Homeಮುಖಪುಟಇಬ್ಬರು ಮುಸ್ಲಿಮರ ಹತ್ಯೆ ಪ್ರಕರಣ; ಪೊಲೀಸರ ಮೇಲಿನ ಆರೋಪ ಪರಿಶೀಲನೆಗೆ ಎಸ್‌ಐಟಿ ರಚನೆ

ಇಬ್ಬರು ಮುಸ್ಲಿಮರ ಹತ್ಯೆ ಪ್ರಕರಣ; ಪೊಲೀಸರ ಮೇಲಿನ ಆರೋಪ ಪರಿಶೀಲನೆಗೆ ಎಸ್‌ಐಟಿ ರಚನೆ

- Advertisement -
- Advertisement -

ಭಿವಾನಿ ಜಿಲ್ಲೆಯಲ್ಲಿ ಇಬ್ಬರು ಮುಸ್ಲಿಮರ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ಸಂಸ್ಥೆ ನಿರ್ಲಕ್ಷ್ಯ ತಾಳಿದೆ ಎಂಬ ಆರೋಪಗಳನ್ನು ಪರಿಶೀಲಿಸಲು ಹರಿಯಾಣ ಪೊಲೀಸರು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದಾರೆ.

ಫೆಬ್ರವರಿ 16 ರಂದು ರಾಜಸ್ಥಾನದ ಭರತ್‌ಪುರ ಜಿಲ್ಲೆಯಿಂದ ಇಬ್ಬರು ಮುಸ್ಲಿಮರನ್ನು ಅಪಹರಿಸಿದ ಗೋರಕ್ಷಕರು ಕೊಲೆ ಮಾಡಿದ್ದಾರೆ ಎಂಬ ಆರೋಪಗಳು ಬಂದಿವೆ. ನಾಸಿರ್ ಮತ್ತು ಜುನೈದ್ ಅವರ ಶವಗಳು ಸುಟ್ಟ ಸ್ಥಿತಿಯಲ್ಲಿ ಕಾರಿನೊಳಗೆ ಪತ್ತೆಯಾಗಿದ್ದವು. ಈ ಪ್ರಕರಣದಲ್ಲಿ ಬಜರಂಗದಳದ ಸದಸ್ಯ ಮೋನು ಮಾನೇಸರ್ ಸೇರಿದಂತೆ ಐವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ, ಆದರೆ ರಿಂಕು ಸೈನಿ ಎಂಬ ಒಬ್ಬನನ್ನು ಮಾತ್ರ ಈವರೆಗೆ ಬಂಧಿಸಿದ್ದಾರೆ.

ಜುನೈದ್ ಅವರ ಸಹೋದರ ಇಸ್ಮಾಯಿಲ್ ಪ್ರತಿಕ್ರಿಯಿಸಿದ್ದು, “ಹಲ್ಲೆಗೊಳಗಾಗಿದ್ದ ಸಂತ್ರಸ್ತರನ್ನು ಪೊಲೀಸ್ ಠಾಣೆಗೆ ಗೋರಕ್ಷಕರು ಕರೆದೊಯ್ದಿದ್ದರು. ಆದರೆ ಹರಿಯಾಣದ ನುಹ್ ಜಿಲ್ಲೆಯ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಳ್ಳಲು ನಿರಾಕರಿಸಿದರು” ಎಂದು ಆರೋಪಿಸಿದ್ದಾರೆ.

ನಾಸಿರ್ ಮತ್ತು ಜುನೈದ್ ಅವರನ್ನು ಅಪಹರಿಸಿದ ನಂತರ ಆರೋಪಿಗಳು ಪೊಲೀಸರನ್ನು ಭೇಟಿ ನೀಡಿದ್ದಾರೆ ಎಂಬ ಅಂಶವನ್ನು ಗಂಭೀರವಾಗಿ ರಾಜಸ್ಥಾನ ಪೊಲೀಸರು ಪರಿಗಣಿಸಿದ್ದಾರೆ. ‘ಅಪರಾಧ ತನಿಖಾ ಸಂಸ್ಥೆ ಪೊಲೀಸ್ ಠಾಣೆ’ಯ ಸಮೀಪವಿರುವ ಎಲ್ಲಾ ಸಂಸ್ಥೆಗಳ ಸಿಸಿಟಿವಿ ದೃಶ್ಯಗಳನ್ನು ರಾಜಸ್ಥಾನ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆದರೆ, ಈ ಆರೋಪ ನಿರಾಧಾರ ಎಂದು ನುಹ್ ಪೊಲೀಸ್ ವರಿಷ್ಠಾಧಿಕಾರಿ ವರುಣ್ ಸಿಂಗ್ಲಾ ತಿಳಿಸಿದ್ದಾರೆ. ಆರೋಪಗಳನ್ನು ಪರಿಶೀಲಿಸಲು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಉಷಾ ಕುಂದು ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

“ಅಪರಾಧ ತನಿಖಾ ಸಂಸ್ಥೆಯ ಪಾತ್ರದ ಕುರಿತು ರಾಜಸ್ಥಾನ ಪೊಲೀಸರ ವರದಿ ಏನು ತಿಳಿಸುತ್ತಿದೆ ಎಂದು ತಿಳಿಯಲು ನಾನು ಕಾಯುತ್ತಿದ್ದೇನೆ. ನಮ್ಮ ಪೊಲೀಸರು ಭಾಗಿಯಾಗಿರುವುದು ಕಂಡುಬಂದರೆ, ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

ಇದರ ನಡುವೆ ಆರೋಪಿ ಮಾನೇಸರ್ ಅವರನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ಸಂತ್ರಸ್ತ ಕುಟುಂಬಗಳು ಧರಣಿ ನಡೆಸುತ್ತಿವೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

“ನಮಗೆ ನ್ಯಾಯ ನೀಡಲಾಗಿಲ್ಲ” ಎಂದು ಜುನೈದ್ ಅವರ ಸಂಬಂಧಿಕರೊಬ್ಬರು ಭಾನುವಾರ ಆರೋಪಿಸಿದ್ದಾರೆ. “ಮೋನು ಮಾನೇಸರ್ ಅವರನ್ನು ಬಂಧಿಸಬೇಕು; ಅಲ್ಲಿಯವರೆಗೆ ನಾವು ಧರಣಿಯನ್ನು ಮುಂದುವರಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಗೋಸಂರಕ್ಷಣೆ ಹೆಸರಲ್ಲಿ ಆಗಾಗ್ಗೆ ವಿವಾದಗಳನ್ನು ಸೃಷ್ಟಿಸುತ್ತಿರುವ ಮಾನೇಸರ್, ಪ್ರಕರಣದಲ್ಲಿ ತಾನು ಭಾಗಿಯಾಗಿರುವುದನ್ನು ನಿರಾಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಗೋವು ಕಳ್ಳಸಾಗಣೆದಾರರನ್ನು ಹಿಂಬಾಲಿಸುವ, ಎದುರಿಸುವ ಮತ್ತು ಬಂಧಿಸುವ ವೀಡಿಯೋಗಳನ್ನು ಹಂಚಿಕೊಳ್ಳುವಲ್ಲಿ ಈ ಆರೋಪಿ ಮಾನೇಸರ್‌ ಪ್ರಖ್ಯಾತನಾಗಿದ್ದಾನೆ.

ಮಾನೇಸರ್ 2013ರಿಂದಲೂ ಭಜರಂಗ ದಳದೊಂದಿಗೆ ಸಂಬಂಧ ಹೊಂದಿದ್ದಾರೆ. ಗೋ ರಕ್ಷಣೆಯ ಹೆಸರಲ್ಲಿ ಹಲವಾರು ದಾಂಧಲೆಗಳನ್ನು ನಡೆಸಿರುವುದನ್ನು ‘ಆಲ್ಟ್‌ನ್ಯೂಸ್‌’ ಬಯಲಿಗೆಳೆದಿದೆ.

ಹಸು ಕಳ್ಳಸಾಗಣೆದಾರರ ಮೇಲೆ ತಮ್ಮ ತಂಡವು ಎಂದಿಗೂ ಹಲ್ಲೆ ನಡೆಸಿಲ್ಲ ಎಂದು ಅವರು ಹೇಳಿಕೊಂಡಿದ್ದರೂ, ಹಿಂದುತ್ವ ಸಂಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿರುವ ಹಲವಾರು ಫೋಟೋಗಳು ಬೇರೆಯದೆ ಕಥೆಯನ್ನು ಹೇಳುತ್ತಿವೆ. ಇವರು ಹಿಡಿದ ಅನೇಕ ವ್ಯಕ್ತಿಗಳ ಚಿತ್ರಗಳು ಗಾಯಗೊಂಡ ಸ್ಥಿತಿಯಲ್ಲಿ ಕಂಡುಬಂದಿವೆ.

ಪ್ರಕರಣದಲ್ಲಿ ದಾಖಲಾಗಿರುವ ಮತ್ತೊಬ್ಬ ವ್ಯಕ್ತಿ ಲೋಕೇಶ್ ಸಿಂಗ್ಲಾ ಮೇವತ್ ಪ್ರತಿಕ್ರಿಯಿಸಿ, “ನನ್ನ ಕೈವಾಡ ಪ್ರಕರಣದಲ್ಲಿ ಇಲ್ಲ. ಕೇಂದ್ರೀಯ ತನಿಖಾ ದಳದಿಂದ ತನಿಖೆ ನಡೆಯಲಿ” ಎಂದು ಆಗ್ರಹಿಸಿದ್ದಾರೆ.

ಈ ವಿಷಯಕ್ಕೆ ಧಾರ್ಮಿಕ ಅಥವಾ ರಾಜಕೀಯ ಬಣ್ಣ ನೀಡಬಾರದು ಎಂದು ಗೋರಕ್ಷಕ ಗುಂಪಿನ ಗೌ ರಕ್ಷಾ ದಳದ ಸ್ಥಳೀಯ ಅಧ್ಯಕ್ಷ ಮೇವಾತ್ ಅವರು ವಿಡಿಯೋವೊಂದರಲ್ಲಿ ಹೇಳಿದ್ದಾರೆ.

“ನನ್ನನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ. ಆದರೆ ಇದು ಯಾವುದೇ ಸತ್ಯವನ್ನು ಆಧರಿಸಿಲ್ಲ. ಫೆಬ್ರವರಿ 14 ರಂದು ನಾನು ನನ್ನ ಸ್ನೇಹಿತನೊಂದಿಗೆ ನ್ಯಾಯಾಲಯಕ್ಕೆ ಹಾಜರಾಗಿದ್ದೆ. ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಬಹುದು. ಮರುದಿನ, ನನ್ನ ಮಗ ಅಸ್ವಸ್ಥನಾಗಿದ್ದರಿಂದ ನಾನು ಆಸ್ಪತ್ರೆಯಲ್ಲಿದ್ದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...