ಬ್ರಾಹ್ಮಣ ಸಮುದಾಯದ ವ್ಯಕ್ತಿಗಳ ಒಡೆತನದಲ್ಲಿ ಇರುವ ಪತ್ರಿಕೆಗಳಿಗೆ ಪ್ರತಿ ತಿಂಗಳು ಜಾಹಿರಾತು ನೀಡುವ ಬಗ್ಗೆ ರಾಜ್ಯ ವಾರ್ತಾ ಇಲಾಖೆ ಸುತ್ತೋಲೆ ಹೊರಡಿಸಿದೆ. ಈ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದು, ‘ಮುಖ್ಯಮಂತ್ರಿ ಬೊಮ್ಮಾಯಿ ಅವರು ನಾಗಪುರದ ಆದೇಶವನ್ನು ಚಾಚೂ ತಪ್ಪದೆ ಪಾಲಿಸುತ್ತಿರುವ ನಿಷ್ಠಾವಂತ ನೌಕರ’ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನವರಿ 24 ರ ಮಂಗಳವಾರ ಹೊರಡಿಸಲಾಗಿರುವ ಸುತ್ತೋಲೆಯಲ್ಲಿ, “ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಬ್ರಾಹ್ಮಣ ಸಮುದಾಯದ ಒಡೆತನದ ಪತ್ರಿಕೆಗಳಿಗೆ ಪ್ರತೀ ತಿಂಗಳು ಎರಡು ಪುಟಗಳ ಜಾಹಿರಾತು ಬಿಡುಗಡೆ ಮಾಡಲು ಸರ್ಕಾರದ ಮಂಜುರಾತಿ ಆದೇಶ ಹೊರಡಿಸಲಾಗಿದೆ” ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಬ್ರಾಹ್ಮಣದ ಒಡೆತನೆ ಪತ್ರಿಕೆಗಳಿಗೆ ಜಾಹಿರಾತು ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರವು ವಾರ್ತಾ ಇಲಾಖೆಗೆ ಜನವರಿ 13ರ ಶುಕ್ರವಾರ ಆದೇಶ ನೀಡಿದೆ ಎಂದು ಸುತ್ತೋಲೆಯಲ್ಲಿ ವಾರ್ತಾ ಇಲಾಖೆ ಉಲ್ಲೇಖಿಸಿದೆ. ಈ ಬಗ್ಗೆ 2022-23ರ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾಗಿದೆ ಎಂದು ಕೂಡಾ ಸುತ್ತೋಲೆಯು ವಿಷಯ ಸೂಚಿಯಲ್ಲಿ ತಿಳಿಸಿದೆ.
ಬ್ರಾಹ್ಮಣ ಸಮುದಾಯದ ಒಡೆತನದಲ್ಲಿ ಇರುವ ನಾಲ್ಕು ಪುಟಗಳಲ್ಲಿ ಪ್ರಕಟವಾಗುತ್ತಿರುವ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಸರ್ಕಾರದ ಆದೇಶದಲ್ಲಿ ತಿಳಿಸಿರುವ ಷರತ್ತಿಗೊಳಪಟ್ಟು ಜಾಹೀರಾತು ಬಿಡುಗಡೆ ಮಾಡಲು ಅರ್ಹ ಪತ್ರಿಕೆಗಳ ಮಾಹಿತಿ ನೀಡುವಂತೆ ಸುತ್ತೋಲೆಯು ವಾರ್ತಾ ಇಲಾಖೆಯು ಕೇಳಿದೆ.
ಸುತ್ತೋಲೆಯು ಸರ್ಕಾರದ ಆದೇಶದಂತೆ ಹೊರಡಿಸಲಾಗಿದ್ದು, ವಾರ್ತಾ ಇಲಾಖೆಯ ಆಯುಕ್ತರ ಪರವಾಗಿ ಉಪನಿರ್ದೇಶಕರಾದ ಕೆ.ಪಿ. ಪುಟ್ಟಸ್ವಾಮಯ್ಯ ಅವರ ಸಹಿಯಿದೆ.
ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ, “ಬಿಜೆಪಿ ಸರ್ಕಾರ ಪತ್ರಿಕೆಗಳ ಜಾತಿ ಮೂಲ ಹುಡುಕಿ ಜಾಹಿರಾತು ನೀಡಲು ಹೊರಟಿದೆ. ಪ್ರತಿ ತಿಂಗಳು 2 ಪುಟಗಳ ಸರ್ಕಾರದ ಜಾಹಿರಾತು ಬ್ರಾಹ್ಮಣರ ಮಾಲೀಕತ್ವದ ಪತ್ರಿಕೆಗಳಿಗೆ ಮಾತ್ರವಂತೆ! ಉಳಿದ ಜಾತಿಯವರದ್ದು ಪತ್ರಿಕೆಗಳಲ್ಲವೇ ಮುಖ್ಯಮಂತ್ರಿ ಬೊಮ್ಮಾಯಿ ಅವರೇ? ಮುಖ್ಯಮಂತ್ರಿ ನಾಗಪುರದ ಆದೇಶವನ್ನು ಚಾಚೂ ತಪ್ಪದೆ ಪಾಲಿಸುತ್ತಿರುವ ನಾಗಪುರದ ನಿಷ್ಠಾವಂತ ನೌಕರರಾಗಿದ್ದಾರೆ” ಎಂದು ಕಿಡಿಕಾರಿದ್ದಾರೆ.
ಪತ್ರಿಕೆಗಳ ಜಾತಿ ಮೂಲ ಹುಡುಕಿ ಜಾಹಿರಾತು ನೀಡಲು ಹೊರಟಿದೆ ಬಿಜೆಪಿ ಸರ್ಕಾರ.
ಪ್ರತಿ ತಿಂಗಳು 2 ಪುಟಗಳ ಸರ್ಕಾರದ ಜಾಹಿರಾತು ಬ್ರಾಹ್ಮಣರ ಮಾಲೀಕತ್ವದ ಪತ್ರಿಕೆಗಳಿಗೆ ಮಾತ್ರವಂತೆ!
ಉಳಿದ ಜಾತಿಯವರದ್ದು ಪತ್ರಿಕೆಗಳಲ್ಲವೇ @BSBommai ಅವರೇ?ನಾಗಪುರದ ಆದೇಶವನ್ನು ಚಾಚೂ ತಪ್ಪದೆ ಪಾಲಿಸುತ್ತಿರುವ ನಾಗಪುರದ ನಿಷ್ಠಾವಂತ ನೌಕರರಾಗಿದ್ದಾರೆ ಸಿಎಂ. pic.twitter.com/BDNC4kQtXT
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) January 27, 2023
ಇದನ್ನೂ ಓದಿ: EWS: ದಲಿತ-ಶೂದ್ರರ ಮೀಸಲಾತಿಯ ಕ್ರಾಂತಿಗೆ ಬ್ರಾಹ್ಮಣ್ಯದ ಪ್ರತಿಕ್ರಾಂತಿ


