Homeಕರ್ನಾಟಕಶಿಕ್ಷಣಕ್ಕೆ ಬಜೆಟ್‌ನಲ್ಲಿ ಹೊಸತೇನೂ ಇಲ್ಲ, ಇದು 2022-23ರ ಎರಡನೇ ಆವೃತ್ತಿಯಾಗಿದೆ: ವಿ.ಪಿ ನಿರಂಜನರಾಧ್ಯ

ಶಿಕ್ಷಣಕ್ಕೆ ಬಜೆಟ್‌ನಲ್ಲಿ ಹೊಸತೇನೂ ಇಲ್ಲ, ಇದು 2022-23ರ ಎರಡನೇ ಆವೃತ್ತಿಯಾಗಿದೆ: ವಿ.ಪಿ ನಿರಂಜನರಾಧ್ಯ

ಶಿಕ್ಷಕರು ಸೇರಿದಂತೆ ಹಲವು ಸರ್ಕಾರಿ ನೌಕರರು ಹಳೇ ಪಿಂಚಣಿ ವ್ಯವಸ್ಥೆಗಾಗಿ ದೊಡ್ಡ ಹೋರಾಟ-ಆಂದೋಲನ ನಡೆಸಿದ್ದರು. ಅದನ್ನು ಸಹ ಈ ಸರ್ಕಾರ ನಿರ್ಲಕ್ಷಿಸಿದೆ.

- Advertisement -
- Advertisement -

2022-23 ರ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕಾಗಿ ಏನನ್ನು ಘೋಷಿಸಲಾಗಿತ್ತೊ ಅವುಗಳನ್ನು ಪೂರ್ಣಗೊಳಿಸುತ್ತೇವೆ ಎಂದಷ್ಟೆ 2023-24ರ ಈ ವರ್ಷದ ಬಜೆಟ್‌ನಲ್ಲಿ ಹೇಳಲಾಗಿದೆ ಹೊರತು, ಹೊಸತೇನೂ ಇಲ್ಲ ಎಂದು ಶಿಕ್ಷಣ ತಜ್ಞ ವಿ.ಪಿ ನಿರಂಜನರಾಧ್ಯ ಅಭಿಪ್ರಾಯಪಟ್ಟಿದ್ದಾರೆ.

ಶಿಕ್ಷಣ ಕ್ಷೇತ್ರದ ಜ್ವಲಂತ ಸಮಸ್ಯೆಗಳಿಗೆ ಈ ಬಜೆಟ್‌ನಲ್ಲಿ ಯಾವುದೇ ಪರಿಹಾರ ಘೋಷಿಸಿಲ್ಲ. ಆಡಳಿತ ಸುಧಾರಣಾ ಆಯೋಗ-2 ಅಪೌಷ್ಟಿಕತೆ ದೊಡ್ಡ ಮಟ್ಟದಲ್ಲಿದೆ ಎಂದು ವರದಿ ನೀಡಿತ್ತು. ಹಾಗಾಗಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಾರಕ್ಕೆ 5 ದಿನ ಮೊಟ್ಟೆ ಕೊಡಬೇಕು, ಸಾಮಾನ್ಯ ಮಕ್ಕಳಿಗೆ ವಾರಕ್ಕೆ 2 ದಿನ ಮೊಟ್ಟೆ ಕೊಡಬೇಕು ಎಂಬದು ಶಿಫಾರಸ್ಸು ಮಾಡಿತ್ತು. ಅದರ ಪ್ರಸ್ತಾಪವೇ ಬಜೆಟ್‌ನಲ್ಲಿಲ್ಲ ಎಂದರು.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1,41,000 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅದರ ಬಗ್ಗೆ ಮುಖ್ಯಮಂತ್ರಿಗಳು ಪ್ರಸ್ತಾಪ ಮಾಡಿಲ್ಲ. ಹಿಂದೆ 15,000 ಶಿಕ್ಷಕರ ನೇಮಕ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದರೂ ಆ ಪ್ರಕ್ರಿಯೆಯೇ ಇನ್ನು ಪೂರ್ಣಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅನುದಾನ ರಹಿತ ಕನ್ನಡ ಶಾಲೆಗಳು 1994ರಿಂದಲೂ ಅನುದಾನ ಕೊಡಿ ಎಂದು ಕೇಳುತ್ತಾ ಬಂದಿದ್ದಾರೆ. ಅವು ಕನ್ನಡ ಶಾಲೆಗಳಾಗಿದ್ದು ಅನುದಾನ ನೀಡಿದ್ದರೆ ಒಳ್ಳೆಯದಾಗುತ್ತಿತ್ತು. ಆದರೆ ಈ ಬಜೆಟ್‌ನಲ್ಲಿಯೂ ಸರ್ಕಾರ ಅದಕ್ಕೆ ಸ್ಪಂದಿಸಿಲ್ಲ. ಇನ್ನು ಶಿಕ್ಷಕರು ಸೇರಿದಂತೆ ಹಲವು ಸರ್ಕಾರಿ ನೌಕರರು ಹಳೇ ಪಿಂಚಣಿ ವ್ಯವಸ್ಥೆಗಾಗಿ ದೊಡ್ಡ ಹೋರಾಟ-ಆಂದೋಲನ ನಡೆಸಿದ್ದರು. ಅದನ್ನು ಸಹ ಈ ಸರ್ಕಾರ ನಿರ್ಲಕ್ಷಿಸಿದೆ ಎಂದರು.

ಇದನ್ನೂ ಓದಿ: ದೂರದೃಷ್ಟಿಯಿಲ್ಲದ, ಕೃಷಿಕರ ಪರವಿಲ್ಲದ ಗುಮಾಸ್ತ ತಯಾರಿಸಿದ ಲೆಕ್ಕಾಚಾರದ ಬಜೆಟ್: ಬಡಗಲಪುರ ನಾಗೇಂದ್ರ

ಆರ್‌ಟಿಇ ಕಾಯ್ದೆಯ ಅನುಸರಣೆ ಕೇವಲ 23% ಇದೆ. ಅದು ಕನಿಷ್ಟ 50%ಗೆ ಏರಿಸಬೇಕೆಂಬುದು ನಮ್ಮ ಹಕ್ಕೊತ್ತಾಯವಾಗಿತ್ತು. ಆದರೆ ಅದನ್ನೂ ಪ್ರಸ್ತಾಪಿಸಿಲ್ಲ. ಇನ್ನು ವರ್ಷವೀಡಿ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಹೋದಬಂದಲೆಲ್ಲಾ ಮಾತನಾಡುತ್ತಿದ್ದ ಬಿಜೆಪಿ ಸರ್ಕಾರ ಬಜೆಟ್‌ನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಎಂಬ ಪದವನ್ನೇ ಬಳಸಿಲ್ಲ. 5ನೇ ತರಗತಿಯವರೆಗೂ ಕನ್ನಡ ಮಾಧ್ಯಮ ತರುತ್ತೇವೆ ಎಂಬುದಾಗಲಿ, ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುತ್ತೇವೆ ಎಂಬುದೆಲ್ಲ ಬರೀ ಸುಳ್ಳು ಎಂಬುದನ್ನು ಈ ಬಜೆಟ್‌ ನಿರೂಪಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

2022-23 ನೇ ಸಾಲಿನ ಆಯವ್ಯಯದಲ್ಲಿ ಶಿಕ್ಷಣಕ್ಕೆ ರೂ.31,980 ಕೋಟಿಯನ್ನು ಮೀಸಲಿಡಲಾಗಿತ್ತು. 2022-23 ನೇ ಸಾಲಿನ ಒಟ್ಟು ಆಯವ್ಯಯದಲ್ಲಿ ಶಿಕ್ಷಣದ ಪಾಲು ಶೇಕಡ 12. ಈ ಬಾರಿ ಶಿಕ್ಷಣಕ್ಕೆ 37,960 ಕೋಟಿಯನ್ನು ಮೀಸಲಿಡಲಾಗಿದೆ. ಒಟ್ಟು ಆಯವ್ಯದಲ್ಲಿ ಶಿಕ್ಷಣದ ಪಾಲು ಶೇಕಡ 13.1. ಯಥಾರ್ಥದಲ್ಲಿ, ಶಿಕ್ಷಣಕ್ಕೆ ಕಳೆದ ಬಾರಿಗಿಂತ 5980 ಕೋಟಿ ಹೆಚ್ಚಿನ ಅನುದಾನ ಸಿಕ್ಕಿದ್ದು, ಒಟ್ಟು ಆಯವ್ಯಯದಲ್ಲಿ ಶೇಕಡಾ 13.1 ದೊರೆತಿದ್ದು,  ಶೇಕಡಾವಾರು ಲೆಕ್ಕದಲ್ಲಿ 1.1 ರಷ್ಟು ಹೆಚ್ಚಿದೆ.

ಇದು ತೋರಿಕೆಗೆ ಜಾಸ್ತಿಯೆನಿಸಿದರೂ, ಬಹುತೇಕ ಪಾಲು ಈಗಿನ ಶಿಕ್ಷಕರ ಸಂಬಳ, ಹೆಚ್ಚಿಸಿರುವ ಗೌರವ ಧನ ಹಾಗು ಹಿಂದಿನ ಸಾಲಿನಲ್ಲಿ ಮುಂದುವರಿದಿರುವ ಕಾಮಗಾರಿಗಳಿಗೆ ವ್ಯಯವಾಗುತ್ತದೆ. ಆದ್ದರಿಂದ, ಜ್ವಲಂತ ಸಮಸ್ಯೆಗಳಾಗಿರುವ ಶಿಕ್ಷಣ ಹಕ್ಕು ಕಾಯಿದೆಯ ಈಗಿನ ಶೇಕಡ 23.6 ಅನುಸರಣೆಯನ್ನು ಕನಿಷ್ಠ 50 ಕ್ಕೆ ಏರಿಸಲಾಗಲಿ, ಸರಕಾರಿ ಶಾಲೆಗಳಲ್ಲಿ ಖಾಲಿ ಇರುವ 1,41,358 ಶಿಕ್ಷಕರ ಖಾಲಿ ಹುದ್ದೆಗಳನ್ನು ತುಂಬುವ ಭರವಷೆಯಾಗಲಿ, ತೀವ್ರ ಅಪೌಷ್ಠಿಕತೆಯನ್ನು ತೊಡೆದು ಹಾಕಲು ಆಡಳಿತ ಸುಧಾರಣಾ ಆಯೋಗ -೨ರ ವರದಿಯು ಪ್ರಸ್ತಾಪಿಸಿದಂತೆ ಮಕ್ಕಳಿಗೆ ವಾರದಲ್ಲಿ 5 ದಿನವೂ ಮೊಟ್ಟೆ ನೀಡುವ ಭರವಷೆಯಾಗಲಿ ಅನುದಾನಕ್ಕಾಗಿ ಕಾಯುತ್ತಿರುವ ಕನ್ನಡ ಅನುದಾನರಹಿತ ಶಾಲೆಗಳಿಗೆ ಅನುದಾನ ಒದಗಿಸುವ ಅಥವಾ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಯಾವ ಅಂಶಗಳೂ ಆಯವ್ಯದಲ್ಲಿ ಕಾಣುತ್ತಿಲ್ಲ.

ಒಟ್ಟಾರೆಯಾಗಿ ಹಳೆಯ ಬಜೆಟ್‌ನ ಎರಡನೇ ಆವೃತ್ತಿ ಇದಾಗಿದೆ. ಇದು ಹೊಸ ಬಜೆಟ್ ಅಲ್ಲವೇ ಅಲ್ಲ. 2022-23 (ಎರಡನೇ ಆವೃತ್ತಿ) ಆಗಿದೆ ಎಂದು ವಿ.ಪಿ ನಿರಂಜನರಾಧ್ಯರು ತಿಳಿಸಿದರು.

ಇದನ್ನೂ ಓದಿ: ಬೊಮ್ಮಾಯಿ ಘೋಷಿಸಿದ 775 ಕೋಟಿ ರೂ ಅನುದಾನ: ಫ್ರೀಡಂ ಪಾರ್ಕ್‌ನಲ್ಲಿ ನಿಲ್ಲದ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....