Homeಮುಖಪುಟಮರುಕಳಿಸಿದ ದ್ವೇಷ ಭಾಷಣ: ಹೈಕೋರ್ಟ್ ಆದೇಶ ಉಲ್ಲಂಘಿಸಿ ಮತ್ತೆ ನಾಲಿಗೆ ಹರಿಬಿಟ್ಟ ಶಾಸಕ ರಾಜಾಸಿಂಗ್

ಮರುಕಳಿಸಿದ ದ್ವೇಷ ಭಾಷಣ: ಹೈಕೋರ್ಟ್ ಆದೇಶ ಉಲ್ಲಂಘಿಸಿ ಮತ್ತೆ ನಾಲಿಗೆ ಹರಿಬಿಟ್ಟ ಶಾಸಕ ರಾಜಾಸಿಂಗ್

- Advertisement -
- Advertisement -

ಕಳೆದ ವರ್ಷ ನವೆಂಬರ್‌ನಲ್ಲಿ ಶಾಸಕ ರಾಜಾ ಸಿಂಗ್‌ ಅವರನ್ನು ಬಿಡುಗಡೆ ಮಾಡುವ ಮುನ್ನ ತೆಲಂಗಾಣ ಹೈಕೋರ್ಟ್ ಮೂರು ಕಠಿಣ ಶರತ್ತುಗಳನ್ನು ವಿಧಿಸಿತ್ತು. 100ಕ್ಕೂ ಹೆಚ್ಚು ಕ್ರಿಮಿನಲ್ ಕೇಸ್‌ಗಳನ್ನು ಹೊಂದಿರುವ ರಾಜಾ ಸಿಂಗ್‌ ಅವರನ್ನು, ಹೈದರಾಬಾದ್‌ನಲ್ಲಿ ಕೋಮು ಸೌದಾರ್ದತೆ ಕದಡಿದಕ್ಕಾಗಿ 76 ದಿನ ಜೈಲಿಗೆ ಕಳುಹಿಸಲಾಗಿತ್ತು.

ನ್ಯಾಯಮೂರ್ತಿಗಳಾದ ಎ. ಅಭಿಷೇಕ್ ರೆಡ್ಡಿ ಮತ್ತು ಜುವ್ವಾಡಿ ಶ್ರೀದೇವಿ ಅವರು ನವೆಂಬರ್ 9, 2022ರಂದು ನೀಡಿದ ಆದೇಶದಲ್ಲಿ ಸ್ಪಷ್ಟವಾದ ನಿರ್ಬಂಧಗಳನ್ನು ವಿಧಿಸಿದರು. “ರಾಜಾಸಿಂಗ್‌ ಬಿಡುಗಡೆಯಾದ ನಂತರ ಯಾವುದೇ ಸಂಭ್ರಮಾಚರಣೆ ರ್‍ಯಾಲಿಗಳಲ್ಲಿ/ಸಭೆಗಳಲ್ಲಿ ಭಾಗವಹಿಸಬಾರದು ಅಥವಾ ನಡೆಸಬಾರದು; ಮುದ್ರಣ ಮಾಧ್ಯಮ ಸೇರಿದಂತೆ ಯಾವುದೇ ರೀತಿಯ ಮಾಧ್ಯಮ ಸಂಸ್ಥೆಗಳಿಗೆ ಯಾವುದೇ ಸಂದರ್ಶನಗಳನ್ನು ಭವಿಷ್ಯದಲ್ಲಿ ನೀಡಬಾರದು; ಯಾವುದೇ ಧರ್ಮದ ವಿರುದ್ಧ ಯಾವುದೇ ಪ್ರಚೋದನಕಾರಿ ಭಾಷಣಗಳನ್ನು ಮಾಡಬಾರದು ಅಥವಾ ಫೇಸ್ಬುಕ್, ಟ್ವಿಟರ್, ವಾಟ್ಸ್‌ಅಪ್‌, ಯೂಟ್ಯೂಬ್‌ ಇತ್ಯಾದಿ ಯಾವುದೇ  ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಯಾವುದೇ ಅವಹೇಳನಕಾರಿ ಅಥವಾ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಮಾಡಬಾರದು” ಎಂದು ಕೋರ್ಟ್ ಸೂಚಿಸಿತ್ತು.

ಕೇವಲ ಮೂರು ತಿಂಗಳೊಳಗೆ ಎಲ್ಲಾ ಮೂರು ಷರತ್ತುಗಳನ್ನು ರಾಜಾ ಉಲ್ಲಂಘಿಸಿದ್ದಾರೆ. ತೀವ್ರಗಾಮಿ ಹಿಂದೂ ಗುಂಪು ಎಂದೇ ಗುರುತಿಸಿಕೊಂಡಿರುವ ‘ಸಕಲ್ ಹಿಂದೂ ಸಮಾಜ’ ಜನವರಿ 29ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ಮುಂಬೈಗೆ ರಾಜಾ ಬಂದಿದ್ದರು. ಈ ಗುಂಪು ಆಯೋಜಿಸಿದ್ದ ‘ಹಿಂದೂ ಜನಕ್ರೋಶ್ ಮೋರ್ಚಾ’ದಲ್ಲಿ ಪಾಲ್ಗೊಂಡು, “ಮಹಾರಾಷ್ಟ್ರ ರಾಜ್ಯ ಸರ್ಕಾರವು ಮತಾಂತರ ವಿರೋಧಿ ಕಾನೂನನ್ನು ಜಾರಿಗೆ ತರದಿದ್ದರೆ, ಹಿಂದೂಗಳು ಶೀಘ್ರದಲ್ಲೇ ಶಸ್ತ್ರಸಜ್ಜಿತರಾಗುತ್ತಾರೆ” ಎಂದು ವಿಷಕಾರಿದರು.

ದೇಶದ ಅತ್ಯಂತ ವಿವಾದಾತ್ಮಕ ವಿಷಯಗಳಲ್ಲಿ ಒಂದಾದ ಮತಾಂತರ ವಿರೋಧಿ ಕಾನೂನು ಮೇಲ್ನೋಟಕ್ಕೆ ‘ಬಲವಂತದ ಮತಾಂತರ’ವನ್ನು ನಿರ್ಬಂಧಿಸುತ್ತದೆ, ಆದರೆ ಇದು ಧಾರ್ಮಿಕ ಹಕ್ಕಿನ ಮೇಲಿನ ಪ್ರಹಾರವಾಗಿದೆ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ.

ರಾಜಾ ಕೇವಲ ಹೊಸ ಕಾನೂನಿನ ಬಗ್ಗೆ ಪ್ರಚಾರ ಮಾಡಲಿಲ್ಲ. ಶಸ್ತ್ರಾಸ್ತ್ರಗಳನ್ನು ಎತ್ತಿಕೊಂಡು ಮುಸ್ಲಿಮರ ಮೇಲೆ ದಾಳಿ ಮಾಡುವಂತೆ ಸಭೆಯನ್ನು ಪ್ರಚೋದಿಸಿದರು. ನಿಂದನೀಯ, ಅವಹೇಳನಕಾರಿ ಪದಗಳನ್ನು ಬಳಸಿದರು. ಮುಸ್ಲಿಂ ಸಮುದಾಯದ ವಿರುದ್ಧ ನೇರ ಹಿಂಸಾಚಾರಕ್ಕೆ ಕರೆ ನೀಡಿದರು. ರಾಜಾ ಸಿಂಗ್‌ ಭಾಷಣವು ಕೇವಲ ಉಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಲಿಲ್ಲ. ಎರಡು ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಿತು. ಈ ರೀತಿಯ ದುರುದ್ದೇಶವು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಬಿ ಮತ್ತು 295-ಎ ಉಲ್ಲಂಘನೆಯಾಗಿತ್ತು.

ರಾಜಾ ಸಿಂಗ್ ಅವರ ಭಾಷಣದ ನಂತರ, ಮತ್ತೊಬ್ಬ ಹಿಂದುತ್ವ ಮುಖಂಡ ಸಾಕ್ಷಿ ಗಾಯಕ್ವಾಡ್ ಅಷ್ಟೇ ಪ್ರಚೋದನಕಾರಿ ಭಾಷಣ ಮಾಡಿದರು. ಮುಸ್ಲಿಮರ ನರಮೇಧವನ್ನು ಪ್ರಸ್ತಾಪಿಸಿದರು.

‘ಹಿಂದೂ ಜನ ಆಕ್ರೋಶ ಮೋರ್ಚಾ’ ದಾದರ್‌ನ ಶಿವಾಜಿ ಪಾರ್ಕ್‌ನಿಂದ ಪ್ರಾರಂಭವಾಗಿ ಪರೇಲ್‌ನ ಕಾಮ್‌ಗರ್ ಮೈದಾನದವರೆಗೆ (ನಾಲ್ಕು ಕಿಲೋಮೀಟರ್‌ಗಿಂತಲೂ ಹೆಚ್ಚು ದೂರ) ಕ್ರಮಿಸಿತು. ಆರ್‌ಎಸ್‌ಎಸ್‌, ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್‌ನಂತಹ ಬಲಪಂಥೀಯ ಸಂಘಟನೆಗಳ ನಾಯಕರು ಮತ್ತು ಕಾರ್ಯಕರ್ತರು ಈ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದರು.

ರಾಜಾ ಸಿಂಗ್ ಮತ್ತು ಇತರರ ಭಾಷಣಗಳು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೆಯಾಗಿವೆ. ಕೋಮು ದ್ವೇಷದ ಹೊರತಾಗಿಯೂ, ಮುಂಬೈ ಪೊಲೀಸರು ಭಾಷಣಕಾರರ ವಿರುದ್ಧ ಯಾವುದೇ ಕ್ರಮವನ್ನು ಕೈಗೊಳ್ಳಲಿಲ್ಲ.

ಇದರ ನಡುವೆ, ಹೈದರಾಬಾದ್ ಪೊಲೀಸರು ರಾಜಾ ಸಿಂಗ್ ಅವರಿಗೆ ನೋಟಿಸ್ ಜಾರಿ ಮಾಡಿದರು. ಜೈಲಿನಿಂದ ಬಿಡುಗಡೆ ಮಾಡುವ ಮುನ್ನ ತೆಲಂಗಾಣ ಹೈಕೋರ್ಟ್‌ ವಿಧಿಸಿದ್ದ ಷರತ್ತುಗಳನ್ನು ಉಲ್ಲೇಖಿಸಿ ಕಳೆದ ನಾಲ್ಕು ದಿನಗಳಲ್ಲಿ ಹೈದರಾಬಾದ್‌ನ ಮಂಗಲ್‌ಹಟ್ ಪೊಲೀಸರು ಎರಡು ನೋಟಿಸ್‌ಗಳನ್ನು ರಾಜಾಸಿಂಗ್ ಅವರಿಗೆ ನೀಡಿದ್ದಾರೆ. ಭಾಷಣ ಮಾಡಿದ ಕೂಡಲೇ ಮೊದಲ ನೋಟೀಸ್ ಕಳುಹಿಸಲಾಗಿದೆ. ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವ ಸೂಚನೆಯನ್ನೂ ರವಾನಿಸಲಾಗಿದೆ.

“ನಿಮ್ಮ ಭಾಷಣದಲ್ಲಿ ನಿರ್ದಿಷ್ಟ ಸಮುದಾಯವನ್ನು ಪ್ರಯೋಚನೆ ಮಾಡಲಾಗಿದೆ. ಲವ್ ಜಿಹಾದ್, ಗೋಹತ್ಯೆ, ಮತಾಂತರ ಮೊದಲಾದ ಕಾನೂನಿನ ಬಗ್ಗೆ ಮಾತನಾಡಿದ್ದೀರಿ” ಎಂದು ಮಂಗಲ್‌ಹಟ್ ಪೊಲೀಸರು ರಾಜಾ ಸಿಂಗ್ ಅವರಿಗೆ ನೀಡಿದ್ದ ನೋಟಿಸ್‌ನಲ್ಲಿ ತಿಳಿಸಿದ್ದಾರೆ. “ನಿರ್ದಿಷ್ಟ ಧರ್ಮವನ್ನು ಕೆರಳಿಸುವ ನಿಮ್ಮ ಭಾಷಣವು ಹೈಕೋರ್ಟ್ ವಿಧಿಸಿರುವ ಷರತ್ತುಗಳ ಉಲ್ಲಂಘನೆಯಾಗಿದೆ” ಎಂದು ಎಚ್ಚರಿಸಲಾಗಿದೆ.

ಮುಂಬೈಗೆ ಭೇಟಿ ನೀಡುವ ಒಂದು ವಾರದ ಮೊದಲು, ಕಳೆದ ವರ್ಷ ಅಜ್ಮೀರ್ ದರ್ಗಾದಲ್ಲಿ ಇಷ್ಟೇ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ರಾಜಾ ಸಿಂಗ್ ಅವರಿಗೆ ಮತ್ತೊಂದು ನೋಟಿಸ್ ನೀಡಲಾಗಿದೆ. ಉದ್ದೇಶಪೂರ್ವಕವಾಗಿ ಕೋಮು ಭಾವನೆಗಳನ್ನು ಕೆರಳಿಸುವುದು ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸದಿದ್ದರೆ ಬಂಧನ ಮಾಡಲಾಗುವುದು ಎಂದು ಪೊಲೀಸರು ಆ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ. ಆದಾಗ್ಯೂ, ಪೊಲೀಸರು ಹೆಚ್ಚಿನ ನೋಟಿಸ್‌ಗಳನ್ನು ಮಾತ್ರ ನೀಡಿದ್ದಾರೆ, ರಾಜಾರನ್ನು ತಡೆಯುವ ನಿಟ್ಟಿನಲ್ಲಿ ಯಾವುದೇ ಕ್ರಮ ಜರುಗಿಸಿಲ್ಲ.

ರಾಜಾ ಸಿಂಗ್ ತೆಲಂಗಾಣ ಪೊಲೀಸರಿಗೆ ಸವಾಲು ಹಾಕಿದ್ದಾರೆ. ನೋಟಿಸ್ ನೀಡುವ ಪೊಲೀಸರ ನಿರ್ಧಾರವು ರಾಜಕೀಯ ಪ್ರೇರಿತವಾಗಿದೆ, ಮತ್ತೆ ಜೈಲಿಗೆ ಹೋಗುವ ಭಯವಿಲ್ಲ ಎಂದು ಸಿಂಗ್ ಹೇಳಿಕೊಂಡಿದ್ದಾರೆ. ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ವೀಡಿಯೊವನ್ನು ಪೋಸ್ಟ್ ಮಾಡಿದ್ದಕ್ಕಾಗಿ ರಾಜಾ ಸಿಂಗ್‌ ಅವರನ್ನು ಆಗಸ್ಟ್‌ನಲ್ಲಿ ಬಿಜೆಪಿಯಿಂದ ಅಮಾನತು ಮಾಡಲಾಗಿತ್ತು.

ಸಕಲ್ ಹಿಂದೂ ಸಮಾಜವು ಫೆಬ್ರವರಿ 5 ರಂದು ಮುಂಬೈ ನಗರದಲ್ಲಿ ಇದೇ ರೀತಿಯ ಮತ್ತೊಂದು ಸಾರ್ವಜನಿಕ ಕಾರ್ಯಕ್ರಮವನ್ನು ನಿಗದಿಪಡಿಸಿದೆ. ದ್ವೇಷ ಭಾಷಣ ತಡೆಯುವಂತಿದ್ದರೆ ಮಾತ್ರ ಮುಂಬೈನಲ್ಲಿ ಹಿಂದುತ್ವ ಸಂಘಟನೆಗಳು ಆಯೋಜಿಸಿರುವ ಈ ರ್‍ಯಾಲಿಗೆ ಅನುಮತಿ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

‘ಹಿಂದೂ ಜನಾಕ್ರೋಶ ಸಭೆ’ಯ ವಿಡಿಯೊ ರೆಕಾರ್ಡಿಂಗ್ ಮಾಡಿ ಮತ್ತು ಅದರ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಜೆ.ಬಿ.ಪರ್ದಿವಾಲಾ ಅವರಿದ್ದ ಪೀಠವು ಎಚ್ಚರಿಸಿದೆ. “ಕಾನೂನನ್ನು ಧಿಕ್ಕರಿಸಿ ಮತ್ತು ಸಾರ್ವಜನಿಕ ಆದೇಶವನ್ನು ಉಲ್ಲಂಘಿಸುವ ಯಾವುದೇ ದ್ವೇಷದ ಭಾಷಣವನ್ನು ಯಾರೂ ಮಾಡಬಾರದು ಎಂಬ ಷರತ್ತಿಗೆ ಒಳಪಟ್ಟು ಅನುಮತಿ ನೀಡಬಹುದು” ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.

ಹಿಂದುತ್ವ ಸಂಘಟನೆಗಳ ಒಕ್ಕೂಟ ಸಂಸ್ಥೆಯಾದ ‘ಸಕಲ್ ಹಿಂದೂ ಸಮಾಜ’ದ ಈ ಕಾರ್ಯಕ್ರಮವನ್ನು ನಿಷೇಧಿಸುವಂತೆ ಕೋರಿ ಶಹೀನ್ ಅಬ್ದುಲ್ಲಾ ಎಂಬುವರು ಸಲ್ಲಿಸಿದ ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ಜನವರಿ 29ರಂದು ಒಕ್ಕೂಟವು ನಡೆಸಿದ ರ್‍ಯಾಲಿಯಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷದ ಭಾಷಣಗಳನ್ನು ಮಾಡಲಾಗಿದೆ ಎಂದು ಅಬ್ದುಲ್ಲಾ ವಾದಿಸಿದರು.

ಇದನ್ನೂ ಓದಿರಿ: ಬಿಬಿಸಿ ಸಾಕ್ಷ್ಯಚಿತ್ರಕ್ಕೆ ತಡೆ ವಿವಾದ; ಮೂರು ವಾರಗಳಲ್ಲಿ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ಜನವರಿ 29 ರಂದು ನಡೆದ ರ್‍ಯಾಲಿಯಲ್ಲಿ ಬಿಜೆಪಿಯ ಹಲವು ಮುಖಂಡರು ಪಾಲ್ಗೊಂಡಿದ್ದರು. ಬಿಜೆಪಿಯ ಮುಂಬೈ ಘಟಕದ ಅಧ್ಯಕ್ಷ ಆಶಿಶ್ ಶೆಲಾರ್, ಮಹಾರಾಷ್ಟ್ರ ಸಂಸದರಾದ ಗೋಪಾಲ್ ಶೆಟ್ಟಿ ಮತ್ತು ಮನೋಜ್ ಕೋಟಕ್, ಮಾಜಿ ಸಂಸದ ಕಿರಿತ್ ಸೋಮಯ್ಯ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗವಹಿಸಿದ್ದರು. ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣದ ಹಲವಾರು ನಾಯಕರು ಕೂಡ ಕಾರ್ಯಕ್ರಮದಲ್ಲಿ ಇದ್ದರು.

ಕಾರ್ಯಕ್ರಮದ ಭಾಷಣಕಾರರಲ್ಲಿ ಒಬ್ಬರಾದ ತೆಲಂಗಾಣ ಶಾಸಕ ಟಿ.ರಾಜಾ ಸಿಂಗ್ ಅವರು, “ಮುಸ್ಲಿಮರು ನಡೆಸುವ ಅಂಗಡಿಗಳಿಂದ ವಸ್ತುಗಳನ್ನು ಹಿಂದೂಗಳು ಕೊಳ್ಳಬಾರದು” ಎಂದು ದ್ವೇಷ ಕಾರಿದ್ದರು. ಹಿಂದುತ್ವ ಗುಂಪಿನ ಪಿತೂರಿ ಸಿದ್ಧಾಂತವೆಂದೇ ಬಣ್ಣಿಸಲಾದ ‘ಲವ್ ಜಿಹಾದ್’ ಮತ್ತು ‘ಧಾರ್ಮಿಕ ಮತಾಂತರಗಳ ವಿರುದ್ಧ’ದ ಕಾನೂನುಗಳಿಗೆ ಸಂಬಂಧಿಸಿದಂತೆ ಹಲವರು ಮಾತನಾಡಿದ್ದರು.

ಮಾಹಿತಿ ಕೃಪೆ: ‘ದಿ ವೈರ್‌’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...