Homeಚಳವಳಿ46 ದಿನ ಪೂರೈಸಿದ ಒಳಮೀಸಲಾತಿಗಾಗಿನ ಧರಣಿ: ಬಜೆಟ್ ಅಧಿವೇಶನದ ವೇಳೆಗೆ ಬೃಹತ್ ಹೋರಾಟಕ್ಕೆ ನಿರ್ಧಾರ

46 ದಿನ ಪೂರೈಸಿದ ಒಳಮೀಸಲಾತಿಗಾಗಿನ ಧರಣಿ: ಬಜೆಟ್ ಅಧಿವೇಶನದ ವೇಳೆಗೆ ಬೃಹತ್ ಹೋರಾಟಕ್ಕೆ ನಿರ್ಧಾರ

- Advertisement -
- Advertisement -

ಸಾಮಾಜಿಕ ನ್ಯಾಯಕ್ಕಾಗಿ‌ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ನೇತೃತ್ವದಲ್ಲಿ ಮೀಸಲಾತಿ ವರ್ಗೀಕರಣಕ್ಕೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿಯು 46 ದಿನ ಪೂರೈಸಿದೆ. ಸತತ ಹೋರಾಟ ಮಾಡಿದರೂ ರಾಜ್ಯ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲು ಸಮಿತಿಯು ನಿರ್ಧರಿಸಿದೆ.

ಧರಣಿಯ ಸ್ಥಳದಲ್ಲಿ 74 ನೇ ಗಣರಾಜ್ಯೋತ್ಸವವನ್ನು ಬಾಬಾಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಹೂ ಹಾಕುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಹಿರಿಯ ಹೋರಾಟಗಾರ ಎನ್.ವೆಂಕಟೇಶ್‌ರವರು ಮಾತನಾಡಿ, “ಒಳಮೀಸಲಾತಿ ಜಾರಿ ಆಗುವವರೆಗೂ ಈ ಹೋರಾಟ ನಿಲ್ಲುವುದಿಲ್ಲ. ಬಿಜೆಪಿ ಪಕ್ಷವು ಕೇವಲ ಮಾತುಗಳ ಮೂಲಕ ಹೊಟ್ಟೆ ತುಂಬಿಸುತ್ತಿದೆಯೆ ಹೊರತು ಒಳಮೀಸಲಾತಿ ಜಾರಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಅವರು ಮಾಡುತ್ತಿರುವ ಮೋಸಕ್ಕೆ ಚುನಾವಣೆ ಸಂದರ್ಭದಲ್ಲಿ ತಕ್ಕ ಪಾಠ ಕಲಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ದಲಿತ ಸಮುದಾಯಗಳೆಲ್ಲ ಒಂದಾಗಿ ಇಂದು ಈ ಹೋರಾಟ ನಡೆಸುತ್ತಿದ್ದೇವೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ವರ್ಗೀಕರಣ ಮಾಡಬೇಕಿರುವುದು ಸಂವಿಧಾನದ ಆಶಯ. ಆದರೆ ಆಳುವ ಸರ್ಕಾರಗಳು ಸಂವಿಧಾನವನ್ನೆ ಗಾಳಿಗೆ ತೂರಿವೆ. ಹಾಗಾಗಿ ಹೋರಾಟವೊಂದೆ ನಮಗುಳಿದಿರುವ ದಾರಿ. ಚುನಾವಣೆ ಸಂದರ್ಭದಲ್ಲಿ ಈ ಸರ್ಕಾರಕ್ಕೆ ಪಾಠ ಕಲಿಸಲು ದಲಿತ ಸಮುದಾಯ ನಿರ್ಧರಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂದಿನ ಗಣರಾಜ್ಯೋತ್ಸವ ಆಚರಣೆ ವೇಳೆ ಒಳ ಮೀಸಲಾತಿ ಹೋರಾಟವನ್ನು ಮುನ್ನಡೆಸುತ್ತಿರುವ ಹೋರಾಟಗಾರ ಅಂಬಣ್ಣ ಅರೋಲಿಕರ್ ಸಂವಿಧಾನ ಪೀಠಿಕೆ ಓದಿದರು. ಎಸ್.ಮಾರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆನಂತರ ಸಭೆ ಸೇರಿ ಮೂರು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.

1. ಸಾಮಾಜಿಕ ನ್ಯಾಯದ ಉಳಿವಿಗಾಗಿ ಸಂವಿಧಾನವನ್ನು ಸಂರಕ್ಷಿಸಿಕೊಳ್ಳುವುದು ದಲಿತ ಚಳವಳಿಯ ಆದ್ಯತೆಯಾಗಿರುವುದರಿಂದ ಒಳಮೀಸಲಾತಿ ಹೋರಾಟದ ಜೊತೆಗೇ ಸಂವಿಧಾನ ಸಂರಕ್ಷಣಾ ಹೋರಾಟಗಳನ್ನು ರೂಪಿಸಲು ನಿರ್ಧರಿಸಲಾಯಿತು.

2. ಮುಂದಿನ ಚುನಾವಣೆಯಲ್ಲಿ ವಚನಭ್ರಷ್ಟ, ದಲಿತ ವಿರೋಧಿ, ಕೋಮುವಾದಿ ಬಿಜೆಪಿ ಪಕ್ಷವನ್ನು ಸೋಲಿಸಬೇಕು ಮತ್ತು ಅದಕ್ಕಾಗಿ ಫೆಬ್ರವರಿ ಮೊದಲ ವಾರದಿಂದ ರಾಜ್ಯದ 150 ವಿಧಾನಸಭಾ ಕ್ಷೇತ್ರಗಳಲ್ಲಿ ಎಲ್ಲಾ ಪರಿಶಿಷ್ಟ ಜಾತಿಗಳ ನಾಯಕರ ಪ್ರವಾಸ ಹಮ್ಮಿಕೊಳ್ಳುವುದಾಗಿ ತೀರ್ಮಾನಿಸಲಾಯಿತು.

3. ಮಾದಿಗ ಸಂಬಂಧಿತ ತ್ರಿಮತಸ್ಥ (ಸಮಗಾರ, ಮೋಚಿ, ಮಚ್ಚಗಾರ) ಸಮಯದಾಯಗಳಿಗೆ ಪ್ರತ್ಯೇಕ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಒಕ್ಕರಲಿನಿಂದ‌ ಒತ್ತಾಯಿಸಲಾಯಿತು.

ಸಭೆಯಲ್ಲಿ ಹೋರಾಟಗಾರಾದ ಹೆಣ್ಣೂರು ಶ್ರೀನಿವಾಸ್, ಬಸವರಾಜ ಕೌತಾಳ್, ಆರ್.ಮೋಹನರಾಜ್, ಸಿ.ದಾನಪ್ಪ ಮದೋಗಲ್, ಎಂ.ಗುರುಮೂರ್ತಿ, ಕೇಶವಮೂರ್ತಿ, ಕರ್ನಾಟಕ ಜನಶಕ್ತಿಯ ಗೌರಿ, ಶಿವರಾಜ ಅಕ್ಕರಕಿ, ಗೌಡಗೆರೆ ಮಾಯುಶ್ರೀ, ಬಿ.ಆರ್.ಭಾಸ್ಕರ್ ಪ್ರಸಾದ್, ನಾಗಮಣಿ, ಕರಿಯಪ್ಪ ಗುಡಿಮನಿ, ಕನಕೇನಹಳ್ಳಿ ಕೃಷ್ಣಪ್ಪ, ಹೇಮರಾಜ್, ಪುಷ್ಪಲತ, ವೆಂಕಟೇಶ್, ನಂದಕುಮಾರ್, ಕರ್ನಾಟಕ ರಾಜ್ಯ ತ್ರಿಮತಸ್ಥ ಸಮಾಜ ಪರಿಷತ್ ಅಧ್ಯಕ್ಷ ಗುರುರಾಜ್ ಬೇಡಿಕರ್, ಅಲೆಮಾರಿ ಬುಡಕಟ್ಟು ಮಹಾಸಭಾ ಅಧ್ಯಕ್ಷ ಬಿ.ಎಲ್.ಹನುಮಂತಪ್ಪ, ಸಹಬಾಳೆ ಸಂಸ್ಥೆಯ ಮಹಮದ್ ಯೂಸೂಫ್ ಖನಿ ಮೊದಲಾದವರು ಧರಣಿಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ ; ಒಳ ಮೀಸಲಾತಿ: ಕಣ್ಣ ಗಾಯವನರಿಯುವ ಕ್ರಮ – ಹುಲಿಕುಂಟೆ ಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...