Homeಮುಖಪುಟಅಭ್ಯರ್ಥಿಗಳ ವಿದ್ಯಾರ್ಹತೆ ಗಮನಿಸುವ ಮತದಾರರು ಕೇರಳದಲ್ಲಿ ಮಾತ್ರ ಇದ್ದಾರೆ: ಸುಪ್ರೀಂ ಕೋರ್ಟ್

ಅಭ್ಯರ್ಥಿಗಳ ವಿದ್ಯಾರ್ಹತೆ ಗಮನಿಸುವ ಮತದಾರರು ಕೇರಳದಲ್ಲಿ ಮಾತ್ರ ಇದ್ದಾರೆ: ಸುಪ್ರೀಂ ಕೋರ್ಟ್

- Advertisement -
- Advertisement -

ಭಾರತೀಯ ಚುನಾವಣೆಗಳಲ್ಲಿ ಅಭ್ಯರ್ಥಿಯ ಶೈಕ್ಷಣಿಕ ಅರ್ಹತೆಗಳು ಅಪ್ರಸ್ತುತವಾಗುತ್ತಿದ್ದು, ಕೇರಳ ರಾಜ್ಯ ಮಾತ್ರ ಇದಕ್ಕೆ ಹೊರತಾಗಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿರುವುದಾಗಿ ‘ಬಾರ್‌ ಅಂಡ್ ಬೆಂಚ್’ ವರದಿ ಮಾಡಿದೆ.

ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರಿದ್ದ ಪೀಠವು, “ಹೆಚ್ಚಿನ ಮತದಾರರು ಮತ ಚಲಾಯಿಸುವ ಮೊದಲು ಅಭ್ಯರ್ಥಿಯ ಶೈಕ್ಷಣಿಕ ಹಿನ್ನೆಲೆಯನ್ನು ನೋಡುವುದಿಲ್ಲ. ಕೇರಳ ರಾಜ್ಯದಲ್ಲಿ ಮಾತ್ರ ಮತದಾರರು ತಮ್ಮ ಅಭ್ಯರ್ಥಿಯ ವಿದ್ಯಾರ್ಹತೆ ಗಮನಿಸುತ್ತಾರೆ” ಎಂದಿದೆ.

ಭಾರತೀಯ ಜನತಾ ಪಕ್ಷದ ಶಾಸಕ ಹರ್ಷವರ್ಧನ್ ಬಾಜಪೇಯಿ ಅವರು ತಮ್ಮ ಶೈಕ್ಷಣಿಕ ಅರ್ಹತೆಯ ಬಗ್ಗೆ 2017ರಲ್ಲಿ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿರುವ ಅರ್ಜಿಯನ್ನು ಪೀಠವು ವಿಚಾರಣೆ ನಡೆಸುತ್ತಿದೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

2017ರಲ್ಲಿ ಉತ್ತರ ಪ್ರದೇಶ ವಿಧಾನಸಭೆಗೆ ಬಾಜಪೇಯಿ ಅವರು ಆಯ್ಕೆಯಾಗಿರುವುದನ್ನು ಅನೂರ್ಜಿತ ಮತ್ತು ಅಸಿಂಧು ಎಂದು ಘೋಷಿಸಬೇಕೆಂದು ಮಾಜಿ ಕಾಂಗ್ರೆಸ್ ಶಾಸಕ ಅನುಗ್ರಹ ನಾರಾಯಣ್ ಸಿಂಗ್ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು.

ಬಾಜ್‌ಪೇಯಿ ಅವರು ಆಯ್ಕೆಯಾದ ಅವಧಿ ಈಗಾಗಲೇ 2022 ರಲ್ಲಿ ಕೊನೆಗೊಂಡಿತ್ತು. ಹೀಗಾಗಿ ಇದು ಲಾಭದಾಯಕವಲ್ಲದ ಕಾರಣ ಸೆಪ್ಟೆಂಬರ್‌ನಲ್ಲಿ ಅಲಹಾಬಾದ್ ಹೈಕೋರ್ಟ್ ಅರ್ಜಿಯನ್ನು ತಿರಸ್ಕರಿಸಿತ್ತು. ನಂತರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು.

ಬಾಜಪೇಯಿ ಅವರು 2007, 2012 ಮತ್ತು 2017 ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ತಮ್ಮ ನಾಮಪತ್ರಗಳ ಜೊತೆಗೆ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ. ಸರಿಯಾದ ಶೈಕ್ಷಣಿಕ ಅರ್ಹತೆ ಮತ್ತು ಹೊಣೆಗಾರಿಕೆಗಳನ್ನು ಬಹಿರಂಗಪಡಿಸದೆ ಅಪರಾಧ ಎಸಗಿದ್ದಾರೆ ಎಂದು ಅನುಗ್ರಹ ಸಿಂಗ್ ಆರೋಪಿಸಿದ್ದಾರೆ.

ಇಂಗ್ಲೆಂಡ್‌ನಲ್ಲಿರುವ ಸೆಫರ್ಡ್ ಎಂಬ ಅಸ್ತಿತ್ವದಲ್ಲಿಲ್ಲದ ವಿಶ್ವವಿದ್ಯಾನಿಲಯದಿಂದ ಬ್ಯಾಚುಲರ್ ಆಫ್ ಟೆಕ್ನಾಲಜಿ ಪದವಿಯನ್ನು ಪಡೆದಿರುವುದಾಗಿ ಬಾಜ್‌ಪೇಯಿ ಹೇಳಿಕೊಂಡಿದ್ದಾರೆ ಎಂದು ಅವರು ವಾದಿಸಿದ್ದರು.

2006 ರಲ್ಲಿ ದೆಹಲಿ ವಿಶ್ವವಿದ್ಯಾನಿಲಯದಿಂದ ಬಿಸಿನೆಸ್ ಅಡ್ಮಿನಿಸ್ಟ್ರೇಷನ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ ಎಂದು ಬಾಜ್‌ಪೇಯಿ ಹೇಳಿಕೊಂಡಿದ್ದಾರೆ. ಆದರೆ ಅದೇ ವರ್ಷ ಬಿಟೆಕ್ ಪರೀಕ್ಷೆಯಲ್ಲಿಯೂ ತೇರ್ಗಡೆಯಾಗಿದ್ದಾರೆ ಎಂದು ಸಿಂಗ್ ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...