Homeಮುಖಪುಟನಿಲ್ಲದ ದೆಹಲಿ ಪಾಲಿಕೆ ಗುದ್ದಾಟ; ಕೈ-ಕೈ ಮಿಲಾಯಿಸಿದ ಬಿಜೆಪಿ-ಎಎಪಿ ಕೌನ್ಸಿಲರ್‌ಗಳು

ನಿಲ್ಲದ ದೆಹಲಿ ಪಾಲಿಕೆ ಗುದ್ದಾಟ; ಕೈ-ಕೈ ಮಿಲಾಯಿಸಿದ ಬಿಜೆಪಿ-ಎಎಪಿ ಕೌನ್ಸಿಲರ್‌ಗಳು

- Advertisement -
- Advertisement -

ದೆಹಲಿಯ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಎಎಪಿ ಮತ್ತು ಬಿಜೆಪಿ ಕೌನ್ಸಿಲರ್‌ಗಳ ನಡುವೆ ಮತ್ತೆ ಘರ್ಷಣೆ ನಡೆದಿದ್ದು ಕೈ-ಕೈ ಮಿಲಾಯಿಸಿದ್ದಾರೆ. ಆರು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆಯ ಮತ ಎಣಿಕೆ ವೇಳೆ ಈ ಘಟನೆ ನಡೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಸ್ಥಾಯಿ ಸಮಿತಿಯು ದೆಹಲಿ ಮಹಾನಗರ ಪಾಲಿಕೆಯಲ್ಲಿ ಪ್ರಬಲ ಪಾತ್ರವನ್ನು ವಹಿಸುವುದರಿಂದ ಇಷ್ಟೊಂದು ಪ್ರಾಮುಖ್ಯತೆ ಪಡೆದಿದೆ. ಯೋಜನೆಗಳಿಗೆ ಆರ್ಥಿಕ ಅನುಮೋದನೆ ನೀಡಲು, ಉಪ ಸಮಿತಿಗಳನ್ನು ನೇಮಿಸಲು ಮತ್ತು ಚರ್ಚೆಗಳನ್ನು ನಡೆಸಲು ಮತ್ತು ನೀತಿಗಳನ್ನು ಅಂತಿಮಗೊಳಿಸಲು ಸಮಿತಿಗೆ ಅಧಿಕಾರವಿದೆ ಹಾಗಾಗಿ ಸ್ಥಾಯಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡುವ ಮತದಾನವು ಎರಡೂ ಪಕ್ಷಗಳಿಗೆ ಮುಖ್ಯವಾಗಿದೆ.

ಶುಕ್ರವಾರ ನಡೆದ ಮತದಾನದಲ್ಲಿ 250 ಕೌನ್ಸಿಲರ್‌ಗಳ ಪೈಕಿ 242 ಜನ ಮತ ಚಲಾಯಿಸಿದ್ದಾರೆ. ಎಂಟು ಕೌನ್ಸಿಲರ್‌ಗಳು – ಮನ್‌ದೀಪ್ ಸಿಂಗ್, ಅರಿಬಾ ಖಾನ್, ನಾಜಿಯಾ ಡ್ಯಾನಿಶ್, ಸಮೀರ್ ಅಹ್ಮದ್, ಶಗುಫ್ತಾ ಚೌಧರಿ ಜುಬೇರ್, ಸಬಿಲಾ ಬೇಗಂ, ನಾಜಿಯಾ ಖಾತೂನ್ ಮತ್ತು ಜರೀಫ್ ತಮ್ಮ ಮತ ಚಲಾಯಿಸಲಿಲ್ಲ ಎಂದು ಎಂದು ನೂತನ ಮೇಯರ್ ಶೆಲ್ಲಿ ಒಬೆರಾಯ್ ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಮೇಯರ್ ಚುನಾವಣೆ: ಎಎಪಿಗೆ ಗೆಲುವು, ಬಿಜೆಪಿಗೆ ಮುಖಭಂಗ

ಈ ನಡುವೆ ಒಬೆರಾಯ್ ಅವರು ಒಂದು ಮತವನ್ನು ಅಸಿಂಧು ಎಂದು ಘೋಷಿಸಿದ್ದಾರೆ. ಇದೇ ಕಾರಣಕ್ಕೆ ಗದ್ದಲ ಗಲಾಟೆ ಪ್ರಾರಂಭವಾಯಿತು, ಇದರಿಂದಾಗಿ ಬಿಜೆಪಿ ಕೌನ್ಸಿಲರ್‌ಗಳು ಮತ ಎಣಿಕೆ ಪ್ರಕ್ರಿಯೆಗೆ ಅಡ್ಡಿಪಡಿಸಿದರು. ಅಷ್ಟಾದರೂ, ಅಸಿಂಧು ಮತವಿಲ್ಲದೆ ಫಲಿತಾಂಶವನ್ನು ಘೋಷಿಸಲಾಗುವುದು ಎಂದು ಮೇಯರ್ ಹೇಳಿದರು.

ಈ ವೇಳೆ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಸದಸ್ಯರು ಪರಸ್ಪರ ಗುದ್ದುವುದು, ಒದೆಯುವುದು ಮತ್ತು ತಳ್ಳುವುದನ್ನು ವೀಡಿಯೊಗಳಲ್ಲಿ ನೋಡಬಹುದು. ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ಒಬ್ಬರು ನೆಲದ ಮೇಲೆ ಬಿದ್ದಿದ್ದಾರೆ. ಬಿಜೆಪಿ ಕೌನ್ಸಿಲರ್ ಮೀನಾಕ್ಷಿ ಶರ್ಮಾ ಅವರು ಆಪ್‌ನ ಯಾರೋ ಹರಿತವಾದ ವಸ್ತುವಿನಿಂದ ಹೊಡೆದಿದ್ದಾರೆ ಎಂದು ಹೇಳಿಕೊಂಡಿದ್ದಾರೆಂದು ಎಎನ್‌ಐ ವರದಿ ಮಾಡಿದೆ.

”ಪುರುಷ ಕೌನ್ಸಿಲರೊಬ್ಬರು ನನ್ನ ಕುತ್ತಿಗೆಯನ್ನು ಮುಟ್ಟಿದರು” ಎಂದು ಶರ್ಮಾ ಹೇಳಿದರು. ಆಕೆ (ಒಬೆರಾಯ್) ದೆಹಲಿಯ ಮೇಯರ್ ಆಗಿದ್ದಾರೋ ಅಥವಾ ಎಎಪಿ ಪಕ್ಷದವಳಾಗಿದ್ದಾಳೋ ಗೊತ್ತಿಲ್ಲ. ಅವಳು ಕೇಜ್ರಿವಾಲ್ ಮತ್ತು ಇತರ ನಾಯಕರ ಆದೇಶದಂತೆ ಕಾರ್ಯನಿರ್ವಹಿಸುತ್ತಾಳೆ ಎಂದು ಶರ್ಮಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಒಂದು ಮತ ಸಿಂಧುವಾಗಿದೆ ಎಂದು ಬಿಜೆಪಿ ಹೇಳಿಕೊಂಡಿದೆ. “ಇದು ಅಮಾನ್ಯವಾಗಿದ್ದರೆ, ನಮ್ಮ ಲೆಕ್ಕಾಚಾರದ ಪ್ರಕಾರ, ಎಎಪಿ ಅಭ್ಯರ್ಥಿ ಗೆಲ್ಲುತ್ತಾರೆ” ಎಂದು ಅಸಿಂಧು ಮತ ಎಂದು ಗುರುತಿಸಿಕೊಂಡಿರುವ ಬಿಜೆಪಿ ಕೌನ್ಸಿಲರ್ ಎನ್‌ಡಿಟಿವಿಗೆ ತಿಳಿಸಿದರು.

”ಬಿಜೆಪಿ ತನ್ನ ಸೋಲನ್ನು ಒಪ್ಪಿಕೊಂಡು ತನ್ನ ಗೂಂಡಾಗಿರಿಯನ್ನು ನಿಲ್ಲಿಸುವ ಸಮಯ ಬಂದಿದೆ” ಎಂದು ಎಎಪಿ ಶಾಸಕ ಅತಿಶಿ ಹೇಳಿದ್ದಾರೆ.

”ಇಂದು ಬಿಜೆಪಿಯು ಮಹಾನಗರ ಪಾಲಿಕೆಯಲ್ಲಿ ಗೂಂಡಾಗಿರಿ ಪ್ರದರ್ಶಸಿದೆ. ಸ್ಥಾಯಿ ಸಮಿತಿ ಚುನಾವಣೆ ನಡೆಯುತ್ತಿತ್ತು. ಮತ ಎಣಿಕೆ ಆರಂಭವಾದಾಗ ಬಿಜೆಪಿ ಸೋಲುವುದು ಗೊತ್ತಾಗುತ್ತಿದ್ದಂತೆ ಗದ್ದಲ ಸೃಷ್ಟಿಸಿತು. ಮೇಯರ್ ಮೇಲೆ ಬಿಜೆಪಿ ಪುರುಷ ಸದಸ್ಯರು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ” ಎಂದು ಅತಿಶಿ ಹೇಳಿದರು.

ಗುರುವಾರ ಕೂಡ ಇದೇ ರೀತಿ ಘಟನೆ ನಡೆದಿತ್ತು. ಎರಡು ಪಕ್ಷಗಳ ಕೌನ್ಸಿಲರ್‌ಗಳು ಪರಸ್ಪರ ನೀರಿನ ಬಾಟಲಿಗಳು ಮತ್ತು ಹಣ್ಣುಗಳನ್ನು ಎಸೆದಿದ್ದಾರೆ. ಸ್ಥಾಯಿ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡದೆ ಸದನವನ್ನು ಮುಂದೂಡಲಾಗಿತ್ತು.

ಒಬೆರಾಯ್ ಅವರು ಕೌನ್ಸಿಲ್‌ನ ಮೇಯರ್ ಆಗಿ ಆಯ್ಕೆಯಾದ ನಂತರ ದೆಹಲಿಯ ಮಹಾನಗರ ಪಾಲಿಕೆಯಲ್ಲಿ ಶುಕ್ರವಾರದ ಗೊಂದಲ ಉಂಟಾಗುತ್ತದೆ. ಗಮನಾರ್ಹವೆಂದರೆ, ಎಎಪಿ ಮತ್ತು ಬಿಜೆಪಿ ನಡುವಿನ ಸುದೀರ್ಘ ಜಗಳದಿಂದಾಗಿ ಡಿಸೆಂಬರ್‌ನಲ್ಲಿ ನಡೆದ ಪಾಲಿಕೆ ಚುನಾವಣೆಯ ನಂತರ ಮೇಯರ್ ಚುನಾವಣೆಗಳು ಮೂರು ಬಾರಿ ಮುಂದೂಡಲ್ಪಟ್ಟಿತು. ಎಎಪಿಯ ಕೌನ್ಸಿಲರ್‌ಗಳು ಆಲ್ಡರ್‌ಮನ್‌ಗಳಿಗೆ ಮತ ಚಲಾಯಿಸಲು ಅವಕಾಶ ನೀಡುವ ಬಿಜೆಪಿಯ ವಾದವನ್ನು ವಿರೋಧಿಸಿದ್ದರು.

ಸುಪ್ರೀಂ ಕೋರ್ಟ ಫೆಬ್ರವರಿ 18ರಂದು ಎಎಪಿಗೆ ಪ್ರಮುಖ ಪರಿಹಾರ ನೀಡಿತು. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ನ ನಾಮನಿರ್ದೇಶಿತ ಸದಸ್ಯರು ಮೇಯರ್ ಹುದ್ದೆಗೆ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತು. ಅದಾದನಂತರ ಮೇಯ೬ರ್ ಚುನಾವಣೆ ನಡೆಯಿತು, ಎಎಪಿ ಅಭ್ಯರ್ಥಿ ಗೆಲವು ಸಾಧಿಸಿದರು. ಇದರಿಂದ ಬಿಜೆಪಿ ಭಾರೀ ಮುಖಭಂಗವಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...