Homeಕರ್ನಾಟಕಬೊಮ್ಮಾಯಿ ಘೋಷಿಸಿದ 775 ಕೋಟಿ ರೂ ಅನುದಾನ: ಫ್ರೀಡಂ ಪಾರ್ಕ್‌ನಲ್ಲಿ ನಿಲ್ಲದ ಹೋರಾಟ

ಬೊಮ್ಮಾಯಿ ಘೋಷಿಸಿದ 775 ಕೋಟಿ ರೂ ಅನುದಾನ: ಫ್ರೀಡಂ ಪಾರ್ಕ್‌ನಲ್ಲಿ ನಿಲ್ಲದ ಹೋರಾಟ

- Advertisement -
- Advertisement -

2022-23ನೇ ಸಾಲಿನಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕರು, ಬಿಸಿಯೂಟ ತಯಾರಕರು, ಬಿಸಿಯೂಟ ಸಹಾಯಕರು, ಅತಿಥಿ ಉಪನ್ಯಾಸಕರು, ಅತಿಥಿ ಶಿಕ್ಷಕರು, ಗ್ರಾಮ ಸಹಾಯಕರು, ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರು ಮತ್ತು ಗ್ರಾಮ ಪಂಚಾಯಿತಿ ಸದಸ್ಯರುಗಳ ಗೌರವಧನ ಹೆಚ್ಚಿಸಲಾಗಿದೆ. ಇದರಿಂದ 4.45 ಲಕ್ಷ ಜನರಿಗೆ ಫಲ ದೊರೆತಿದ್ದು, ಒಟ್ಟು 775 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಬಸವರಾಜ ಬೊಮ್ಮಾಯಿಯವರು ಈ ವರ್ಷದ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಆದರೆ ಕಳೆದ ವರ್ಷ ಸರ್ಕಾರ ಅಷ್ಟೆಲ್ಲ ಮಾಡಿದರೂ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೊಮ್ಮಾಯಿಯವರು ಮೇಲೆ ಉಲ್ಲೇಖಿಸಿದ ಬಹುತೇಕ ಸಮುದಾಯಗಳು ಇಂದಿಗೂ ಹೋರಾಟದಲ್ಲಿ ನಿರತವಾಗಿವೆ.

ಅಲಹಾಬಾದ್ ಹೈಕೋರ್ಟ್ ಆದೇಶದಂತೆ ಶಾಲೆಗಳಲ್ಲಿ ಬಿಸಿಯೂಟ ತಯಾರಕರಿಗೆ ಕನಿಷ್ಟ ವೇತನ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್‌ (AITUC) ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ.

ಬಿಸಿಯೂಟ ತಯಾರಕರ ಹೋರಾಟ

ಆರೋಗ್ಯ ಇಲಾಖೆಯ NHM ಒಳಗುತ್ತಿಗೆ ನೌಕರರು ಖಾಯಂ ಮಾಡಲು ಒತ್ತಾಯಿಸಿ ಪ್ರತಿಭಟನೆಗೆ ಕೂತಿದ್ದಾರೆ.

ಸ್ಥಳೀಯ ಸಂಸ್ಥೆಗಳ ನೌಕರರೆಂದು ಪರಿಗಣಿಸಿ, ಶತಮಾನಗಳ ಬಿಟ್ಟಿ ಚಾಕರಿ ತೊಲಗಿಸಿ ಎಂದು ಆಗ್ರಹಿಸಿ ಮಸಣ ಕಾರ್ಮಿಕರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.

PCP ನೌಕರರ ಹುದ್ದೆ ವ್ಯತ್ಯಾಸ ಗೊಳಿಸಿ ಹೊರಗುತ್ತಿಗೆಗೆ ಬದಲಾಯಿಸಿರುವ ಕ್ರಮವನ್ನು ವಿರೋಧಿಸಿ, ಕಳೆದ ಎರಡು ವರ್ಷಗಳಿಂದ ವೇತನ ನೀಡದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ದಿನಗೂಲಿ ನೌಕರರ ಸಂಘ ಪ್ರತಿಭಟನೆ ನಡೆಸುತ್ತಿದೆ.

ರಾಜ್ಯದ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮ ಸಹಾಯಕರನ್ನು ʼಡಿʼ ಗ್ರೂಪ್‌ ನೌಕರರ ಪಟ್ಟಿಗೆ ಸೇರಿಸಿ ಮೇಲ್ದರ್ಜೆಗೇರಿಸಬೇಕು, ಗೌರವಧನ ಬೇಡ ನಿಶ್ಚಿತ ವೇತನ ಕೊಡಿ ಎಂದು ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘ ಹೋರಾಟ ನಡೆಸುತ್ತಿದೆ.

ಪ್ರತಿಭಟನಾ ನಿರತ ಅಂಗನವಾಡಿ ಕಾರ್ಯಕರ್ತೆಯರನ್ನು ಬಂಧಿಸಿ ದೌರ್ಜನ್ಯ ಎಸಗಿದ BJP ಸರ್ಕಾರ
ಅಂಗನವಾಡಿ ಅವ್ವಂದಿರನ್ನು ಪೊಲೀಸರು ಬಂಧಿಸಿದ್ದರು

ಕಳೆದ ತಿಂಗಳು ಅಂಗನವಾಡಿ ಅವ್ವಂದಿರು ವಾರಗಳ ಕಾಲ ಹಗಲು ರಾತ್ರಿ ಫ್ರೀಡಂ ಪಾರ್ಕ್‌ನಲ್ಲಿ ಚಳಿಯನ್ನು ಲೆಕ್ಕಿಸದೇ ಹೋರಾಟ ನಡೆಸಿದ್ದರು. ಅದಕ್ಕೂ ಹಿಂದೆ ಅತಿಥಿ ಉಪನ್ಯಾಸಕರು, ಅತಿಥಿ ಶಿಕ್ಷಕರು ತಿಂಗಳುಗಟ್ಟಲೇ ಹೋರಾಟ ನಡೆಸಿದ್ದರು.

ಆಶಾ ಕಾರ್ಯಕರ್ತೆಯರು ಸಾಗರೋಪಾದಿಯಾಗಿ ಬೆಂಗಳೂರಿಗೆ ಆಗಮಿಸಿ ಹತ್ತಾರು ಹೋರಾಟಗಳನ್ನು ನಡೆಸಿರುವುದನ್ನು ನಾವೆಲ್ಲರೂ ಗಮನಿಸಿದ್ದೇವೆ.

ಇನ್ನು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾರಿಗಳ ಒಳ ಮೀಸಲಾತಿ ಹೋರಾಟ ಸಮಿತಿ ಎರಡು ತಿಂಗಳಿನಿಂದ ಹೋರಾಟ ನಿರತವಾಗಿದೆ.

ಒಳಮೀಸಲಾತಿ ಜಾರಿಗಾಗಿ ನಡೆಯುತ್ತಿರುವ ಹೋರಾಟ

ಬೊಮ್ಮಾಯಿಯವರು ನಾವು 4.45 ಲಕ್ಷ ಜನರಿಗೆ ಫಲ ದೊರೆಯಲು ಒಟ್ಟು 775 ಕೋಟಿ ರೂ ಬಿಡುಗಡೆ ಮಾಡಿದ್ದೇವೆ ಎಂದು ಬಜೆಟ್ ಸಂದರ್ಭದಲ್ಲಿ ಹೇಳಿಕೊಳ್ಳುತ್ತಿದ್ದಾರೆ. ಹಾಗಿದ್ದರೂ ಇಂದೂ ಸಹ ಆ ಸಮುದಾಯಗಳು ಏಕೆ ಹೋರಾಟ ನಿರತವಾಗಿವೆ? ಅವರ ನೋವುಗಳನ್ನು ಕೇಳಲು, ಬಗೆಹರಿಸಲು ಯಾವ ಕ್ರಮ ಕೈಗೊಂಡಿದ್ದಾರೆ ಎಂಬ ಪ್ರಶ್ನೆಗಳು ಕೇಳಿ ಬರುತ್ತಲೇ ಇವೆ.

ಇದನ್ನೂ ಓದಿ: ದೂರದೃಷ್ಟಿಯಿಲ್ಲದ, ಕೃಷಿಕರ ಪರವಿಲ್ಲದ ಗುಮಾಸ್ತ ತಯಾರಿಸಿದ ಲೆಕ್ಕಾಚಾರದ ಬಜೆಟ್: ಬಡಗಲಪುರ ನಾಗೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....