Homeದಲಿತ್ ಫೈಲ್ಸ್ತೆಲಂಗಾಣ: ರ್‍ಯಾಗಿಂಗ್‌ನಿಂದ ಬೇಸತ್ತು ಆತ್ಮ*ತ್ಯೆಗೆ ಯತ್ನಿಸಿದ್ದ ವೈದ್ಯಕೀಯ ದಲಿತ ವಿದ್ಯಾರ್ಥಿನಿ ಸಾವು

ತೆಲಂಗಾಣ: ರ್‍ಯಾಗಿಂಗ್‌ನಿಂದ ಬೇಸತ್ತು ಆತ್ಮ*ತ್ಯೆಗೆ ಯತ್ನಿಸಿದ್ದ ವೈದ್ಯಕೀಯ ದಲಿತ ವಿದ್ಯಾರ್ಥಿನಿ ಸಾವು

- Advertisement -
- Advertisement -

ತೆಲಂಗಾಣದ ವಾರಂಗಲ್‌ನಲ್ಲಿ ರ್‍ಯಾಗಿಂಗ್‌ನಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಸ್ನಾತಕೋತ್ತರ ವೈದ್ಯಕೀಯ ದಲಿತ ವಿದ್ಯಾರ್ಥಿನಿ ಭಾನುವಾರ ಕೊನೆಯುಸಿರೆಳೆದಿದ್ದಾರೆ.

ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸೇರಿದ ಧಾರಾವತ್ ಪ್ರೀತಿ ಅವರು ಫೆಬ್ರವರಿ 22 ರಂದು ಕರ್ತವ್ಯದಲ್ಲಿದ್ದಾಗ ವಾರಂಗಲ್‌ನ ಮಹಾತ್ಮ ಗಾಂಧಿ ಸ್ಮಾರಕ ಆಸ್ಪತ್ರೆಯ ಸಿಬ್ಬಂದಿ ಕೊಠಡಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಪ್ರೀತಿಯವರು ಕಾಕತೀಯ ವೈದ್ಯಕೀಯ ಕಾಲೇಜಿನಲ್ಲಿ ಎರಡನೇ ವರ್ಷದ ಎಂಡಿ ಅರಿವಳಿಕೆ ವಿದ್ಯಾರ್ಥಿಯಾಗಿದ್ದು, ಆಕೆಯ ಸೀನಿಯರ್‌‌ ಮೊಹಮ್ಮದ್ ಸೈಫ್ ಕಿರುಕುಳ ನೀಡುತ್ತಿದ್ದರು ಎಂದು ವರದಿಯಾಗಿದೆ. ಫೆಬ್ರವರಿ 24ರಂದು ಸೈಫ್‌ನನ್ನು ಬಂಧಿಸಲಾಗಿದೆ.

ಬಂಧನದ ನಂತರ ವಾರಂಗಲ್ ಪೊಲೀಸ್ ಕಮಿಷನರ್ ಎ.ವಿ.ರಂಗನಾಥ್ ಪ್ರತಿಕ್ರಿಯಿಸಿ, “ಸಾಮಾಜಿಕ ಮಾಧ್ಯಮಗಳಲ್ಲಿನ ಪೋಸ್ಟ್‌ಗಳು, ಪ್ರೀತಿ ಮತ್ತು ಸೈಫ್ ನಡುವಿನ ವೈಯಕ್ತಿಕ ಚಾಟ್‌ಗಳು ರ್‍ಯಾಗಿಂಗ್‌ ಪ್ರಕರಣವನ್ನು ಸೂಚಿಸುತ್ತವೆ” ಎಂದಿದ್ದಾರೆ.

ಆತ್ಮಹತ್ಯೆಗೆ ಪ್ರಚೋದನೆ, ರ್‍ಯಾಗಿಂಗ್‌ಗೆ ಸಂಬಂಧಿಸಿದ ಸೆಕ್ಷನ್‌ಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಹೈದ್ರಾಬಾದ್‌ನಲ್ಲಿನ ನಿಜಾಮ್‌ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪ್ರೀತಿಯವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಸಾವಿನ ವಿಷಯ ಹೊರಬಿದ್ದ ಬಳಿಕ ಇಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ಭಾನುವಾರ ವರದಿ ಮಾಡಿದೆ.

ಮರಣೋತ್ತರ ಪರೀಕ್ಷೆಗಾಗಿ ಪ್ರೀತಿಯವರ ಮೃತದೇಹವನ್ನು ಅಂಬ್ಯುಲೆನ್ಸ್‌ನಲ್ಲಿ ಸಾಗಿಸುತ್ತಿದ್ದಾಗ ವಿದ್ಯಾರ್ಥಿಗಳು ಮತ್ತು ಕುಟುಂಬ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿಯನ್ನು ನಿಭಾಯಿಸಲು ಹೆಚ್ಚಿನ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು.

“ಕಳೆದ ನಾಲ್ಕು ದಿನಗಳಲ್ಲಿ ನನ್ನ ಮಗಳಿಗೆ ಯಾವ ಚಿಕಿತ್ಸೆ ನೀಡಲಾಗಿದೆ ಎಂಬುದರ ಕುರಿತು ವಿವರವಾದ ವರದಿಯನ್ನು ನೀಡಬೇಕು” ಎಂದು ಪ್ರೀತಿಯವರ ಹೇಳಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಇದನ್ನೂ ಓದಿರಿ: ದಲಿತ ಕುಟುಂಬಕ್ಕೆ ಬೆದರಿಕೆ; ಸ್ವಘೋಷಿತ ದೇವಮಾನವನ ಸಹೋದರನ ವಿರುದ್ಧ ಎಫ್‌ಐಆರ್‌

5 ಕೋಟಿ ರೂ. ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ತೆಲಂಗಾಣ ಆರೋಗ್ಯ ಸಚಿವ ಟಿ ಹರೀಶ್ ರಾವ್ ಅವರು ಪ್ರೀತಿಯವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

“ನಿಮ್ಸ್‌ನ ವೈದ್ಯಕೀಯ ತಂಡವು ಪ್ರೀತಿಯವರನ್ನು ಉಳಿಸಲು ದಣಿವರಿಯದೆ ಕೆಲಸ ಮಾಡಿದೆ. ಡಾ.ಪ್ರೀತಿ ಸಂಪೂರ್ಣವಾಗಿ ಗುಣಮುಖರಾಗಿ ಹಿಂತಿರುಗುತ್ತಾರೆಂದು ನಾವು ಭಾವಿಸಿದ್ದೆವು. ಆದರೆ ಅವರು ಹಿಂತಿರುಗದ ಲೋಕಕ್ಕೆ ಹೋದರು” ಎಂದು ಹರೀಶ್ ರಾವ್ ಪ್ರತಿಕ್ರಿಯಿಸಿದ್ದಾರೆ.

10 ಲಕ್ಷ ರೂ. ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿದೆ ಎಂದು ಪಂಚಾಯತ್ ರಾಜ್ ಸಚಿವ ಎರ್ರಬೆಳ್ಳಿ ದಯಾಕರ್ ರಾವ್ ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...