Homeಮುಖಪುಟಬಿಜೆಪಿ ವಕೀಲೆ ವಿಕ್ಟೋರಿಯಾ ಗೌರಿ ಮದ್ರಾಸ್‌ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ; ಸುಪ್ರೀಂನಲ್ಲಿ ತಕರಾರು

ಬಿಜೆಪಿ ವಕೀಲೆ ವಿಕ್ಟೋರಿಯಾ ಗೌರಿ ಮದ್ರಾಸ್‌ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ; ಸುಪ್ರೀಂನಲ್ಲಿ ತಕರಾರು

ಅಲ್ಪಸಂಖ್ಯಾತ ಸಮುದಾಯಗಳ ಕುರಿತು ಇವರು ಈ ಹಿಂದೆ ಆಕ್ಷೇಪಾರ್ಹವಾಗಿ ಮಾತನಾಡಿದ್ದರು

- Advertisement -
- Advertisement -

ಮಹತ್ವದ ಬೆಳವಣಿಗೆಯೊಂದರಲ್ಲಿ ವಕೀಲೆ ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ ಅವರನ್ನು ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕ ಮಾಡಿರುವುದು ವಿವಾದಕ್ಕೆ ಗುರಿಯಾಗಿದೆ. ಅಲ್ಪಸಂಖ್ಯಾತ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿರುವ ಅವರನ್ನು ನ್ಯಾಯಮೂರ್ತಿಯನ್ನಾಗಿ ನೇಮಿಸಿರುವುದು ಟೀಕೆಗೆ ಗುರಿಯಾಗಿದೆ.

ನೇಮಕಾತಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಫೆಬ್ರವರಿ 7ಕ್ಕೆ ಮುಂದೂಡಿದೆ. ಗೌರಿಯವರನ್ನು ನ್ಯಾಯಮೂರ್ತಿ ಹುದ್ದೆಗೆ ನೇಮಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಪ್ರಕಟಿಸಿದ ಬೆನ್ನಲ್ಲೇ ಈ ಬೆಳವಣಿಗೆಯಾಗಿದೆ.

ಗೌರಿಯವರ ಪದೋನ್ನತಿ ವಿರುದ್ಧದ ಅರ್ಜಿಯನ್ನು ಫೆಬ್ರವರಿ 10ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಹಿಂದಿನ ದಿನ ಒಪ್ಪಿಕೊಂಡಿತ್ತು. ಆದರೆ ವಿಷಯವನ್ನು ಮತ್ತೊಮ್ಮೆ ಪ್ರಸ್ತಾಪಿಸಲಾಯಿತು. ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಮಂಗಳವಾರಕ್ಕೆ ನಿಗದಿಪಡಿಸಿತು.

ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುತ್ತಿರುವ ಮಹಿಳಾ ವಕೀಲರನ್ನು ಮೇಲ್ದರ್ಜೆಗೆ ಏರಿಸುವ ಪ್ರಸ್ತಾಪವು ವಿವಾದಕ್ಕೆ ಕಾರಣವಾಗಿದೆ.

ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದು ಹೊಸ ನೇಮಕಾತಿಗಳನ್ನು ಘೋಷಿಸಿದ್ದಾರೆ. ನೇಮಕವಾದವರಿಗೆ ಶುಭಾಶಯವನ್ನೂ ತಿಳಿಸಿದ್ದಾರೆ. ವಕೀಲೆ ಗೌರಿ ಸೇರಿದಂತೆ ಒಟ್ಟು 11 ವಕೀಲರು ಮತ್ತು ಇಬ್ಬರು ನ್ಯಾಯಾಂಗ ಅಧಿಕಾರಿಗಳನ್ನು ಅಲಹಾಬಾದ್, ಕರ್ನಾಟಕ ಮತ್ತು ಮದ್ರಾಸ್ ಹೈಕೋರ್ಟ್‌ಗಳಿಗೆ  ಸೋಮವಾರ ನೇಮಿಸಲಾಗಿದೆ.

ಜನವರಿ 17 ರಂದು, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ, ಗೌರಿ ಮತ್ತು ಇತರ ನಾಲ್ವರನ್ನು ಮದ್ರಾಸ್ ಹೈಕೋರ್ಟ್‌ಗೆ ನೇಮಕ ಮಾಡಲು ಶಿಫಾರಸು ಮಾಡಿತ್ತು.

ಆದರೆ ಗೌರಿ ಅವರು ಭಾರತೀಯ ಜನತಾ ಪಕ್ಷದ ಸದಸ್ಯೆಯಾಗಿದ್ದಾರೆ. ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ. ಅವರ ಹೆಸರನ್ನು ಶಿಫಾರಸು ಮಾಡಿದ ಕೊಲಿಜಿಯಂ ಕ್ರಮವು ಸರಿಯಲ್ಲ ಎಂದು ವಕೀಲರು ಮತ್ತು ಕಾನೂನು ತಜ್ಞರು ಟೀಕಿಸಿದ್ದಾರೆ.

ಕಳೆದ ವಾರ ಮದ್ರಾಸ್ ಹೈಕೋರ್ಟ್ ವಕೀಲರ ಸಂಘದ ಸದಸ್ಯರು, ಕೊಲಿಜಿಯಂ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದರು. ಅಲ್ಪಸಂಖ್ಯಾತ ಸಮುದಾಯಗಳ ಬಗ್ಗೆ ಗೌರಿಯವರು ನೀಡಿರುವ ಆಕ್ಷೇಪಾರ್ಹ ಹೇಳಿಕೆಗಳತ್ತ ಪತ್ರದಲ್ಲಿ ಗಮನ ಸೆಳೆದಿದ್ದರು

“ಗೌರಿಯವರ ಪ್ರತಿಗಾಮಿ ದೃಷ್ಟಿಕೋನಗಳು ಸಾಂವಿಧಾನಿಕ ಮೌಲ್ಯಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿವೆ. ಅವರು ಧಾರ್ಮಿಕ ಮತಾಂಧತೆಯನ್ನು ಹೊಂದಿದ್ದಾರೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದರಿಂದ ಗೌರಿಯವರು ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಳ್ಳಲು ಅನರ್ಹರಾಗಿದ್ದಾರೆ ಎಂಬುದು ವಕೀಲರ ವಾದವಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಆಂಧ್ರಪ್ರದೇಶ: 7 ಮತಗಟ್ಟೆಗಳಲ್ಲಿ ಇವಿಎಂ ಧ್ವಂಸ ಮಾಡಿದ ಶಾಸಕ

0
ಆಂಧ್ರಪ್ರದೇಶದ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಶಾಸಕರೊಬ್ಬರು ಮತಗಟ್ಟೆಯಲ್ಲಿ ವಿವಿಪ್ಯಾಟ್‌ ಯಂತ್ರವನ್ನು ನೆಲಕ್ಕೆ ಎಸೆದು ಒಡೆದು ಹಾಕಿರುವ ಘಟನೆಯ ವಿಡಿಯೋ ವೈರಲ್‌ ಆಗಿದೆ. ಇದೇ ರೀತಿ 7 ಮತಗಟ್ಟೆಗಳಲ್ಲಿ ಶಾಸಕ ಇವಿಎಂ ಯಂತ್ರವನ್ನು...