Homeಮುಖಪುಟದ್ವೇಷ ಭಾಷಣ ಹಿನ್ನೆಲೆ ರಾಮದೇವ್ ವಿರುದ್ಧ ಎಫ್ಐಆರ್

ದ್ವೇಷ ಭಾಷಣ ಹಿನ್ನೆಲೆ ರಾಮದೇವ್ ವಿರುದ್ಧ ಎಫ್ಐಆರ್

- Advertisement -
- Advertisement -

ರಾಜಸ್ಥಾನದಲ್ಲಿ ಫೆಬ್ರವರಿ 2ರಂದು ಯೋಗೋದ್ಯಮಿ ಬಾಬಾ ರಾಮ್‌ದೇವ್, ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಹೇಳಲಾಗಿದೆ. ಭಾನುವಾರ ಅವರ ವಿರುದ್ಧ ದ್ವೇಷ ಮತ್ತು ಅತಿರೇಕದ ಧಾರ್ಮಿಕ ಭಾವನೆಗಳನ್ನು ಉತ್ತೇಜಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಪಥಾಯಿ ಖಾನ್ ಎನ್ನುವವರು ನೀಡಿದ ದೂರಿನ ಮೇರೆಗೆ ಬಾರ್ಮರ್‌ನಲ್ಲಿ ರಾಮ್‌ದೇವ್‌ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೋಲೀಸರು ಹೇಳಿದ್ದಾರೆ.

ಫೆಬ್ರವರಿ 2 ರಂದು ರಾಮ್‌ದೇವ್ ಬಾರ್ಮರ್‌ನಲ್ಲಿ ದಾರ್ಶನಿಕರ ಸಭೆಗೆ ಹಾಜರಾಗಿದ್ದರು. ಈ ವೇಳೆ ಅವರು, ”ಮುಸ್ಲಿಮರು ಪ್ರಾರ್ಥನೆ ಸಲ್ಲಿಸುವುದರಿಂದ ಎಲ್ಲಾ ಪಾಪಗಳಿಂದ ವಿಮೋಚನೆಯಾಗುತ್ತದೆ ಎಂದು ನಂಬುತ್ತಾರೆ ಮತ್ತು ಇದು ಭಯೋತ್ಪಾದನೆ ಹಾಗೂ ಅಪರಾಧ ಕೃತ್ಯ ನಡೆಸಲು ಕಾರಣವಾಗುತ್ತದೆ. ಕೇವಲ ಪ್ರಾರ್ಥನೆ ಮಾಡಿ, ನೀವು ಏನು ಮಾಡಬೇಕೆಂದು ಬಯಸುತ್ತೀರೋ ಅದನ್ನು ಮಾಡಿ ಎಂದು ಅವರಿಗೆ ಕಲಿಸಲಾಗಿದೆ. ಹಾಗಾಗಿ ಅವರು ಭಯೋತ್ಪಾದಕರಾಗುತ್ತಿದ್ದಾರೆ, ಮತ್ತು ಅವರಲ್ಲಿ ಬಹಳಷ್ಟು ಜನರು ಅಪರಾಧಿಗಳಾಗುತ್ತಿದ್ದಾರೆ” ಎಂದು ಮುಸ್ಲಿಮರ ಬಗ್ಗೆ ರಾಮ್‌ದೇವ್ ದ್ವೇಷದ ಮಾತುಗಳನ್ನಾಡಿದ್ದಾರೆ.

”ನಿಮ್ಮ ಧರ್ಮ ಏನು ಹೇಳುತ್ತದೆ ಎಂದು ಮುಸಲ್ಮಾನರನ್ನು ಕೇಳಿ, ಅವರು ಐದು ಬಾರಿ [ದಿನಕ್ಕೆ] ನಮಾಜ್ ಮಾಡಿ, ನಂತರ ಮನಸ್ಸಿಗೆ ಬಂದದ್ದನ್ನು ಮಾಡಿ ಎಂದು ಹೇಳುತ್ತಾರೆ. ನೀವು ಹಿಂದೂ ಹುಡುಗಿಯರನ್ನು ಅಪಹರಿಸಲಿ, ನೀವು ಮಾಡಬೇಕಾದ ಪಾಪವನ್ನೆಲ್ಲಾ ಮಾಡಿ” ಎಂದು ರಾಮ್‌ದೇವ್ ಮುಸ್ಲಿಂ ಧರ್ಮದ ವಿರುದ್ಧ ಮಾತನಾಡಿದ್ದಾರೆ.

ಇದೇ ವೇಳೆ ಕ್ರಿಶ್ಚಿಯನ್ನರ ಬಗ್ಗೆಯೂ ಮಾತನಾಡಿದ ರಾಮದೇವ್, ”ಚರ್ಚ್‌ಗೆ ಹಾಜರಾಗುವ ಮೂಲಕ ಮತ್ತು ಮೇಣದಬತ್ತಿಗಳನ್ನು ಬೆಳಗಿಸುವ ಮೂಲಕ ಅವರು ತಮ್ಮ ಎಲ್ಲಾ ಪಾಪಗಳಿಗೆ ಕ್ಷಮೆಯನ್ನು ಪಡೆಯುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಮರು, ಕ್ರಿಶ್ಚಿಯನ್ನರಿಗೆ ಮತಾಂತರದ ಗೀಳಿದೆ: ಯೋಗೋದ್ಯಮಿ ರಾಮ್‌ದೇವ್ ಹೇಳಿಕೆ

ಇಸ್ಲಾಂ ಧರ್ಮದ ವಿರುದ್ಧ ದ್ವೇಷ ಮತ್ತು ದ್ವೇಷದ ಭಾವನೆ ಮೂಡಿಸಲು ಉದ್ದೇಶಪೂರ್ವಕವಾಗಿ ರಾಮ್‌ದೇವ್ ಈ ಹೇಳಿಕೆ ನೀಡಿದ್ದಾರೆ ಎಂದು ಖಾನ್ ತಮ್ಮ ದೂರಿನಲ್ಲಿ ಹೇಳಿದ್ದಾರೆ. ಈ ಹೇಳಿಕೆಗಳು ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಭಾನುವಾರ, ರಾಜಸ್ಥಾನ ಪೊಲೀಸರು ರಾಮ್‌ದೇವ್ ವಿರುದ್ಧ ಸೆಕ್ಷನ್ 153 (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ. ) ಮತ್ತು ಭಾರತೀಯ ದಂಡ ಸಂಹಿತೆಯ 298 (ಯಾವುದೇ ವ್ಯಕ್ತಿಯ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಉದ್ದೇಶಪೂರ್ವಕ ಉದ್ದೇಶದಿಂದ ಹೇಳುವುದು, ಪದಗಳು, ಇತ್ಯಾದಿ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಹಿಂದೆಯೂ ರಾಮ್‌ದೇವ್ ಇಂತಹ ವಿವಾದಗಳನ್ನು ಹುಟ್ಟುಹಾಕಿದ್ದರು. ಮಹಾರಾಷ್ಟ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ (ನವೆಂಬರ್‌) ರಾಮ್‌ದೇವ್ ಅವರು ಸೆಕ್ಸಿಸ್ಟ್ ಟೀಕೆಗಳನ್ನು ಮಾಡಿದ್ದರು.

”ಮಹಿಳೆಯರು ಯಾವುದೇ ಬಟ್ಟೆಯಲ್ಲಿಯೂ ಉತ್ತಮವಾಗಿ ಕಾಣುತ್ತಾರೆ ಮತ್ತು ಅವರು ಏನನ್ನೂ ಧರಿಸದಿದ್ದರೂ ಸಹ ಉತ್ತಮವಾಗಿ ಕಾಣುತ್ತಾರೆ” ಎಂದು ಬಹಳ ಕೀಳು ಮನಸ್ಥಿತಿಯಲ್ಲಿ ರಾಮ್‌ದೇವ್‌ ಮಾತನಾಡಿದ್ದರು.

ಅಲೋಪತಿ ಮತ್ತು ವೈದ್ಯಕೀಯ ಪದ್ಧತಿಯನ್ನು ಅಭ್ಯಾಸ ಮಾಡುವ ವೈದ್ಯರ ಬಗ್ಗೆ ಅವಹೇಳನಕಾರಿ ಹೇಳಿಕೆಗಳಿಗಾಗಿ ಯೋಗ ಗುರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣವನ್ನೂ ಎದುರಿಸುತ್ತಿದ್ದಾರೆ.

ಅಲೋಪತಿ ಒಂದು ”ಅವಿವೇಕಿ ವಿಜ್ಞಾನ ಮತ್ತು ಔಷಧಿಗಳು ನಿಷ್ಪ್ರಯೋಜಕ, ಅಲೋಪತಿ ಔಷಧಿಗಳನ್ನು ತೆಗೆದುಕೊಂಡ ನಂತರ ಲಕ್ಷಾಂತರ ರೋಗಿಗಳು ಸಾವನ್ನಪ್ಪಿದ್ದಾರೆ” ಎಂದು ರಾಮ್‌ದೇವ್‌ ಕೊರೊನಾ ನಿರ್ವಹಣೆಗೆ ಸೆಣಸುತ್ತಿರುವ ವೈದ್ಯ ಸಮೂಹವನ್ನು ಮೇ 2021 ರಲ್ಲಿ ಅವಮಾನಿಸಿದ್ದರು.

ಮತ್ತೊಂದು ವೀಡಿಯೊದಲ್ಲಿ, ”ಎರಡು ಡೋಸ್ ಕರೋನಾವೈರಸ್ ಲಸಿಕೆ ಪಡೆದ ನಂತರವೂ 1,000 ವೈದ್ಯರು ಸಾವನ್ನಪ್ಪಿದ್ದಾರೆ” ಎಂದು ಸುಳ್ಳು ಹೇಳಿದ್ದರು. ನಂತರ, ಮಾಜಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ತಮ್ಮ ಹೇಳಿಕೆಗಳನ್ನು ಹಿಂತೆಗೆದುಕೊಳ್ಳುವಂತೆ ಕೇಳಿಕೊಂಡರು ಆಗ ರಾಮ್‌ದೇವ್‌ ಕ್ಷಮೆಯಾಚಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...