Homeಮುಖಪುಟದ್ವೇಷ ಭಾಷಣ ತಡೆಯುವಂತಿದ್ದರೆ ಮಾತ್ರ ಹಿಂದುತ್ವ ಕಾರ್ಯಕ್ರಮಕ್ಕೆ ಅನುಮತಿ: ಮಹಾರಾಷ್ಟ್ರಕ್ಕೆ ಸುಪ್ರೀಂ ಸೂಚನೆ

ದ್ವೇಷ ಭಾಷಣ ತಡೆಯುವಂತಿದ್ದರೆ ಮಾತ್ರ ಹಿಂದುತ್ವ ಕಾರ್ಯಕ್ರಮಕ್ಕೆ ಅನುಮತಿ: ಮಹಾರಾಷ್ಟ್ರಕ್ಕೆ ಸುಪ್ರೀಂ ಸೂಚನೆ

- Advertisement -
- Advertisement -

ದ್ವೇಷ ಭಾಷಣ ತಡೆಯುವಂತಿದ್ದರೆ ಮಾತ್ರ ಫೆಬ್ರವರಿ 5ರಂದು ಮುಂಬೈನಲ್ಲಿ ಹಿಂದುತ್ವ ಸಂಘಟನೆಗಳು ಆಯೋಜಿಸಿರುವ ರ್‍ಯಾಲಿಗೆ ಅನುಮತಿ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

‘ಹಿಂದೂ ಜನಾಕ್ರೋಶ ಸಭೆ’ಯ ವಿಡಿಯೊ ರೆಕಾರ್ಡಿಂಗ್ ಮಾಡಿ ಮತ್ತು ಅದರ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಜೆ.ಬಿ.ಪರ್ದಿವಾಲಾ ಅವರಿದ್ದ ಪೀಠವು ಎಚ್ಚರಿಸಿದೆ.

“ಕಾನೂನನ್ನು ಧಿಕ್ಕರಿಸಿ ಮತ್ತು ಸಾರ್ವಜನಿಕ ಆದೇಶವನ್ನು ಉಲ್ಲಂಘಿಸುವ ಯಾವುದೇ ದ್ವೇಷದ ಭಾಷಣವನ್ನು ಯಾರೂ ಮಾಡಬಾರದು ಎಂಬ ಷರತ್ತಿಗೆ ಒಳಪಟ್ಟು ಅನುಮತಿ ನೀಡಬಹುದು” ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.

ಹಿಂದುತ್ವ ಸಂಘಟನೆಗಳ ಒಕ್ಕೂಟ ಸಂಸ್ಥೆಯಾದ ‘ಸಕಲ್ ಹಿಂದೂ ಸಮಾಜ’ದ ಈ ಕಾರ್ಯಕ್ರಮವನ್ನು ನಿಷೇಧಿಸುವಂತೆ ಕೋರಿ ಶಹೀನ್ ಅಬ್ದುಲ್ಲಾ ಎಂಬುವರು ಸಲ್ಲಿಸಿದ ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ಜನವರಿ 29ರಂದು ಒಕ್ಕೂಟವು ನಡೆಸಿದ ರ್‍ಯಾಲಿಯಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷದ ಭಾಷಣಗಳನ್ನು ಮಾಡಲಾಗಿದೆ ಎಂದು ಅಬ್ದುಲ್ಲಾ ವಾದಿಸಿದ್ದಾರೆ.

ಜನವರಿ 29 ರಂದು ನಡೆದ ರ್‍ಯಾಲಿಯಲ್ಲಿ ಬಿಜೆಪಿಯ ಹಲವು ಮುಖಂಡರು ಪಾಲ್ಗೊಂಡಿದ್ದರು. ಬಿಜೆಪಿಯ ಮುಂಬೈ ಘಟಕದ ಅಧ್ಯಕ್ಷ ಆಶಿಶ್ ಶೆಲಾರ್, ಮಹಾರಾಷ್ಟ್ರ ಸಂಸದರಾದ ಗೋಪಾಲ್ ಶೆಟ್ಟಿ ಮತ್ತು ಮನೋಜ್ ಕೋಟಕ್, ಮಾಜಿ ಸಂಸದ ಕಿರಿತ್ ಸೋಮಯ್ಯ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗವಹಿಸಿದ್ದರು. ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣದ ಹಲವಾರು ನಾಯಕರು ಕೂಡ ಕಾರ್ಯಕ್ರಮದಲ್ಲಿ ಇದ್ದರು.

ಕಾರ್ಯಕ್ರಮದ ಭಾಷಣಕಾರರಲ್ಲಿ ಒಬ್ಬರಾದ ತೆಲಂಗಾಣ ಶಾಸಕ ಟಿ.ರಾಜಾ ಸಿಂಗ್ ಅವರು, “ಮುಸ್ಲಿಮರು ನಡೆಸುವ ಅಂಗಡಿಗಳಿಂದ ವಸ್ತುಗಳನ್ನು ಹಿಂದೂಗಳು ಕೊಳ್ಳಬಾರದು” ಎಂದು ದ್ವೇಷ ಕಾರಿದರು. ಹಿಂದುತ್ವ ಗುಂಪಿನ ಪಿತೂರಿ ಸಿದ್ಧಾಂತವೆಂದೇ ಬಣ್ಣಿಸಲಾದ ‘ಲವ್ ಜಿಹಾದ್’ ಮತ್ತು ‘ಧಾರ್ಮಿಕ ಮತಾಂತರಗಳ ವಿರುದ್ಧ’ದ ಕಾನೂನುಗಳಿಗೆ ಸಂಬಂಧಿಸಿದಂತೆ ಹಲವರು ಮಾತನಾಡಿದ್ದಾರೆ.

ಕಳೆದ ಮೂರು ತಿಂಗಳಲ್ಲಿ, ಸಕಲ ಹಿಂದೂ ಸಮಾಜವು ಮಹಾರಾಷ್ಟ್ರದ 20 ಜಿಲ್ಲೆಗಳಲ್ಲಿ ಇದೇ ರೀತಿಯ ರ್‍ಯಾಲಿಗಳನ್ನು ನಡೆಸಿದೆ. ಶುಕ್ರವಾರ ನಡೆದ ವಿಚಾರಣೆಯಲ್ಲಿ, ಮಹಾರಾಷ್ಟ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮನವಿಯನ್ನು ವಿರೋಧಿಸಿದರು. ಅರ್ಜಿದಾರರು ಕೆಲವೊಂದು ವಿಷಯಗಳನ್ನಷ್ಟೇ ಪ್ರಸ್ತಾಪಿಸಿದ್ದಾರೆ ಎಂದು ಆರೋಪಿಸಿದರು.

ಕೇರಳದ ನಿವಾಸಿಯಾಗಿದ್ದರೂ ಮಹಾರಾಷ್ಟ್ರದಲ್ಲಿ ನಡೆದ ಕಾರ್ಯಕ್ರಮದ ಬಗ್ಗೆ ಅರ್ಜಿದಾರರಿಗೆ ಏಕೆ ಕಾಳಜಿ ಇದೆ ಎಂದು ಪ್ರಶ್ನಿಸಿದರು.

“ಈಗ, ವ್ಯಕ್ತಿಗಳು ಆಯ್ದ ಕೆಲವೊಂದು ವಿಷಯಗಳನ್ನು ಇಟ್ಟುಕೊಂಡು ಈ ನ್ಯಾಯಾಲಯಕ್ಕೆ ಬರುತ್ತಿದ್ದಾರೆ” ಎಂದು ಮೆಹ್ತಾ ಹೇಳಿದರು. “ಈ ನ್ಯಾಯಾಲಯವನ್ನು ಈವೆಂಟ್‌ಗಳನ್ನು ನಡೆಸಲು ಅನುಮತಿಗಳನ್ನು ನೀಡುವ ಪ್ರಾಧಿಕಾರವಾಗಿ ಪರಿವರ್ತಿಸಬಹುದೇ?” ಎಂದು ಪ್ರಶ್ನಿಸಿದರು.

ಅರ್ಜಿದಾರರ ಪರವಾಗಿ ಹಾಜರಾದ ವಕೀಲ ಕಪಿಲ್ ಸಿಬಲ್, ಕಾರ್ಯಕ್ರಮಕ್ಕೆ ಅನುಮತಿ ನೀಡುವ ಮೊದಲು ಜನವರಿ 29ರ ರ್‍ಯಾಲಿಯಲ್ಲಿ ಗಂಭೀರ ಹೇಳಿಕೆಗಳನ್ನು ನೀಡಿರುವುದನ್ನು ಪರಿಗಣಿಸಬೇಕಾಗಿದೆ ಎಂದು ವಾದಿಸಿದರು.

ಅಪರಾಧಗಳನ್ನು ತಡೆದು, ವ್ಯಕ್ತಿಗಳನ್ನು ಬಂಧಿಸುವ ಅಧಿಕಾರ ನೀಡುವ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 151 ಅನ್ನು ಅನ್ವಯಿಸಲು ಪೊಲೀಸರಿಗೆ ಆದೇಶಿಸುವಂತೆ ಅವರು ನ್ಯಾಯಾಲಯವನ್ನು ಒತ್ತಾಯಿಸಿದರು.

“ಅನುಮತಿ ನೀಡಿದರೆ, ಸೆಕ್ಷನ್ 151 ರ ಆದೇಶವನ್ನು ಅನ್ವಯಿಸುವುದು ಸಂಬಂಧಪಟ್ಟ ಅಧಿಕಾರಿಗಳ ಕರ್ತವ್ಯವಾಗಿರುತ್ತದೆ” ಎಂದು ನ್ಯಾಯಾಲಯ ಆದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...