Homeಮುಖಪುಟತೃತೀಯ ರಂಗದಿಂದ ಬಿಜೆಪಿಗೆ ಲಾಭ, ಸಮಾನ ಮನಸ್ಕರು ಒಂದಾಗುವ ತುರ್ತು ಅಗತ್ಯವಿದೆ: ಕಾಂಗ್ರೆಸ್

ತೃತೀಯ ರಂಗದಿಂದ ಬಿಜೆಪಿಗೆ ಲಾಭ, ಸಮಾನ ಮನಸ್ಕರು ಒಂದಾಗುವ ತುರ್ತು ಅಗತ್ಯವಿದೆ: ಕಾಂಗ್ರೆಸ್

- Advertisement -
- Advertisement -

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (ಎನ್‌ಡಿಎ) ಎದುರಿಸಲು “ಸೈದ್ಧಾಂತಿಕ ಆಧಾರದ ಮೇಲೆ” ಒಂದು “ತುರ್ತು ಅಗತ್ಯವಿದೆ” ಎಂದು ವಾದಿಸಿದ ಕಾಂಗ್ರೆಸ್, “ಸಮಾನ ಮನಸ್ಕ ಜಾತ್ಯತೀತ ಶಕ್ತಿಗಳನ್ನು ಗುರುತಿಸಲು, ಸಜ್ಜುಗೊಳಿಸಲು ಮತ್ತು ಜೋಡಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುವುದಾಗಿ” ಶನಿವಾರ ಹೇಳಿದೆ. ತೃತೀಯ ರಂಗದಿಂದ ಬಿಜೆಪಿಗೆ ಅನುಕೂಲವಾಗಲಿದೆ ಎಂದು ಕಾಂಗ್ರೆಸ್ ಪ್ರತಿಪಾದಿಸಿದೆ.

ರಾಯ್‌ಪುರದಲ್ಲಿ ನಡೆದ 85ನೇ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಸರ್ವಸದಸ್ಯ ಸಭೆಯಲ್ಲಿ ಚರ್ಚಿಸಲಾಗುತ್ತಿರುವ ಕರಡು ರಾಜಕೀಯ ನಿರ್ಣಯದಲ್ಲಿ ತೃತೀಯ ರಂಗದ ಬಗ್ಗೆ ಪಕ್ಷದ ನಿಲುವು ಕುತೂಹಲಕಾರಿಯಾಗಿದೆ. ಬಿಜೆಪಿ-ವಿರೋಧಿ ಗುಂಪುಗಳನ್ನು ಮುನ್ನಡೆಸುವ ಕಾಂಗ್ರೆಸ್‌ನ ಕಲ್ಪನೆಯು ಕೆಲವು ವಿರೋಧ ಪಕ್ಷಗಳಾದ ತೃಣಮೂಲ ಕಾಂಗ್ರೆಸ್ ( ಟಿಎಂಸಿ), ಆಮ್ ಆದ್ಮಿ ಪಕ್ಷ (ಎಎಪಿ), ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷಗಳಿಗೆ ಸಮಾಧಾನಕರವಾಗಿಲ್ಲ. ತೃತೀಯರಂಗದಿಂದ ಬಿಜೆಪಿಗೆ ಲಾಭವಾಗುತ್ತದೆ ಹಾಗಾಗಿ ಎಲ್ಲ ಸಮಾನ ಮನಸ್ಕರು ಒಂದಾಗಬೇಕು ಎಂದು ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಅಧಿವೇಶನದ ತಮ್ಮ ಉದ್ಘಾಟನಾ ಭಾಷಣದಲ್ಲಿ, 2004 ಮತ್ತು 2014 ರ ನಡುವೆ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಯುಪಿಎ ಸಮ್ಮಿಶ್ರವನ್ನು ಉಲ್ಲೇಖಿಸಿದರು. ಆಗ ಹಲವು ಸಮಾನ ಮನಸ್ಕ ಪಕ್ಷಗಳು ಕಾಂಗ್ರೆಸ್‌ನೊಂದಿಗೆ ಕೈಜೋಡಿಸಿದ್ದು, ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಆಧಾರದ ಮೇಲೆ ಅತ್ಯಂತ ಯಶಸ್ವಿ ಸರ್ಕಾರವನ್ನು ನಡೆಸಲಾಯಿತು ಎಂದು ಅವರು ಹೇಳಿದರು.

ಇದನ್ನೂ ಓದಿ: ಬಿಜೆಪಿ ಸೋಲಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಕೈಜೋಡಿಸಲು ಸಿದ್ಧ: ಮಲ್ಲಿಕಾರ್ಜುನ ಖರ್ಗೆ

“ಇಂದು ಆ ಮೈತ್ರಿಯನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ. ಬಿಜೆಪಿ ಮತ್ತು ಆರೆಸ್ಸೆಸ್ (ರಾಷ್ಟ್ರೀಯ ಸ್ವಯಂಸೇವಕ ಸಂಘ) ವಿರುದ್ಧ ಹೋರಾಡಲು ಸಿದ್ಧವಾಗಿರುವ ಎಲ್ಲ ಪಕ್ಷಗಳೊಂದಿಗೆ ಕೆಲಸ ಮಾಡಲು ನಾವು ಸಿದ್ಧರಿದ್ದೇವೆ ಎಂದು ಖರ್ಗೆ ಹೇಳಿದರು..

58 ಅಂಶಗಳ ಕರಡು ನಿರ್ಣಯವು ಪಕ್ಷದ ಕಾರ್ಯವಿಧಾನದ ಬಗ್ಗೆ ಇತರ ವಿರೋಧ ಪಕ್ಷಗಳಿಗೆ ವಿವರಿಸಿದೆ. ”ಜಾತ್ಯತೀತ ಮತ್ತು ಸಮಾಜವಾದಿ ಶಕ್ತಿಗಳ ಒಗ್ಗಟ್ಟು ಕಾಂಗ್ರೆಸ್ ಪಕ್ಷದ ಭವಿಷ್ಯದ ಲಕ್ಷಣವಾಗಲಿದೆ. ಸಮಾನ ಮನಸ್ಕ ಜಾತ್ಯತೀತ ಶಕ್ತಿಗಳನ್ನು ಗುರುತಿಸಲು, ಸಜ್ಜುಗೊಳಿಸಲು ಮತ್ತು ಒಗ್ಗೂಡಿಸಲು ಕಾಂಗ್ರೆಸ್ ಎಲ್ಲ ಪ್ರಯತ್ನಗಳನ್ನು ಮಾಡಬೇಕು. ನಮ್ಮ ಸಿದ್ಧಾಂತವನ್ನು ಒಪ್ಪುವ ಜಾತ್ಯತೀತ ಪ್ರಾದೇಶಿಕ ಶಕ್ತಿಗಳನ್ನು ನಾವು ಸೇರಿಸಿಕೊಳ್ಳಬೇಕು. ಸಾಮಾನ್ಯ ಸೈದ್ಧಾಂತಿಕ ಆಧಾರದ ಮೇಲೆ ಎನ್‌ಡಿಎಯನ್ನು ಎದುರಿಸಲು ಒಗ್ಗಟ್ಟಿನ ವಿರೋಧದ ತುರ್ತು ಅಗತ್ಯವಿದೆ. ತೃತೀಯ ರಂಗದಿಂದ ಬಿಜೆಪಿಗೆ ಲಾಭವಾಗುತ್ತದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...