Homeಕರ್ನಾಟಕ‘ನೀವೇಕೆ ತಲೆಕೆಡಿಸಿಕೊಳ್ಳುತ್ತೀರಿ?’: ಪಂಪ್‌ವೆಲ್ ದ್ವೇಷ ಭಾಷಣಕ್ಕೆ ಕ್ರಮ ಜರುಗಿಸಿದ್ದೀರಾ ಎಂದಾಗ ಪೊಲೀಸ್ ಅಧಿಕಾರಿ ಪ್ರತಿಕ್ರಿಯೆ

‘ನೀವೇಕೆ ತಲೆಕೆಡಿಸಿಕೊಳ್ಳುತ್ತೀರಿ?’: ಪಂಪ್‌ವೆಲ್ ದ್ವೇಷ ಭಾಷಣಕ್ಕೆ ಕ್ರಮ ಜರುಗಿಸಿದ್ದೀರಾ ಎಂದಾಗ ಪೊಲೀಸ್ ಅಧಿಕಾರಿ ಪ್ರತಿಕ್ರಿಯೆ

- Advertisement -
- Advertisement -

“ಶರಣ್ ಪಂಪ್‌ವೆಲ್‌ ಮಾಡಿರುವ ಭಾಷಣ ಸಂಬಂಧ ನೀವೇಕೆ ತಲೆ ಕೆಡಿಸಿಕೊಳ್ಳುತ್ತೀರಿ?”- ಹೀಗೆ ಕೇಳಿದ್ದು ತುಮಕೂರು ತಿಲಕ್ ಪಾರ್ಕ್ ಸರ್ಕಲ್ ಪೊಲೀಸ್‌ ಇನ್‌ಸ್ಪೆಕ್ಟರ್‌ (ಸಿಪಿಐ) ನವೀನ್ ಕುಮಾರ್.

ತುಮಕೂರು ನಗರದಲ್ಲಿ ಭಜರಂಗದಳ ಹಮ್ಮಿಕೊಂಡಿದ್ದ ಶೌರ್ಯ ಯಾತ್ರೆಯಲ್ಲಿ ಮಾತನಾಡಿದ್ದ ವಿಎಚ್‌ಪಿ, ಬಿಜೆಪಿ ಮುಖಂಡ ಶರಣ್‌ ಪಂಪ್‌ವೆಲ್‌, ಅಮಾಯಕನಾದ ಫಾಸಿಲ್ ಕೊಲೆಯನ್ನು ಸಮರ್ಥಿಸಿ ಮಾತನಾಡಿದ್ದರಲ್ಲಿ ಸಿಪಿಐಗೆ ಯಾವುದೇ ತಪ್ಪುಗಳು ಕಂಡು ಬಂದಂತೆ ತೋರುತ್ತಿಲ್ಲ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಅಮಾಯಕ ಫಾಸಿಲ್‌ನನ್ನು ಹಿಂದೂ ಸಂಘಟನೆಗಳು ಕೊಂದಿರುವುದಾಗಿ ಒಪ್ಪಿಕೊಂಡಿರುವ ಶರಣ್‌, “ಈ ಕೊಲೆಯಲ್ಲಿ ಪರೋಕ್ಷವಾಗಿ ತನ್ನ ಪಾತ್ರವಿದೆ” ಎಂಬ ಸೂಚನೆಯನ್ನೂ ನೀಡಿದ್ದಾರೆಂಬ ಆಕ್ರೋಶಗಳು ವ್ಯಕ್ತವಾಗುತ್ತಿವೆ.

ಶೌರ್ಯ ಯಾತ್ರೆಯಲ್ಲಿ ಮಾತನಾಡಿದ ಅವರು, “ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಭಾಗಿಯಾಗಿರುವ ಮುಸ್ಲಿಂ ಜಿಹಾದಿಗಳಿಗೆ ಪ್ರತ್ಯುತ್ತರ ನೀಡಲು, ಸುರತ್ಕಲ್‌ನ ಬಿಸಿ ರಕ್ತದ ಯುವಕರು ಸೇಡು ತೀರಿಸಿಕೊಂಡರು” ಎಂದು ಹೇಳಿಕೆ ನೀಡಿದ್ದಾರೆ.

ಈ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆಯೇ ಎಂದು ತಿಳಿಯಲು ಸಿಪಿಐ ಅವರಿಗೆ ಕರೆ ಮಾಡಿದಾಗ, “ಅವರೇನೂ ಮಾತನಾಡಿಲ್ಲವಲ್ಲ” ಎಂದರು. “ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತಿಕಾರವಾಗಿ ಫಾಸಿಲ್ ಕೊಲ್ಲಲಾಯಿತು” ಎಂದು ಮಾತನಾಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ ಎಂದು ತಿಳಿಸಲಾಯಿತು. ಆಗ ಸಿಪಿಐ, “ಅವರೇನು ಮಾತನಾಡಿಲ್ಲ ಬಿಡಿ. ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ ಎಂದರೆ ನೀವ್ಯಾಕೆ ತಲೆಕೆಡಿಸಿಕೊಳ್ಳುತ್ತೀರಿ. ನಾವು ಮಾಡಿಕೊಳ್ಳುತ್ತೇವೆ ಬಿಡಿ” ಎಂದು ದಾಷ್ಟ್ಯದಿಂದ ವರ್ತಿಸಿ ಕರೆ ಕಟ್ ಮಾಡಿದರು. ಹೆಚ್ಚುವರಿ ಪ್ರತಿಕ್ರಿಯೆ ಪಡೆಯಲು ಮತ್ತೆ ಮತ್ತೆ ಕರೆ ಮಾಡಿದಾಗ, ಅವರ ನಂಬರ್‌ (9480802932) ಬ್ಯುಸಿ ಬರುತ್ತಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ ಕುಮಾರ್‌ ಶಹಪುರ್‌ವಾದ್‌ ಅವರ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ಪ್ರಯತ್ನಿಸಿದೆ. ಆದರೆ ಅವರು ಸಂಪರ್ಕಕ್ಕೆ ಲಭ್ಯವಾಗಲಿಲ್ಲ.

ಶರಣ್‌ ಪಂಪ್‌ವೆಲ್‌ ಭಾಷಣದಲ್ಲಿ ಪ್ರಚೋದನಕಾರಿ ಅಂಶಗಳಿಲ್ಲವೇ?

ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಯವರು ನಡೆದಾಡಿದ, ಸರ್ವಜನಾಂಗದ ಶಾಂತಿಯ ತೋಟವಾದ ತುಮಕೂರಿನಲ್ಲಿ ಕೋಮುಗಲಭೆ ಎಬ್ಬಿಸಲು ಶರಣ್ ಪಂಪ್‌ವೆಲ್ ಆಡಿರುವ ಮಾತುಗಳು ಆತಂಕಕಾರಿಯಾಗಿವೆ. ಅವರ ಭಾಷಣದ ವಿಡಿಯೊ ವೈರಲ್ ಆಗಿದೆ. ಭಾಷಣದಿಂದ ಆಯ್ದ ಅಂಶಗಳು ಹೀಗಿವೆ:

“ಎಲ್ಲಾ ಮಸೀದಿಗಳಿಗೆ ನುಗ್ಗಿ ಹನುಮಾನ್ ಚಾಲೀಸ್ ಭಜಿಸುತ್ತೇವೆ ಎಂಬ ಎಚ್ಚರಿಕೆಯನ್ನು ದೇಶಕ್ಕೆ ಕೊಟ್ಟೆವು. ಮುಸಲ್ಮಾನರು ಗಾಬರಿಯಾದರು. ಮೆರವಣಿಗೆ ಆಯೋಜನೆಯನ್ನು ಬಂದ್ ಮಾಡಿದರು…”

“ನಮ್ಮ ಸಾಮರ್ಥ್ಯವನ್ನು ಈ ಜಗತ್ತಿಗೆ ತೋರಿಸಿಕೊಟ್ಟಿದ್ದೇವೆ. ಒಂದು ಸಲ ಗುಜರಾತ್ ಘಟನೆಯನ್ನು ನೆನಪು ಮಾಡಿಕೊಳ್ಳಿ. 59 ಕರಸೇವಕರ ಹತ್ಯೆ ಮಾಡಲಾಯಿತು. ಅದಕ್ಕೆ ಗುಜರಾತ್ ಯಾವ ರೀತಿ ಉತ್ತರ ಕೊಟ್ಟಿತು? ಯಾರು ಕೂಡ ಮನೆಯಲ್ಲಿ ಕೂರಲಿಲ್ಲ. ರಸ್ತೆಗೆ ಇಳಿದರು. ಮನೆಮನೆಗೆ ನುಗ್ಗಿದರು. 59 ಕರಸೇವಕರ ಹತ್ಯೆಗೆ ಪ್ರತಿಯಾಗಿ ಸುಮಾರು ಎರಡು ಸಾವಿರ ಜನರ ಹತ್ಯೆ ಗುಜರಾತ್‌ನಲ್ಲಿ ಆಯಿತು….”

“ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಮುಸಲ್ಮಾನ್ ಜಿಹಾದಿಗಳಿದ್ದಾರೆ. ಅವರಿಗೆ ಉತ್ತರವನ್ನು ಕೊಡಬೇಕೆಂಬ ಕಾರಣಕ್ಕಾಗಿ ಸುರತ್ಕಲ್‌ನಲ್ಲಿದ್ದ ಬಿಸಿ ನೆತ್ತರಿನ ಯುವಕರು ಕೊಂದಿದ್ದಾರೆ. ಯಾರು ಇಲ್ಲದ ಸಮಯದಲ್ಲಿ ಅಲ್ಲ. ಮಾರ್ಕೆಟ್‌ನಲ್ಲಿ ಜನ ಇದ್ದಾಗಲೇ, ಅವರ ಎದುರಲ್ಲೇ ನುಗ್ಗಿ ಅವರಿಗೆ ಹೊಡೆದು ಹತ್ಯೆಗೆ ಪ್ರತಿಕಾರವನ್ನು ತೋರಿಸಿದ್ದು ಹಿಂದೂ ಹುಡುಗರ ತಾಕತ್ತು.”

“ಅವಶ್ಯಕತೆ ಇದ್ದಾಗ ಹೊಡೆದಾಟನೂ ಮಾಡ್ತೀವಿ, ಅನಿವಾರ್ಯ ಇದ್ದಾಗ ನುಗ್ಗಿ ಹೊಡೆದೇ ಹೊಡೆಯುತ್ತೇವೆ. ಸಿದ್ದರಾಮಯ್ಯನವರೇ, ದಕ್ಷಿಣ ಕನ್ನಡ ಮಾತ್ರ ಹಿಂದುತ್ವದ ಪ್ರಯೋಗಶಾಲೆಯಲ್ಲ, ತುಮಕೂರು ಕೂಡ ಮುಂದಿನ ದಿನಗಳಲ್ಲಿ ಪ್ರಯೋಗಶಾಲೆ ಆಗಲಿದೆ…”

– ಈ ಮೇಲಿನ ಭಾಷಣದಲ್ಲಿ ಪೊಲೀಸ್ ಅಧಿಕಾರಿಗೆ ಯಾವುದೇ ತಪ್ಪುಗಳು ಕಂಡಿಲ್ಲವಂತೆ. ಪ್ರಶ್ನಿಸಿದರೆ, “ನೀವ್ಯಾಕೆ ತಲೆಕೆಡಿಸಿಕೊಳ್ಳುತ್ತೀರಿ?” ಎಂದು ಪ್ರತಿಕ್ರಿಯೆ ನೀಡುತ್ತಾರೆ ಸಿಪಿಐ ನವೀನ್‌ಕುಮಾರ್‌.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...