HomeಚಳವಳಿBBC ಸಾಕ್ಷ್ಯಚಿತ್ರ ಪ್ರದರ್ಶನ: ದೆಹಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಬಂಧನ, ಕಲಾ ವಿಭಾಗದಲ್ಲಿ 144 ಸೆಕ್ಷನ್ ಜಾರಿ

BBC ಸಾಕ್ಷ್ಯಚಿತ್ರ ಪ್ರದರ್ಶನ: ದೆಹಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಬಂಧನ, ಕಲಾ ವಿಭಾಗದಲ್ಲಿ 144 ಸೆಕ್ಷನ್ ಜಾರಿ

- Advertisement -
- Advertisement -

ದೇಶದ ವಿವಿಧ ವಿಶ್ವವಿದ್ಯಾನಿಲಯ ಕ್ಯಾಂಪಸ್‌ಗಳಲ್ಲಿ ಪ್ರಧಾನಿ ಮೋದಿ ಬಗ್ಗೆ ಬಿಬಿಸಿ ತಯಾರಿಸಿರುವ ಸಾಕ್ಷ್ಯಚಿತ್ರ ಪ್ರದರ್ಶನ ನಡೆಯುತ್ತಿರುವ ಮಧ್ಯೆ, ದೆಹಲಿ ವಿಶ್ವವಿದ್ಯಾಲಯದ ಕಲಾ ವಿಭಾಗದ ಹೊರಗೆ ಶುಕ್ರವಾರ ಹಲವಾರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಸಾಕ್ಷ್ಯಚಿತ್ರ ಪ್ರದರ್ಶನ ಮಾಡುವುದಾಗಿ ವಿದ್ಯಾರ್ಥಿಗಳು ಘೋಷಿಸಿದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ವಿಶ್ವವಿದ್ಯಾಲಯದ ಕಲಾ ವಿಭಾಗದ ಹೊರಗೆ CrPC ಯ ಸೆಕ್ಷನ್ 144 ಅನ್ನು ವಿಧಿಸಿದ್ದಾರೆ.

ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ವಿದ್ಯಾರ್ಥಿ ಸಂಘಟನೆ NSUI-KSU ಕರೆ ನೀಡಿದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಸೆಕ್ಷನ್ 144 (ದೊಡ್ಡ ಸಭೆಗಳನ್ನು ನಿಷೇಧಿಸುವುದು) ಅನ್ನು ವಿಧಿಸಿದ್ದಾರೆ. ದೆಹಲಿ ವಿಶ್ವವಿದ್ಯಾನಿಲಯದ ಕಲಾ ವಿಭಾಗದ ಹೊರಗೆ ಹೆಚ್ಚಿನ ಸಂಖ್ಯೆಯ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಬಿಸಿ ಸಾಕ್ಷ್ಯಚಿತ್ರವು 2002 ರ ಗುಜರಾತ್ ಗಲಭೆಯಲ್ಲಿ ನರೇಂದ್ರ ಮೋದಿಯವರ ಪಾತ್ರವನ್ನು ವಿಮರ್ಶಾತ್ಮಕವಾಗಿ ಚರ್ಚಿಸಿದೆ. ಗಲಭೆ ವೇಳೆ ಪ್ರಧಾನಿ ಮೋದಿ ಗುಜರಾತ್‌ನ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಸಾಕ್ಷ್ಯಚಿತ್ರವು 2002 ರ ಹಿಂಸಾಚಾರವನ್ನು ಸ್ವತಂತ್ರವಾಗಿ ತನಿಖೆ ನಡೆಸಿದ್ದ ಇಂಗ್ಲೇಂಡ್‌ನ ಅಧಿಕಾರಿಗಳನ್ನು ಸಂದರ್ಶಿಸಿತ್ತು, ಜೊತೆಗೆ ಗಲಭೆಯನ್ನು ವರದಿ ಮಾಡಿದ್ದ ಬಿಬಿಸಿ ಪತ್ರಕರ್ತರನ್ನು ಕೂಡಾ ಸಂದರ್ಶಿಸಿದೆ.

ಒಕ್ಕೂಟ ಸರ್ಕಾರವು ಸಾಕ್ಷ್ಯಚಿತ್ರದ ವಿರುದ್ಧ ವಿಧಿಸಿದ ಸೆನ್ಸಾರ್ಶಿಪ್ ಅನ್ನು ವಿರೋಧಿಸಿ, ಹಲವಾರು ವಿದ್ಯಾರ್ಥಿ ಸಂಘಟನೆಗಳು ದೇಶಾದ್ಯಂತ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಏಕಕಾಲದಲ್ಲಿ ಪ್ರದರ್ಶನಗಳನ್ನು ಆಯೋಜಿಸುತ್ತಿವೆ. ಜನವರಿ 26ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ, ಇಂಗ್ಲಿಷ್ ಮತ್ತು ವಿದೇಶಿ ಭಾಷೆಗಳ ವಿಶ್ವವಿದ್ಯಾಲಯ (EFLU) ಮತ್ತು ಹೈದರಾಬಾದ್ ವಿಶ್ವವಿದ್ಯಾಲಯ (UoH) ವಿದ್ಯಾರ್ಥಿ ಸಂಘಟನೆಗಳು ತಮ್ಮ ಕ್ಯಾಂಪಸ್ ಆವರಣದಲ್ಲಿ ನಿಷೇಧಿತ ಸಾಕ್ಷ್ಯಚಿತ್ರವನ್ನು ವೀಕ್ಷಿಸಿವೆ.

ಸುಮಾರು 60-70 ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಜಮಾಯಿಸಿ ತಮ್ಮ ಸೆಲ್ ಫೋನ್ ಮತ್ತು ಲ್ಯಾಪ್‌ಟಾಪ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದರು ಎಂದು EFLU ನ ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ. ಕಾರ್ಯಕ್ರಮವನ್ನು  ಪೂರ್ವಸಿದ್ಧತೆಯಿಲ್ಲದೆ ಯೋಜಿಸಲಾಗಿದ್ದು, ವಿಶ್ವವಿದ್ಯಾಲಯದ ಆಡಳಿತವು ತಡೆಯಬಹುದಾಗಿದ್ದರಿಂದ ಕಾರ್ಯಕ್ರಮದ ಬಗ್ಗೆ ಹೆಚ್ಚು ಪ್ರಚಾರ ಮಾಡಲಾಗಿಲ್ಲ ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

ಚಿತ್ರ ಪ್ರದರ್ಶನದ ನಂತರ, ಸಾಕ್ಷ್ಯಚಿತ್ರದ ಬಗ್ಗೆ ಸಂವಾದ ನಡೆಸಲಾಗಿದೆ ಎಂದು ವಿದ್ಯಾರ್ಥಿ ಹೇಳಿದ್ದಾರೆ. ಇಷ್ಟೆ ಅಲ್ಲದೆ, ಸೆನ್ಸಾರ್‌ಶಿಪ್‌ನಿಂದಾಗಿ ಉಂಟಾಗುವ ಸಮಸ್ಯೆಗಳು, ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿಗಳು ಮತ್ತು ವಿಶ್ವವಿದ್ಯಾಲಯದಲ್ಲಿ ದಮನ ಸಂಸ್ಕೃತಿಯ ಕುರಿತು ಚರ್ಚೆ ನಡೆಯಿತು ಎಂದು ವಿದ್ಯಾರ್ಥಿ ಹೇಳಿದ್ದಾರೆ.

ಅದೇ ರೀತಿ, ಹೈದರಾಬಾದ್ ವಿಶ್ವವಿದ್ಯಾನಿಲಯದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಘಟಕವು ಗುರುವಾರ ಕ್ಯಾಂಪಸ್‌ನ ಲೇಡಿಸ್ ಹಾಸ್ಟೆಲ್‌ನಲ್ಲಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಆಯೋಜಿಸಿತ್ತು. ಇದಕ್ಕೆ ಪ್ರತೀಕಾರವಾಗಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಸದಸ್ಯರು ಕ್ಯಾಂಪಸ್‌ನ ಬೇರೆ ಸ್ಥಳದಲ್ಲಿ ದಿ ಕಾಶ್ಮೀರ ಫೈಲ್ಸ್ ಅನ್ನು ಪ್ರದರ್ಶಿಸಿದರು. ಎರಡು ಪ್ರದರ್ಶನಗಳೂ ಯಾವುದೇ ಗೊಂದಲವಿಲ್ಲದೆ ಶಾಂತಿಯುತವಾಗಿ ಮುಕ್ತಾಯಗೊಂಡಿವೆ.

ಇದಕ್ಕೂ ಮೊದಲು, ಫ್ರಟರ್ನಿಟಿ ಮೂವ್‌ಮೆಂಟ್ ಸಂಘಟನೆಗೆ ಸೇರಿದ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದ್ದರು. ಹೀಗಾಗಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ವಿಚಾರಣೆಯನ್ನು ಪ್ರಾರಂಭಿಸಿತ್ತು.

ಇದನ್ನೂ ಓದಿ: ಸರ್ಕಾರ v/s ರಾಜ್ಯಪಾಲ | ಚೆನ್ನೈ ಗಣರಾಜ್ಯೋತ್ಸವ ಪರೇಡ್‌ ಮುಂಚೂಣಿಯಲ್ಲಿ ‘ತಮಿಳುನಾಡು ಚಿರಾಯುವಾಗಲಿ’ ಟ್ಯಾಬ್ಲೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....