Homeಮುಖಪುಟಮೇಘಾಲಯ: ಸಿಎಂ ವಿರುದ್ಧ ಮಾಜಿ ಉಗ್ರಗಾಮಿ ನಾಯಕನಿಗೆ ಟಿಕೆಟ್ ಘೋಷಿಸಿದ ಬಿಜೆಪಿ

ಮೇಘಾಲಯ: ಸಿಎಂ ವಿರುದ್ಧ ಮಾಜಿ ಉಗ್ರಗಾಮಿ ನಾಯಕನಿಗೆ ಟಿಕೆಟ್ ಘೋಷಿಸಿದ ಬಿಜೆಪಿ

- Advertisement -
- Advertisement -

ಮೇಘಾಲಯದ ದಕ್ಷಿಣ ತುರಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ವಿರುದ್ಧ ಬಿಜೆಪಿಯು ತನ್ನ ರಾಜ್ಯ ಘಟಕದ ಉಪಾಧ್ಯಕ್ಷ ಮತ್ತು ಮಾಜಿ ಉಗ್ರಗಾಮಿ ನಾಯಕ ಬರ್ನಾರ್ಡ್ ಎನ್ ಮರಕ್ ಅವರನ್ನು ತನ್ನ ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ಬರ್ನಾರ್ಡ್ ಎನ್ ಮರಕ್‌ರವರು ಗಾರೋ ಬುಡಕಟ್ಟು ಜನಾಂಗದವರಿಗೆ ಪ್ರತ್ಯೇಕ ರಾಜ್ಯವನ್ನು ರೂಪಿಸಲು ಅಚಿಕ್ ರಾಷ್ಟ್ರೀಯ ಸ್ವಯಂಸೇವಕ ಮಂಡಳಿ (ANVC-B)  ಸೇರಿ ಉಗ್ರಗಾಮಿ ಹೋರಾಟಕ್ಕೆ ಕರೆ ನೀಡಿದ್ದರು. ಆದರೆ 2014ರಲ್ಲಿ ಅವರು ಶಸ್ತ್ರಾಶ್ತ್ರಗಳನ್ನು ತ್ಯಜಿಸಿ ತಮ್ಮ ಉಗ್ರಗಾಮಿ ಸಂಘಟನೆಯನ್ನು ವಿಸರ್ಜಿಸಿದ್ದರು. ಕೆಲ ಸಮಯದ ನಂತರ ಅವರು ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದರು.

ಬಿಜೆಪಿಯು ಮೇಘಾಲಯ ವಿಧಾನಸಭೆಯ ಎಲ್ಲಾ 60 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, 60 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಕಳೆದ ಕೆಲವು ತಿಂಗಳ ಹಿಂದೆ ಬೇರೆ ಪಕ್ಷಗಳನ್ನು ತೊರೆದು ಬಿಜೆಪಿ ಸೇರಿದ ಹಾಲಿ ಶಾಸಕರಿಗೂ ಪಟ್ಟಿಯಲ್ಲಿ ಸ್ಥಾನ ಕಲ್ಪಿಸಲಾಗಿದೆ. ಇವರಲ್ಲಿ ಎಚ್‌ಎಂ ಶಾಂಗ್‌ಪ್ಲಿಯಾಂಗ್, ಫೆರ್ಲಿನ್ ಸಂಗ್ಮಾ, ಬೆನೆಡಿಕ್ಟ್ ಮರಾಕ್ ಮತ್ತು ಸ್ಯಾಮ್ಯುಯೆಲ್ ಎಂ ಸಂಗ್ಮಾ ಅವರು ಕ್ರಮವಾಗಿ ಮೌಸಿನ್‌ರಾಮ್, ಸೆಲ್ಸೆಲ್ಲಾ, ರಾಕ್ಸಾಮ್ಗ್ರೆ ಮತ್ತು ಬಾಗ್ಮಾರಾ ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದಾರೆ.

ಕಳೆದ ತಿಂಗಳು ಸಿಎಂ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಕ್ಷವು ಆಡಳಿತಾರೂಢ ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್‌ನಿಂದ ಬೇರ್ಪಟ್ಟು ರಾಜ್ಯ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮದ್ದೂರು: ಕದಲೂರು ಉದಯ್ ದಿಢೀರ್ ಎಂಟ್ರಿಯಿಂದ ಸಂಕಷ್ಟಕ್ಕೆ ಸಿಲುಕಿದ ಡಿ.ಸಿ ತಮ್ಮಣ್ಣ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...