Homeಎಕಾನಮಿಡೌ ಜೋನ್ಸ್ ಸೂಚ್ಯಂಕಗಳಿಂದ ಅದಾನಿ ಎಂಟರ್‌ಪ್ರೈಸಸ್ ಔಟ್: NSE ಯಿಂದ ಏಕಿಲ್ಲ - ಮೊಹುವ ಮೊಯಿತ್ರ

ಡೌ ಜೋನ್ಸ್ ಸೂಚ್ಯಂಕಗಳಿಂದ ಅದಾನಿ ಎಂಟರ್‌ಪ್ರೈಸಸ್ ಔಟ್: NSE ಯಿಂದ ಏಕಿಲ್ಲ – ಮೊಹುವ ಮೊಯಿತ್ರ

- Advertisement -
- Advertisement -

ಅದಾನಿ ಸಮೂಹದ ವಂಚನೆ ಹಗರಣ ಹೊರಬರುತ್ತಿದ್ದಂತೆ ಅವರ ಷೇರು ಮೌಲ್ಯಗಳು ಒಂದು ವಾರದಿಂದ ಸತತವಾಗಿ ಕುಸಿಯುತ್ತಿವೆ. ಇದರಿಂದಾಗಿ ಅದಾನಿ ಸಮೂಹಕ್ಕೆ 9.8 ಲಕ್ಷ ಕೋಟಿಗೂ ಅಧಿಕ ನಷ್ಟವುಂಟಾಗಿದೆ ಎಂದು ಅಂದಾಜಿಸಲಾಗಿದೆ. ಇದೇ ಸಂದರ್ಭದಲ್ಲಿ ಷೇರುಗಳ ಮ್ಯಾನಿಪ್ಯುಲೇಷನ್ ಆರೋಪ ಇರುವುದರಿಂದ ಅಮೆರಿಕದ ಹಳೆಯ ಮತ್ತು ಪ್ರಸಿದ್ದ S&P ಡೌ ಜೋನ್ಸ್ ಸ್ಟಾಕ್ ಎಕ್ಸ್‌ಚೇಂಜ್ ಸಂಸ್ಥೆಯು ಅದಾನಿ ಎಂಟರ್‌ಪ್ರೈಸಸ್ ಅನ್ನು ಡೌ ಜೋನ್ಸ್ ಸೂಚ್ಯಂಕಗಳಿಂದ ತೆಗೆದುಹಾಕಿದೆ.

ಎಸ್&ಪಿ ಡೌ ಜೋನ್ಸ್ ಸೂಚ್ಯಂಕಗಳು ಡೌ ಜೋನ್ಸ್ ಸಸ್ಟೈನಬಿಲಿಟಿ ಸೂಚ್ಯಂಕಗಳಿಗೆ ಈ ಕೆಳಗಿನ ಬದಲಾವಣೆಗಳನ್ನು ಮಾಡುತ್ತವೆ. “ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಅಕೌಂಟಿಂಗ್ ವಂಚನೆ ಮಾಡಿದೆ ಎಂಬ ಆರೋಪದ ಮಾಧ್ಯಮ ಮತ್ತು ಷೇರುದಾರರ ವಿಶ್ಲೇಷಣೆಯ ನಂತರ ಅದಾನಿ ಎಂಟರ್‌ಪ್ರೈಸಸ್ (XBOM: 512599) ಅನ್ನು ಡೌ ಜೋನ್ಸ್ ಸುಸ್ಥಿರತೆ ಸೂಚ್ಯಂಕಗಳಿಂದ ತೆಗೆದುಹಾಕಲಾಗುತ್ತದೆ. ಇದು ಫೆಬ್ರವರಿ 7, 2023 ರಂದು ಮಂಗಳವಾರ ತೆರೆಯುವ ಮೊದಲು ಜಾರಿಗೆ ಬರುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಡೌ ಜೋನ್ಸ್ ಅಮೆರಿಕದ ಸ್ಟಾಕ್ ಎಕ್ಸ್‌ಚೇಂಜ್‌ಗಳಲ್ಲಿ ಪಟ್ಟಿ ಮಾಡಲಾದ (ಲಿಸ್ಟಡ್) 30 ಪ್ರಮುಖ ಕಂಪನಿಗಳ ಷೇರು ಮಾರುಕಟ್ಟೆ ಸೂಚ್ಯಂಕವಾಗಿದೆ. ಅದು ಅತ್ಯಂತ ಹಳೆಯ ಮತ್ತು ಸಾಮಾನ್ಯವಾಗಿ ಅನುಸರಿಸುವ ಇಕ್ವಿಟಿ ಸೂಚ್ಯಂಕಗಳಲ್ಲಿ ಒಂದಾಗಿದ್ದು ಅದೀಗ ಅದಾನಿ ಸಮೂಹದ ವಿರುದ್ಧ ಕ್ರಮ ಕೈಗೊಂಡಿದೆ.

ಈ ಹಿನ್ನೆಲೆಯಲ್ಲಿ  ಭಾರತದ ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್‌ (NSE) ಏಕೆ ತನ್ನ ಸೂಚ್ಯಂಕಗಳಿಂದ ಅದಾನಿ ಸಮೂಹದ ಸದಸ್ಯತ್ವ ರದ್ದುಗೊಳಿಸಬಾರದು ಎಂದು ಟಿಎಂಸಿ ಸಂಸದೆ ಮೊಹುವ ಮೊಯಿತ್ರ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “S&P ಡೌ ಜೋನ್ಸ್ ಸಂಸ್ಥೆಯು ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಅಕೌಂಟಿಂಗ್ ವಂಚನೆಯ ಆರೋಪಗಳ ಕಾರಣದಿಂದ ಅದಾನಿ ಎಂಟರ್‌ಪ್ರೈಸಸ್ ಅನ್ನು ಡೌ ಜೋನ್ಸ್ ಸೂಚ್ಯಂಕಗಳಿಂದ ತೆಗೆದುಹಾಕುತ್ತದೆ. ಅಂತರಾಷ್ಟ್ರೀಯ ಸಂಸ್ಥೆಯೊಂದು ಹೀಗೆ ಕ್ರಮ ಕೈಗೊಳ್ಳುವಾಗ ಅದಾನಿ ಸ್ಟಾಕ್‌ಗಳ ಸೂಚ್ಯಂಕ ಸದಸ್ಯತ್ವವನ್ನು ಏಕೆ ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್‌ (NSE) ಮರುಮೌಲ್ಯಮಾಪನ ಮಾಡುತ್ತಿಲ್ಲ?” ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ದಾಖಲೆ ಕುಸಿತ ಕಂಡ ಅದಾನಿ; ಸಾಲ ನೀಡಿರುವ ವಿವರ ಒದಗಿಸುವಂತೆ ಬ್ಯಾಂಕುಗಳಿಗೆ RBI ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. It is sad to see many Indians for reasons are supporting the narrative of the west who are hell bent on bringing india to the present Pakistan level. It is time to fight these nefarious design and strengthen Indian company. . In this regard i strongly condemn the statement of this Moiuva MTR .

  2. You people have succeeded in getting him down by a sabotage joining hands with foreign agency temporarily but he will come back like a phoneix since his contribution to indian economy is beyond doubt..

  3. You people have succeeded in getting him down by a sabotage joining hands with foreign agency temporarily but he will come back like a phoneix since his contribution to indian economy is beyond doubt..

  4. You people have succeeded in getting him down by a sabotage joining hands with foreign agency temporarily but he will come back like a phoneix since his contribution to indian economy is beyond doubt..

  5. Dow-Jones and other foreign indices are reliable in Indian circumstances to what extent. They are just like agencies like PwC which being a foreign organization manipulated accounts of many Indian forms. Just because they did, doesn’t compel NSE to act like that. Offcourse, NSE, had given given such report, then Indians should have bothered.
    Why can’t be the assumption goes like this- Many foreign industries involved in Steel and port operation joined hand with Heidelberg along with Indian Anti BJP gang to bring down Adani?

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...