Homeಕರ್ನಾಟಕವಿಭಿನ್ನ ಪ್ರತಿಭಟನೆ: ಬಜೆಟ್ ಅಧಿವೇಶಕ್ಕೆ ಕಿವಿಗೆ ಹೂ ಇಟ್ಟುಕೊಂಡು ಬಂದ ಸಿದ್ದರಾಮಯ್ಯ

ವಿಭಿನ್ನ ಪ್ರತಿಭಟನೆ: ಬಜೆಟ್ ಅಧಿವೇಶಕ್ಕೆ ಕಿವಿಗೆ ಹೂ ಇಟ್ಟುಕೊಂಡು ಬಂದ ಸಿದ್ದರಾಮಯ್ಯ

- Advertisement -
- Advertisement -

ರಾಜ್ಯ ಬಜೆಟ್ ಮಂಡಿಸಲು ಬಂದ ಮುಖ್ಯಮಂತ್ರಿ, ಹಣಕಾಸು ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿವಿ ಮೇಲೆ ಹೂವು ಇಟ್ಟುಕೊಂಡು ಸ್ವಾಗತಿಸಿದ್ದಾರೆ. ಇದು, ಸರ್ಕಾರ ಜನರ ಕಿವಿಗೆ ಹೂ ಇಡುವ ಬಜೆಟ್ ಎನ್ನುವುದನ್ನು ಸೂಚಿಸುವ ವಿಭಿನ್ನ ಪ್ರತಿಭಟನೆಯಾಗಿದೆ.

ಬಸವರಾಜ ಬೊಮ್ಮಾಯಿ ಅವರು ಬಜೆಟ್‌ ಭಾಷಣ ಆರಂಭಿಸುತ್ತಿದ್ದಂತೆ ಸಿದ್ದರಾಮಯ್ಯ ಅವರು, ಕಿವಿ ಮೇಲೆ ಹೂವು ಇಟ್ಟುಕೊಂಡು ‘ರಾಜ್ಯದ ಜನತೆಗೆ ಬೊಮ್ಮಾಯಿ ಅವರು ಕಿವಿ ಮೇಲೆ ಹೂವು ಇಡಲು ಬಂದಿದ್ದಾರೆ’ ಎಂದು ವ್ಯಂಗ್ಯವಾಡಿದರು.

ಈ ವೇಳೆ ಸಿದ್ದರಾಮಯ್ಯ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ ಬೊಮ್ಮಾಯಿ, ”ವಿರೋಧ ಪಕ್ಷದ ನಾಯಕರು ಹೀಗೆ ಕಿವಿ ಮೇಲೆ ಹೂವು ಇಟ್ಟುಕೊಳ್ಳುವುದು ಸರಿಯಲ್ಲ ಎಂದು ನಾನು ಹೇಳುತ್ತೇನೆ, ಉಳಿದದ್ದು ನಿಮ್ಮ ಇಚ್ಛೆ. ಇಷ್ಟು ದಿನ ಸಿದ್ದರಾಮಯ್ಯನವರು ಜನರ ಕಿವಿ ಮೇಲೆ ಹೂವು ಇಟ್ಟಿದ್ದರು. ಜನ ಈಗ ಸಿದ್ದರಾಮಯ್ಯ ಅವರ ಕಿವಿ ಮೇಲೆ ಹೂ ಇಟ್ಟಿದ್ದಾರೆ. ಮುಂದಿನ ಸಲವೂ ರಾಜ್ಯದ ಜನತೆ ಅವರ ಕಿವಿ ಮೇಲೆ ಹೂವು ಇಡುವ ಪರಿಸ್ಥಿತಿ ಬರುತ್ತದೆ” ಎಂದು ಬೊಮ್ಮಾಯಿ ಟೀಕಿಸಿದರು.

ಇದನ್ನೂ ಓದಿ: ದೂರದೃಷ್ಟಿಯಿಲ್ಲದ, ಕೃಷಿಕರ ಪರವಿಲ್ಲದ ಗುಮಾಸ್ತ ತಯಾರಿಸಿದ ಲೆಕ್ಕಾಚಾರದ ಬಜೆಟ್: ಬಡಗಲಪುರ ನಾಗೇಂದ್ರ

ಅದಕ್ಕೆ ಸಿದ್ದರಾಮಯ್ಯ, ”ನಾವು ಕಿವಿ ಮೇಲೆ ಹೂವು ಇಟ್ಟುಕೊಂಡಿರುವುದು, ಈ ಬಜೆಟ್‌ ಮೂಲಕ ಇಡೀ ರಾಜ್ಯದ ಏಳು ಕೋಟಿ ಜನರ ಕಿವಿ ಮೇಲೆ ಹೂವು ಇಡಲು ಹೊರಟಿದ್ದಾರೆ ಎನ್ನುವುದನ್ನು ತಿಳಿಸಲು” ಎಂದರು.

ಸಿದ್ದರಾಮಯ್ಯ ಮಾತಿಗೆ ಎದ್ದು ನಿಂತ ಸಚಿವ ಶ್ರೀರಾಮುಲು, ಆರ್‌ ಅಶೋಕ ಅವರು, ಬಜೆಟ್ ಮಂಡನೆ ವೇಳೆ  ಈ ರೀತಿಯ ನಡೆದುಕೊಳ್ಳುವುದು ಸಂಪ್ರದಾಯ ಅಲ್ಲ ಎಂದರು. ಆಗ ಸಿದ್ದರಾಮಯ್ಯ, ”ಬಿಜೆಪಿಯವರಿಗೆ ಮಾನ ಮರ್ಯಾದೆಯೇ ಇಲ್ಲ. ಈವರೆಗೂ ಕೊಟ್ಟ 600 ಭರವಸೆಗಳಲ್ಲಿ 51 ಭರವಸೆ ಈಡೇರಿಸಲು ಆಗಿಲ್ಲ ನಿಮ್ಮ ಕೈಯಲ್ಲಿ” ಎಂದು ಅಧಿವೇಶನದಲ್ಲೇ ವಾಗ್ದಾಳಿ ನಡೆಸಿದರು.

ಈ ವೇಳೆ ಕೆಲ ಕಾಲ ಆಡಳಿತ ಮತ್ತು ಪ್ರತಿಪಕ್ಷದ ನಾಯಕರ ನಡುವೆ ಗದ್ದಲ ಏರ್ಪಟ್ಟಿತ್ತು. ಗದ್ದಲದ ನಡುವೆಯೇ ಸಿದ್ದರಾಮಯ್ಯ, ”ಬೊಮ್ಮಾಯಿ ಸುಳ್ಳುಗಳನ್ನು ಹೇಳಲು ಬಂದಿದ್ದಾರೆ. ಬಿಜೆಪಿ ಸುಳ್ಳಿನ ಫ್ಯಾಕ್ಟರಿ” ಎಂದು ಹೇಳಿದರು, ಆಗ ಬೊಮ್ಮಾಯಿ, ಅವರು ಹೂ ಇಟ್ಟುಕೊಂಡರೆ ನಮ್ಮದೇನೂ ಅಭ್ಯಂತರವಿಲ್ಲ ಎಂದರು.

ಈ ಗಲಾಟೆಯನ್ನು ನಿಲ್ಲಿಸಲು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹರಸಾಹಸಪಟ್ಟರು.  ಸಿದ್ದರಾಮಯ್ಯ ನಡೆಗೆ ಸಭಾಧ್ಯಕ್ಷರು ಪ್ರತಿಕ್ರಿಯಿಸಿ, ”ನಾವು ನೀವೆಲ್ಲ ಸಂತೋಷ ಪಡಬೇಕು. ಸಿದ್ದರಾಮಯ್ಯ ಅವರು ಕೇಸರಿ ಬಣ್ಣದ ಹೂವನ್ನೇ ಇಟ್ಟುಕೊಂಡು ಬಂದಿದ್ದಾರೆ. ಹಾಗಾಗಿ ಬಿಜೆಪಿಯವರು ಸಂತೋಷ ಪಡಬೇಕು” ಎಂದರು. ಆಗ ಕಾಂಗ್ರೆಸ್ ನಾಯಕರು ಎದ್ದು ನಿಂತು ಕೇಸರಿ ಬಣ್ಣವನ್ನು ಗುತ್ತಿಗೆ ಪಡೆದಿದ್ದೀರಾ ಎಂದು ಕಾಗೇರಿ ಮಾತಿಗೆ ವಿರೋಧ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...