Homeಮುಖಪುಟದೆಹಲಿ ಮೇಯರ್ ಚುನಾವಣೆ: ಎಎಪಿಗೆ ಗೆಲುವು, ಬಿಜೆಪಿಗೆ ಮುಖಭಂಗ

ದೆಹಲಿ ಮೇಯರ್ ಚುನಾವಣೆ: ಎಎಪಿಗೆ ಗೆಲುವು, ಬಿಜೆಪಿಗೆ ಮುಖಭಂಗ

- Advertisement -
- Advertisement -

ದೆಹಲಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಸುಪ್ರೀಂ ಕೋರ್ಟ್ ಆದೇಶದ ನಂತರ ಇಂದು (ಫೆಬ್ರವರಿ 22) ಹೊಸ ಮೇಯರ್ ಆಯ್ಕೆಗೆ ಮತದಾನ ನಡೆಯಿತು. ಆಮ್ ಆದ್ಮಿ ಪಕ್ಷದ ಶೆಲ್ಲಿ ಒಬೆರಾಯ್ ಅವರು, ಬಿಜೆಪಿಯ ರೇಖಾ ಗುಪ್ತಾ ಅವರನ್ನು 34 ಮತಗಳಿಂದ ಸೋಲಿಸಿ ದೆಹಲಿಯ ಹೊಸ ಮೇಯರ್ ಆಗಿ ಆಯ್ಕೆಯಾದ್ದಾರೆ ಎಂದು ಅಧಿಕಾರಿಗಳು ಘೋಷಿಸಿದ್ದಾರೆ. ಇದರಿಂದ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ.

ಈ ಚುನಾವಣೆಯಲ್ಲಿ ಒಟ್ಟು 266 ಮತಗಳ ಪೈಕಿ ರೇಖಾ ಗುಪ್ತಾ 116 ಮತಗಳನ್ನು ಪಡೆದರೆ ಶೆಲ್ಲಿ ಒಬೆರಾಯ್ 150 ಮತಗಳನ್ನು ಪಡೆದಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು. ನೂತನ ಮೇಯರ್ ಆಗಿ ಆಯ್ಕೆಯಾಗಿರುವ ಶೆಲ್ಲಿ ಒಬೆರಾಯ್ ಮತ್ತು ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸಿದ್ದಾರೆ.

”ಗೂಂಡಾಗಳು ಸೋತರು, ಸಾರ್ವಜನಿಕರು ಗೆದ್ದರು. ಇಂದು ದೆಹಲಿಯ ಮಹಾನಗರ ಪಾಲಿಕೆಯಲ್ಲಿ ದೆಹಲಿಯ ಜನರು ಗೆದ್ದಿದ್ದಾರೆ ಮತ್ತು ಗೂಂಡಾಗಿರಿಯನ್ನು ಸೋಲಿಸಿದ್ದಾರೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ರಾಜ್ಯಪಾಲರಿಂದ ನಾಮನಿರ್ದೇಶನಗೊಂಡ 10 ಸದಸ್ಯರು-ಆಲ್ಡರ್‌ಮೆನ್‌ಗಳಿಗೆ ಚುನಾವಣೆಯಲ್ಲಿ ಮತ ಚಲಾಯಿಸಲು ಅವಕಾಶವಿದೆ ಎಂದು ಬಿಜೆಪಿ ವಾದಿಸಿತ್ತು. ಇದಕ್ಕೆ ಎಎಪಿ ವಿರೋಧ ವ್ಯಕ್ತಪಡಿಸಿದ್ದರಿಂದಲೇ ಮೂರು ಬಾರಿಯೂ ಮೇಯರ್ ಚುನಾವಣೆ ಮುಂದೂಡಲಾಯಿತು. ಇತ್ತಿಚೇಗೆ ಒಬೆರಾಯ್ ಅವರು ಬಿಜೆಪಿಯ ಈ ವಾದವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ಇದನ್ನೂ ಓದಿ: ಬಹುದಿನಗಳ ನಂತರ ಇಂದು ದೆಹಲಿ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಾಧೀಶರು, ನಾಮನಿರ್ದೇಶಿತ ಸದಸ್ಯರು ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ ಎಂದು ಹೇಳಿದ್ದಾರೆ. “ನಾಮನಿರ್ದೇಶಿತ ಸದಸ್ಯರು ಚುನಾವಣೆಗೆ ಹೋಗುವಂತಿಲ್ಲ. ಸಾಂವಿಧಾನಿಕ ನಿಬಂಧನೆಯು ತುಂಬಾ ಸ್ಪಷ್ಟವಾಗಿದೆ” ಎಂದು ನ್ಯಾಯಾಲಯವು ಹೇಳಿತು.

ದೆಹಲಿ ಮಹಾನಗರ ಪಾಲಿಕೆ (ಡಿಎಂಸಿ) ಕಾಯಿದೆ, 1957 ರ ಪ್ರಕಾರ, ನಾಗರಿಕ ಚುನಾವಣೆಯ ನಂತರ ಸದನದ ಮೊದಲ ಅಧಿವೇಶನದಲ್ಲಿ ಮೇಯರ್ ಮತ್ತು ಉಪ ಮೇಯರ್ ಆಯ್ಕೆಯಾಗಬೇಕು. ಆದರೆ, ಡಿಸೆಂಬರ್ 4ರಂದು ಪಾಲಿಕೆ ಚುನಾವಣೆ ನಡೆದು ಎರಡು ತಿಂಗಳಾಗಿದೆ.

ಪಾಲಿಕೆ ಚುನಾವಣೆ ಮುಗಿದ ಒಂದು ತಿಂಗಳ ನಂತರ, ಜನವರಿ 6ರಂದು ಮೊದಲ ಬಾರಿಗೆ ಸದನ ನಡೆಯಿತು. ಆದರೆ ಅಂದು ಬಿಜೆಪಿ ಮತ್ತು ಆಪ್ ಸದಸ್ಯರ ನಡುವಿನ ವಾಗ್ವಾದದ ನಂತರ ಅದನ್ನು ಮುಂದೂಡಲಾಯಿತು. ಜನವರಿ 24 ಮತ್ತು ಫೆಬ್ರವರಿ 6 ರಂದು ನಡೆದ ಎರಡನೇ ಮತ್ತು ಮೂರನೇ ಸಭೆಗಳು ಸಹ ಮೇಯರ್ ಆಯ್ಕೆಯ ಚುನಾವಣೆ ಪ್ರಕ್ರಿಯೆ ವಿಫಲವಾದವು. ಇದೀಗ ಸುಪ್ರೀಂ ಕೋರ್ಟ್‌ನ ಆದೇಶದ ನಂತರ ಇಂದು (ಫೆಬ್ರವರಿ 22) ಹೊಸ ಮೇಯರ್ ಆಯ್ಕೆಗೆ ಮತದಾನ ನಡೆಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Wr is operation lotus , bjp and party why u can’t make it successful, all public are rejecting u think of it , ur false media wheat media all wrong information giving to public

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...