.

ಅಧಿಕೃತ ಹೇಳಿಕೆಯ ಪ್ರಕಾರ, ಈ ವರ್ಷ 6 ಪದ್ಮ ವಿಭೂಷಣ, 9 ಪದ್ಮಭೂಷಣ ಮತ್ತು 91 ಪದ್ಮಶ್ರೀ ಪ್ರಶಸ್ತಿಗಳು ಸೇರಿದಂತೆ 106 ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಪಟ್ಟಿಯಲ್ಲಿ 19 ಮಹಿಳಾ ಪ್ರಶಸ್ತಿ ಪುರಸ್ಕೃತರಲ್ಲಿ, ಏಳು ಮಹಿಳೆಯರು ಮರಣೋತ್ತರವಾಗಿ ಪ್ರಶಸ್ತಿ ಪಡೆದಿದ್ದಾರೆ. ಅದಾಗ್ಯೂ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನಕ್ಕೆ ಯಾರನ್ನೂ ಹೆಸರಿಸಲಾಗಿಲ್ಲ.

ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆಗಳು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. “ರಾಷ್ಟ್ರಕ್ಕಾಗಿ ತಮ್ಮ ಶ್ರೀಮಂತ ಮತ್ತು ವೈವಿಧ್ಯಮಯ ಕೊಡುಗೆಗಳನ್ನು ನೀಡಿ, ನಮ್ಮ ಬೆಳವಣಿಗೆಯ ಪಥವನ್ನು ಹೆಚ್ಚಿಸಲು ನಡೆಸಿದ ಅವರ ಪ್ರಯತ್ನಗಳನ್ನು ಭಾರತವು ಗೌರವಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಅಮೇರಿಕಾ ಮೂಲದ ಗಣಿತಶಾಸ್ತ್ರಜ್ಞ ಶ್ರೀನಿವಾಸ್ ವರಧನ್ ಅವರನ್ನೂ ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಖ್ಯಾತ ಕೈಗಾರಿಕೋದ್ಯಮಿ ಕುಮಾರ ಮಂಗಲಂ ಬಿರ್ಲಾ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಸರ್ಕಾರದ ಹೇಳಿಕೆ ತಿಳಿಸಿದೆ. ರಾಕೇಶ್ ರಾಧೇಶ್ಯಾಮ್ ಜುಂಜುನ್ವಾಲಾ (ಮರಣೋತ್ತರ), ಮಣಿಪುರ ಬಿಜೆಪಿ ಅಧ್ಯಕ್ಷ ತೌನೋಜಮ್ ಚೋಬಾ ಸಿಂಗ್ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದಾರೆ. ಈ ಪ್ರಶಸ್ತಿಗಳನ್ನು ರಾಷ್ಟ್ರಪತಿ ಭವನದಲ್ಲಿ ಸಾಮಾನ್ಯವಾಗಿ ಪ್ರತಿ ವರ್ಷ ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ನಡೆಯುವ ಸಮಾರಂಭಗಳಲ್ಲಿ ರಾಷ್ಟ್ರಪತಿಗಳು ಪ್ರದಾನ ಮಾಡುತ್ತಾರೆ.

ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನು ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಎಂಬ ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ. ಕಲೆ, ಸಾಮಾಜಿಕ ಕಾರ್ಯ, ಸಾರ್ವಜನಿಕ ವ್ಯವಹಾರಗಳು, ವಿಜ್ಞಾನ ಮತ್ತು ಇಂಜಿನಿಯರಿಂಗ್, ವ್ಯಾಪಾರ ಮತ್ತು ಉದ್ಯಮ, ಔಷಧ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ನಾಗರಿಕ ಸೇವೆ ಇತ್ಯಾದಿ ವಿವಿಧ ವಿಭಾಗಗಳು ಅಥವಾ ಚಟುವಟಿಕೆಗಳ ಕ್ಷೇತ್ರಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ ‘ಪದ್ಮವಿಭೂಷಣ’, ಉನ್ನತ ಶ್ರೇಣಿಯ ವಿಶಿಷ್ಟ ಸೇವೆಗಾಗಿ ‘ಪದ್ಮಭೂಷಣ’ ಮತ್ತು ಯಾವುದೇ ಕ್ಷೇತ್ರದಲ್ಲಿನ ವಿಶಿಷ್ಟ ಸೇವೆಗಾಗಿ ‘ಪದ್ಮಶ್ರೀ’ ಪ್ರಶಸ್ತಿಯನ್ನು ನೀಡಲಾಗುತ್ತದೆ. ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಶಸ್ತಿಗಳನ್ನು ಪ್ರಕಟಿಸಲಾಗುತ್ತದೆ.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರದ ವಿರುದ್ಧ ಟ್ವೀಟ್ ಮಾಡಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಮಾಜಿ ಸಚಿವ ಎಕೆ ಆಂಟನಿ ಪುತ್ರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...