Homeಮುಖಪುಟಸಿಸೋಡಿಯಾ ಬಂಧನ: ಕೇಂದ್ರದ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಎಎಪಿ ಕರೆ

ಸಿಸೋಡಿಯಾ ಬಂಧನ: ಕೇಂದ್ರದ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಎಎಪಿ ಕರೆ

- Advertisement -
- Advertisement -

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಅಧಿಕಾರಿಗಳು ಬಂಧನ ಮಾಡಿದ್ದಾರೆ. ಈ ಬಂಧನವನ್ನು ಖಂಡಿಸಿ ಇಂದು ರಾಷ್ಟ್ರದಾದ್ಯಂತ ಪ್ರತಿಭಟನೆ ಮಾಡುವುದಾಗಿ ಆಮ್ ಆದ್ಮಿ ಪಕ್ಷ (ಎಎಪಿ) ಘೋಷಿಸಿದೆ.

ಮದ್ಯ ನೀತಿ ಪ್ರಕರಣದಲ್ಲಿ ಎಂಟು ಗಂಟೆಗಳ ವಿಚಾರಣೆಯ ನಂತರ ಕೇಂದ್ರೀಯ ತನಿಖಾ ದಳವು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿದ್ದು, ಸೋಮವಾರ ರೌಸ್ ಅವೆನ್ಯೂದಲ್ಲಿರುವ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಆಮ್ ಆದ್ಮಿ ಪಕ್ಷವೂ (ಎಎಪಿ) ಸಿಸೋಡಿಯಾ ಬಂಧನದ ವಿರುದ್ಧ ದೇಶಾದ್ಯಂತ ಬೀದಿಗಿಳಿಯಲು ನಿರ್ಧರಿಸಿದೆ. ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಎಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ಹೇಳಿದ್ದಾರೆ.

“ದೇಶದ ಲಕ್ಷಾಂತರ ಮಕ್ಕಳ ಭವಿಷ್ಯ ರೂಪಿಸಿದ ಮಹಾನ್ ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಅವರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಲಾಗಿದೆ. ಇದರ ವಿರುದ್ಧ ಆಮ್ ಆದ್ಮಿ ಪಕ್ಷ ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ” ಎಂದು ಪಾಠಕ್ ಟ್ವೀಟ್ ಮಾಡಿದ್ದಾರೆ.

ರಾಷ್ಟ್ರ ರಾಜಧಾನಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಭಾರತೀಯ ಜನತಾ ಪಕ್ಷದ ಪ್ರಧಾನ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಎಎಪಿ ಪ್ರತಿಭಟನೆ ನಡೆಸಲಿದೆ. ಗುಜರಾತ್‌ನ ಗಾಂಧಿನಗರ, ಹರಿಯಾಣದ ರೋಹ್ಟಕ್, ನೋಯ್ಡಾ ಮತ್ತು ಇತರ ಸ್ಥಳಗಳಲ್ಲೂ ಪ್ರತಿಭಟನೆ ನಡೆಸುವ ಸಾಧ್ಯತೆಯಿದೆ ಎಂದು ವರದಿಗಳು ಹೇಳಿವೆ.

ಇದನ್ನೂ ಓದಿ: ಜೈಲಿಗೆ ಹೆದರುವುದಿಲ್ಲ: ಮತ್ತೆ CBI ಮುಂದೆ ವಿಚಾರಣೆಗೆ ಹಾಜರಾಗಲಿರುವ ಮನೀಶ್ ಸಿಸೋಡಿಯಾ

ಸಿಬಿಐ ಕಚೇರಿಗೆ ವಿಚಾರಣೆಗಾಗಿ ಆಗಮಿಸುವ ಸ್ವಲ್ಪ ಸಮಯದ ಮೊದಲು ಸಿಸೋಡಿಯಾ ಅವರು, ”ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಪ್ರಧಾನಿ ನರೇಂದ್ರ ಮೋದಿ “ಹೆದರಿದ್ದಾರೆ.” ನಮ್ಮ ಪಕ್ಷದ ನಾಯಕರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ” ಎಂದು ಹೇಳಿದ್ದರು.

”ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಹೆಚ್ಚುತ್ತಿರುವ ಜನಪ್ರಿಯತೆಗೆ ಪ್ರಧಾನಿ ನರೇಂದ್ರ ಮೋದಿ ಹೆದರಿದ್ದಾರೆ. ಹಾಗಾಗಿ ಸಿಬಿಐ ಮತ್ತು ಇಡಿಯಿಂದ ಪಿತೂರಿ ನಡೆಸಲಾಗುತ್ತಿದೆ. ನಮ್ಮ ಪಕ್ಷದ ನಾಯಕರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಎಎಪಿ ಮತ್ತಷ್ಟು ಬೆಳೆದಂತೆ ಬಿಜೆಪಿ ನಮ್ಮ ಮೇಲೆ ಸುಳ್ಳು ಪ್ರಕರಣಗಳನ್ನು ಹಾಕುತ್ತಲೇ ಇರುತ್ತದೆ. ಸಿಬಿಐ, ಇಡಿ ಮತ್ತು ಅವರ ಸುಳ್ಳು ಪ್ರಕರಣಗಳಿಗೆ ನಾವು ಹೆದರುವುದಿಲ್ಲ” ಎಂದು ಸಿಸೋಡಿಯಾ ಹೇಳಿದ್ದಾರೆ.

”ಯಾವುದೇ ವಿಚಾರಣೆಯ ಸಮಯದಲ್ಲಿ, ಆರೋಪಿ ಅಥವಾ ಶಂಕಿತರು ಸಹಕರಿಸದಿದ್ದರೆ ಮತ್ತು ವ್ಯಕ್ತಿಯ ವಿರುದ್ಧ ಸಾಕಷ್ಟು ಸಾಕ್ಷ್ಯಗಳು ಮತ್ತು ಹೇಳಿಕೆಗಳು ಇದ್ದಲ್ಲಿ ಅವರನ್ನು ಪೊಲೀಸ್ ಕಸ್ಟಡಿಯನ್ನು ಪಡೆದುಕೊಳ್ಳಲು, ಬಂಧನ ಮಾಡಲಾಗುತ್ತದೆ. ನಂತರ ಮತ್ತಷ್ಟು ವಿಚಾರಣೆಯನ್ನು ನಡೆಸಬಹುದು” ಎಂದು ಅಧಿಕಾರಿ ಹೇಳಿದರು.

”ವಾಟ್ಸಾಪ್ ಚಾಟ್‌ಗಳು, ಕರೆ ಡೇಟಾ ದಾಖಲೆಗಳು (ಸಿಡಿಆರ್), ಇಮೇಲ್‌ಗಳು, ಸಿಸೋಡಿಯಾ ಕಾರ್ಯದರ್ಶಿ ಸಿ ಅರವಿಂದ್ ಸೇರಿದಂತೆ ದೆಹಲಿ ಸರ್ಕಾರದ ಪ್ರಮುಖ ಅಧಿಕಾರಿಗಳ ಹೇಳಿಕೆಗಳು, ಸಗಟು ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳು ನಿರ್ಣಾಯಕ ಪಿತೂರಿ ಸಭೆಗಳು, ಹೋಟೆಲ್‌ಗಳ ಬಗ್ಗೆ ಸಾಕಷ್ಟು ಪುರಾವೆಗಳಿವೆ” ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಸಿಸೋಡಿಯಾ ಅವರು ಭಾನುವಾರ ಸಿಬಿಐ ಪ್ರಧಾನ ಕಛೇರಿಗೆ ಹೋಗುವ ಮುನ್ನ, ಮಹಾತ್ಮ ಗಾಂಧಿಯವರ ಸ್ಮಾರಕ ರಾಜ್‌ಘಾಟ್‌ಗೆ ಭೇಟಿ ನೀಡಿದ್ದರು.

ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ” ಈ ಬಂಧನವು ‘ಕೊಳಕು ರಾಜಕೀಯ’ ಎಂದು ಹೇಳಿದರು ಮತ್ತು ಸಿಸೋಡಿಯಾ ಅವರು ನಿರಪರಾಧಿ” ಎಂದು ಹೇಳಿದ್ದಾರೆ.

”ಮನೀಶ್ ಸಿಸೋಡಿಯಾ ಮುಗ್ಧ. ಅವರ ಬಂಧನವು ಕೊಳಕು ರಾಜಕೀಯ. ಮನೀಶ್ ಬಂಧನದಿಂದಾಗಿ ಜನರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ” ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

”ಸರ್ಕಾರ ಈ ನಡವಳಿಕೆಯನ್ನು ಎಲ್ಲರೂ ನೋಡುತ್ತಿದ್ದಾರೆ. ಜನರು ಎಲ್ಲವನ್ನೂ ಅರ್ಥಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ಜನ ಸ್ಪಂದಿಸುತ್ತಾರೆ. ಇದು ನಮ್ಮ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸುತ್ತದೆ. ನಮ್ಮ ಹೋರಾಟವು ಬಲಗೊಳ್ಳುತ್ತದೆ” ಎಂದು ಅವರು ಟ್ವೀಟ್‌ನಲ್ಲಿ ತೀಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...