Homeಮುಖಪುಟರಾಹುಲ್ ಗಾಂಧಿ ಪಪ್ಪು ಅಲ್ಲ, ಅವರು ಬಿಜೆಪಿಗರನ್ನೇ ಪಪ್ಪು ಮಾಡಿದ್ದಾರೆ: ಆದಿರ್ ಚೌಧರಿ

ರಾಹುಲ್ ಗಾಂಧಿ ಪಪ್ಪು ಅಲ್ಲ, ಅವರು ಬಿಜೆಪಿಗರನ್ನೇ ಪಪ್ಪು ಮಾಡಿದ್ದಾರೆ: ಆದಿರ್ ಚೌಧರಿ

- Advertisement -
- Advertisement -

ಕಳೆದೆರಡು ದಿನಗಳಿಂದ ಲೋಕಸಭೆಯಲ್ಲಿ ವಿಪಕ್ಷ ನಾಯಕರು ತೀವ್ರ ತರಾಟೆಗೆ ತಗೆದುಕೊಂಡ ಬಳಿಕ ಕೇಂದ್ರ ಸರ್ಕಾರ ತೀವ್ರ ಮುಜುಗಕ್ಕಿಡಾಯಿತು. ಈ ವೇಳೆ ಕಾಂಗ್ರೆಸ್ ನಾಯಕ ಆದಿರ್ ಚೌಧರಿ ಅವರು, ರಾಹುಲ್ ಗಾಂಧಿಯವರನ್ನು ನೀವು ಎಷ್ಟೇ ‘ಪಪ್ಪು’ ಎಂದು ಹೇಳಿದರೂ ಸಾಬೀತುಮಾಡಲಾಗಲಿಲ್ಲ. ಆದರೆ ರಾಹುಲ್ ಗಾಂಧಿಯವರೇ ನಿಮ್ಮನ್ನು ‘ಪಪ್ಪು’ ಎಂದು ಸಾಬೀತುಪಡಿಸಿದ್ದಾರೆ ಎಂದು ಹೇಳಿದರು.

”ರಾಹುಲ್ ಗಾಂಧಿಯವರು ಸರಿಯಾದ ವಿಚಾರವನ್ನೇ ಆಯ್ಕೆ ಮಾಡಿಕೊಂಡು, ನಿಮ್ಮ ಮೇಲೆ ದಾಳಿ ಮಾಡಿದ್ದಾರೆ. ಅದರಿಂದ ಬಿಜೆಪಿಯಲ್ಲಿ ಕೋಲಾಹಲ ಎದ್ದಿದೆ. ಮೊದಲ ಬಾರಿಗೆ, ಆಡಳಿತ ಪಕ್ಷವು ಕೈಗಾರಿಕೋದ್ಯಮಿಗಾಗಿ ವಕಾಲತ್ತು ವಹಿಸುತ್ತಿದೆ. ‘ಇದನ್ನು ನಾವು ಹೇಳುತ್ತಿಲ್ಲ, ಇದು ಹಿಂಡೆನ್‌ಬರ್ಗ್ ವರದಿಯಲ್ಲಿ ಬಂದಿದೆ. ನಾವು ಆ ಸಮಸ್ಯೆಯನ್ನು ಎತ್ತುತ್ತಿದ್ದೇವೆ ಅದರಲ್ಲಿ ತಪ್ಪೇನು?” ಎಂದರು.

ಈ ವೇಳೆ ಚೀನಾ ವಿಷಯವನ್ನು ಪ್ರಸ್ತಾಪಿಸಿ, 1962ರ ಭಾರತ-ಚೀನಾ ಯುದ್ಧದ ನಂತರ ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಮನವಿಯ ಮೇಲೆ ಚರ್ಚೆಗೆ ಒಪ್ಪಿದರು, ಆದರೆ ಪ್ರಸ್ತುತ ಬಿಜೆಪಿ ಸರ್ಕಾರ ಚರ್ಚೆಯೇ ಬೇಡ ಎಂದು ಹೇಳುತ್ತದೆ.

“ಕೆಲವು ದಿನಗಳ ಹಿಂದೆ ದೆಹಲಿಯಲ್ಲಿ ಡಿಜಿಗಳು ಮತ್ತು ಐಜಿಗಳ ಸಭೆ ನಡೆಯಿತು, ಪೊಲೀಸ್ ಅಧಿಕಾರಿಗಳು ಸಂಶೋಧನಾ ಪ್ರಬಂಧವನ್ನು ಮಂಡಿಸಿದರು. ಅದರಲ್ಲಿ ನಾವು ಮೊದಲು ಪೂರ್ವ ಲಡಾಖ್‌ನಲ್ಲಿ 65 ಪಾಯಿಂಟ್‌ಗಳಲ್ಲಿ ಗಸ್ತು ತಿರುಗುತ್ತಿದ್ದೆವು ಆದರೆ ನಮಗೆ ಆನಂತರ ಗಸ್ತು ತಿರುಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಏಕೆಂದರೆ ಭಾರತಕ್ಕೆ ಚೀನೀ ಆಕ್ರಮಣಗಳು ಹೆಚ್ಚಾಗಿವೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಕಡತದಿಂದ ರಾಹುಲ್ ಭಾಷಣ ಕಡಿತ; ಪ್ರಜಾಪ್ರಭುತ್ವ ದಹನ ಎಂದ ಕಾಂಗ್ರೆಸ್

ಈ ವೇಳೆ ಪ್ರತಿಕ್ರಿಯಿಸಿದ ಅಮಿತ್ ಶಾ, ”ಅಧಿರ್ ರಂಜನ್ ಜೀ ಇದನ್ನು ಈಗ ಏಕೆ ಚರ್ಚೆ ಮಾಡುತ್ತಿಲ್ಲ ಎಂದು ಕೇಳುತ್ತಿದ್ದಾರೆ. ಏಕೆಂದರೆ ಆಗ ನ್ಯೂನತೆಗಳಿದ್ದವು ಮತ್ತು ಈಗ ಯಾವುದೂ ಇಲ್ಲ. ಆಗ (ನೆಹರು-ವಾಜಪೇಯಿ) ಸಾವಿರಾರು ಹೆಕ್ಟೇರ್ ನಷ್ಟವಾದ ನಂತರ ಚರ್ಚೆ ಪ್ರಾರಂಭವಾಯಿತು” ಎಂದು ಹೇಳಿದರು.

ಲೋಕಸಭೆಯಿಂದ ಹೊರಬಂದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅಧೀರ್ ರಂಜನ್ ಚೌಧರಿ, ಬಿಜೆಪಿ ಸಂಸದರನ್ನು ಗೇಲಿ ಮಾಡಿ, ಪ್ರಧಾನಿ ನರೇಂದ್ರ ಮೋದಿಯವರ ‘ಚಾಮ್ಚೆ’ ಎಂದು ಕರೆದಿದ್ದಾರೆ.

”ಪ್ರಧಾನಿಯವರು ತಪ್ಪುದಾರಿಗೆಳೆಯುವ ಭಾಷಣಕ್ಕೆ ಎಲ್ಲ ಬಿಜೆಪಿ ಸಂಸದರು ಚಪ್ಪಾಳೆ ತಟ್ಟಿದರು. ಪ್ರಧಾನಿ ಹೋದ ನಂತರ (ಲೋಕಸಭೆಯಿಂದ) ಎಲ್ಲಾ ‘ಚಾಮ್ಚೆ’ಗಳು ಹೋದವು. ಇದರಿಂದಾಗಿ ಸದನವನ್ನು ನಡೆಸಲು ಅಗತ್ಯವಿರುವ ಕನಿಷ್ಠ ಬಲ ಇರಲಿಲ್ಲ ಹಾಗಾಗಿ ಸದನವನ್ನು ಮುಂದೂಡಲಾಯಿತು. ಇದು ಸರ್ಕಾರದ ಅಸಮರ್ಥತೆಯನ್ನು ತೋರಿಸುತ್ತದೆ ಎಂದು ಹೇಳಿದರು.

ಪ್ರಧಾನಿ ಮೋದಿ ಭಾಷಣದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಶಶಿ ತರೂರ್, ”ಪ್ರಧಾನಿ ಉತ್ತಮ ಭಾಷಣ ಮಾಡಿದರು ಆದರೆ ಪ್ರತಿಪಕ್ಷಗಳು ಕೇಳಿದ ಯಾವುದೇ ಪ್ರಶ್ನೆಗಳಿಗೆ ಅವರು ಉತ್ತರಿಸಲಿಲ್ಲ” ಎಂದು ಹೇಳಿದರು.

“ಪ್ರಧಾನಿಯವರ ಭಾಷಣವು ​​ಪುನರಾವರ್ತಿತ, ವಾಕ್ಚಾತುರ್ಯ ಮತ್ತು ಪ್ರತಿಪಕ್ಷಗಳ ವಿರುದ್ಧ ವ್ಯಂಗ್ಯದಿಂದ ಕೂಡಿತ್ತು. ಪ್ರತಿಪಕ್ಷಗಳನ್ನು ಕೆಣಕುವುದರಿಂದ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲಾಗುವುದಿಲ್ಲ. ದೇಶವು ನಿಮ್ಮನ್ನು ನೋಡುತ್ತಿದೆ ಮತ್ತು ಮುಂದಿನ ಚುನಾವಣೆಯಲ್ಲಿ ಜನರು ಉತ್ತರ ನೀಡುತ್ತಾರೆ ಎಂದು ಬಿಆರ್‍‌ಎಸ್‌ ನಾಯಕಿ ಕವಿತಾ ಕಲ್ವಕುಂಟ್ಲ ಹೇಳಿದರು.

ಪ್ರಧಾನಿ ಮೋದಿಯವರ ಭಾಷಣದಿಂದ ತೃಪ್ತರಾಗಿಲ್ಲ, ಪ್ರತಿಪಕ್ಷಗಳು ಎತ್ತುವ ಪ್ರಶ್ನೆಗಳಿಗೆ ಪ್ರಧಾನಿ ಉತ್ತರಿಸಲಿಲ್ಲ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಹೇಳಿದ್ದಾರೆ.

”ನನಗೆ (ಪ್ರಧಾನಿ ಭಾಷಣ) ​​ತೃಪ್ತಿ ಇಲ್ಲ. ಅದಾನಿ ವಿರುದ್ಧದ ತನಿಖೆ ಬಗ್ಗೆ ಏನೂ ಮಾತನಾಡಲಿಲ್ಲ. ಅವರು (ಗೌತಮ್ ಅದಾನಿ) ಸ್ನೇಹಿತರಲ್ಲದಿದ್ದರೆ ಪ್ರಧಾನ ಮಂತ್ರಿಯವರು ತನಿಖೆ ನಡೆಸಲು ಸೂಚಿಸಿಬೇಕು. ಪ್ರಧಾನಿ ಅವರನ್ನು (ಗೌತಮ್ ಅದಾನಿ) ರಕ್ಷಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ.” ಪ್ರಧಾನಿ ಭಾಷಣದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ರಾಹುಲ್ ಗಾಂಧಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...